
ದಕ್ಷಿಣದ ರಾಜ್ಯಗಳ ಧ್ವನಿಯನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಯತ್ನ; ಖರ್ಗೆ ಆರೋಪ
ಹೋಸೂರು (ತಮಿಳುನಾಡು): ದೇಶದ ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸಲು ಜನರು ಜಾಗರೂಕರಾಗಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನರಿಗೆ ಕರೆ ನೀಡಿದ್ದಾರೆ.ತಮಿಳುನಾಡಿನ ಹೋಸೂರಿನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಸಿಎಂ ಎಂ.ಕೆ. ಸ್ಟಾಲಿನ್ ಉಪಸ್ಥಿತಿಯಲ್ಲಿ ಮಾತನಾಡಿದ ಖರ್ಗೆ, ತಮಿಳುನಾಡು ದೇಶಕ್ಕೆ ದಾರಿದೀಪವಾಗಿದ್ದು, ಪೆರಿಯಾರ್, ಅಣ್ಣಾ ಮತ್ತು ಕಲೈಗ್ನಾರ್ ಅವರ ಆದರ್ಶಗಳನ್ನು ಮುಂದುವರಿಸುತ್ತಿದೆ ಎಂದು ಹೇಳಿದರು. ಡಿಎಂಕೆ–ಕಾಂಗ್ರೆಸ್ ಮೈತ್ರಿಕೂಟವು ಆ ಮೌಲ್ಯಗಳನ್ನು ಕಾಪಾಡುತ್ತಿದೆ ಎಂದು ಅವರು ಶ್ಲಾಘಿಸಿದರು.ಸಂಸತ್ತಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ (ಸೀಮಾ ನಿರ್ಣಯ) ಪ್ರಯತ್ನವನ್ನು ತೀವ್ರವಾಗಿ ಟೀಕಿಸಿದ ಖರ್ಗೆ, “ಇದು ಪ್ರಜಾಪ್ರಭುತ್ವ ಸಮತೋಲನವನ್ನು ಬದಲಾಯಿಸುವ ದುರುದ್ದೇಶಪೂರಿತ ಯತ್ನವಾಗಿತ್ತು. ಕಾಂಗ್ರೆಸ್–ಡಿಎಂಕೆ ಮೈತ್ರಿ ಸೇರಿದಂತೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿ ಅದನ್ನು ಸೋಲಿಸಿವೆ. ಇದು ನ್ಯಾಯದ ಗೆಲುವು” ಎಂದು ಹೇಳಿದರು.ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದಕ್ಷಿಣ ಭಾ...








