ಗಾಂಧಿನಗರ: ಗುಜರಾತ್‌ನ ಮೆಶ್ವೋ ನದಿಯಲ್ಲಿ ಇಂದು ಹೃದಯ ವಿದ್ರಾವಕ ಘಟನೆಯಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ.ಶುಕ್ರವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಜನರ ಪೈಕಿ 8 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ವಾಸ್ನಾ ಸೊಗ್ತಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ.
ಚಿತ್ತೂರು: ಆಂದ್ರಪ್ರದೇಶದ ಚಿತ್ತೂರು ಬಳಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 7 ಮಂದಿ ಸಾವನ್ನಪ್ಪಿದ್ದಾರೆ.ಬೆಂಗಳೂರಿಗೆ ತೆರಳುತ್ತಿದ್ದ ಆಂದ್ರಪ್ರದೇಶ ಸಾರಿಗೆ ಸಂಸ್ಥೆಯ ಬಸ್ ಮತ್ತು ಟ್ರಕ್ ನಡುವೆ ಶುಕ್ರವಾರ ಅಪಘಾತ ಸಂಭವಿಸಿದೆ.ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದ ಮೊಗಿಲಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೃತರ ಬಂಧುಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ....
ಹುಬ್ಬಳ್ಳಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡುತ್ತಾ ನಾಗಮಂಗಲ ಹಿಂಸಾಚಾರ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ನಾಗಮಂಗಲದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ ಸಂಭವಿಸಿದೆ ಎಂದವರು ದೂರಿದರು.ಗಣೇಶ ಮೂರ್ತಿ ಇದ್ದರೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಲ್ಹಾದ್ ಜೋಶಿ, ಸರ್ಕಾರವು ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕಿದೆ ಎಂದು ಒತ್ತಾಯಿಸಿದರು....
ಬೆಂಗಳೂರು: ಕೇಂದ್ರದ ತೆರಿಗೆ ಆದಾಯ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಲವು ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿದ್ದಾರೆ.ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ವೇದಿಕೆಯನ್ನು ಸಜ್ಜುಗೊಳಿಸಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿದ್ದಾರೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು 'ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ' ಸಿದ್ದರಾಮಯ್ಯ ಅವರು ಈ ಪತ್ರ ಬರೆದಿದ್ದಾರೆ. ಅತಿಹೆಚ್ಚು ತೆರಿಗೆ ಪಾವತಿಸಿಯೂ ಕಡಿಮೆ ಪಾಲು ಪಡೆಯುತ್ತಿರುವ ಬೆಳವಣಿಗೆ ಆಧರಿಸಿ ಈ ಹೆಜ್ಜೆ ಇಟ್ಟಿರುವ ಸಿಎಂ, ತಾವು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಕುರಿತು ಮಾಹಿತಿಯನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಪತ್ರದ ಪ್ರತಿಯನ್ನು ...
ಬೆಂಗಳೂರು: ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ ಯೋಜಿಸಲಾಗಿರುವ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳುವಂತೆ *ಕಾಂಗ್ಸ್‌ಬರ್ಗ್ ಡಿಜಿಟಲ್ ಸಂಸ್ಥೆಗೆ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆಹ್ವಾನ ನೀಡಿದ್ದಾರೆ.ಕಾಂಗ್ಸ್‌ಬರ್ಗ್ ಡಿಜಿಟಲ್‌ನ ಅಧ್ಯಕ್ಷ ಮತ್ತು ಸಿಇಒ ಶೇನ್ ಮೆಕ್‌ಆರ್ಡಲ್ ಮತ್ತು ಕಾಂಗ್ಸ್‌ಬರ್ಗ್ ಡಿಜಿಟಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ದೀಪಕ್ ಕುಮಾರ್ ನೇತೃತ್ವದ ನಿಯೋಗ ಇಂದು ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಆಹ್ವಾನ ಕೊಟ್ಟರು. ನಿಪುಣ ಕಾರ್ಯಕ್ರಮ ನಿರ್ದಿಷ್ಟವಾಗಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಕ್ಲೌಡ್ ಕಂಪ್ಯೂಟಿಂಗ್‌ನಂತಹ ಕ್ಷೇತ್ರಗಳಲ್ಲಿ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ನಿಖರವಾದ ಕೌಶಲ್ಯ ವಲಯದೊಂದಿಗೆ ಯುವ ಸಮೂಹವನ್ನು ಸಜ್ಜುಗೊಳಿಸುವ ಗುರಿ ಹೊಂದಿದೆ. “ಇದು ಸಾಮಾನ್ಯ ತರಬೇತಿ ಕಾರ್ಯಕ್ರಮವಲ್ಲ. ನಿಪುಣ ಕಾರ್ಯಕ್ರಮ ನಿರ್ದಿಷ್ಟ ಉದ್ಯಮದ ಅವಶ್ಯಕತೆಗಳನ್ನು ಪರಿಹರಿಸಲು ವಿನ್ಯಾಸಗೊಳಿಸಲಾಗಿದೆ. ಉದ್ಯೋಗಿಗಳ ಬೇಡಿಕೆಗಳನ್ನು ಪೂರೈಸಲು ನಾವು ಕಾಂಗ್ಸ್‌ಬರ್ಗ್ ಡಿಜಿಟಲ್‌ನಂತಹ ಕಂಪನಿಗಳೊಂದಿಗೆ ಸಹಕರ...
ಬೆಂಗಳೂರು: ಆರ್‌ಎಸ್‌ಎಸ್ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ ಎಂದು ಎಐಸಿಸಿ ಎಸ್.ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ ಆರೋಪಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಎಸ್.ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ, ಆರ್‌ಎಸ್‌ಎಸ್ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ. ಸಂವಿಧಾನದ ಕಾರಣಕ್ಕೆ ಶೋಷಿತ ವರ್ಗದ ಜನರು ಅಧಿಕಾರ ಸೇರಿದಂತೆ ಒಂದಷ್ಟು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದನ್ನು ನಾಶ ಮಾಡಲು ಈ ಎರಡು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ದೂರಿದರು.ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕರು ಸಂವಿಧಾನದ ರಕ್ಷಣೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇದರ ಸಲುವಾಗಿ ನಾವು ಕಳೆದ ಎರಡು ವರ್ಷಗಳ ಹಿಂದೆ “ಸಂವಿಧಾನ ರಕ್ಷಕ್” ಎನ್ನುವ ಕಾರ್ಯಕ್ರಮ ಜಾರಿಗೆ ತಂದೆವು ಎಂದ ಅವರು, ಇದುವರೆಗು ದೇಶದಾದ್ಯಂತ ಸುಮಾರು 3 ಲಕ್ಷ ಮಂದಿ ಸಂವಿಧಾನ ರಕ್ಷಕರಾಗಿ ನೋಂದಾಯಿಸಿಕೊಂಡಿದ್ದಾರೆ. ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಈ ವರ್ಷ ನವೆಂಬರ್ ...
ಬೆಂಗಳೂರು: 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300/- ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಒತ್ತಾಯಿಸಿದ್ದಾರೆ.ಕೇಂದ್ರ ಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬAಧಪಟ್ಟ ಎಲ್ಲಾ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟಿçÃಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ ಎಂದು ವಿವರಿಸಿದರು.01.02.2023 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದ ಪುಟ ಸಂಖ್ಯೆ (10) ಪ್ಯಾರಾ (39) ರಲ್ಲಿ ಈ ಕೆಳಕಂಡAತೆ ಘೋಷಿಸಿರುತ್ತಾರೆ. ಕೇಂದ್ರ ಸರ್ಕಾರದಿಂದ ರಾಷ್ಟಿçÃಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದ ಮತ...
ಬೆಂಗಳೂರು: ಗೌರಿ ಗಣೇಶ ಹಬ್ಬ ಹಾಗೂ ಮುಂದಿನ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಇಲಾಖೆ ರಾಜ್ಯಾದ್ಯಂತ 22 ವಿಶೇಷ ರೈಲುಗಳನ್ನು ಪ್ರಕಟಿಸಿದೆ.
ಗಣೇಶ ಚತುರ್ಥಿ ಸಂದರ್ಭದ ವಿಶೇಷ ರೈಲುಗಳು:ಸೆಪ್ಟೆಂಬರ್ 5 ರಿಂದ 7 ರವರೆಗೆ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ನಡೆಸಲಿದೆ.
ಬೆಂಗಳೂರು ಕಲಬುರಗಿ ನಡುವೆ ವಿಶೇಷ ರೈಲು ಬೆಂಗಳೂರು SMVTಯಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿತಲುಪಲಿದೆ.
ಕಲಬುರಗಿಯಿಂದ ಬೆಂಗಳೂರು: ಸೆಪ್ಟೆಂಬರ್ 6 ರಿಂದ 8 ರವರೆಗೆ ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಬೆಂಗಳೂರು SMVT ತಲುಪಲಿದೆ.ದೀಪಾವಳಿ ಸಂದರ್ಭದ ವಿಶೇಷ ರೈಲುಗಳು:ಅಕ್ಟೋಬರ್ 30 ಮತ್ತು ನವೆಂಬರ್ 2 ರವರೆಗೆ ಮೈಸೂರು- ವಿಜಯಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.
ವಿಜಯಪುರದಿಂದ ಮೈಸೂರಿಗೆ ಹಿಂದಿರುಗುವ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಸಂಚರಿಸಲಿದೆ.
ಯಶವಂತಪುರ-ಬೆಳಗಾವಿ ನಡುವೆ ಅಕ್ಟೋಬರ್ 30 ರ...
ಆಂಧ್ರಪ್ರದೇಶ: ಭಾರೀ ಮಳೆಯಿಂದ ಪ್ರವಾಹ ಹಿನ್ನೆಲೆಯಲ್ಲಿ ನಟ ಜ್ಯೂನಿಯರ್ ಎಂಟಿಆರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಎರಡು ತೆಲುಗು ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಪ್ರವಾಹದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.ತೆಲುಗು ಜನರು ಈ ವಿಪತ್ತಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಅವರು, 'ನನ್ನ ಕಡೆಯಿಂದ ನಾನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುತ್ತಿದ್ದೇನೆ ಎಂದು ಬರೆದಿದ್ದಾರೆ....
ಚೆನ್ನೈ: ಮಲಯಾಳಂ ಸಿನಿ ಲೋಕದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ತಲ್ಲಣ ಸೃಷ್ಟಿಸಿದೆ.ಹೇಮಾ ಸಮಿತಿ ವರದಿ ಸಲ್ಲಿಕೆ ಬಳಿಕ ಮಾಲಿವುಡ್‌ನಲ್ಲಿ ಖ್ಯಾತ ಕಲಾವಿದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.
ನಿರ್ದೇಶಕರಾದ ರಂಜಿತ್, ನಟರಾ ಜಯಸೂರ್ಯ, ಮುಕೇಶ್ ಸೇರಿದಂತೆ ಹಲವರ ವಿರುದ್ಧ ಅನುಚಿತ ವರ್ತನೆ ಹಾಗೂ ಕಿರುಕುಳದ ಆರೋಪ ಪ್ರತಿಧ್ವನಿಸಿದೆ. ಈ ಆರೋಪಗಳಿಂದಾಗಿ ಉನ್ನತ ಸ್ಥಾನದಲ್ಲಿದ್ದ ಹಲವು ನಟರು ಪದತ್ಯಾಗ ಮಾಡಿದ್ದಾರೆ.ಇದೇ ವೇಳೆ, ಹೇಮಾ ಸಮಿತಿಯ ವರದಿಯಲ್ಲಿನ ಶಿಫಾರಸುಗಳ ಕುರಿತಂತೆ ಭಾರೀ ಚರ್ಚೆಯಾಗುತ್ತಿದೆ. ಆದರೆ ಈ ಬಗ್ಗೆ ತಾನು ಹೇಳಿಕೆಗಳನ್ನು ನೀಡಲ್ಲ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪರಿಹಾರಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ....