Monday, September 8

ದೇಶ-ವಿದೇಶ

‘ಪೋಗಟ್ ಅನರ್ಹತೆ ಬಗ್ಗೆ ದುಃಖವಾಗಿದೆ, ಆದರೆ ನಿಯಮಗಳನ್ನು ಗೌರವಿಸಬೇಕು’: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಪ್ರತಿಕ್ರಿಯೆ

‘ಪೋಗಟ್ ಅನರ್ಹತೆ ಬಗ್ಗೆ ದುಃಖವಾಗಿದೆ, ಆದರೆ ನಿಯಮಗಳನ್ನು ಗೌರವಿಸಬೇಕು’: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಪ್ರತಿಕ್ರಿಯೆ

ದೇಶ-ವಿದೇಶ, ಪ್ರಮುಖ ಸುದ್ದಿ
ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ ನಲುಗಿಸದೆ. ಈ ಬಗ್ಗೆ ಕ್ರೀಡಾಪಟುಗಳು ದುಃಖ ವ್ಯಕ್ತಪಡಿಸಿದ್ದಾರೆ. ಫೊಗಟ್ ಅವರ ಅನರ್ಹತೆ ಬಗ್ಗೆ ಪ್ರತಿಕ್ರಿಯಿಸಿರುವ ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ನೆನಾದ್ ಲಾಲೋವಿಕ್ ಅವರು ತಮಗೆ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಲಾಲೋವಿಕ್, ನಿಯಮಗಳು ಎಲ್ಲರಿಗೂ ಒಂದೇ. ಅದನ್ನು ಗೌರವಿಸಬೇಕು ಎಂದಿದ್ದಾರೆ. ಫೋಗಟ್ ಅವರ ಅನರ್ಹತೆ ಬಗ್ಗೆ ಅತೀವ ದುಃಖವಾಗಿದೆ. ಆದರೆ ಈ ಬಗ್ಗೆ ಏನನ್ನೂ ಮಾಡಲಾಗುವುದಿಲ್ಲ ಎಂದವರು ಹೇಳಿದ್ದಾರೆ....
ವಯನಾಡ್ ಸಂತ್ರಸ್ತರಿಗೆ ಸೂಪರ್ ಸ್ಟಾರ್ ಪ್ರಭಾಸ್ ನೆರವು; 2 ಕೋಟಿ ರೂಪಾಯಿ ನೀಡಿದ ನಟ

ವಯನಾಡ್ ಸಂತ್ರಸ್ತರಿಗೆ ಸೂಪರ್ ಸ್ಟಾರ್ ಪ್ರಭಾಸ್ ನೆರವು; 2 ಕೋಟಿ ರೂಪಾಯಿ ನೀಡಿದ ನಟ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ನವದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ವಯನಾಡ್ ಭೂಕುಸಿತ ಘಟನೆಯಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಈ ನಿರಾಶ್ರಿತರ ನೆರವಿಗೆ ಧಾವಿಸಿರುವ ಚಿತ್ರೋದ್ಯಮದ ಗಣ್ಯರು ಧನಸಹಾಯ ಮಾಡುತ್ತಿದ್ದಾರೆ. ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ನ‌ಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ದಕ್ಷಿಣ ಭಾರತದ ಖ್ಯಾತ ನಟ ಪ್ರಭಾಸ್‌ ಅವರು 2 ಕೋಟಿ ರೂ. ನೆರವು ನೀಡಿದ್ದಾರೆ. ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ಅವರು ಈ ಮೊತ್ತವನ್ನು ಪಾವತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕು; ತೃಣಮೂಲ ಕಾಂಗ್ರೆಸ್ ಸಲಹೆ

ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕು; ತೃಣಮೂಲ ಕಾಂಗ್ರೆಸ್ ಸಲಹೆ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ತೂಕ ಹೆಚ್ಚಳದ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕೆಂದು ತೃಣಮೂಲ ಕಾಂಗ್ರೆಸ್ ಆಗ್ರಹಿಸಿದೆ. ಪೋಗಟ್ ಅವರು ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರಿಗೆ ಈ ಬಾರಿ ಅನ್ಯಾಯವಾಗಿದೆ ಎಂದು ಇಡೀ ದೇಶ ಬೇಸರಗಿಂಡಿದೆ. ಪೋಗಟ್ ಅವರಿಗೆ ಧೈರ್ಯ ತುಂಬುವ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ ಹೊಸ ಸಲಹೆ ನೀಡಿ ಗಮನಸೆಳೆದಿದೆ. ಒಲಿಂಪಿಕ್ಸ್ ನಲ್ಲಿ ಆಕೆಯ ಕುಸ್ತಿ ಪ್ರದರ್ಶನವನ್ನು ಪರಿಗಣಿಸಿ ಆಕೆಗೆ ಭಾರತ ರತ್ನ ನೀಡಬೇಕು ಎಂದಿರುವ ಟಿಎಂಸಿ, ಪೋಗಟ್ ಅವರು ಭಾರತದ 1.4 ಬಿಲಿಯನ್ ಜನತೆಗೆ ಆಕೆ ಚಾಂಪಿನ್ ಗಳ ಚಾಂಪಿಯನ್ ಹಾಗೂ ದೇಶದ ಹೆಮ್ಮೆ. ಹಾಗಾಗಿ ಅವರಿಗೆ ಭಾರತ ರತ್ನ ಅಥವಾ ರಾಷ್ಟ್ರಪತಿಗಳ ಮೂಲಕ ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಬಗ್ಗೆ ಪಕ್ಷಾತೀತವಾಗಿ ನಿರ್ಧರಿಸಬೇಕು ಎಂದು ಪ್ರತಿಪಾದಿಸಿದೆ....
ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ

ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ

ದೇಶ-ವಿದೇಶ, ಪ್ರಮುಖ ಸುದ್ದಿ
📝 ಜಯ ಪ್ರಕಾಶ್ ಲಂಡನ್: ಭೀಕರ ಹಿಂಸಾಚಾರದಿಂದ ಬಾಂಗ್ಲಾದೇಶ ತ್ತರಿಸಿದೆ. ಉದ್ಯೋಗ ನೀತಿ ವಿರುದ್ದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳು ದಂಗೆ ಎದ್ದಿದ್ದು ನಿರಂತರ ಹಿಂಸಾಚಾರದಿಂದಾಗಿ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಹಿಂಸಾಚರದಿಂದ ಬೆಚ್ಚಿದ ಶೇಖ್ ಹಸೀನಾ ಅವರು ಪ್ತಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದಾರೆ. ಬಾಂಗ್ಲಾದೇಶದ ಈ ಪರಿಸ್ಥಿತಿ ಬಗ್ಗೆ ಲಂಡನ್‌‌ನಲ್ಲಿರುವ ಬ್ರಿಟಿಷ್ ಲೇಬರ್ ಪಾರ್ಟಿ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬ್ರಿಟಿಷ್ ಲೇಬರ್ ಪಾರ್ಟಿ ನಾಯಕರೂ ಆದ, ಭಾರತ ಮೂಲದ ಮಾಜಿ ಲಂಡನ್ ಮೇಯರ್ ಡಾ.ನೀರಜ್ ಪಾಟೀಲ್, ಬಾಂಗ್ಲಾದೇಶದಲ್ಲಿ ಶೀಘ್ರ ಶಾಂತಿ ಮರುಸ್ಥಾಪಿಸಲು ವಿಶ್ವ ಸಮುದಾಯ ಸಹಕಾರ ನೀಡಬೇಕಿದೆ ಎಂದು ಪ್ರತಿಪಾದಿಸಿದ್ದಾರೆ. ಬಾಂಗ್ಲಾದೇಶ ಸಂಸತ್ತು ವಿಸರ್ಜನೆಯಾಗಿದೆ, ಅದರ ಪ್ರಧಾನಿ ಈಗ ದೆಹಲಿಯಲ್ಲಿದ್ದಾರೆ. ಮುಂದಿನ ಮೂರು ತಿಂಗಳೊಳಗೆ ಚುನಾಯಿತ ಸರ್ಕಾರವನ್ನು ಮರುಸ್ಥಾಪಿಸುವ ಭರವಸೆಯೊಂದಿಗೆ ಮಿಲಿಟರಿ ಸ್ವಾಧೀನವಿದೆ. ಇದು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯಾಗಿದೆ ಮತ್ತು ಬ್ರಿಟಿಷ್ ವಿದೇಶಾಂಗ ಕಚೇರಿ ಕೂಡಾ ಕಳವ...
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಭಾರತದಲ್ಲಿ ರಕ್ಷಣೆ; ಸರ್ವಪಕ್ಷ ಸಭೆಯಲ್ಲಿ ಸಹಮತ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಭಾರತದಲ್ಲಿ ರಕ್ಷಣೆ; ಸರ್ವಪಕ್ಷ ಸಭೆಯಲ್ಲಿ ಸಹಮತ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹಿಂಸಾಚಾರದಿಂದ ತತ್ತರಿಸಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ ಬಳಿಕ ಭಾರತಕ್ಕೆ ಆಗಮಿಸಿದ್ದು, ಅವರಿಗೆ ರಕ್ಷಣೆ ನೀಡಲು ಭಾರತ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರದ ಈ ನಿಲುವಿಗೆ ಸರ್ವಪಕ್ಷಗಳು ಸಹಮತ ಸೂಚಿಸಿವೆ. ಈ ಸಂಬಂಧ ನವ ದೆಹಲಿಯಲ್ಲಿ ಮಂಗಳವಾರ ನಡೆದ ಸರ್ವಪಕ್ಷ ಸಭೆ ಮಹತ್ವದ ನಿರ್ಣಯ ಅಂಗೀಕರಿಸಿದೆ. ಬಾಂಗ್ಲಾದೇಶದಿಂದ ಪಲಾಯನವಾಗಿರುವ ಪ್ರಧಾನಿ ಶೇಖ್ ಹಸೀನಾ ಅವರಿಗೆ ಭಾರತದ ನೆರವು ನೀಡುವ ಕುರಿತು ಮಹತ್ವದ ನಿರ್ಣಯಕ್ಕೆ ಸರ್ವಪಕ್ಷಗಳು ಬೆಂಬಲಿಸಿವೆ. ಸೋಮವಾರ ಸಂಜೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಸಕಲ ರೀತಿಯ ನೆರವು ನೀಡುವುದಾಗಿ ಭಾರತ ಭರವಸೆ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮಂಗಳವಾರ ಸರ್ವಪಕ್ಷ ಸಭೆಯಲ್ಲಿ ತಿಳಿಸಿದ್ದಾರೆ....
ವಯನಾಡ್ ಸಂತ್ರಸ್ತರಿಗಾಗಿ 1 ಕೋ.ರೂ.ದೇಣಿಗೆ ಸಮರ್ಪಿಸಿದ ಚಿರಂಜೀವಿ, ರಾಮ್‌ಚರಣ್

