Tuesday, January 27

ದೇಶ-ವಿದೇಶ

ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳಲು ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಸರ್ಕಾರ ಆಹ್ವಾನ

ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳಲು ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಸರ್ಕಾರ ಆಹ್ವಾನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ ಯೋಜಿಸಲಾಗಿರುವ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳುವಂತೆ *ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆಹ್ವಾನ ನೀಡಿದ್ದಾರೆ. ಕಾಂಗ್ಸ್‌ಬರ್ಗ್ ಡಿಜಿಟಲ್‌ನ ಅಧ್ಯಕ್ಷ ಮತ್ತು ಸಿಇಒ ಶೇನ್ ಮೆಕ್‌ಆರ್ಡಲ್ ಮತ್ತು ಕಾಂಗ್ಸ್‌ಬರ್ಗ್ ಡಿಜಿಟಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ದೀಪಕ್ ಕುಮಾರ್ ನೇತೃತ್ವದ ನಿಯೋಗ ಇಂದು ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಆಹ್ವಾನ ಕೊಟ್ಟರು. ನಿಪುಣ ಕಾರ್ಯಕ್ರಮ ನಿರ್ದಿಷ್ಟವಾಗಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಕ್ಲೌಡ್ ಕಂಪ್ಯೂಟಿಂಗ್‌ನಂತಹ ಕ್ಷೇತ್ರಗಳಲ್ಲಿ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ನಿಖರವಾದ ಕೌಶಲ್ಯ ವಲಯದೊಂದಿಗೆ ಯುವ ಸಮೂಹವನ್ನು ಸಜ್ಜುಗೊಳಿಸುವ ಗುರಿ ಹೊಂದಿದೆ. “ಇದು ಸಾಮಾನ್ಯ ತರಬೇತಿ ಕಾರ್ಯಕ್ರಮವಲ್ಲ. ನಿಪುಣ ಕಾರ್ಯಕ್ರಮ ನಿರ್ದಿಷ್ಟ ಉದ್ಯಮದ ಅವಶ್ಯಕತೆಗಳನ್ನು ಪರಿಹರಿಸಲು ವಿನ್ಯಾಸಗೊಳಿಸಲಾಗಿದೆ. ಉದ್ಯೋಗಿಗಳ ಬೇಡಿಕೆಗಳನ್ನು ಪೂರೈಸಲು ನಾವು ಕಾಂಗ್ಸ್‌ಬರ್ಗ್ ಡಿಜಿಟಲ್‌ನಂತಹ ಕಂಪನಿಗಳೊಂದಿಗೆ ಸಹಕರ...
ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ; ಕಾಂಗ್ರೆಸ್ ನಾಯಕರ ಆರೋಪ

ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ; ಕಾಂಗ್ರೆಸ್ ನಾಯಕರ ಆರೋಪ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ ಎಂದು ಎಐಸಿಸಿ ಎಸ್.ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿಯಲ್ಲಿ  ಮಾತನಾಡಿದ ಎಐಸಿಸಿ ಎಸ್.ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ, ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ. ಸಂವಿಧಾನದ ಕಾರಣಕ್ಕೆ ಶೋಷಿತ ವರ್ಗದ ಜನರು ಅಧಿಕಾರ ಸೇರಿದಂತೆ ಒಂದಷ್ಟು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದನ್ನು ನಾಶ ಮಾಡಲು ಈ ಎರಡು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ದೂರಿದರು. ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕರು ಸಂವಿಧಾನದ ರಕ್ಷಣೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇದರ ಸಲುವಾಗಿ ನಾವು ಕಳೆದ ಎರಡು ವರ್ಷಗಳ ಹಿಂದೆ “ಸಂವಿಧಾನ ರಕ್ಷಕ್” ಎನ್ನುವ ಕಾರ್ಯಕ್ರಮ ಜಾರಿಗೆ ತಂದೆವು ಎಂದ ಅವರು, ಇದುವರೆಗು ದೇಶದಾದ್ಯಂತ ಸುಮಾರು 3 ಲಕ್ಷ ಮಂದಿ ಸಂವಿಧಾನ ರಕ್ಷಕರಾಗಿ ನೋಂದಾಯಿಸಿಕೊಂಡಿದ್ದಾರೆ. ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಈ ವರ್ಷ ನವೆಂಬರ್‌ ...
ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ : ಎಚ್‌.ಕೆ ಪಾಟೀಲ್

