Category: ದೇಶ-ವಿದೇಶ

  • BMTC ಮುಕುಟಕ್ಕೆ ಪ್ರಶಸ್ತಿಯ ಸಿಂಗಾರ; ನಿಗಮಕ್ಕೆ ಸಿಕ್ತು ‘Excellence in Urban Transport award’

    ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮುಕುಟಕ್ಕೆ ಪ್ರಶಸ್ತಿಯ ಸಿಂಗಾರವಾಗಿದೆ. ಸಾಲು ಸಾಲು ಪ್ರಶಸ್ತಿಗಳ ಜೊತೆ ಇದೀಗ BMTCಗೆ ‘Excellence in Urban Transport award’ ಸಿಕ್ಕಿದೆ.

    ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನೀಡುವ City with Best Record of Public Involvement in Transport ವಿಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು Award of Excellence in Urban Transport ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

    ಅಕ್ಟೋಬರ್ 27 ರಂದು ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ಆಯೋಜಿಸಿದ್ದ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರಲಾಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಅವರು ಪ್ರಶಸ್ತಿ ಸ್ವೀಕರಿಸಿದರು.

    ಭಾರತ ಸರ್ಕಾರದ ಈ ಪ್ರತಿಷ್ಠಿತ ಈ ಪ್ರಶಸ್ತಿಯು ನಾಗರಿಕರ ಸುರಕ್ಷತೆ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವುದಾಗಿದ್ದು ಅಕ್ಟೋಬರ್ ತಿಂಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದೇಶದ ಇತರೆ ನಗರ ಸಾರಿಗೆ ಸಂಸ್ಥೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಗಳ ನಡುವೆ ಉತ್ಕೃಷ್ಟ ಸೇವೆಗೆ ಹೆಸರಾಯಿತು. ನಗರದೊಳಗೆ ಪ್ರಯಾಣಿಸಲು ನಾಗರಿಕರಿಗೆ ಸುರಕ್ಷಿತ, ಪರಿಸರ ಸ್ನೇಹಿ ಮಾರ್ಗವನ್ನು ಒದಗಿಸುವುದು ಸಂಸ್ಥೆಯ ಗುರಿಯಾಗಿದ್ದು ಎಚ್ಎಸ್ಆರ್ ಬಡಾವಣೆಯ ನಾಗರಿಕರಿಗೆ ವಿನೂತನ ಮಾದರಿಯ intra layout (ಬಡಾವಣೆ ಒಳಗಿನ ) ಸೇವೆಯಿಂದ ಸಾರ್ವಜನಿಕ ಮನ್ನಣೆ ಪಡೆದಿದ್ದು, ಇದೀಗ ರಾಷ್ಟ್ರದ ಮಾದರಿಯ ಸೇವೆ ಎಂದು ಗುರುತಾಗಿದೆ. ಈ ಸೇವೆಗೆ ಪ್ರಶಸ್ತಿ ಸಕ್ಕಿದೆ.

  • ಅನ್ನದಾತರಿಗೆ ‘ಮೋದಿ ದೀಪಾವಳಿ ಗಿಫ್ಟ್’; ಭತ್ತದ ಬೆಂಬಲ ಬೆಲೆ 2500ರೂ. ಘೋಷಣೆ

    ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ. ಅನ್ನದಾತರಿಗೆ ಆಧಾರವಾಗಿ ಮಹತ್ವದ ಘೋಷಣೆಯನ್ನು ಕೇಂದ್ರ ಸರ್ಕಾರ ಮಡಿದೆ.

    ಕೇಂದ್ರ ಸರ್ಕಾರ ಭತ್ತದ ಬೆಂಬಲ ಬೆಲೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿದೆ ಎಂದರು.

    2300 ರೂಪಾಯಿ ದರದಲ್ಲಿ ಭತ್ತಕ್ಕೆ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ ಎಂದವರು ತಿಳಿಸಿದರು. 2013-14ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ 1310 ರೂಪಾಯಿ ಇತ್ತು. ಇದೀಗ ಅದನ್ನು 2300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಪ್ರಲ್ಹಾದ್ ಜೋಷಿ ತಿಳಿಸಿದರು.

