Tuesday, August 18

ವಿದೇಶ

ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಅಶೋಕ್ ಆಕ್ಷೇಪ

ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಅಶೋಕ್ ಆಕ್ಷೇಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ 'ಭೀಮ ಹೆಜ್ಜೆ 100 ರ ಸಂಭ್ರಮ' ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದರು.ಬಾಬಾ ಸಾಹೇಬ್‌ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್‌ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.ವಕ್ಫ್‌ ಮಂಡಳ...
ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಮೂವರು ಜಲಸಮಾಧಿ

ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಮೂವರು ಜಲಸಮಾಧಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ಬಳಿ ಕೆರೆಯಲ್ಲಿ ಈಜಲು ತೆರಳಿದ್ದಂತ ಮೂವರು ಜಲಸಮಾಧಿಯಾಗಿದ್ದಾರೆ.ಕೋಲಾರ ಜಿಲ್ಲೆಯ ಕೆಜಿಎಫ್ ನ ಬೂಡದಮಿಟ್ಟೆ ಕೆರೆಗೆ ಈಜಲೆಂದು ತಂದೆ-ಮಗ ಹಾಗೂ ಸ್ನೇಹಿತರ ಪುತ್ರ ತೆರಳಿದ್ದರು. ಆದರೆ ನೀರಿನಲ್ಲಿ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 40 ವರ್ಷದ ರಮೇಶ್, ಅವರ ಪುತ್ರ 12 ವರ್ಷದ ಅಗಸ್ತ್ಯ ಮತ್ತು 15 ವರ್ಷದ ಶರಣ್ ಎಂಬವರು ಸಾವನ್ನಪ್ಪಿದ್ದಾರೆ.ಬೇತಮಂಗಲ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಪರಿಶೀಲನೆ ನಡೆಸಿದರು....
ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ

ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಸರ್ಕಾರದ 'ಶಕ್ತಿ' ಗ್ಯಾರೆಂಟಿ ಯೋಜನೆ ಮಹಿಳೆಯರ ಪಾಲಿಗೆ ವರದಾನವಾಗಿದೆ. ಇದೀಗ ಈ 'ಗ್ಯಾರೆಂಟಿ' ಯೋಜನೆಯನ್ನು ಮತ್ತಷ್ಟು ವರದಾನವಾಗಿಸುವ ನಿಟ್ಟಿನಲ್ಲಿ KSRTC ಮಹತ್ವದ ಹೆಜ್ಜೆ ಇಟ್ಟಿದೆ.ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶೀಘ್ರವೇ 2,000 ಬಸ್ ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚ...
ಬಿಜೆಪಿಗೆ ಕಾಂಗ್ರೆಸ್ ಎದಿರೇಟು; ಏಪ್ರಿಲ್ 17ರಂದು ಕೇಂದ್ರದ ಬೆಲೆ ಏರಿಕೆ ವಿರುದ್ಧ ಹೋರಾಟ

ಬಿಜೆಪಿಗೆ ಕಾಂಗ್ರೆಸ್ ಎದಿರೇಟು; ಏಪ್ರಿಲ್ 17ರಂದು ಕೇಂದ್ರದ ಬೆಲೆ ಏರಿಕೆ ವಿರುದ್ಧ ಹೋರಾಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ.ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ. ಏಪ್ರಿಲ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದೆ.ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರಿಗೆ ವಿವರ ಒದಗಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಈ ತಿಂಗಳ 17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು....
ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡಬೇಡಿ.. ಪ್ರವಾಸ ತೆರಳುವಾಗ ಎಚ್ಚರವಹಿಸಿ.. ಪೊಲೀಸರ ಸೂಚನೆ..

ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡಬೇಡಿ.. ಪ್ರವಾಸ ತೆರಳುವಾಗ ಎಚ್ಚರವಹಿಸಿ.. ಪೊಲೀಸರ ಸೂಚನೆ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬೇಸಗೆ ರಜೆಯ ಸಂದರ್ಭದಲ್ಲಿ ದೂರದ ಊರಿಲಿಗಳಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೀಡಿರುವ ಹೇಳಿಕೆ ಗಮನಸೆಳೆದಿದೆ.ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಎಚ್ಚರ ಅಗತ್ಯ ಎಂದವರು ಪ್ರತಿಪಾದಿಸಿದ್ದಾರೆ ದೂರದ ವೂರುಗಳಿಗೆ ಪ್ರವಾಸ ತೆರಳಿಲುವ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿದರೂ ಹೆಚ್ಚಿನ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ ಎಂದು ದಯಾನಂದ್ ಸೂಚನೆ ನೀಡಿದ್ದಾರೆ.ಪ್ರವಾಸ ತೆರಳುವ ಬೆಳೆಬಾಳುವ ವಸ್ತುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ. ಜೊತೆಗೆ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಪೊಲೀಸರು ಗಸ್ತು ಹೆಚ್ಚಿಸುವುದಲ್ಲದೆ, ಕಣ್ಗಾವಲು ಹಾಕಲಾಗುವುದು ಎಂದು ಹೇಳಿದ್ದಾರೆ.ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು, ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಇಟ್ಟು ಹೋಗುವ ಅಭ್ಯಾಸ ಬೇಡ ಎಂದವರು ಹೇಳಿದ್ದಾರೆ....
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.ಹೆಚ್.ಎಸ್.ಮಂಜುನಾಥ್ ಗೌಡ ಮಾತನಾಡಿ , ಕೇಂದ್ರ ಬಿಜೆಪಿ ಸರ್ಕಾರ ದೇಶದ 140ಜನರ ಹೊಟ್ಟೆಯ ಮೇಲೆ ಬರೆ ಏಳೆದಿದ್ದಾರೆ, ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿಜಿ.ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ರಂಜೀತ್, ದಕ್ಷ್ಮಿಣ ಜಿಲ್ಲಾ ಮೌನೀಶ್ ರೆಡ್ಡಿ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಶಂಶಾಕ್ ಗೌಡ ರವರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು....
‘ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ಬೇಡ’: ಸಿಎಂ ಕಿವಿಮಾತು