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ : ಎಚ್‌.ಕೆ ಪಾಟೀಲ್

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300/- ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬAಧಪಟ್ಟ ಎಲ್ಲಾ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟಿçÃಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ ಎಂದು ವಿವರಿಸಿದರು. 01.02.2023 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದ ಪುಟ ಸಂಖ್ಯೆ (10) ಪ್ಯಾರಾ (39) ರಲ್ಲಿ ಈ ಕೆಳಕಂಡAತೆ ಘೋಷಿಸಿರುತ್ತಾರೆ. ಕೇಂದ್ರ ಸರ್ಕಾರದಿಂದ ರಾಷ್ಟಿçÃಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದ ಮತ...
ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ:  ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ: ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೌರಿ ಗಣೇಶ ಹಬ್ಬ ಹಾಗೂ ಮುಂದಿನ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಇಲಾಖೆ ರಾಜ್ಯಾದ್ಯಂತ 22 ವಿಶೇಷ ರೈಲುಗಳನ್ನು ಪ್ರಕಟಿಸಿದೆ. ಗಣೇಶ ಚತುರ್ಥಿ ಸಂದರ್ಭದ ವಿಶೇಷ ರೈಲುಗಳು: ಸೆಪ್ಟೆಂಬರ್ 5 ರಿಂದ 7 ರವರೆಗೆ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ನಡೆಸಲಿದೆ. ಬೆಂಗಳೂರು ಕಲಬುರಗಿ ನಡುವೆ ವಿಶೇಷ ರೈಲು ಬೆಂಗಳೂರು SMVTಯಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿತಲುಪಲಿದೆ.  ಕಲಬುರಗಿಯಿಂದ ಬೆಂಗಳೂರು: ಸೆಪ್ಟೆಂಬರ್ 6 ರಿಂದ 8 ರವರೆಗೆ ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಬೆಂಗಳೂರು SMVT ತಲುಪಲಿದೆ. ದೀಪಾವಳಿ ಸಂದರ್ಭದ ವಿಶೇಷ ರೈಲುಗಳು: ಅಕ್ಟೋಬರ್ 30 ಮತ್ತು ನವೆಂಬರ್ 2 ರವರೆಗೆ ಮೈಸೂರು- ವಿಜಯಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ವಿಜಯಪುರದಿಂದ ಮೈಸೂರಿಗೆ ಹಿಂದಿರುಗುವ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಸಂಚರಿಸಲಿದೆ. ಯಶವಂತಪುರ-ಬೆಳಗಾವಿ ನಡುವೆ ಅಕ್ಟೋಬರ್ 30 ರ...
ಪ್ರವಾಹ ಹಿನ್ನೆಲೆ; ನೆರವಿಗೆ ಧಾವಿಸಿದ ಜ್ಯೂ.ಎನ್‌ಟಿಆರ್

ಪ್ರವಾಹ ಹಿನ್ನೆಲೆ; ನೆರವಿಗೆ ಧಾವಿಸಿದ ಜ್ಯೂ.ಎನ್‌ಟಿಆರ್

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಆಂಧ್ರಪ್ರದೇಶ: ಭಾರೀ ಮಳೆಯಿಂದ ಪ್ರವಾಹ ಹಿನ್ನೆಲೆಯಲ್ಲಿ ನಟ ಜ್ಯೂನಿಯರ್ ಎಂಟಿಆರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.‌ ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಎರಡು ತೆಲುಗು ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಪ್ರವಾಹದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ತೆಲುಗು ಜನರು ಈ ವಿಪತ್ತಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಅವರು, 'ನನ್ನ ಕಡೆಯಿಂದ ನಾನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುತ್ತಿದ್ದೇನೆ ಎಂದು ಬರೆದಿದ್ದಾರೆ....
ಸಿನಿಲೋಕದ ಲೈಂಗಿಕ ಹಗರಣ; ಪರಿಹಾರ ಕ್ರಮಗಳಿಗೆ ಸ್ವಾಗತ ಎಂದ ರಜನಿಕಾಂತ್