ವಯನಾಡ್ ಸಂತ್ರಸ್ತರಿಗಾಗಿ 1 ಕೋ.ರೂ.ದೇಣಿಗೆ ಸಮರ್ಪಿಸಿದ ಚಿರಂಜೀವಿ, ರಾಮ್‌ಚರಣ್

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಹೈದರಾಬಾದ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ದುರ್ಘಟನೆಯ ಸಂತ್ರಸ್ತರ ನೆರವಿಗೆ ಧಾವಿಸಿರುವ ದಕ್ಷಿಣ ಭಾರತದ ಖ್ಯಾತ ನಟರಾದ ಚಿರಂಜೀವಿ ಹಾಗೂ ರಾಮ್ ಚರಣ್ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ, ಈ ದುರಂತದಲ್ಲಿ 380ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಸಾವಿರಾರು ಮಂದಿ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಸಂತ್ರಸ್ತರ ನೆರವಿಗೆ ಸಿನಿಮಾ ತಾರೆಯರು ಸಹಾಯ ಹಸ್ತ ಚಾಚಿದ್ದಾರೆ. ಇದೇ ವೇಳೆ, ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅವರು ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ...
ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ದೇಶ-ವಿದೇಶ, ಪ್ರಮುಖ ಸುದ್ದಿ
ಢಾಕಾ: ಉದ್ಯೋಗ ಮೀಸಲಾತಿ ವಿವಾದದಿಂದಾಗಿ ಹಿಂಸಾಚಾರ ಭುಗಿಲೆದ್ದಿರುವ ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆಯುತ್ತಿದ್ದು ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಒಂದೆಡೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ವಿದ್ಯಾರ್ಥಿ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಪ್ರತಿಭಟನೆ ನಡೆದಿದ್ದರೆ, ಆಡಳಿತ ಪಕ್ಷದ ಕಾರ್ಯಕರ್ತರು ಈ ಹೋರಾಟಕ್ಕೆ ಅಡ್ಡಿಪಡಿಸಿದ್ದಾರೆ. ಈ ಸನ್ನಿವೇಶಕ್ಕೆ ವೇಶದಿಂದಾಗಿ ಸಂಘರ್ಷ ಭುಗಿಲೆದ್ದು ಇಡೀ ದೆಶ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಈ ನಡುವೆ, ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ. ರಾಜೀನಾಮೆ ಬಳಿಕ ಸುರಕ್ಷಿತ ಸ್ಥಳಕ್ಕೆ ಅವರು ತೆರಳಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ, ಶೇಖ್ ಹಸೀನಾ ಅವರು ಭಾರತಕ್ಕೆ ಪಲಾಯನವಾಗಿದ್ದಾರೆ ಎಂಬ ಮಾತುಗಳೂ ಹರಿದಾಡುತ್ತಿವೆ....
ದೇವಸ್ಥಾನದ ಮೆರವಣಿಗೆ ವೇಳೆ ಘೋರ ದುರಂತ; ವಿದ್ಯುತ್ ಸ್ಪರ್ಷಿಸಿ 8 ಮಂದಿ ಸಾವು

ದೇವಸ್ಥಾನದ ಮೆರವಣಿಗೆ ವೇಳೆ ಘೋರ ದುರಂತ; ವಿದ್ಯುತ್ ಸ್ಪರ್ಷಿಸಿ 8 ಮಂದಿ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಪಾಟ್ನಾ: ಬಿಹಾರದ ಸುಲ್ತಾನ್‌ಪುರ ಗ್ರಾಮದ ದೇವಸ್ಥಾನವೊಂದರ ಕಾರ್ಯಕ್ರಮದ ಮೆರವಣಿಗೆಯಲ್ಲಿ ಡಿಜೆ ವಾಹನಕ್ಕೆ ವಿದ್ಯುತ್‌ ತಗುಲಿ 8 ಮಂದಿ ಬಲಿಯಾಗಿದ್ದಾರೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಈ ಗ್ರಾಮದಲ್ಲಿ ಹುಡುಗರು ಪ್ರತಿ ಸೋಮವಾರ ಸಮೀಪದ ಹರಿಹರನಾಥ ದೇವಸ್ಥಾನಕ್ಕೆ ಜಲಾಭಿಷೇಕ ಕೈಂಕರ್ಯ ಆಯೋಜಿಸಿದ್ದರು. ಈ ಸಂಬಂಧ ಭಾನುವಾರ ಮಧ್ಯರಾತ್ರಿ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಡಿಜೆ ವಾಹನಕ್ಕೆ ವಿದ್ಯುತ್ ತಂತಿ ತಗುಲಿದೆ ಎನ್ನಲಾಗಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಬಾಂಗ್ಲಾ ಹಿಂಸಾಚಾರ; ಸದ್ಯದ ಸ್ಥಿತಿಯಲ್ಲಿ ಢಾಕಾ ಪ್ರವಾಸ ಬೇಡ ಎಂದ ಮೋದಿ ಸರ್ಕಾರ

