Category: ದೇಶ-ವಿದೇಶ

  • ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆ ಸಂಸತ್ತಿನ ಚಳಿಗಾಲದ ಅಧಿವೇಶನ

    ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆ ಸಂಸತ್ತಿನ ಚಳಿಗಾಲದ ಅಧಿವೇಶನ

    ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಈ ತಿಂಗಳ 25 ರಿಂದ ನಡೆಯಲಿದೆ. ಈ ಕುರಿತಂತೆ ಮಂಗಳವಾರ ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

    ನವೆಂಬರ್ 26 ಸಂವಿಧಾನ ದಿನ ಆಚರಿಸಲಾಗುತ್ತದೆ. ಭಾರತ ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಯಲ್ಲಿ ಈ ತಿಂಗಳ 26 ರಂದು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ.

  • HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ

    ಬೆಂಗಳೂರು: ವಾಹನಗಳಿಗೆ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (ಹೆಚ್ಎಸ್ಆರ್​​ಪಿ) ನಂಬರ್ ಪ್ಲೇಟ್ ಅಳವಡಿಸಲು ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಿಸಿರುವ ಸರ್ಕಾರ ಇದೀಗ ಗಡುವನ್ನು ವಿಸ್ತರಿಸಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಮೂಲಗಳ ಪ್ರಕಾರ 1.90 ಕೋಟಿ ಹಳೆಯ ವಾಹನಗಳ ಪೈಕಿ ಸುಮಾರು 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಇದು ಅಂತಿಮ ಗಡುವು ಆಗಿದ್ದು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ಡಿಸೆಂಬರ್ 1ರಿಂದ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  • ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

    ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

    ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲ ಮುಂದೂಡಿದೆ. ಈ ಬೆಳವಣಿಗೆಯಿಂದಾಗಿ ಡಿಕೆಶಿ ಅವರು ಸ್ವಲ್ಪ ನಿರಾಳರಾಗಿದ್ದಾರೆ.

    ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪ ಕುರಿತ ಸಿಬಿಐ ತನಿಖೆಯ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿ ಸೋಮವಾರ ವಿಚಾರಣೆಗೆ ಬಂದಿತ್ತು. ಆದರೆ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿತು.

    ಇದೇ ವೇಳೆ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ್ ಸಲ್ಲಿಸಿರುವ ಅರ್ಜಿ ಕೂಡಾ ಸುಪ್ರೀಂಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಪೀಠವು ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

  • ಉತ್ತರಾಖಂಡ್: ಪೌರಿ-ಅಲ್ಮೋರಾ ಗಡಿಯಲ್ಲಿ ಬಸ್ ಅಪಘಾತ; 36 ಮಂದಿ ಸಾವು

    ಉತ್ತರಾಖಂಡ್: ಪೌರಿ-ಅಲ್ಮೋರಾ ಗಡಿಯಲ್ಲಿ ಬಸ್ ಅಪಘಾತ; 36 ಮಂದಿ ಸಾವು

    ರಾಮನಗರ (ಉತ್ತರಾಖಂಡ): ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಬಸ್ಸೊಂದು ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ.

    ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಉರುಳಿಬಿದ್ದಿದ್ದು ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

    ಈ ನಡುವೆ, ಅಪಘಾತ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೆರವು ಪ್ರಕಟಿಸಿದೆ.

  • ಸಿದ್ದಿಕಿ ರೀತಿ ಸಿಎಂ ಯೋಗಿ ಹತ್ಯೆಗೂ ಸಂಚು? ಬೆಚ್ಚಿ ಬೀಳಿಸಿದ ನಿಗೂಢ ಸಂದೇಶ

    ಸಿದ್ದಿಕಿ ರೀತಿ ಸಿಎಂ ಯೋಗಿ ಹತ್ಯೆಗೂ ಸಂಚು? ಬೆಚ್ಚಿ ಬೀಳಿಸಿದ ನಿಗೂಢ ಸಂದೇಶ

    ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ಅವರಂತೆಯೇ ಹತ್ಯೆ ಮಾಡಲಾಗುವುದು ಎಂಬ ಸಂದೇಶ ಬಂದಿದೆ.