    ಇದೇ ವೇಳೆ, 185 ಲಕ್ಷ ಟನ್ ಭತ್ತ, 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮ ಕ್ರಮ ಕೈಗೊಂಡಿದೆ ಎಂದೂ ಅವರು ಮಾಹಿತಿ ನೀಡಿದರು.

  • ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

    ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

    ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಇದೆ.

    ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.

    ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪಟಾಕಿ ದುರಂತಗಳಿಗೆ ಅವಕಾಶ ನೀಡಬಾರದು. ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು. ರಾತ್ರಿ 8 ರಿಂದ 10 ರವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌

  • ಸಮರ ಸಂತ್ರಸ್ತ ಗಾಜಾದಲ್ಲಿ ಇಸ್ರೇಲ್ ಬೀಕರ ದಾಳಿ; 38 ಮಂದಿ ಸಾವು

    ಸಮರ ಸಂತ್ರಸ್ತ ಗಾಜಾದಲ್ಲಿ ಇಸ್ರೇಲ್ ಬೀಕರ ದಾಳಿ; 38 ಮಂದಿ ಸಾವು

    ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದೆ. ಸಮರ ಸಂತ್ರಸ್ತ ಗಾಜಾ ಮೇಲೆ ಇಸ್ರೇಲ್​ ಸೇನೆ ಮತ್ತೆ ಭೀಕರ ವೈಮಾನಿಕ ದಾಳಿ ನಡೆಸಿದೆ.

    ಗಾಜಾ ಪ್ರದೇಶದ ಖಾನ್ ಯೂನಿಸ್‌ ಎಂಬಲ್ಲಿ ಬಹುಮಹಡಿ ವಸತಿ ಕಟ್ಟಡಗಳ ಇಸ್ಯೇಲ್ ವಾಯುಪಡೆ ಶುಕ್ರವಾರ ವೈಮಾನಿಕ ದಾಳಿ ನಡೆಸಿದೆ. ಸರಣಿ ಬಾಂಬ್ ದಾಳಿಯಲ್ಲಿ 14 ಮಕ್ಕಳು ಸೇರಿ 35ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ಟೀನ್ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮೃತಪಟ್ಟ 14 ಮಕ್ಕಳ ಪೈಕಿ 13 ಮಕ್ಕಳು ಒಂದೇ ಕುಟುಂಬದವರಾಗಿದ್ದು, ಇಸ್ರೇಲಿ ಕ್ಷಿಪಣಿಗಳಿಂದ ಹರಬಂದ ಹೊಗೆಯಿಂದ ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಲ್ ಜಜೀರಾ ತಿಳಿಸಿದೆ.

  • ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಝಣಝಣ ಕಾಂಚಾಣ; ಬರೋಬ್ಬರಿ 139 ಕೋಟಿ ರೂ ಚಿನ್ನಾಭರಣ ವಶ

    ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಝಣಝಣ ಕಾಂಚಾಣ; ಬರೋಬ್ಬರಿ 139 ಕೋಟಿ ರೂ ಚಿನ್ನಾಭರಣ ವಶ

    ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆಯ ನಡುವೆ ರಣಾಂಗಣದಲ್ಲಿ ಝಣಝಣ ಕಾಂಚಾಣದ ಸದ್ದು ಮೊಳಗಿದೆ.

    ಮತದಾನದ ಅಖಾಡದಲ್ಲಿ ಅಕ್ರಮವಾಗಿ ಚಿಣ್ಣಾಭರಣ ಸಾಗಿಸುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಚುನಾವಣಾ ಅಧಿಕಾರಿಗಳು ಶುಕ್ರವಾರ ಭರ್ಜರಿ ಭೇಟೆಯಾಡಿದ್ದು, ಪುಣೆಯ ಲಾಜಿಸ್ಟಿಕ್ ಸೇವಾ ಸಂಸ್ಥೆಯೊಂದರ ವಾಹನದಲ್ಲಿ ಸಾಗಿಸುತ್ತಿದ್ದ 139 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
    ಆದರೆ, ಇದು ತಮಗೆ ಸೇರಿದ್ದು, ಕಾನೂನು ಬದ್ದವಾಗಿಯೇ ಸಾಗಿಸಲಾಗುತ್ತಿತ್ತು ಎಂದು ಜ್ಯುವೆಲ್ಲರ್ಸ್ ಸಂಸ್ಥೆಯೊಂದು ಸ್ಪಷ್ಟನೆ ನೀಡಿದೆ.

  • ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಹೈದರಾಬಾದ್: ಬರ್ತ್ ಡೇ ಪಾರ್ಟಿ ಮಾಡಲು ಖಾಸಗಿ ಹೊಟೆಲ್ ಗೆ ಆಗಮಿಸಿದ್ದ ವ್ಯಕ್ತಿಯೋರ್ವ ನಾಯಿಯನ್ನು ಓಡಿಸುವ ಆತುರದಲ್ಲಿ ತಾನೇ 3ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

    ಹೈದರಾಬಾದ್ ನ ಚಂದಾನಗರದಲ್ಲಿ ಈ ಘಟನೆ ನಡೆದಿದ್ದು ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಏರೆ ಬಗ್ಗೆ ಪ್ರಕರಣ ದಾಖಲಿಸಿರುವ ಚಂದಾನಗರ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಭಾರೀ ಮಳೆ ತಂದ ಅವಾಂತರ; ರಾಜಧಾನಿ ಜನರ ಪರದಾಟ

    ಭಾರೀ ಮಳೆ ತಂದ ಅವಾಂತರ; ರಾಜಧಾನಿ ಜನರ ಪರದಾಟ

    ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ಜನ ಜೀವನವೂ ಏರುಪೇರಾಗಿದೆ.

    ಈ ನಡುವೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

  • ಬೆದರಿಕೆ ಸಂದೇಶಗಳ ಅವಾಂತರ: ಹಲವು ಸಾಮಾಜಿಕ ಜಾಲತಾಣ ಖಾತೆಗಳು ಬಂದ್

    ಬೆದರಿಕೆ ಸಂದೇಶಗಳ ಅವಾಂತರ: ಹಲವು ಸಾಮಾಜಿಕ ಜಾಲತಾಣ ಖಾತೆಗಳು ಬಂದ್

    ನವದೆಹಲಿ: ದೇಶದ ಆತರಿಕ ಭದ್ರತೆಗೆ ಸಾಮಾಜಿಕ ಮಾಧ್ಯಮಗಳು ಸವಾಲಗಿ ಪರಿಣಮಿಸಿದೆ. ಅದರಲ್ಲೂ ಇತ್ತೀಚೆಗೆ ವಿಮಾನಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಬಾಂಬ್ ಬೆದರಿಕೆ ಒಡ್ಡಲಾಗಿರುವ ಪ್ರಕರಣ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ.

    ಈ ನಡುವೆ, ಭಾರತೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಯ ಸಂದೇಶ ರವಾನಿಸಿದ್ದ ಹಲವು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಸೈಬರ್ ಭದ್ರತಾ ಏಜೆನ್ಸಿಗಳು ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸಿವೆ ಎಂದು ಮೂಲಗಳು ತಿಳಸಿವೆ.

    ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವು ವಿವಿಧ ಖಾತೆಗಳನ್ನು ಪರಿಶೀಲಿಸಿದ್ದು, ಹಲವಾರು ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ಗಾಜಾ ಸಮರ: ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಬಲಿ

    ಗಾಜಾ ಸಮರ: ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಬಲಿ

    ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದ್ದು, ಸೇನಾ ದಾಳಿಯಲ್ಲಿ ಹಮಾಸ್ ಮುಖ್ಯಸ್ಥನ ಹತ್ಯೆಯಾಗಿದೆ.

    ಗಾಜಾದಲ್ಲಿ ಐಡಿಎಫ್ ಕಾರ್ಯಾಚರಣೆ ವೇಳೆ 3 ಉಗ್ರರು ಸಾವನ್ನಪ್ಪಿದ್ದು ಇವರಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸೇರಿದ್ದಾನೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ.
    ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿಕೆ ನೀಡಿ, ಗಾಜಾದಲ್ಲಿನ ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾಹ್ಯಾ ಸಿನ್ವಾರ್‌ ಹತ್ಯೆಯಾಗಿರುವ ಬಗ್ಗೆ ಐಡಿಎಫ್ ತನಿಖೆ ನಡೆಸಿದೆ ಎಂದು ತಿಳಿಸಿದ್ದಾರೆ.