Tuesday, August 18

ವಿದೇಶ

ಬ್ರಿಟಿಷ್ ಸಂಸತ್ ಬಳಿ ಬಸವೇಶ್ವರರ 891ನೇ ಜಯಂತ್ಯುತ್ಸವ: ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂಗೆ ಆಹ್ವಾನ

ಬ್ರಿಟಿಷ್ ಸಂಸತ್ ಬಳಿ ಬಸವೇಶ್ವರರ 891ನೇ ಜಯಂತ್ಯುತ್ಸವ: ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂಗೆ ಆಹ್ವಾನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಲಂಡನ್: ಲಂಡನ್ ಥೇಮ್ಸ್ ನದಿ ತೀರದಲ್ಲಿರುವ ಲ್ಯಾಂಬೆತ್ ಬಸವೇಶ್ವರ ಪ್ರತಿಮೆ ಬಳಿ ಈ ಬಾರಿ ಬಸವೇಶ್ವರರ 891 ನೇ ಜಯಂತಿಯನ್ನು ವಿಶೇಷ ಕೈಂಕರ್ಯವಾಗಿ ಆಚರಿಸಲು ತಯಾರಿ ನಡೆದಿದೆ. ಏಪ್ರಿಲ್ 30ರಂದು ಬೆಳಿಗ್ಗೆ 11:30 ಕ್ಕೆ ಬ್ರಿಟಿಷ್ ಸಂಸತ್ ಬಳಿ ಭವ್ಯ ಸಮಾರಂಭ ನಡೆಯಲಿದ್ದು, ಈ ಸಮಾರಂಭಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ ಎಂದು ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷರೂ ಆದ ಲಂಡನ್ ಬರೋ ಆಫ್ ಲ್ಯಾಂಬೆತ್‌ನ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ತಿಳಿಸಿದ್ದಾರೆ.ಏಪ್ರಿಲ್ 30ರಂದು ನಡೆಯುವ ಸಮಾರಂಭದಲ್ಲಿ ಯುಕೆಯ ಪ್ರಧಾನಿ ಸರ್ ಕಿಯರ್ ಸ್ಟಾರ್ಮರ್ ಸಂಪುಟದ ಸಚಿವರು ಹಾಗೂ ಲಂಡನಿನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಲಂಡನ್ನಿನ ಕಾರ್ಮಿಕ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರೂ ಆದ ಡಾ.ನೀರಜ್ ಪಾಟೀಲ್ ತಿಳಿಸಿದ್ದಾರೆ.ಈ ಸಮಾರಂಭದಲ್ಲಿ ಭಾಗವಹಿಸಲು ಕನ್ನಡಿಗರಾದ ಸಿಎಂ ಸಿದ್ದರಾಮಯ್ಯ ಅವರನ್ನೂ ಆಹ್ವಾನಿಸಲಾಗಿದ್ದು, ತಮ್ಮ ಪ್ರತಿಷ್ಠಾನದ ಪರವಾಗಿ ಆಹ್ವಾನ ಪತ್ರ ನೀಡಲಾಗಿದೆ ಎಂ...
ವಿನಯ್ ಸಾವಿನ ಹಿಂದಿನ ‘ಕೈ’ ಯಾವುದು? ಬಿಜೆಪಿಗೆ ಪ್ರತಿಭಟನೆ ಮೂಲಕವೇ ತಿರುಗೇಟು ನೀಡಲು ರಣತಂತ್ರ