‘ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ಬೇಡ’: ಸಿಎಂ ಕಿವಿಮಾತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಸಿಎಂ ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ.ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ ಎಂದೂ ಕಿವಿಮಾತು ಹೇಳಿದ್ದಾರೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದವರು ಸಲಹೆ ಮಾಡಿದ್ದಾರೆ.ವಿವಿಧ ವಿಭಾಗಗಳಲ್ಲಿ Rank ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದು ಸಿಎಂ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನ...
ದ್ವಿತೀಯ ಪಿಯುಸಿ: ಮರು ಪರೀಕ್ಷೆಗೆ (ಪೂರಕ ಪರೀಕ್ಷೆ) ಅವಕಾಶ

ದ್ವಿತೀಯ ಪಿಯುಸಿ: ಮರು ಪರೀಕ್ಷೆಗೆ (ಪೂರಕ ಪರೀಕ್ಷೆ) ಅವಕಾಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಏಪ್ರಿಲ್ 17 ರ ವರೆಗೆ ತಮ್ಮ ಕಾಲೇಜುಗಳಲ್ಲಿ ನೋಂದಾಯಿಸಿಕೊಳ್ಳಬಹುದು. 2023 ರ ಅಥವಾ ನಂತರದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದವರು ತಮ್ಮ ಫಲಿತಾಂಶ ಆಧಾರದ ಮೇಲೆ ನೋಂದಾಯಿಸಿಕೊಳ್ಳಲು ಅವಕಾಶ ಇದೆ.ಕಾಲೇಜುಗಳು ಏಪ್ರಿಲ್ 8 ರಿಂದ ಏಪ್ರಿಲ್ 15, 2025 ರವರೆಗೆ ಪರೀಕ್ಷೆ-2 ರ ಪುನರಾವರ್ತಕ ಮತ್ತು ಮರು ಮೌಲ್ಯಮಾಪನ ಬಯಸುವ ವಿದ್ಯಾರ್ಥಿಗಳ ವಿವರಗಳನ್ನು ದಂಡವಿಲ್ಲದೆ ಅಪ್‌ಲೋಡ್ ಮಾಡಲು ಪ್ರಾರಂಭಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.ಶುಲ್ಕ ಪಾವತಿ ಮತ್ತು ಅರ್ಜಿ ನಮೂನೆಗಳನ್ನು ದಂಡವಿಲ್ಲದೆ DDPU ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 16 ಆಗಿದೆ. ತಡವಾದ ಶುಲ್ಕದೊಂದಿಗೆ, ನೋಂದಣಿ ವಿಂಡೋ ಏಪ್ರಿಲ್ 16 ಮತ್ತು ಏಪ್ರಿಲ್ 17 ರವರೆಗೆ ತೆರೆದಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 19 ಅಂತಿಮ ದಿನವಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ....
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶ ಪ್ರಕಟಿಸಿದೆ.ರಾಜ್ಯದಲ್ಲಿ ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.81.15 ಫಲಿತಾಂಶ ಬಂದಿದ್ದು ಈ ಬಾರಿ ಕುಸಿತ ಕಂಡಿದೆ.ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ. ಮೂರು ವಿಭಾಗಗಳಲ್ಲಿಯೂ ಹುಡುಗಿಯರೇ ಹೆಚ್ಚಿನ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಕನ್ನಡ ಮಾಧ್ಯಮದಲ್ಲಿ 2,08,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,17,703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲಿ 4,29,011 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3,50,736 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದ...
ಬೆಲೆ ಏರಿಕೆ ವಿರುದ್ಧ ಜನಾಕ್ರೋಶದ ಭುಗಿಲು; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ

ಬೆಲೆ ಏರಿಕೆ ವಿರುದ್ಧ ಜನಾಕ್ರೋಶದ ಭುಗಿಲು; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಮಟ್ಟಕ್ಕೆ ಬೆಲೆ ಏರಿಕೆ ಮಾಡಿದ್ದಾರೆ. ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ, ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯಾಗಿದೆ. ಈಗ ಕಸದಿಂದಲೂ ದುಡ್ಡು ಹೊಡೆಯಲಾಗುತ್ತಿದೆ. ಬೆಂಗಳೂರಿನ ಜನರು ಕಸಕ್ಕೂ ಶುಲ್ಕ ನೀಡಬೇಕಾಗಿದೆ. ಇದರಿಂದಲೇ ಒಂದೂವರೆ ಕೋಟಿ ರೂ. ಲೂಟಿ ಮಾಡಲಾಗುತ್ತಿದೆ ಎಂದು ದೂರಿದರು.ಕಾಂಗ್ರೆಸ್‌ ಜಾತ್ಯತೀತವಾದಿ ಎಂದು ಹೇಳಿಕೊಂಡು ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತವಾದ ಮೀಸಲು ಕೊಡುವ ಅಗತ್ಯವಿರಲಿಲ್ಲ. ಈಗಾಗಲೇ ಮಂಗಳೂರಿನಲ್ಲಿ ಹೆಚ್ಚಿನ ಗುತ್ತಿಗೆಯನ್ನು ಮುಸ್ಲಿಮರೇ...