    ಅಕ್ಟೋಬರ್ 12 ರಂದು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಬಾಬಾ ಸಿದ್ದಿಕಿ ಅವರ ಮಗ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು. ಈ ಪ್ರಕರಣ ಬಗ್ಗೆ ತನಿಖೆ ಸಾಗಿರುವಾಗಲೇ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ಅವರಂತೆಯೇ ಹತ್ಯೆ ಮಾಡಲಾಗುವುದು ಎಂಬ ಸಂದೇಶ ಮುಂಬೈ ಪೊಲೀಸರಿಗೆ ಸಿಕ್ಕಿದೆ. ಶನಿವಾರ ಸಂಜೆ ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ.

    ಈ ಬೆದರಿಕೆ ಸಂದೇಶ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದೇ ವೇಳೆ, ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಪಾಲಕ್ಕಾಡ್ ಬಳಿ ರೈಲು ಅವಘಡ; ನಾಲ್ವರು ಗುತ್ತಿಗೆ ಕಾರ್ಮಿಕರ ಸಾವು

    ಪಾಲಕ್ಕಾಡ್ ಬಳಿ ರೈಲು ಅವಘಡ; ನಾಲ್ವರು ಗುತ್ತಿಗೆ ಕಾರ್ಮಿಕರ ಸಾವು

    ಪಾಲಕ್ಕಾಡ್ : ಕೇರಳದ ಪಾಲಕ್ಕಾಡ್ ಬಳಿ ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ರೈಲು ಹರಿದು ಸಂಭವಿಸಿದ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

    ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ ಹೊರಟಿದ್ದ ಕೇರಳ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

    ಕಸ ತೆರವುಗೊಳಿಸುತ್ತಿದ್ದ ನೈರ್ಮಲ್ಯ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ಶೋರ್ನೂರ್ ರೈಲ್ವೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

  • ‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

    ‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

    ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಿಗೆ ಬರೆದಿರುವ ಪತ್ರ ಗಮನಸೆಳೆದಿದೆ.

    ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

    “ದೇಶದಾದ್ಯಂತ ರೈತರ, ದೇವಸ್ಥಾನಗಳ, ಟ್ರಸ್ಟ್‌ಗಳ ಮತ್ತು ಮಠಗಳ ಜಮೀನುಗಳ ಮೇಲೆ ವಕ್ಫ್ ಮಂಡಳಿಯು ಹಕ್ಕು ಸಾಧಿಸುತ್ತಿರುವುದು ವಿಷಾದದ ಸಂಗತಿ. ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು” –ಯತ್ನಾಳ್ ಆಗ್ರಹ.

      ದೇಶದ ಎಲ್ಲಾ ಪ್ರಜೆಗಳಿಗೂ ಭೂಮಿಯ ಮೇಲೆ ಸಮಾನ ಹಕ್ಕಿದೆ. ಹೀಗಿರುವಾಗ ವಕ್ಫ್‌ ಕೂಡಾ ಜಾತ್ಯತೀತ ರಾಷ್ಟ್ರದಲ್ಲಿ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಕಾರ್ಯನಿರ್ವಹಿಸಬೇಕಿದೆ ಎಂದು ಪ್ರತಿಪಾದಿಸಿರುವ ಯತ್ನಾಳ್, ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

