Monday, September 8

ದೇಶ-ವಿದೇಶ

‘ವೇದಾ’ ಬಗ್ಗೆ ಹೆಚ್ಚಿದ ನಿರೀಕ್ಷೆ; ಟ್ರೇಲರ್ ಬಗ್ಗೆ ಸಕತ್ ಮೆಚ್ಚುಗೆ

‘ವೇದಾ’ ಬಗ್ಗೆ ಹೆಚ್ಚಿದ ನಿರೀಕ್ಷೆ; ಟ್ರೇಲರ್ ಬಗ್ಗೆ ಸಕತ್ ಮೆಚ್ಚುಗೆ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಸಿನಿರಂಗದಲ್ಲಿ 'ವೇದಾ' ಚಿತ್ರದ ತೀವ್ರ ಕುತೂಹಲ ಕೆರಳಿಸಿದೆ. ನಟ ಜಾನ್ ಅಬ್ರಹಾಂ ಮತ್ತು ಶ್ರಾವರಿ ಅವರು 'ವೇದಾ'ದಲ್ಲಿ ನಟಿಸಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಿಖಿಲ್ ಅಡ್ವಾಣಿ ಅವರು ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಟ್ರೇಲರ್ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷೆಯ ಈ‌ ಸಿನಿಮಾ ಸ್ವಾತಂತ್ರ್ಯ ದಿನದಂದು ತೆರೆಕಾಣಲಿದೆ ಎಂದು ನಟ ಜಾನ್ ಅಬ್ರಹಾಂ ಮಾಹಿತಿ ಹಂಚಿಕೊಂಡಿದ್ದಾರೆ. https://youtu.be/eGfYMhdKR0Q?si=A6zsAKIgaFrI_LO6...
ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಸಿಟಡೆಲ್: ಹನಿ ಬನ್ನಿ ಟೀಸರ್ ಅನ್ನು ಸಿನಿ ಅಭಿಮಾನಿಗಳು ಸಕತ್ತಾಗಿ ಎಂಜಾಯ್ ಮಾಡಿದ್ದಾರಂತೆ. ಹೀಗೆಂದು ಸಿನಿ ತಂಡ ಸಂತಸ ಹಂಚಿಕೊಂಡಿದೆ. https://youtu.be/J2rYqO15lJk?si=6K89Az2k34UPm0V3 ನಟಿ ಸಮಂತಾ ರೂತ್ ಪ್ರಭು ಮತ್ತು ವರುಣ್ ಅಭಿನಯದ ಸಿಟಡೆಲ್: ಹನಿ ಬನ್ನಿ ಟೀಸರ್ ಬಿಡುಗಡೆಯಾಗಿದ್ದು ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. ಈ ಚಿತ್ರವನ್ನು ರಾಜ್ ಮತ್ತು ಡಿ.ಕೆ. ನಿರ್ದೇಶಿಸಿದ್ದಾರೆ. ಸಿನಿ ಲೋಕದಲ್ಲಿ ಮತ್ತೊಂದು ರಂಜನೆಯ ಕ್ಷಣಗಳಿಗೆ ಈ ಸಿನಿಮಾ ಸಾಕ್ಷಿಯಾಗಲಿದೆ ಎಂಬ ಕಮೆಂಟ್ಸ್ ಗಮನಸೆಳೆದಿದೆ....
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮೂಲಕ ಬೆಂಗಳೂರು ದೇಶದ ಗಮನಸೆಳೆದಿದೆ. ಬೆಂಗಳೂರಿನಲ್ಲಿ ಬಿಸಿಸಿಐ ನಿರ್ಮಾಣ ಮಾಡುತ್ತಿರುವ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಬಹುತೇಕ ಅಂತಿಮ ಹಂತದಲ್ಲಿದೆ. ಶೀಘ್ರದಲ್ಲೇ ಉದ್ಘಾಟನೆ ನೆರವೇರಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರ ತಿಳಿಸಿದ್ದಾರೆ. 45 ಅಭ್ಯಾಸದ ಪಿಚ್‌ಗಳು ಮತ್ತು ಒಲಿಂಪಿಕ್ಸ್ ಗಾತ್ರದ ಈಜುಕೊಳ ಸಹಿತ ವಿಶೇಷ ಸೌಲಭ್ಯವಿರುವ ಕ್ರಿಕೆಟ್ ಅಕಾಡೆಮಿ ಇದಾಗಿದೆ. ಈ ಅಕಾಡೆಮಿ ಬಗ್ಗೆ ಜಯ್ ಷಾ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅತ್ಯಾಧುನಿಕ ತರಬೇತಿ, ಕ್ರೀಡಾ ವಿಜ್ಞಾನ ಸೌಲಭ್ಯಗಳಿವೆ ಎಂದು ಅವರು ಪರಿಚಯಿಸಿದ್ದಾರೆ. Very excited to announce that the @BCCI’s new National Cricket Academy (NCA) is almost complete and will be opening shortly in Bengaluru. The new NCA will feature three world-class playing grounds, 45 practice pitches, indoor cricket pitches, Olympic-size swimming pool and… pic.twitter.com/...
ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆ 315ಕ್ಕೆ ಏರಿಕೆ

ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆ 315ಕ್ಕೆ ಏರಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ
ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 315ಕ್ಕೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ. ಅನೇಕ ಮನೆಗಳು ನೆಲಸಮವಾಗಿದ್ದು, ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. ಭಾನುವಾರದಿಂದೀಚೆಗೆ ನಿರಂತರ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಮೃತದೇಹಗಳು ಪತ್ತೆಯಾಗುತ್ತಲೇ ಇವೆ. ಅಧಿಕಾರಿಗಳ ಪ್ರಕಾರ ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 315 ದಾಟಿದೆ. 200ಕ್ಕೂ ಹೆಚ್ಚು‌ ಮಂದಿ‌ ನಾಪತ್ತೆಯಾಗಿದ್ದು ಮೃತದೇಹಗಳಿಗಾಗಿ ಹುಡುಕಾಟ ಸಾಗಿದೆ. ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಈ ಭಾರೀ ಭೂಕುಸಿತ ಸಂಭವಿಸಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ಬು ಮುಂದುವರಿಸಿದ...
ವಯನಾಡು ಸಂತ್ರಸ್ತರ ನೆರವಿಗೆ ಧಾವಿಸಿದ ನಟಿ ರಶ್ಮಿಕಾ ಮಂದಣ್ಣ

ವಯನಾಡು ಸಂತ್ರಸ್ತರ ನೆರವಿಗೆ ಧಾವಿಸಿದ ನಟಿ ರಶ್ಮಿಕಾ ಮಂದಣ್ಣ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರ್ಘಟನೆ ನೂರಾರು ಮಂದಿಯನ್ನು ಬಲಿತೆಗೆದುಕೊಂಡಿದೆ. ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿವೆ. ಅಸಂಖ್ಯ ಮಂದಿ ಇನ್ನೂ ನಾಪತ್ತೆಯಾಗಿದ್ದು, ಸಂತ್ರಸ್ತರ ಆಕ್ರಂದನ ಮುಗಿಲುಮುಟ್ಟಿದೆ. ಈ ದುರ್ಘಟನೆಯಿಂದಾಗಿ ವಯನಾಡಿನಲ್ಲಿ ಸೂತಕದ ಛಾಯೆ ಆವರಿಸಿಕೊಂಡಿದೆ. ತಮ್ಮವರನ್ನು ಕಳೆದುಕೊಂಡವರ ರೋದನ ಮನಕಲಕುವಂತಿದೆ. ಈ ಸಂದರ್ಭದಲ್ಲಿ ನಟಿ ಕನ್ನಡತಿ ರಶ್ಮಿಕಾ ಮಂದಣ್ಣ ಮಾನವೀಯತೆ ಮೆರೆದಿದ್ದಾರೆ. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ರಶ್ಮಿಕಾ ನಡೆಯಿಂದ ಪ್ರೇರಿತವಾಗಿರುವ ಅನೇಕ ಸಿನಿಮಾ ತಾರೆಯರು ಧನಸಹಾಯಕ್ಕೆ ಮುಂದಾಗಿದ್ದಾರೆ....
ವಯನಾಡ್ ಭೂಕುಸಿತ; ಸಾವಿನ ಸಂಖ್ಯೆ 275ಕ್ಕೆ ಏರಿಕೆ, ದೇಶವನ್ನೇ ಸೂತಕಕ್ಕೆ ತಳ್ಳಿದ ವಿಕೋಪ

