Sunday, May 3

ದೇಶ-ವಿದೇಶ

ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದಲ್ಲಿನ ಹವಾಮಾನದ ವ್ಯತ್ಯಯದಿಂದಾಗಿ ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯ ಉದ್ದಕ್ಕೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇತ್ತ ಕರ್ನಾಟಕದ 13 ಜಿಲ್ಲೆಗಳಲ್ಲೂ ಸೆಪ್ಟೆಂಬರ್‌ 1ರಿಂದ ಮಳೆಯಾಗುವ ಸಾಧ್ಯತೆಗಳಿದ್ದು, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಸಹಿತ 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ....
ಹೆಚ್ಡಿಕೆ ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ; ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ

ಹೆಚ್ಡಿಕೆ ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ; ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ನಿವೇಶನ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಬಗ್ಗೆ ಕಾಂಗ್ರೆಸ್ ಆಕ್ರೋಶ ತಣ್ಣಗಾಗಿಲ್ಲ. ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದದ ಮನವಿಗಳಿಗೂ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.ಈ ಸಂಬಂಧ ಶನಿವಾರ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಲಿದ್ದಾರೆ.ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ ನಾನು ತಪ್ಪೇ ಮಾಡಿಲ್ಲ. ಆದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ ಎಂದರು.ನಾಳೆ (ಶನಿವಾರ) ಕಾಂಗ್ರೆಸ್ ಶಾಸಕರು, ಸಂಸದರು, ಎಂಎಲ್‌ಸಿಗಳು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ. ಕುಮಾರಸ್ವಾಮಿ, ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಒತ್ತಾಯಿಸುತ್ತಾರೆ ಎಂದು ಸಿಎ. ತಿಳಿಸಿದರು.ಕುಮಾರಸ್ವಾಮಿ ವಿರುದ್ಧ ತನಿಖೆ ಆಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೂ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ನಮ್ಮ ಶಾಸಕರು ರಾಜ್ಯಪಾಲರನ್ನು ಭ...
KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರೀಯ ಮಟ್ಟದ 8 ವೀಡಿಯಾ - ViDEA, 5 ಎಮ್ಕ್ಯೂಬ್ - mCUBE ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳನ್ನು ಪಡೆದು ಗಮನಸೆಳೆದಿದೆ.ವೀಡಿಯಾ ಪ್ರಶಸ್ತಿಗಳು:  ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟ...
ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ

ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಕಾರೈಕಲ್: ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು ಎಂದು ರಾಷ್ಟ್ರೀಯ ಕಿಸಾನ್ ಮೋರ್ಚಾದ ಸಂಚಾಲಕರೂ ಆದ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರ್ ಶಾಂತಕುಮಾರ್  ಆರೋಪಿಸಿದ್ದಾರೆ.ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಕೃಷಿ ಭೂಮಿ. ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದರು.ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ. ಬೆಳೆ ವಿಮೆ ಪದ್ಧತಿ ತಿದ್ದುಪಡಿ ಆಗಬೇಕು. 60 ವರ್ಷ ತುಂಬಿದ...
ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಫ್ರಾನ್ಸ್ ನ ಲಿಯೋನ್‌ನಲ್ಲಿ ನಡೆಯಲಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕೌಶಲಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿ (ಕೆ.ಎಸ್.ಡಿ.ಸಿ) ರಾಜ್ಯದ 9 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ. *ಫ್ರಾನ್ಸ್ ತೆರಳುವ ಮುನ್ನ ಭೇಟಿಯಾದ ವಿದ್ಯಾರ್ಥಿಗಳಿಗೆ ವೈದ್ಯ ಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಬುಧವಾರ ಶುಭಕೋರಿದರು.2024 ಸೆಪ್ಟೆಂಬರ್ 10 ರಿಂದ 15ರವರೆಗೆ ಫ್ರಾನ್ಸ್ ನ ಲಿಯೋನ್ ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ವೃತ್ತಿಪರ ಕೌಶಲಗಳ “ಒಲಂಪಿಕ್ಸ್” ಎಂದೇ ಬಣ್ಣಿಸಲಾಗುತ್ತದೆ. 1 ವಿಭಿನ್ನ ಕೌಶಲ್ಯ ಸ್ಪರ್ಧೆಗಳು ನಡೆಯುವ ವಿಶ್ವದ ಅತಿ ದೊಡ್ದ ಕಾರ್ಯಕ್ರಮವಾಗಿದೆ. 22 ವರ್ಷದ ಒಳಗಿನ ಸುಮಾರು 1000 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು, ತಮ್ಮ ವೃತ್ತಿಪರ ಕೌಶಲ್ಯ ಪ್ರದರ್ಶಿಸಲಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿಯು ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಆಶ್ರಯದಲ್ಲಿ ಕರ್ನಾಟಕದ ಕೌಶಲಪೂರ್ಣ ಅಭ್ಯರ...
ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ತಮಿಳುನಾಡಿನ ತಿರುಚಿಯಲ್ಲಿ ಮಂಗಳವಾರ ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ರೈಲು ಮೂಲಕ ತೆರಳಿದ್ದಾರೆ.ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರಾಷ್ಟ್ರೀಯ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ರೈತ ನಾಯಕ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭಾಗಿಯಾಗುತ್ತಿಧದು, ಈ ಅನ್ನದಾತರು ಮೈಸೂರಿನಿಂದ ರೈಲು ಮೂಲಕ ತೆರಳಿದ್ದಾರೆ.ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ ಸ್ವಾಮಿನಾಥನ್ ವರದಿ ಜಾರಿ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಪ್ರಬಲಗೊಳಿಸಲು. ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕರೂ ಆದ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘ...
ಇಸ್ರೇಲ್ ಮೇಲೆ ಹಿಜಬುಲ್ ಉಗ್ರರ ದಾಳಿ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ

ಇಸ್ರೇಲ್ ಮೇಲೆ ಹಿಜಬುಲ್ ಉಗ್ರರ ದಾಳಿ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ

ದೇಶ-ವಿದೇಶ, ಪ್ರಮುಖ ಸುದ್ದಿ
ಜೆರುಸಲೇಂ: ಮದ್ಯಪ್ರಾಚ್ಯಾದಲ್ಲಿ ಮತ್ತೆ ಸಂಘರ್ಷ ಭು್ಲಗಿದ್ದಿದೆ. ಲೆಬನಾನ್‌ನ ಉಗ್ರಗಾಮಿ ಸಂಘಟನೆ ಹಿಜ್‌ಬುಲ್ಲಾ ಮತ್ತು ಇಸ್ರೇಲ್ ಸೇನೆಯ ನಡುವೆ ಭಾನುವಾರ ಬೆಳಿಗ್ಗೆಯಿಂದ ಬಾರೀ ಸಂಘರ್ಷ ನಡೆದಿದೆ. ದಾಳಿ ಪ್ರತಿದಾಳಿಯಲ್ಲಿ ಭಾರೀ ಹಾನಿಯಾಗಿದ್ದು ಹಲವರು ಗಾಯಗೊಂಡಿದ್ದಾರೆ.ಭಾನುವಾರ ಉಭಯ ಗಂಪುಗಳ ನಡುವೆ ಮಿಲಿಟರಿ ಸಂಘರ್ಷ ನಡೆದಿದೆ.‌ ಇಸ್ರೇಲ್‌ನ ಉತ್ತರ ಭಾಗದ 11 ಇಸ್ರೇಲಿ ಮಿಲಿಟರಿ ನೆಲೆಗಳನ್ನು ಗುರಿಯಾಗಿರಿಸಿಕೊಂಡು, ಹೆಜ್ಬುಲ್ಲಾ ಪಡೆಯು ಸ್ಫೋಟಕ ತುಂಬಿದ ಸುಮಾರು 320 ರಾಕೆಟ್‌ಗಳು ಮತ್ತು ಬಹು ಡ್ರೋನ್‌ ಗಳನ್ನು ಉಡಾವಣೆಮಾಡಿದೆ ಎನ್ನಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್‌ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ದೇಶದಾದ್ಯಂತ 48 ಗಂಟೆಗಳ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಮಿಲಿಟರಿ ಪಡೆಯನ್ನು ಸನ್ನದ್ದಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ....
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ವಲ್ಪ ದಿನ ವಿರಮಿಸಿರುವ ಮಳೆರಾಯ ಮತ್ತೆ ಆಗಮಿಸಲಿದ್ದಾನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶಿವಮೋಗ್ಗ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಬುಲಂದ್‌ಶಹರ್‌ನಲ್ಲಿ ಬಸ್-ಟೆಂಪೋ ನಡುವೆ ಅಪಘಾತ; 10 ಮಂದಿ ಸಾವು

ಬುಲಂದ್‌ಶಹರ್‌ನಲ್ಲಿ ಬಸ್-ಟೆಂಪೋ ನಡುವೆ ಅಪಘಾತ; 10 ಮಂದಿ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಲಕ್ನೋ: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.ಬಸ್ ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ ಸೇಲಂಪುರ ಸಮೀಪ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ, ಟೆಂಪೋಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ....
ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕ್ರಮ ಕೈಗೊಂಡಿದ್ದಾರೆ. ಇಂದು ಅವರು ವಾರಣಾಸಿಗೆ ನೀಡದ ಭೇಟಿ ಗಮನಸೆಳೆಯಿತು.ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕ ಭವನ ಛತ್ರಕ್ಕೆ ಇಂದು ಸಾರಿಗೆ ಮತ್ತು ಮಂಜುರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು,ಕರ್ನಾಟಕ ಭವನ ಛತ್ರ 1927 ನಿರ್ಮಿಸಿದ್ದು, ಇದೇ ವೇಳೆ ಕರ್ನಾಟಕ ಭವನದ ಛತ್ರ, ಕೊಠಡಿಗಳನ್ನು ಅಭಿವೃದ್ಧಿ ಪಡಿಸಲು ನಿಶ್ಚಯಿಸಿದ್ದು, ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭವಾಗಿ ಎಲ್ಲ ಸುಸಜ್ಜಿತವಾಗಿ ಅಭಿವೃದ್ಧಿಯಾಗಲಿದೆ, ಎಂದು ಸಚಿವರು ಮಾಹಿತಿ ನೀಡಿದರು.ಕಾಶಿಯ ಕರ್ನಾಟಕ ಭವನ ಛತ್ರ: ಕಾಶಿಯಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕರ್ನಾಟಕ ಭವನ‌ ನವೀಕರಣ ಕಾರ್ಯ- ಸಾರಿಗೆ-ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ತ್ವರಿತ ಕ್ರಮ, ವಾರಣಾಸಿಯ ಹನುಮಾನ್ ಘಾಟ್ ನಲ್ಲಿರುವ ಕರ್ನಾಟಕ ಭವನ ಛತ್ರ, ಕರ...