Saturday, August 8

ದೇಶ

ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪ್ರತಿಷ್ಠಿತ ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) 18ನೇ ಜಾಗತಿಕ ಸಂವಹನ ಸಮಾವೇಶ 2024ರ ನವೆಂಬರ್ 8 ಮತ್ತು 9ರಂದು ಮಂಗಳೂರಿನಲ್ಲಿ ನಡೆಯಲಿದೆ. PRCI ಸಂಸ್ಥೆಯು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ವೃತ್ತಿಪರತೆಯ ಪ್ರಮಾಣಿತ ಮಾನದಂಡಗಳನ್ನು ಉತ್ತೇಜಿಸುವ ಪ್ರಮುಖ ಸಂಸ್ಥೆಯಾಗಿದ್ದು ಈ ಬಾರಿ ಕಡಲತಡಿಯ ನಗರಿಯಲ್ಲಿ ಆಯೋಜಿಸಲಾಗಿದ್ದು ದೇಶ ವಿದೇಶಗಳ ಪ್ರತಿನಿಧಿಗಳ ಸಮಾಗಮಕ್ಕೆ ಈ ಸಮಾವೇಶ ಸಾಕ್ಷಿಯಾಗಲಿದೆ. .2004ರ ಮಾರ್ಚ್ 3 ರಂದು PRCIಯು ಸ್ಥಾಪನೆಯಾಗಿದ್ದು, ಅದಕ್ಕೂ ಮೊದಲು 17 ಜಾಗತಿಕ ಸಂವಹನ ಸಮಾವೇಶಗಳನ್ನು ಜಯಪುರ, ಪುಣೆ, ಕೊಲ್ಕತ್ತಾ, ನವದೆಹಲಿ, ಮುಂಬೈ, ಹೈದರಾಬಾದ್, ಚಂಡೀಗಢ್, ಬೆಂಗಳೂರು ಮತ್ತು ಗೋವಾ ನಗರಗಳಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ದೇಶದಾದ್ಯಂತ ಮತ್ತು ವಿಶ್ವದ ಪ್ರಮುಖ ಉದ್ಯಮಗಳಿಂದ 500ಕ್ಕೂ ಹೆಚ್ಚು ಸಂವಹನ ವೃತ್ತಿಪರರು ಮತ್ತು ನಿರ್ಧಾರಮೇಕರ್‌ಗಳು ಪಬ್ಲಿಕ್ ರಿಲೇಶನ್ಸ್ ಮತ್ತು ಸಂವಹನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ಹೊಸ ವಿಚಾರಗಳು, ಮತ್ತು ಉತ್ತಮ ಅಭ್ಯಾಸಗಳ ಬಗ್ಗೆ ಚರ್ಚಿಸಲು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಈ ವರ್ಷದ...
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮುಂದುವರಿಸಬೇಕು ಹಾಗೂ ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ರಾಜಕೀಯ ಪಕ್ಷಗಳು ಆಗ್ರಹಿಸಿವೆ. ಈ ಆಗ್ರಹದಿಂದಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಗುರುವಾರ ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು.ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನಕ್ಕೆ ಕೆಲವು ಶಾಸಕರು ಒತ್ತಾಯಿಸಿದರೆ ಕೆಲವರು ವಿರೋಧಿಸಿದ್ದಾರೆ. ವಿಶೇಷ ಸ್ಥಾನಮಾನ ಕುರಿತು ಬುಧವಾರ ಕೈಗೊಂಡ ನಿರ್ಣಯವನ್ನು ಬಿಜೆಪಿ ಶಾಸಕರು ಗುರುವಾರ ವಿರೋಧಿಸಿದರು. ಈ ಸಂದರ್ಭದಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್ ಅವರು ಆರ್ಟಿಕಲ್ 370 ಮತ್ತು 35 ಎ ಯನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಬ್ಯಾನರ್ ಕಿತ್ತು ಹಾಕಿದರು. ಈ ವೇಳೆ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಈ ಗದ್ದಲ ಹಿನ್ನೆಲೆ ಕಲಾಪವನ್ನು ಕೆಲಕಾಲ ಸ್ಪೀಕರ್ ಮುಂದೂಡಿದರು.VIDEO | Jammu and Kashmir Assembly witnesses ruckus over special status resolut...
ನಟ ಶಾರುಖ್ ಖಾನ್’ಗೂ ಕೊಲೆ ಬೆದರಿಕೆ; ಆರೋಪಿಗಾಗಿ ಪೊಲೀಸ್ ಬಲೆ

ನಟ ಶಾರುಖ್ ಖಾನ್’ಗೂ ಕೊಲೆ ಬೆದರಿಕೆ; ಆರೋಪಿಗಾಗಿ ಪೊಲೀಸ್ ಬಲೆ

ದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಬಾಲಿವುಡ್ ತಾರೆಯರಿಗೆ ಜೀವಬೆದರಿಕೆಯ ಪ್ರಕರಣ ಮರುಕಳಿಸುತ್ತಲಿದ್ದು, ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆಯೊಡ್ಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಮುಂಬೈ ಪೊಲೀಸರು ಆರೋಪಿಗಾಗಿ ಬಲೇ ಬೀಸಿದ್ದಾರೆ.ನಟ ಶಾರುಖ್ ಖಾನ್ ಅವರಿಗೆ ಕರೆ ಮಾಡಿದ ವ್ಯಕ್ತಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನವೆಂಬರ್ 5 ರಂದು ಪ್ರಕರಣ ದಾಖಲಿಸಿಕೊಂಡ ಬಾಂದ್ರಾ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಛತ್ತೀಸ್ ಘಡದ ರಾಯ್‌ಪುರದಲ್ಲಿ ಇರಬಹುದೆಂಬ ಸುಳಿವು ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆ ಸಂಸತ್ತಿನ ಚಳಿಗಾಲದ ಅಧಿವೇಶನ

ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆ ಸಂಸತ್ತಿನ ಚಳಿಗಾಲದ ಅಧಿವೇಶನ

ದೇಶ, ಪ್ರಮುಖ ಸುದ್ದಿ, ವಿದೇಶ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಈ ತಿಂಗಳ 25 ರಿಂದ ನಡೆಯಲಿದೆ. ಈ ಕುರಿತಂತೆ ಮಂಗಳವಾರ ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.ನವೆಂಬರ್ 26 ಸಂವಿಧಾನ ದಿನ ಆಚರಿಸಲಾಗುತ್ತದೆ. ಭಾರತ ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಯಲ್ಲಿ ಈ ತಿಂಗಳ 26 ರಂದು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ....
HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ

HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಾಹನಗಳಿಗೆ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (ಹೆಚ್ಎಸ್ಆರ್​​ಪಿ) ನಂಬರ್ ಪ್ಲೇಟ್ ಅಳವಡಿಸಲು ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಿಸಿರುವ ಸರ್ಕಾರ ಇದೀಗ ಗಡುವನ್ನು ವಿಸ್ತರಿಸಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮೂಲಗಳ ಪ್ರಕಾರ 1.90 ಕೋಟಿ ಹಳೆಯ ವಾಹನಗಳ ಪೈಕಿ ಸುಮಾರು 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇದು ಅಂತಿಮ ಗಡುವು ಆಗಿದ್ದು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ಡಿಸೆಂಬರ್ 1ರಿಂದ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ....
ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲ ಮುಂದೂಡಿದೆ. ಈ ಬೆಳವಣಿಗೆಯಿಂದಾಗಿ ಡಿಕೆಶಿ ಅವರು ಸ್ವಲ್ಪ ನಿರಾಳರಾಗಿದ್ದಾರೆ.ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪ ಕುರಿತ ಸಿಬಿಐ ತನಿಖೆಯ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿ ಸೋಮವಾರ ವಿಚಾರಣೆಗೆ ಬಂದಿತ್ತು. ಆದರೆ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿತು.ಇದೇ ವೇಳೆ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ್ ಸಲ್ಲಿಸಿರುವ ಅರ್ಜಿ ಕೂಡಾ ಸುಪ್ರೀಂಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಪೀಠವು ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ....
ಉತ್ತರಾಖಂಡ್: ಪೌರಿ-ಅಲ್ಮೋರಾ ಗಡಿಯಲ್ಲಿ ಬಸ್ ಅಪಘಾತ; 36 ಮಂದಿ ಸಾವು

ಉತ್ತರಾಖಂಡ್: ಪೌರಿ-ಅಲ್ಮೋರಾ ಗಡಿಯಲ್ಲಿ ಬಸ್ ಅಪಘಾತ; 36 ಮಂದಿ ಸಾವು

ದೇಶ, ಪ್ರಮುಖ ಸುದ್ದಿ
ರಾಮನಗರ (ಉತ್ತರಾಖಂಡ): ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಬಸ್ಸೊಂದು ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ.ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಉರುಳಿಬಿದ್ದಿದ್ದು ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.ಈ ನಡುವೆ, ಅಪಘಾತ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೆರವು ಪ್ರಕಟಿಸಿದೆ....
ಸಿದ್ದಿಕಿ ರೀತಿ ಸಿಎಂ ಯೋಗಿ ಹತ್ಯೆಗೂ ಸಂಚು? ಬೆಚ್ಚಿ ಬೀಳಿಸಿದ ನಿಗೂಢ ಸಂದೇಶ

ಸಿದ್ದಿಕಿ ರೀತಿ ಸಿಎಂ ಯೋಗಿ ಹತ್ಯೆಗೂ ಸಂಚು? ಬೆಚ್ಚಿ ಬೀಳಿಸಿದ ನಿಗೂಢ ಸಂದೇಶ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ಅವರಂತೆಯೇ ಹತ್ಯೆ ಮಾಡಲಾಗುವುದು ಎಂಬ ಸಂದೇಶ ಬಂದಿದೆ.ಅಕ್ಟೋಬರ್ 12 ರಂದು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಬಾಬಾ ಸಿದ್ದಿಕಿ ಅವರ ಮಗ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು. ಈ ಪ್ರಕರಣ ಬಗ್ಗೆ ತನಿಖೆ ಸಾಗಿರುವಾಗಲೇ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ಅವರಂತೆಯೇ ಹತ್ಯೆ ಮಾಡಲಾಗುವುದು ಎಂಬ ಸಂದೇಶ ಮುಂಬೈ ಪೊಲೀಸರಿಗೆ ಸಿಕ್ಕಿದೆ. ಶನಿವಾರ ಸಂಜೆ ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ.ಈ ಬೆದರಿಕೆ ಸಂದೇಶ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದೇ ವೇಳೆ, ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಪಾಲಕ್ಕಾಡ್ ಬಳಿ ರೈಲು ಅವಘಡ; ನಾಲ್ವರು ಗುತ್ತಿಗೆ ಕಾರ್ಮಿಕರ ಸಾವು

ಪಾಲಕ್ಕಾಡ್ ಬಳಿ ರೈಲು ಅವಘಡ; ನಾಲ್ವರು ಗುತ್ತಿಗೆ ಕಾರ್ಮಿಕರ ಸಾವು

ದೇಶ, ಪ್ರಮುಖ ಸುದ್ದಿ
ಪಾಲಕ್ಕಾಡ್ : ಕೇರಳದ ಪಾಲಕ್ಕಾಡ್ ಬಳಿ ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ರೈಲು ಹರಿದು ಸಂಭವಿಸಿದ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ ಹೊರಟಿದ್ದ ಕೇರಳ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಕಸ ತೆರವುಗೊಳಿಸುತ್ತಿದ್ದ ನೈರ್ಮಲ್ಯ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ಶೋರ್ನೂರ್ ರೈಲ್ವೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ....
‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಪ್ರಧಾನಿಗೆ ಬರೆದಿರುವ ಪತ್ರ ಗಮನಸೆಳೆದಿದೆ.ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ."ದೇಶದಾದ್ಯಂತ ರೈತರ, ದೇವಸ್ಥಾನಗಳ, ಟ್ರಸ್ಟ್‌ಗಳ ಮತ್ತು ಮಠಗಳ ಜಮೀನುಗಳ ಮೇಲೆ ವಕ್ಫ್ ಮಂಡಳಿಯು ಹಕ್ಕು ಸಾಧಿಸುತ್ತಿರುವುದು ವಿಷಾದದ ಸಂಗತಿ. ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು" -ಯತ್ನಾಳ್ ಆಗ್ರಹ.Karnataka BJP MLA Basanagouda R Patil writes a letter to PM Narendra Modi "I humbly request your esteemed office to consider nationalizing Waqf properties to ensure fair administration and to prevent further injustices. The Waqf Bo...