ವಯನಾಡ್ ಭೂಕುಸಿತ; ಸಾವಿನ ಸಂಖ್ಯೆ 275ಕ್ಕೆ ಏರಿಕೆ, ದೇಶವನ್ನೇ ಸೂತಕಕ್ಕೆ ತಳ್ಳಿದ ವಿಕೋಪ

ದೇಶ-ವಿದೇಶ, ಪ್ರಮುಖ ಸುದ್ದಿ
ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 275ಕ್ಕೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ. ಅನೇಕ ಮನೆಗಳು ನೆಲಸಮವಾಗಿದ್ದು, ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. ಭಾನುವಾರದಿಂದೀಚೆಗೆ ನಿರಂತರ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಮೃತದೇಹಗಳು ಪತ್ತೆಯಾಗುತ್ತಲೇ ಇವೆ. ಅಧಿಕಾರಿಗಳ ಪ್ರಕಾರ ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 280 ದಾಟಿದೆ. ನಾರಕ್ಕೂ ಹೆಚ್ಚು‌ ಮಂದಿ‌ ನಾಪತ್ತೆಯಾಗಿದ್ದು ಮೃತದೇಹಗಳಿಗಾಗಿ ಹುಡುಕಾಟ ಸಾಗಿದೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಈ ಭಾರೀ ಭೂಕುಸಿತ ಸಂಭವಿಸಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ಬು ಮುಂದುವರಿಸಿದ್ದಾರೆ.‌...
ಶಿಮ್ಲಾದಲ್ಲಿ ಮೇಘ ಸ್ಫೋಟ; ದಿಢೀರ್ ಪ್ರವಾಹದಿಂದ 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಶಿಮ್ಲಾದಲ್ಲಿ ಮೇಘ ಸ್ಫೋಟ; ದಿಢೀರ್ ಪ್ರವಾಹದಿಂದ 20ಕ್ಕೂ ಹೆಚ್ಚು ಮಂದಿ ನಾಪತ್ತೆ

ದೇಶ-ವಿದೇಶ, ಪ್ರಮುಖ ಸುದ್ದಿ
ಶಿಮ್ಲಾ: ಭಾರೀ ಮಳೆಯಿಂದಾಗಿ ದೇಶದ ಹಲವೆಡೆ ಸರಣಿ ದುರ್ಘಟನೆಗಳು ಸಂಭವಿಸುತ್ತಿವೆ. ಬುಧವಾರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿಯಾಗಿವೆ. ಜೊತೆಗೆ ಪ್ರಾಣ ಹಾನಿ ಬಗ್ಗೆಯೂ ವರದಿಯಾಗಿವೆ. ಅತ್ತ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ತಲ್ಲಣ ಸೃಷ್ಟಿಸಿದೆ. ದಿಡೀರ್ ಉಂಟಾದ ಪ್ರವಾಹದಿಂದಾಗಿ ಸುಮಾರು 20 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಶಿಮ್ಲಾದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ದಿಢೀರ್ ಪ್ರವಾಹದಿಂದ ಅವಾಂತರ ಸೃಷ್ಟಿಯಾಗಿದ್ದು, ಪೊಲೀಸ್, ಅಗ್ನಿಶಾಮಕ ದಳ, ಎನ್‌ಡಿ‌ಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ....
ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಆಗಸ್ಟ್ 1 ರಿಂದ ಅನ್ವಯವಾಗುವಂತೆ ಹೆಚ್ಚಿಸಿವೆ. ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 8.50 ರೂಪಾಯಿ ದುಬಾರಿಯಾಗಿದೆ. ಈ ದರ ಪರಿಷ್ಕರಣೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಷ್ಟೇ ಅನ್ವಯವಾಗಲಿದ್ದು, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿತರಕರು ತಿಳಿಸಿದ್ದಾರೆ....