Tuesday, March 17

ದೇಶ-ವಿದೇಶ

ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಸೇನೆಯ ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿಯಾಗಿದ್ದಾರೆ. ಈ ಬಗ್ಗೆ ಸೋಮವಾರ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಬಿಸಿಲಿನ ತಾಪಮಾನಕ್ಕೆ ಐವರು ಸಾವನ್ನಾಪಿದ್ದಾರೆ ಎಂದು ತಿಳಿಸಿದ್ದಾರೆ.ಏರ್ ಶೋ ವೇಳೆ ಬಿಸಿಲಿನ ಝಳದಿಂದ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು 90ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಐವರು ಸಾವನ್ನಪ್ಪಿದ್ದಾರೆ ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ....
‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು 'ಸಿಂಗಂ ಅಗೈನ್' ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ.ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸಹಿತ ಹಲವರು 'ಸಿಂಗಂ ಅಗೈನ್' ಚಿತ್ರದಲ್ಲಿ ನಟಿಸಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್ ದೇವಗನ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಈ ಸಿನಿಮಾದ ಟ್ರೈಲರ್ ಬಗ್ಗೆ ನೆಟ್ಟಿಗರು ಸಕತ್ ಲೈಕ್ಸ್ ನೀಡಿದ್ದಾರೆ.https://www.youtube.com/watch?v=MD7v0-igVIM&t=64s&ab_channel=JioStudios...
ಮುಂಬೈ: ಕಟ್ಟಡದಲ್ಲಿ ಅಗ್ನಿ ದುರಂತ; ಬಾಲಕಿ ಸೇರಿ 7 ಮಂದಿ ಸಾವು

ಮುಂಬೈ: ಕಟ್ಟಡದಲ್ಲಿ ಅಗ್ನಿ ದುರಂತ; ಬಾಲಕಿ ಸೇರಿ 7 ಮಂದಿ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಚೆಂಬೂರ್‌ನಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಈ ಅಗ್ನಿ ಆಕಸ್ಮಿಕದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.ಮುಂಬೈನ ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಭಾನುವಾರ ಮುಂಜಾನೆ 5.20ರ ಸುಮಾರಿಗೆ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ನೆಲ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ, ಮೇಲಿನ ಮಹಡಿಗೆ ವ್ಯಾಪಿಸಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ....
ಹರಿಯಾಣದಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧ್ಯತೆ: ಎಕ್ಸಿಟ್ ಪೋಲ್ ರಿಸಲ್ಟ್

ಹರಿಯಾಣದಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧ್ಯತೆ: ಎಕ್ಸಿಟ್ ಪೋಲ್ ರಿಸಲ್ಟ್

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹರಿಯಾಣ ವಿಧಾನಸಭೆಗೆ ನಡೆದ ಶನಿವಾರ ಮತದಾನ ನಡೆದಿದ್ದು ಇದೀಗ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿವೆ. ಬಹುತೇಕ ಸಂಸ್ಥೆಗಳ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂಬ ಸುಳಿವನ್ನು ನೀಡಿವೆ.ಹರಿಯಾಣದಲ್ಲಿ ಈವರೆಗೂ ಅಧಿಕಾರ ನಡೆಸಿರುವ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ.ಸಮೀಕ್ಷಾ ಫಲಿತಾಂಶ ಹೀಗಿದೆ:ರಿಪಬ್ಲಿಕ್-ಮ್ಯಾಟ್ರಿಜ್: ಕಾಂಗ್ರೆಸ್ 55-62 ಸ್ಥಾನಗಳು, ಬಿಜೆಪಿ 18-24 ಸ್ಥಾನಗಳು, ಜೆಜೆಪಿ 0-3 ಸ್ಥಾನಗಳು, ಐಎನ್‌ಎಲ್‌ಡಿ 3-6 ಸ್ಥಾನಗಳು, ಇತರೆ 2-5 ಸ್ಥಾನಗಳು.ದೈನಿಕ್ ಭಾಸ್ಕರ್: ಕಾಂಗ್ರೆಸ್ 44-54 ಸ್ಥಾನಗಳು, ಬಿಜೆಪಿ 19-29 ಸ್ಥಾನಗಳು, ಜೆಜೆಪಿ 0-1 ಸ್ಥಾನಗಳು, ಐಎನ್‌ಎಲ್‌ಡಿ 1-5 ಸ್ಥಾನಗಳು, ಇತರರು 4-9 ಸ್ಥಾನಗಳುಧ್ರುವ್ ಸಮೀಕ್ಷೆ: ಕಾಂಗ್ರೆಸ್ 57-64 ಸ್ಥಾನಗಳು, ಬಿಜೆಪಿ 27-32 ಸ್ಥಾನಗಳು, ಇತರರು 5-8 ಸ್ಥಾನಗಳು....
ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ JKNC 33-35 ಸ್ಥಾನಗಳನ್ನು ಗೆದ್ದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.ಪೀಪಲ್ಸ್ ಪಲ್ಸ್ ಭವಿಷ್ಯ ಪ್ರಕಾರ JKNC 33-35 ಸ್ಥಾನಗಳನ್ನು ಗೆಲ್ಲಲಿವೆ ಎಂಬ ಸುಳಿವು ವ್ಯಕ್ತವಾಗಿದೆ.ಕಾಂಗ್ರೆಸ್ 13-15 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿದ್ದು, ಬಿಜೆಪಿ 23-27 ಸ್ಥನಗಳನ್ನು ಜಯಿಸಲಿದೆ. ಪಿಡಿಪಿ 7-11 ಸ್ಥಾನಗಳನ್ನು ಹಾಗೂ ಇತರರು 4-5 ಸ್ಥಾನಗಳನ್ನು ಗೆಲ್ಲಲಿವೆ ಎಂದು ಪೀಪಲ್ಸ್ ಪಲ್ಸ್ ವಿಶ್ಲೇಷಿಸಿದೆ....
ಮಹಾ ಸಚಿವಾಲಯ ಕಟ್ಟಡ 3ನೇ ಮಹಡಿಯಿಂದ ಜಿಗಿದ ಡೆಪ್ಯುಟಿ ಸ್ಪೀಕರ್.. ವೀಡಿಯೋ ವೈರಲ್

