
ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ : ಎಚ್.ಕೆ ಪಾಟೀಲ್
ಬೆಂಗಳೂರು: 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300/- ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬAಧಪಟ್ಟ ಎಲ್ಲಾ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟಿçÃಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ ಎಂದು ವಿವರಿಸಿದರು.
01.02.2023 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದ ಪುಟ ಸಂಖ್ಯೆ (10) ಪ್ಯಾರಾ (39) ರಲ್ಲಿ ಈ ಕೆಳಕಂಡAತೆ ಘೋಷಿಸಿರುತ್ತಾರೆ. ಕೇಂದ್ರ ಸರ್ಕಾರದಿಂದ ರಾಷ್ಟಿçÃಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದ ಮತ...