  • ಆಂಗ್ಲರ ನಾಡಲ್ಲೂ ಕರುನಾಡ ವೈಭವ; ‘ಕನ್ನಡ ಡಿಂಡಿಮ’ಕ್ಕೆ ಸಾಕ್ಷಿಯಾದ ಲಂಡನ್ ಮಂದಿ

    📝 ಡಾ.ನೀರಜ್ ಪಾಟೀಲ್, ಯುನೈಟೆಡ್ ಕಿಂಗ್‌ಡಮ್

    ಸಾಗರೋತ್ತರ ರಾಷ್ಟ್ರ, ಆಂಗ್ಲರ ನಾಡಿನಲ್ಲೂ ಕನ್ನಡದ ಕಂಪು ಆವರಿಸಿದೆ. ಲಂಡನ್‌ಗೂ ಕರುನಾಡಿನ ಆರಾಧ್ಯ ದೈವ ವಿಶ್ವಗುರು ಬಸವೇಶ್ವರರನ್ನು ಕೊಂಡೊಯ್ದಿರುವ ಕನ್ನಡಿಗರು, ಇದೀಗ ಕನ್ನಡ ರಾಜ್ಯೋತ್ಸವವನ್ನೂ ನಾಡಭಕ್ತಿಯ ವೈಭವದೊಂದಿಗೆ ಆಚರಿಸಿದ್ದಾರೆ.

    ಕನ್ನಡ ರಾಜೋತ್ಸವದ ಮುನ್ನಾದಿನದಂದು, ಲಂಡನ್‌ನಲ್ಲಿರುವ ಕನ್ನಡಿಗರು ಕರುನಾಡಿನ ಶ್ರೀಮಂತ ಪರಂಪರೆ, ಭಾಷೆ ಮತ್ತು ಸಂಸ್ಕೃತಿ ವೈಭವದ ಪ್ರತೀಕವಾಗಿ ಆಚರಿಸಿದರು.
    ಪ್ರತೀ ವರ್ಷ ನವೆಂಬರ್ 1 ರಂದು ಲಂಡನ್‌ನಲ್ಲೂ ಅನಿವಾಸಿ ಕನ್ನಡಿಗರು ಕನ್ನಡ ರಾಜೋತ್ಸವ ಆಚರಿಸಿ ಕರ್ನಾಟಕ ರಚನೆಯನ್ನು ಸ್ಮರಿಸುತ್ತಾರೆ. ಇದು ವಿಶ್ವಾದ್ಯಂತ ಕನ್ನಡಿಗರಿಗೆ ಹೆಮ್ಮೆ ಮತ್ತು ಏಕತೆಯ ದಿನವಾಗಿದೆ. ಈ ಸಂದರ್ಭವು ಕರ್ನಾಟಕ ಮತ್ತು ಭಾರತವನ್ನು ತಮ್ಮ ಮನೆ ಎಂದು ಕರೆಯುವ ಪ್ರತಿಯೊಬ್ಬರ ಏಕತೆ, ಹೆಮ್ಮೆ ಮತ್ತು ಹಂಚಿಕೆಯ ಹೆಗ್ಗುರುತನ್ನು ಪ್ರತಿನಿಧಿಸುತ್ತದೆ.

    ಕರ್ನಾಟಕದ ವೈವಿಧ್ಯಮಯ ಸಂಪ್ರದಾಯಗಳು, ಕಲಾ ಪ್ರಕಾರಗಳು ಮತ್ತು ಭಾಷಾ ಪರಂಪರೆಗೆ ಗೌರವವಾಗಿ, ನಾವು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಮತ್ತು ಉತ್ತೇಜಿಸಲು ಎಲ್ಲರಿಗೂ ಪ್ರೋತ್ಸಾಹಿಸುತ್ತೇವೆ. ಈ ವಿಶೇಷ ದಿನದ ಆಚರಣೆಯಲ್ಲಿ, ಕನ್ನಡದ ಚೈತನ್ಯವನ್ನು ಸಾಕಾರಗೊಳಿಸಲು ಯುನೈಟೆಡ್ ಕಿಂಗ್‌ಡಮ್ ಮತ್ತು ಪ್ರಪಂಚದಾದ್ಯಂತ ಹಲವಾರು ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.