ಬಾಂಗ್ಲಾ ಹಿಂಸಾಚಾರ; ಸದ್ಯದ ಸ್ಥಿತಿಯಲ್ಲಿ ಢಾಕಾ ಪ್ರವಾಸ ಬೇಡ ಎಂದ ಮೋದಿ ಸರ್ಕಾರ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಿಯಂತ್ರಿಸಲಾಗದ ಸ್ಥಿತಿ ತಲುಪಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಆ ದೇಶಕ್ಕೆ ಭೇಟಿ ನೀಡದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಿಂಸಾತ್ಮಕ ಪ್ರತಿಭಟನೆಗಳಿಂದ ಬಾಂಗ್ಲಾದೇಶ ನಲುಗಿದ್ದು, 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಮನಗಂಡಿರುವ ಮೋದಿ ಸರ್ಕಾರ, ಮುಂದಿನ ಸೂಚನೆ ಬರುವವರೆಗೆ ಬಾಂಗ್ಲಾದೇಶಕ್ಕೆ ತೆರಳದಂತೆ ಎಚ್ಚರಿಕೆ ನೀಡಿದೆ. Advisory for Bangladesh:https://t.co/mKs1auhnlK pic.twitter.com/m5c5Y0Bn8b — Randhir Jaiswal (@MEAIndia) August 4, 2024 ಈ ಸಂಬಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಬಾಂಗ್ಲಾದೇಶದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಭಟನಾ ನಿರತರ ನಡುವೆ ಭುಗಿಲೆದ್ದ ಹಿಂಸಾಚಾರ ಭುಗಿಲೆದ್ದಿದ್ದು, ಅಲ್ಲಿರುವ ಭಾರತೀಯರಿಗೂ ಸುರಕ್ಷತೆ ಬಗ್ಗೆ ಸಲಹೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ತೀವ್ರ ಎಚ್ಚರಿಕೆ ವಹಿಸಲು, ಢಾಕಾದಲ್ಲಿರುವ ಭಾರತದ ಹೈಕಮಿಷನ್ ಕಚೇರಿಯ ತುರ್ತು ದೂರವಾಣಿ ಸಂಖ್...
ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ನೂರಕ್ಕೂ ಹೆಚ್ಚು ಜನರ ಸಾವು

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ನೂರಕ್ಕೂ ಹೆಚ್ಚು ಜನರ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಢಾಕಾ: ಬಾಂಗ್ಲಾದೇಶದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಕಾರ್ಯಕರ್ತರ ನಡುವಿನ ಸಂಘರ್ಷ ತಾರಕಕ್ಕೇರಿದ್ದು ಹಿಂಸಾಚಾರ ಉಲ್ಬಣಗೊಂಡಿದೆ. ಹತ್ತಕ್ಕೂ ಹೆಚ್ಚು ನಗರಗಳಿಗೆ ಹಿಂಸಾಚಾರ ವ್ಯಾಪಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಾಂಗ್ಲಾ ದೇಶದ ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ನಡುವೆ ಹೊಡೆದಾಟ ಬಡಿದಾಟವೇ ನಡೆದಿದೆ. ಉದ್ಯೋಗ ಮೀಸಲಾತಿ ಸಹಿತ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳ ಬೆಂಬಲಿಗರು ಹಲವು ದಿನಗಳಿಂದ ಪ್ರತಿಭಟನೆ ನಡೆಸಿತ್ತಿದ್ದಾರೆ. ಪ್ರಧಾನಿ ಶೇಕ್ ಹಸೀನಾ ರಾಜೀನಾಮೆಗೂ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆ ಹತ್ತಿಕ್ಕಲು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರು ಅಖಾಡಕ್ಕಿಳಿದಿದ್ದು ಉಭಯ ಗುಂಪುಗಳ ನಡುವೆ ಹಿಂಸಾಚಾರ ನಡೆದಿದೆ. ಈ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅವಾಮಿ ಲೀಗ್ ನ ಬೆಂಬಲಿಗರು, ಛಾತ್ರಾ ಲೀಗ್ ಹಾಗೂ ಜುಬೋ ಲೀಗ್ ಕಾರ್ಯಕರ್ತರ ನಡುವೆ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಹಾಗೂ ಸೇನಾಪಡೆ ಶತಪ್ರಯತ್ನ ನಡೆಸುತ್ತಿದೆ....