ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ
ಕಾರೈಕಲ್: ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು ಎಂದು ರಾಷ್ಟ್ರೀಯ ಕಿಸಾನ್ ಮೋರ್ಚಾದ ಸಂಚಾಲಕರೂ ಆದ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರ್ ಶಾಂತಕುಮಾರ್ ಆರೋಪಿಸಿದ್ದಾರೆ.
ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಕೃಷಿ ಭೂಮಿ. ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದರು.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ.
ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ. ಬೆಳೆ ವಿಮೆ ಪದ್ಧತಿ ತಿದ್ದುಪಡಿ ಆಗಬೇಕು. 60 ವರ್ಷ ತುಂಬಿದ...