ವಿನಯ್ ಸಾವಿನ ಹಿಂದಿನ ‘ಕೈ’ ಯಾವುದು? ಬಿಜೆಪಿಗೆ ಪ್ರತಿಭಟನೆ ಮೂಲಕವೇ ತಿರುಗೇಟು ನೀಡಲು ರಣತಂತ್ರ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿನಯ್ ಸೋಮಯ್ಯ ಸಾವಿನ ಪ್ರಕರಣ ಕುರಿತಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರಾದ ಧನಂಜಯ್ ಆರೋಪಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ‌‌ ಎಂದು ದೂರಿದರು.ತನ್ನೇರಾ ಮೈನಾ ಅವರು ಮಡಿಕೇರಿ ಸರ್ಕಲ್ ಠಾಣೆಯಲ್ಲಿ ಮಾರ್ಚ್ 5 ರಂದು ಕೊಡಗಿನ ಸಮಸ್ಯೆಗಳು ಹಾಗೂ ಸೂಚನೆಗಳು ಎನ್ನುವ ವಾಟ್ಸಪ್ ಗುಂಪಿನಲ್ಲಿ ಬರುವ ಸಂದೇಶವನ್ನು ಗಮನಿಸಿದ ತನ್ನೇರಾ ಮೈನಾ ಅವರು ರಾಜೇಂದ್ರ, ವಿಷ್ಣು ನಾಚಪ್ಪ, ವಿನಯ್ ಸೋಮಯ್ಯ ಅವರ ವಿರುದ್ದ ದೂರು ಸಲ್ಲಿಸುತ್ತಾರೆ. ವಿನಯ್ ಸೋಮಯ್ಯ ಅವರ ಕೊನೆಯ ವಾಟ್ಸಪ್ ಸಂದೇಶದ ಕೊನೆಯ ಪ್ಯಾರದಲ್ಲಿ 'ನನ್ನ ವಿರುದ್ದ ಎಫ್ ಐಆರ್ ದಾಖಲಾದಾಗ ಬೆಂಬಲಕ್ಕೆ ನಿಂತ ಪ್ರತಾಪ್ ಸಿಂಹ, ಕೆಜೆ.ಬೋಪಯ್ಯ, ಅಪ್ಪಚ್ಚು ರಂಜನ್, ಎಂಪಿ ಚರಣ್, ವಕೀಲ ರಾಕೇಶ್ ದೇವಯ್ಯ, ನಿಶಾಂತ್,‌ಮೋಹನ್ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ ಎಂದು ಗಮನಸೆಳೆದರು.ವಿನಯ್ ಸೋಮಯ್ಯ ಅವರು ಎಲ್ಲಿಯೂ ಸಹ ನಾನು ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡ...
‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ನವದೆಹಲಿ: ಸಂಭವನೀಯ ಅಪಾಯದ ಸರಿಯಾದ ಮೌಲ್ಯಮಾಪನವಿಲ್ಲದೆ ಯುವಜನರಿಗೆ ಹೆಚ್ಚಾಗಿ ಪ್ರತಿಜೀವಕಗಳನ್ನು ಶಿಫಾರಸು ಮಾಡಲಾಗುತ್ತಿದೆ. ಇದು ಪ್ರತಿರೋಧಕ್ಕೆ ಕಾರಣವಾಗಬಹುದು ಎಂದು ಅಧ್ಯಯನ ವರದಿಯೊಂದು ಎಚ್ಚರಿಸಿದೆ.ಲಂಡನಿನ ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಶಾಸ್ತ್ರಜ್ಞರ ನೇತೃತ್ವದ ಅಧ್ಯಯನವು, ವೈದ್ಯರು ಸೋಂಕು ಹೊಂದಿರುವ ಹತ್ತಾರು ಸಾವಿರ ರೋಗಿಗಳಿಗೆ ಪ್ರತಿಜೀವಕಗಳನ್ನು ಶಿಫಾರಸು ಮಾಡುತ್ತಿದ್ದಾರೆ ಎಂದು ತೋರಿಸಿದೆ. ಮುನ್ನರಿವು ಮತ್ತು ಸೋಂಕು ಹದಗೆಡುವ ಅಪಾಯವನ್ನು ಕಡಿಮೆ ಅಥವಾ ಪರಿಗಣಿಸದೆ ಈ ರೀತಿ ಶಿಫಾರಸು ಮಾಡುವ ನಡೆ ಸರಿಯಲ್ಲ ಎಂದಿದೆ.15.7 ದಶಲಕ್ಷ ರೋಗಿಗಳ ದಾಖಲೆಗಳ ವಿಶ್ಲೇಷಣೆಯನ್ನು ಆಧರಿಸಿದ ಅಧ್ಯಯನವು, ಮಾದರಿಯಲ್ಲಿರುವ ಹೆಚ್ಚಿನ ವಯಸ್ಸಾದ ರೋಗಿಗಳು ಮೇಲ್ಭಾಗದ ಉಸಿರಾಟದ ಸೋಂಕುಗಳಿಗೆ ಪ್ರತಿಜೀವಕವನ್ನು ಪಡೆಯುವ ಕಿರಿಯ ರೋಗಿಗಳಿಗಿಂತ ಶೇಕಡಾ 31 ರಷ್ಟು ಕಡಿಮೆ ಎಂದು ಬಹಿರಂಗಪಡಿಸಿದೆ.ಇದರರ್ಥ "ಅನೇಕ ಕಿರಿಯ ಜನರಿಗೆ ಪ್ರತಿಜೀವಕಗಳನ್ನು ಶಿಫಾರಸು ಮಾಡಲಾಗುತ್ತಿದೆ, ಅವರು ಅವುಗಳಿಲ್ಲದೆ ಚೇತರಿಸಿಕೊಳ್ಳಲು ಸಾಕಷ್ಟು ಸದೃಢರಾಗಿದ್ದರೂ ಸಹ, ಇದು ಪ್ರತಿರೋಧಕ್ಕ...
ವಿರಳಾತಿ ವಿರಳ ಕಾಯಿಲೆ: ಇಂದಿರಾಗಾಂಧಿ ಮಕ್ಕಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 22 ಮಕ್ಕಳು

ವಿರಳಾತಿ ವಿರಳ ಕಾಯಿಲೆ: ಇಂದಿರಾಗಾಂಧಿ ಮಕ್ಕಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 22 ಮಕ್ಕಳು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ ಹಾಗೂ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಕಾರ್ಪೊರೇಟ್‌ ಸಂಸ್ಥೆಗಳ ಜೊತೆಗೂಡಿ "ಯೋಜನೆ" ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.ಈ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದಾರೆ.ಲೈಸೊಸಮಲ್‌ ಸ್ಟೋರೇಜ್‌ ಡಿಸ್‌ ಆರ್ಡರ್‌ ಎಂಬ ಅತ್ಯಂತ ಅಪರೂಪದ ಕಾಯಿಲೆಗೆ ಹಲವಾರು ಮಕ್ಕಳು ತುತ್ತಾಗಿದ್ದಾರೆ. ಈ ಪೈಕಿ ಕರ್ನಾಟಕದಲ್ಲಿ ಗೌಷೆ ರೋಗ ಎಂಪಿಎಸ್‌ (Gaucher), ಪಾಂಪೆ ಎಂಬ ಆನುವಂಶಿಕ ಕಾಯಿಲೆಯೂ ಈ ಗುಂಪಿಗೆ ಸೇರಿವೆ.ರಾಷ್ಟ್ರೀಯ ಅಪರೂಪ ಕಾಯಿಲೆ ನೀತಿಯಡಿ (ಎನ್‌ಪಿಆರ್‌ಡಿ) ಇಂಥ ರೋಗಕ್ಕೆ ತುತ್ತಾಗಿರುವ ಮಕ್ಕಳಿಗೆ ಚಿಕಿತ್ಸೆ ಒದಗಿಸಲು ಕೇಂದ್ರ ಸರ್ಕಾರ ಅನುದಾನ ಒದಗಿಸುತ್ತಿದೆ. 2016ರಿಂದ ಕರ್ನಾಟಕ...
ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ

ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ಸಂಸದ ಡಾ ಸುಧಾಕರ್ ಆರೋಪಿಸಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು ಎಂದವರು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ.ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು ಇಲ್ಲ. ಡೆತ್ ನೋಟ್ ನಲ್ಲಿ ಇರುವ ಎಲ್ಲರ ಮೇಲೆ ಕಾನೂನು ಕ್ರಮ ಆಗಲೇಬೇಕು. pic.twitter.com/GwViMVwkaE— Dr Sudhakar K (@DrSudhakar_) April 5, 2025...
ಐಪಿಎಲ್ ಹಾವು-ಏಣಿಯಾಟ; ಇಬ್ಬರ ಕಾದಾಟ RCBಗೆ ಲಾಭ