ಮಹಾ ಸಚಿವಾಲಯ ಕಟ್ಟಡ 3ನೇ ಮಹಡಿಯಿಂದ ಜಿಗಿದ ಡೆಪ್ಯುಟಿ ಸ್ಪೀಕರ್.. ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಮಹಾರಾಷ್ಟ್ರ ಸರ್ಕಾರದ ಆಡಳಿತ ಶಕ್ತಿಕೇಂದ್ರ ಮಂತ್ರಾಲಯ ಇಂದು ಕೋಲಾಹಲದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಮಂತ್ರಾಲಯ ಕಟ್ಟಡದಿಂದ ಮೂರನೇ ಮಹಡಿಯಿಂದ ಜಿಗಿದ ಪ್ರಸಂಗ ಆತಂಕ ಸೃಷ್ಟಿಸಿತು.Maharashtra state assembly deputy speaker & DCM Ajit Pawar led NCP factions MLA Narhari Zirwal & other ST reserved seats elected MLAs breached police security & jumped at the safety net at Mantralaya in protest against state govt for not recruiting tribal youths under PESA act. pic.twitter.com/6kHwp8PGIv — Sudhir Suryawanshi (@ss_suryawanshi) October 4, 2024   ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶಾಸಕ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಶುಕ್ರವಾರ ಮಹಾರಾಷ್ಟ್ರದ ಸಚಿವಾಲಯ ಕಟ್ಟಡದ ಛಾವಣಿಯಿಂದ ಜಿಗಿದಿದ್ದಾರೆ. ಕೆಳಗೆ ಸುರಕ್ಷತಾ...
2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜನಪ್ರಿಯ 'ಏರೋ ಇಂಡಿಯಾ' ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಪೆಬ್ರವರಿ 10ರಿಂದ ನಡೆಯಲಿದೆ ಕೇಂದ್ರ ರಕ್ಷಣಾ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ.2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಏರೋ ಇಂಡಿಯಾ ಆಯೋಜಿತವಾಗಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದೆ.ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್, ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯದ ಪ್ರಾಯೋಜಕತ್ವದಲ್ಲಿ ಈ ವೈಮಾನಿಕ ಪ್ರದರ್ಶನ ಏರ್ಪಾಡಾಗಿದ್ದು ಸಿದ್ದತೆಗಳು ಸಾಗಿವೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ....
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ವಾಸ; ಮತ್ತೆ ಮೂವರು ಪಾಕಿಸ್ತಾನಿಯರ ಬಂಧನ

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ವಾಸ; ಮತ್ತೆ ಮೂವರು ಪಾಕಿಸ್ತಾನಿಯರ ಬಂಧನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.ಕೆಲವು ದಿನಗಳ ಹಿಂದೆ ಜಿಗಣಿ ಬಳಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಗುರುವಾರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪೀಣ್ಯದಲ್ಲಿ ನಕಲಿ ಗುರುತಿನ ಚೀಟಿ ಹೊಂದಿ, ಬೆಂಗಳೂರಿನಲ್ಲಿ ನೆಲೆಸಿದ್ದ ಪತಿ, ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು.ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಖಂಡಿಸಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, ವೀರ್ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು" ಎಂಬುದು ಸುಳ್ಳು ಹೇಳಿಕೆ ಎಂದರು. ಗುಂಡೂರಾವ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುವುದಾಗಿ ಅವರು ತಿಳಿಸಿದ್ದಾರೆ....
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ.ಗುರುವಾರ ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಿದರು.ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ವೈಭವಕ್ಕೆ ಚಾಲನೆ ನೀಡಿದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಮಾರಂಭ ನೆರವೇರಿತು....