Saturday, December 6

ದೇಶ-ವಿದೇಶ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ. ತುಂಗಭದ್ರಾ ಜಲಾಶಯದ ಒಂದು ಕ್ರೆಸ್ಟ್ ಗೇಟ್ ಹಾನಿಗೊಳಗಾಗಿದ್ದು ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಹರಿ ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೊಂದೆಡೆ, ಕಾವೇರಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯತ್ತಿದೆ. ಹಾಗಾಗಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ....
ತಿರುವಳ್ಳೂರು ಬಳಿ ಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ದುರ್ಮರಣ

ತಿರುವಳ್ಳೂರು ಬಳಿ ಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ದುರ್ಮರಣ

ದೇಶ-ವಿದೇಶ, ಪ್ರಮುಖ ಸುದ್ದಿ
ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿಯೂ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಿದ್ದ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ಘಟಿಸಿದೆ. ಚೆನ್ನೈನ ಕಾಲೇಜಿನಲ್ಲಿ ಓದುತ್ತಿದ್ದ ಏಳು ಮಂದಿ ವಿದ್ಯಾರ್ಥಿಗಳು ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿಕಾರಿನಲ್ಲಿ ತೆರಳುತ್ತಿದ್ದಾಗ ಟ್ರಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಅಪಘಾತಕ್ಕೆ ಕಾರಣ ಎನ್ನಲಾದ ಟ್ರಕ್ ಚಾಲಕನನ್ನು ಕನಗಮ್ಮಛತ್ರಂ ಪೊಲೀಸರು ಬಂಧಿಸಿದ್ದಾರೆ....
ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿ; ವೀಡಿಯೋ ವೈರಲ್

ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿ; ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ರೀಲ್ಸ್ ಮಾಡೋ ಹೆಣ್ಣುಮಕ್ಕಳ ವಿಡಿಯೋ ಶೇರ್ ಮಾಡೋ ಬದಲು ಇಂತಹ ಹೆಣ್ಣುಮಕ್ಕಳ ವಿಡಿಯೋ ಶೇರ್ ಮಾಡಿ ಅವರಿಗೆ ಪ್ರೋತ್ಸಾಹ ನೀಡಿ 🙏🙏🙏 ನಿಜಕ್ಕೂ ಈ ಹೆಣ್ಣುಮಗಳ ಧೈರ್ಯ ಮೆಚ್ಚಬೇಕು ಕಸಾಯಿಖಾನೆಗೆ ಹೋಗುತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿಗೆ ಸಮಸ್ತ ಹಿಂದೂ ಕಾರ್ಯಕರ್ತರ ಪರವಾಗಿ ಒಂದು ಮೆಚ್ಚುಗೆ ಇರಲಿ 🙏#ಗೋರಕ್ಷಕಿ pic.twitter.com/TR2j8Q0HGM — Puneeth Kerehalli (@Puneeth74353549) August 11, 2024...
ಬಿಹಾರದ ಜೆಹನಾಬಾದ್ ದೇವಾಸ್ಥಾನದಲ್ಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆ

ಬಿಹಾರದ ಜೆಹನಾಬಾದ್ ದೇವಾಸ್ಥಾನದಲ್ಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ
ಪಾಟ್ನಾ: ಬಿಹಾರದ ಜೆಹನಾಬಾದ್ ಬಳಿ ದೇವಾಸ್ಥಾನದಲ್ಲಿನ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿದೆ. ಜೆಹನಾಬಾದ್ ಬಳಿಯ ಬಾಬಾ ಸಿದ್ಧಾಂತ ದೇವಾಲಯದಲ್ಲಿ ಸಂಭವಿಸಿದ ಈ ಕಾಲ್ತುಳಿತದಲ್ಲಿ ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ದೇವಾಸ್ಥಾನದಲ್ಲಿ ಕನ್ವಾರಿಯಾಗಳ ನಡುವೆ ಹೊಡೆದಾಟ ನಡೆದಿದ್ದು ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ. VIDEO | Seven dead and 50 feared injured as a stampede occurred at a temple of Bihar's Jehanabad after a fight broke between flower seller and people. (Full video available on PTI Videos - https://t.co/dv5TRARJn4) pic.twitter.com/psJSERP7ra — Press Trust of India (@PTI_News) August 12, 2024...
ಭಾರೀ ಮಳೆ, ಭೂಕುಸಿತ: ಹಿಮಾಚಲದಲ್ಲಿ 120 ರಸ್ತೆಗಳು ಬಂದ್

ಭಾರೀ ಮಳೆ, ಭೂಕುಸಿತ: ಹಿಮಾಚಲದಲ್ಲಿ 120 ರಸ್ತೆಗಳು ಬಂದ್

ದೇಶ-ವಿದೇಶ, ಪ್ರಮುಖ ಸುದ್ದಿ
ಶಿಮ್ಲಾ: ಉತ್ತರ ಹಾಗೂ ಈಶಾನ್ಯ ರಾಜ್ಯಗಳಲ್ಲೂ ಮುಂಗಾರು ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಗೆ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಸರಣಿ ಭೂಕುಸಿತದ ಘಟನೆಗಳು ಸಂಭವಿಸಿವೆ. ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿ ಸುಮಾರು 120 ರಸ್ತೆಗಳು ಬಂದ್ ಆಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ, ಕೃಷಿ ಕ್ಷೇತ್ರದಲ್ಲಿ ಹೊಸ ಮನ್ವಂತಕ್ಕೆ ಮುನ್ನುಡಿ ಬರೆದಿದ್ದಾರೆ. ಮುಂಗಾರು ಆರಂಭದಲ್ಲಿ ಅವರು, ರೈತರಿಗೆ ಅಧಿಕ ಆದಾಯ ತರಬಲ್ಲ ಹೊಸ ತಳಿಗಳನ್ನು ಬಿಡುಗಡೆ ಮಾಡಲಿದ್ದಾರೆ. 27 ತೋಟಗಾರಿಕಾ ಬೆಳೆಗಳು, 34 ಕ್ಷೇತ್ರ ಬೆಳೆಗಳು ಮತ್ತು 61 ಬೆಳೆಗಳು ಸೇರಿ ಒಟ್ಟು 109 ತಳಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವಾಲಯದ ಮೂಲಗಳು ತಿಳಿಸಿವೆ. ಅಧಿಕ ಇಳುವರಿ, ಹವಾಮಾನಕ್ಕೆ ಹೊಂದಿಕೊಳ್ಳುವ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಪ್ರಧಾನಿ ಭಾನುವಾರ ದೆಹಲಿಯಲ್ಲಿರುವ ಭಾರತೀಯ ಕೃಷಿ ಸಂಶೋಧನ ಸಂಸ್ಥೆಯಲ್ಲಿ ಭಾನುವಾರ ಬೆಳೆಗಳ ತಳಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಮುಖ ಕ್ಷೇತ್ರ ಬೆಳೆಗಳು (ಸಿರಿಧಾನ್ಯ ಹಾಗೂ ವಿವಿಧ ಧಾನ್ಯಗಳು): ಎಣ್ಣೆ ಬೀಜಗಳು, ದ್ವಿದಳ ಧಾನ್ಯ, ಗೋಧಿ, ಭತ್ತ, ಕಬ್ಬು, ಹತ್ತಿ, ಮೇವು ಬೆಳೆ, ಹಾಗೂ ಇತರ ಬೆಳೆಗಳು ಪ್ರಮುಖ ತೋಟಗಾರಿಕಾ ಬೆಳೆಗಳು: ವಿವಿಧ ಹಣ್ಣುಗಳು, ತರಕಾರಿ, ಗೆಡ್ಡೆ, ಮಸಾಲೆ ಬೆಳೆಗಳು, ಹೂವುಗಳು, ಗಿಡಮೂಲಿಕೆಗಳು...
KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪಾಲಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ಕೆಎಸ್ಸಾರ್ಟಿಸಿಗೆ ಟಿವಿ-9 ನೆಟ್ವರ್ಕ್‌ ನ 'ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024' ಲಭಿಸಿದೆ. ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-9 ನೆಟ್ವರ್ಕ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯು 'ವರ್ಷದ ದೇಶದ ಅತ್ಯುತ್ತಮ ಸಂಸ್ಥೆ' ವರ್ಗದಲ್ಲಿ ಲಭಿಸಿದೆ. ನವದೆಹಲಿಯ 'ದ ಇಂಪೀರಿಯಲ್ ಜನಪತ್ ಲೇನ್, ಜನಪತ್'ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವರಾದ ಹರ್ಷ್ ಮಲೋತ್ರ ಅವರು, KSRTC ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿ, ಅಧಿಕಾರಿಗಳನ್ನು ಅಭಿನಂದಿಸಿದರು. ಕೆಎಸ್ಸಾರ್ಟಿಸಿ ನಿರ್ದೇಶಕರಾದ (ಸಿಬ್ಬಂದಿ ಮತ್ತು ಜಾಗೃತ) ಡಾ. ಕೆ.ನಂದಿನಿದೇವಿ ಅವರು ಪ್ರಶಸ್ತಿ ಸ್ವೀಕರಿಸಿದರು....
ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಸಾವೊ ಪೌಲೋ: ಬ್ರೆಜಿಲ್‌ನ ಸಾವೊ ಪಾಲೊ ಬಳಿ ಟರ್ಬೊಪ್ರೊಪ್ ವಿಮಾನ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ 62 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಈ ದುರಂತ ಸಂಭವಿಸಿದೆ. The crash occurred in the Capela neighborhood in Vinhedo (San Paulo). According to the Sao Paulo Fire Department, seven teams are on site. Initial information is that it was a twin-engine passenger plane, model ATR-72, that left Cascavel bound for Guarulhos. According to the… pic.twitter.com/B1mlKXTwEG — Sputnik (@SputnikInt) August 9, 2024 ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋನತ್ತ ಈ ವಿಮಾನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಸಾವೊ ಪಾಲೊದಿಂದ ಸುಮಾರು 50 ಮೈಲು ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ಬಾನೆತ್ತರದಲ್ಲಿ ವಿಮಾನ ಪತನಗೊಂಡ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. The crash occurred in the Capela neighbo...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂದೂ ಶ್ರದ್ದಾಕೇಂದ್ರಗಳ ಮೇಲೆ ನಡೆದಿರುವ ದಾಳಿ ಘಟನೆಗಳು ಕಳವಳಕಾರಿ ಬೆಳವಣಿಗೆಯಾಗಿದ್ದು, ಅಲ್ಲಿನ ಮಧ್ಯಂತರ ಸರ್ಕಾರವು ಇಂತಹಾ ಕ್ರೌರ್ಯಗಳಿಗೆ ಅಂತ್ಯ ಹಾಡಬೇಕಿದೆ ಎಂದು ಸಂಘ ಪ್ರತಿಪಾದಿಸಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಬಾಂಗ್ಲಾದೇಶದ ಘಟನೆಗಳ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುವುದನ್ನು ಸಹಿಸಲಾಗದು ಎಂದಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಆಡಳಿತ ಬದಲಾವಣೆಯ ಚಳವಳಿಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳು, ಬೌದ್ಧರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧದ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಗಂಭೀರ ಕಳವಳ ವ್ಯಕ್ತಪಡಿಸುತ್ತದೆ ಎಂದಿರುವ ಅವರು, ಹತ್ಯೆ, ಲೂಟಿ, ಬೆಂಕಿ ಹಚ್ಚುವುದು ಮತ್ತು ಹಿಂದೂ ಹಾಗೂ ಇತರ ಧಾರ್ಮಿಕ ಅಲ್ಪಸಂಖ್ಯಾತ ಮಹಿಳೆಯರ ಮೇಲಿನ ದೌರ್ಜನ್ಯಗಳು ಖಂಡನೀಯ‌. ಬಾಂಗ್ಲಾದೇ...
ದೆಹಲಿ ಅಬಕಾರಿ ನೀತಿ ಅಕ್ರಮ ಆರೋಪ; ಮನೀಶ್ ಸಿಸೋಡಿಯಾಗೆ ಜಾಮೀನು

ದೆಹಲಿ ಅಬಕಾರಿ ನೀತಿ ಅಕ್ರಮ ಆರೋಪ; ಮನೀಶ್ ಸಿಸೋಡಿಯಾಗೆ ಜಾಮೀನು

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮ ಆರೋಪ ಎದುರಿಸುತ್ತಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದು ಆರೋಪ ಎದುರಿಸುತ್ತಿರುವ ಆಪ್ ಮುಖಂಡ ಮನೀಶ್ ಸಿಸೋಡಿಯಾ ಬಂಧನದಲ್ಲಿದ್ದಾರೆ. ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಈ ಮೂಲಕ ಸಿಸೋಡಿಯಾರ 17 ತಿಂಗಳ ಸೆರೆವಾಸ ಕೊನೆಗೂ ಅಂತ್ಯಕಂಡಿದೆ....