ಐಪಿಎಲ್ ಹಾವು-ಏಣಿಯಾಟ; ಇಬ್ಬರ ಕಾದಾಟ RCBಗೆ ಲಾಭ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮುಂಬೈ: ಇತರ ತಂಡಗಳ ಸೋಲು ಗೆಲುವು ಬೇರೊಂದು ತಂಡದ ಭವಿಷ್ಯ ನಿರ್ಧರಿಸಬಹುದು ಎಂಬುದಕ್ಕೆ ಶನಿವಾರ ನಡೆದ ಐಪಿಎಲ್ ಪಂದ್ಯ ಸಾಕ್ಷಿಯಾಗಿದೆ. ಶನಿವಾರ ನಡೆದ 2 ಪಂದ್ಯಗಳಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಪ್ರಬಲ ಪಂಜಾಬ್ ತಂಡ ಮಂಡಿಯೂರಿದರೆ, ಡೆಲ್ಲಿ ವಿರುದ್ಧ ಚೆನ್ನೈ ಸೋಲು ಕಂಡಿದೆ. ಇದರ ಲಾಭ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ಗೆ ಸಿಕ್ಕಿದೆ.ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ ಹಾವು-ಏಣಿ ಆಟ ಮುಂದುವರೆದಿದ್ದು, ರಾಜಸ್ತಾನ ರಾಯಲ್ಸ್ ವಿರುದ್ಧ ಪ್ರಬಲ ಪಂಜಾಬ್ ತಂಡ ಸೋಲು ಕಂಡ ನಂತರ ಭಾರೀ ಬದಲಾವಣೆಯಾಗಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದೀಗ ಅಗ್ರ ಸ್ಥಾನಕ್ಕೇರಿದರೆ, ಅಗ್ರಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಇದೀಗ 4ನೇ ಸ್ಥಾನಕ್ಕೆ ಜಾರಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ 9ನೇ ಸ್ಥಾನಕ್ಕೆ ಕುಸಿದಿದೆ. 4ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 2ನೇ ಸ್ಥಾನಕ್ಕೆ ಜಿಗಿದಿದೆ. ಗುಜರಾತ್ ಟೈಟನ್ಸ್ 3ನೇ ಸ್ಥಾನದಲ್ಲಿದೆ. ಐಪಿಎಲ್ ಅಂಕ ಪಟ್ಟಿ ಹೀಗಿದೆ:...
ಉದ್ಯೋಗ ನೀಡುವ ಜೊತೆಗೆ ಉತ್ತಮ ಸಂಬಳವನ್ನ ನೀಡಿ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಉದ್ಯೋಗ ನೀಡುವ ಜೊತೆಗೆ ಉತ್ತಮ ಸಂಬಳವನ್ನ ನೀಡಿ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೃಹತ್‌ ಉದ್ಯೋಗ ಮೇಳಗಳಲ್ಲಿ ಕಂಪನಿಗಳು ಅರ್ಹರಿಗೆ ಉದ್ಯೋಗ ನೀಡುತ್ತಿರುವುದು ಮಹತ್ಕಾರ್ಹವಾಗಿದೆ. ಇದರ ಜೊತೆಗೆ ಉದ್ಯೋಗ ಪಡೆಯುವವರು ಉತ್ತಮ ರೀತಿನಲ್ಲಿ ಜೀವನ ಸಾಗಿಸಲು ಅನುವಾಗುವಂತೆ ಗೌರವಾನ್ವಿತ ಅಥವಾ ಉತ್ತಮ ಜೀವನ ಸಾಗಿಸಲ ಅನುವಾಗುವಂತೆ ವೇತನ ನೀಡಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ.ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್.ಕೆ.ಸಿ.ಸಿ.ಐ.) ವತಿಯಿದ ಸಂಸ್ಥೆಯ ಸರ್.ಎಂ.ವಿ. ಆಡಿಟೋರಿಯಂನಲ್ಲಿ ಶನಿವಾರ ಆಯೋಜಿಸಿದ್ದ ಎಫ್.ಕೆ.ಸಿ.ಸಿ.ಐ ಉದ್ಯೋಗ ಉತ್ಸವ್ 2025-26 ಉದ್ಘಾಟಿಸಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ಬೆಂಗಳೂರು, ಕಲಬುರಗಿ, ಹುಬ್ಬಳಿ, ಬೆಳಗಾವಿ, ಮಂಗಳೂರಿನಲ್ಲಿ ಕೆಲಸಕ್ಕೆ ಹೋಗುವ ವ್ಯಕ್ತಿಗೆ ಜೀವನ ಸಾಗಿಸಲು ಕೈ ತುಂಬಾ ಸಂಬಳ ಬೇಕಾಗುತ್ತದೆ. ಒಂದು ವೇಳೆ ಸಂಬಳ ಸಿಗದಿದ್ದರೆ ಆತ ಮತ್ತೆ ತನ್ನ ಗ್ರಾಮಕ್ಕೆ ತೆರಳಿ, ನಿರುದ್ಯೋಗಿಯಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಉದ್ಯೋಗದಾತರು ಮಾನವೀಯ ದೃಟ್ಟಿಯಿ...
ವಿನಯ್ ಆತ್ಮಹತ್ಯೆ ಕೇಸ್: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ತಲೆದಂಡಕ್ಕೆ ಆಗ್ರಹ