ಸಿನಿಲೋಕದ ಲೈಂಗಿಕ ಹಗರಣ; ಪರಿಹಾರ ಕ್ರಮಗಳಿಗೆ ಸ್ವಾಗತ ಎಂದ ರಜನಿಕಾಂತ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಚೆನ್ನೈ: ಮಲಯಾಳಂ ಸಿನಿ ಲೋಕದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ತಲ್ಲಣ ಸೃಷ್ಟಿಸಿದೆ. ಹೇಮಾ ಸಮಿತಿ ವರದಿ ಸಲ್ಲಿಕೆ ಬಳಿಕ ಮಾಲಿವುಡ್‌ನಲ್ಲಿ ಖ್ಯಾತ ಕಲಾವಿದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ನಿರ್ದೇಶಕರಾದ ರಂಜಿತ್, ನಟರಾ ಜಯಸೂರ್ಯ, ಮುಕೇಶ್‌ ಸೇರಿದಂತೆ ಹಲವರ ವಿರುದ್ಧ ಅನುಚಿತ ವರ್ತನೆ ಹಾಗೂ ಕಿರುಕುಳದ ಆರೋಪ ಪ್ರತಿಧ್ವನಿಸಿದೆ. ಈ ಆರೋಪಗಳಿಂದಾಗಿ ಉನ್ನತ ಸ್ಥಾನದಲ್ಲಿದ್ದ ಹಲವು ನಟರು ಪದತ್ಯಾಗ ಮಾಡಿದ್ದಾರೆ. ಇದೇ ವೇಳೆ, ಹೇಮಾ ಸಮಿತಿಯ ವರದಿಯಲ್ಲಿನ ಶಿಫಾರಸುಗಳ ಕುರಿತಂತೆ ಭಾರೀ ಚರ್ಚೆಯಾಗುತ್ತಿದೆ. ಆದರೆ ಈ ಬಗ್ಗೆ ತಾನು ಹೇಳಿಕೆಗಳನ್ನು ನೀಡಲ್ಲ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪರಿಹಾರಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ....
ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದಲ್ಲಿನ ಹವಾಮಾನದ ವ್ಯತ್ಯಯದಿಂದಾಗಿ ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯ ಉದ್ದಕ್ಕೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇತ್ತ ಕರ್ನಾಟಕದ 13 ಜಿಲ್ಲೆಗಳಲ್ಲೂ ಸೆಪ್ಟೆಂಬರ್‌ 1ರಿಂದ ಮಳೆಯಾಗುವ ಸಾಧ್ಯತೆಗಳಿದ್ದು, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಸಹಿತ 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ....
ಹೆಚ್ಡಿಕೆ ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ; ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ

ಹೆಚ್ಡಿಕೆ ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ; ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ನಿವೇಶನ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಬಗ್ಗೆ ಕಾಂಗ್ರೆಸ್ ಆಕ್ರೋಶ ತಣ್ಣಗಾಗಿಲ್ಲ. ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದದ ಮನವಿಗಳಿಗೂ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಶನಿವಾರ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಲಿದ್ದಾರೆ. ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ ನಾನು ತಪ್ಪೇ ಮಾಡಿಲ್ಲ. ಆದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ ಎಂದರು. ನಾಳೆ (ಶನಿವಾರ) ಕಾಂಗ್ರೆಸ್ ಶಾಸಕರು, ಸಂಸದರು, ಎಂಎಲ್‌ಸಿಗಳು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ. ಕುಮಾರಸ್ವಾಮಿ, ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಒತ್ತಾಯಿಸುತ್ತಾರೆ ಎಂದು ಸಿಎ. ತಿಳಿಸಿದರು. ಕುಮಾರಸ್ವಾಮಿ ವಿರುದ್ಧ ತನಿಖೆ ಆಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೂ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ನಮ್ಮ ಶಾಸಕರು ರಾಜ್ಯಪಾಲರನ್ನು ಭ...
KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

KSRTCಯತ್ತ ಪ್ರಶಸ್ತಿಗಳ ಮೆರವಣಿಗೆ; ಮತ್ತೊಮ್ಮೆ 10ಕ್ಕೂ ಹೆಚ್ಚು ಪುರಸ್ಕಾರಗಳು

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರೀಯ ಮಟ್ಟದ 8 ವೀಡಿಯಾ - ViDEA, 5 ಎಮ್ಕ್ಯೂಬ್ - mCUBE ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳನ್ನು ಪಡೆದು ಗಮನಸೆಳೆದಿದೆ. ವೀಡಿಯಾ ಪ್ರಶಸ್ತಿಗಳು:  ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟ...
ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ

ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಕಾರೈಕಲ್: ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು ಎಂದು ರಾಷ್ಟ್ರೀಯ ಕಿಸಾನ್ ಮೋರ್ಚಾದ ಸಂಚಾಲಕರೂ ಆದ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರ್ ಶಾಂತಕುಮಾರ್  ಆರೋಪಿಸಿದ್ದಾರೆ. ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಕೃಷಿ ಭೂಮಿ. ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದರು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ. ಬೆಳೆ ವಿಮೆ ಪದ್ಧತಿ ತಿದ್ದುಪಡಿ ಆಗಬೇಕು. 60 ವರ್ಷ ತುಂಬಿದ...