    ಕನ್ನಡ ಸಂಸ್ಕೃತಿ ಮತ್ತು ಇತಿಹಾಸವನ್ನು ಶ್ರೀಮಂತಗೊಳಿಸಿದ ನಮ್ಮ ನಾಯಕರು, ಕಲಾವಿದರು ಮತ್ತು ವಿದ್ವಾಂಸರ ಕೊಡುಗೆಗಳನ್ನು ಪ್ರತಿಬಿಂಬಿಸಲು ಈ ದಿನವು ಅವಕಾಶವನ್ನು ಒದಗಿಸುತ್ತದೆ. ಮುಂದಿನ ಪೀಳಿಗೆಗಳು ನಮ್ಮ ಭಾಷೆ ಮತ್ತು ಪರಂಪರೆಯ ಸೊಬಗನ್ನು ಶ್ಲಾಘಿಸುವಂತೆ, ಕನ್ನಡವನ್ನು ಉಳಿಸಲು ಮತ್ತು ಬೆಳೆಸಲು ನಾವು ಒಟ್ಟಾಗಿ ಪ್ರತಿಜ್ಞೆ ಮಾಡೋಣ.

    ನಾವು ಕನ್ನಡ ಸಂಸ್ಕೃತಿ ಮತ್ತು ಪರಂಪರೆಯನ್ನು ಹೆಮ್ಮೆಯಿಂದ ಆಚರಿಸುತ್ತಿರುವಾಗ, ನಾವು ಮೊದಲು ಭಾರತೀಯರು ಮತ್ತು ನಂತರ ಕನ್ನಡಿಗರು. ಹೆಮ್ಮೆಯ ಭಾರತೀಯರು ಎಂದು ನಮ್ಮ ಗುರುತನ್ನು ಅಳವಡಿಸಿಕೊಂಡು, ನಾವು ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಗೌರವಿಸುತ್ತೇವೆ.

    ಭಾರತದ ಇತರ ರಾಜ್ಯಗಳ ಜನರು, ಅವರವರ ಭಾಷೆ ಮತ್ತು ಸಂಸ್ಕೃತಿಗಳ ಬಗ್ಗೆ ಸಹಿಷ್ಣುತೆಯನ್ನು ಪ್ರತಿಪಾದಿಸುತ್ತಾರೆ. ವೈವಿಧ್ಯತೆ, ಸಹಿಷ್ಣುತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುವ ಪ್ರಜಾಪ್ರಭುತ್ವ ಮತ್ತು ಆಧುನಿಕ ಭಾರತದಲ್ಲಿ ಭಾಷಾ ಅಸಹಿಷ್ಣುತೆಗೆ ಅವಕಾಶವಿಲ್ಲ. ಇದಕ್ಕೆ ಕನ್ನಡ ರಾಜೋತ್ಸವವೂ ಪ್ರೇರಣೆಯಾಗಿದೆ.

  • ದೆಹಲಿಯಲ್ಲಿ ಕನ್ನಡದ ಕಂಪು; ರಾಜ್ಯೋತ್ಸವ ಸಮಾರಂಭ

    ನವದೆಹಲಿ: ೬೯ನೇ ಕನ್ನಡ ರಾಜ್ಯೋತ್ಸವವನ್ನು ನವದೆಹಲಿಯಲ್ಲಿ ಆಚರಿಸಲಾಯಿತು. ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರೇಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭಾಗವಹಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ದ್ವಜಾರೋಹಣ ನಡೆಸಿದರು.

    ಭಾರತ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸದ ನಿಮಿತ್ತ ದೆಹಲಿಯಲ್ಲಿ ತಂಗಿದ್ದೆ, ದೆಹಲಿಯಲ್ಲಿ ತಾಯಿ ಕನ್ನಡಾಂಭೆಯ ಪೂಜೆ ಮಾಡುವ ಮತ್ತು ಧ್ವಜಾರೋಹಣ ಮಾಡುವ ಸದಾವಕಾಶ ನನಗೆ ಲಭ್ಯವಾಗಿದೆಯೆಂದು ಸಚಿವ ವಿ. ಸೋಮಣ್ಣ ಅತ್ಯಂತ ಹರ್ಷ ವ್ಯಕ್ತ ಪಡೆಸಿದರು.

    ದೆಹಲಿ ಕರ್ನಾಟಕ ಸಂಘದಲ್ಲಿ ಕನ್ನಡಾಂಬೆಯ ಕಾರ್ಯಕ್ರಮವನ್ನು ಆಯೋಜಿಸಿದ್ದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಇನ್ನು ಮುಂದೆಯು ಕನ್ನಡ ಪರ ಹತ್ತಾರು ಕಾರ್ಯಕ್ರಮಗಳನ್ನು ವಿಶೇಷ ರೀತಿಯಿಂದ ಆಯೋಜಿಸುವಂತೆ ಸಲಹೆ ನೀಡಿದರು

    ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹನಿಯರ ವ್ಯಕ್ತಿತ್ವವನ್ನು ರಾಷ್ಟ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಅವರ ಬಗ್ಗೆ ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳಲ್ಲಿ ಪ್ರಕಟಣೆಗಳನ್ನು ಹೊರತರುವಂತೆ ಸಲಹೆ ನೀಡಿದರು. ರಾಷ್ಟ ರಾಜಧಾನಿ ದೆಹಲಿಯಲ್ಲಿ ಕನ್ನಡದ ಮತ್ತು ಕನ್ನಡ ಸಂಘಟನೆಗಳ ಅಸ್ತಿತ್ವವನ್ನು ಕಾಯ್ದುಕೊಳ್ಳಲು ದೆಹಲಿ ಕನ್ನಡಿಗರೆಲ್ಲರೂ ಸಮಾನ ಮನಸ್ಸಿನಿಂದ ಒಗಟ್ಟಾಗಿ ಕೆಲಸ ಮಾಡಲು ಕರೆ ನೀಡಿದರು.

    ದೆಹಲಿ ಕನ್ನಡ ಅಧ್ಯಕ್ಷರು ಸಂಘದ ಪದಾಧಿಕಾರಿಗಳು ಮತ್ತು ದೆಹಲಿ ಕನ್ನಡಿಗರು ರಾಜ್ಯೋತ್ಸವ ಸಮಾರಂಭದಲ್ಲಿ ಭಾಗಿಯಾಗಿದ್ದರು.

  • ದೇಶದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ; ಗಡಿಯಲ್ಲಿ ಮೋದಿ ಗರ್ಜನೆ

    ಕಚ್ : ಪ್ರಧಾನಿ ನರೇಂದ್ರ ಮೋದಿ ಅವರು ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವು ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂದು ಗುಡುಗಿದ್ದಾರೆ.

    ಗುಜರಾತಿನ ಕಚ್ ಪ್ರದೇಶದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿ ದೀಪಗಳ ಹಬ್ಬದ ಶುಭಾಶಯ ಹಂಚಿಕೊಂಡ ಮೋದಿ, ಯೋಧರ ಬಗ್ಗೆ ಕುಶಲೋಪರಿ ವಿಚಾರಿಸಿದರು. ಈ ವೇಳೆ ಮಾತನಾಡಿದ ಮೋದಿ, ದೇಶ ರಕ್ಷಣೆ ವಿಷಯದಲ್ಲಿ ಮಿಲಿಟರಿ ಶಕ್ತಿ ಮೇಲೆ ದೇಶದ ಜನತೆಗೆ ನಂಬಿಕೆಯಿದೆ ಎಂದರು.

    ದೇಶದ ನೆಲದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದ ಅವರು, ನಮ್ಮ ನೀತಿಗಳು ನಮ್ಮ ಸಶಸ್ತ್ರ ಪಡೆಗಳ ಸಂಕಲ್ಪದೊಂದಿಗೆ ಹೊಂದಿಕೊಂಡಿವೆ ಎಂದರು. ಇದೇ ವೇಳೆ, ಯೋಧರಿಂದಾಗಿ ದೇಶವು ಸುರಕ್ಷಿತವಾಗಿದೆ ಎಂದು ಹೇಳುವ ಮೂಲಕ ಸೈನ್ಯವನ್ನು ಹುರಿದುಂಭಿಸಿದರು.