ವಿನಯ್ ಆತ್ಮಹತ್ಯೆ ಕೇಸ್: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ತಲೆದಂಡಕ್ಕೆ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರಎ.ಎಸ್.ಪೊನ್ನಣ್ಣ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ಬಿಜೆಪಿ ಕಾರ್ಯಕರ್ತ ವಿನಯ್ ಅವರ ಡೆತ್ ನೋಟ್ ನಲ್ಲಿ ಇರುವ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೂಡಲೇ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನದಿಂದ ರಾಜೀನಾಮೆ ಸಲ್ಲಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.ತಮ್ಮ ಸ್ಥಾನವನ್ನು ದುರಪಯೋಗಪಡಿಸಿಕೊಂಡು ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರನ್ನು ಬಿಟ್ಟಿರುವ ಶಾಸಕರು ತಮ್ಮ ಪ್ರಭಾವ ಬಳಸಿ ತನಿಖೆಯನ್ನು ದಿಕ್ಕನ್ನು ಬದಲಿಸುವ ಸಾಧ್ಯತೆಗಳು ಹೆಚ್ಚಿರುವದರಿಂದ ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮುಖ್ಯ ಮಂತ್ರಿಗಳೇ ಅವರನ್ನು ವಜಾ ಮಾಡಿ ನೈತಿಕ ಮೇಲ್ಪಂಕ್ತಿ ಹಾಕಿಕೊಡಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ....
ವಿನಯ್ ಆತ್ಮಹತ್ಯೆ ಪ್ರತಿಧ್ವನಿ: ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದ ಅಶೋಕ್

ವಿನಯ್ ಆತ್ಮಹತ್ಯೆ ಪ್ರತಿಧ್ವನಿ: ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದ ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಪಕ್ಷ ನಾಯಕ್ ಆರ್ ಅಶೋಕ್, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೊಡಗಿನ ವಿನಯ್‌ ಅವರಿಗೆ 2-3 ತಿಂಗಳಿಂದ ಎಸ್​ಪಿ ಮೂಲಕ ಕಾಂಗ್ರೆಸ್ ಶಾಸಕರು, ತನ್ನಿರಾ ಮೈನಾ ಕಿರುಕುಳ ನೀಡಿದ್ದಾರೆ. ಶಾಸಕರು ಧಮ್ಕಿ ಹಾಕಿದ್ದನ್ನು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್​ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು.… pic.twitter.com/6lv8t2Slt8— BJP Karnataka (@BJP4Karnataka) April 4, 2025ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ ಎಂದರು. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗ...
ಪಂಚಮಸಾಲಿಗಳಿಗೆ ಆರಂಭಿಕ ಜಯ: ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಬಗ್ಗೆ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಪಂಚಮಸಾಲಿಗಳಿಗೆ ಆರಂಭಿಕ ಜಯ: ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಬಗ್ಗೆ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಧಾರವಾಡ: ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಡಿಸೆಂಬರ್ 10 ರಂದು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಘಟನೆ ಕುರಿತಂತೆ ನ್ಯಾಯಾಂಗ ತನಿಖೆಗೆ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿದೆ.ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಲಾಠಿ ಪ್ರಹಾರ ನಡೆದಿತ್ತು. ಲಾಠಿ ಚಾರ್ಜ್ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದರು. ಈ ಪೊಲೀಸ್ ದೌರ್ಜನ್ಯ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ ಶುಕ್ರವಾರ ತೀರ್ಪು ಪ್ರಕಟಿಸಿದೆ.ಲಾಠಿ ಚಾರ್ಜ್ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ....