Saturday, August 8

ದೇಶ

ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ JKNC 33-35 ಸ್ಥಾನಗಳನ್ನು ಗೆದ್ದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.ಪೀಪಲ್ಸ್ ಪಲ್ಸ್ ಭವಿಷ್ಯ ಪ್ರಕಾರ JKNC 33-35 ಸ್ಥಾನಗಳನ್ನು ಗೆಲ್ಲಲಿವೆ ಎಂಬ ಸುಳಿವು ವ್ಯಕ್ತವಾಗಿದೆ.ಕಾಂಗ್ರೆಸ್ 13-15 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿದ್ದು, ಬಿಜೆಪಿ 23-27 ಸ್ಥನಗಳನ್ನು ಜಯಿಸಲಿದೆ. ಪಿಡಿಪಿ 7-11 ಸ್ಥಾನಗಳನ್ನು ಹಾಗೂ ಇತರರು 4-5 ಸ್ಥಾನಗಳನ್ನು ಗೆಲ್ಲಲಿವೆ ಎಂದು ಪೀಪಲ್ಸ್ ಪಲ್ಸ್ ವಿಶ್ಲೇಷಿಸಿದೆ....
ಮಹಾ ಸಚಿವಾಲಯ ಕಟ್ಟಡ 3ನೇ ಮಹಡಿಯಿಂದ ಜಿಗಿದ ಡೆಪ್ಯುಟಿ ಸ್ಪೀಕರ್.. ವೀಡಿಯೋ ವೈರಲ್

ಮಹಾ ಸಚಿವಾಲಯ ಕಟ್ಟಡ 3ನೇ ಮಹಡಿಯಿಂದ ಜಿಗಿದ ಡೆಪ್ಯುಟಿ ಸ್ಪೀಕರ್.. ವೀಡಿಯೋ ವೈರಲ್

ದೇಶ, ಪ್ರಮುಖ ಸುದ್ದಿ
ಮುಂಬೈ: ಮಹಾರಾಷ್ಟ್ರ ಸರ್ಕಾರದ ಆಡಳಿತ ಶಕ್ತಿಕೇಂದ್ರ ಮಂತ್ರಾಲಯ ಇಂದು ಕೋಲಾಹಲದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಮಂತ್ರಾಲಯ ಕಟ್ಟಡದಿಂದ ಮೂರನೇ ಮಹಡಿಯಿಂದ ಜಿಗಿದ ಪ್ರಸಂಗ ಆತಂಕ ಸೃಷ್ಟಿಸಿತು.Maharashtra state assembly deputy speaker & DCM Ajit Pawar led NCP factions MLA Narhari Zirwal & other ST reserved seats elected MLAs breached police security & jumped at the safety net at Mantralaya in protest against state govt for not recruiting tribal youths under PESA act. pic.twitter.com/6kHwp8PGIv — Sudhir Suryawanshi (@ss_suryawanshi) October 4, 2024   ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶಾಸಕ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಶುಕ್ರವಾರ ಮಹಾರಾಷ್ಟ್ರದ ಸಚಿವಾಲಯ ಕಟ್ಟಡದ ಛಾವಣಿಯಿಂದ ಜಿಗಿದಿದ್ದಾರೆ. ಕೆಳಗೆ ಸುರಕ್ಷತಾ...
2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜನಪ್ರಿಯ 'ಏರೋ ಇಂಡಿಯಾ' ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಪೆಬ್ರವರಿ 10ರಿಂದ ನಡೆಯಲಿದೆ ಕೇಂದ್ರ ರಕ್ಷಣಾ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ.2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಏರೋ ಇಂಡಿಯಾ ಆಯೋಜಿತವಾಗಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದೆ.ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್, ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯದ ಪ್ರಾಯೋಜಕತ್ವದಲ್ಲಿ ಈ ವೈಮಾನಿಕ ಪ್ರದರ್ಶನ ಏರ್ಪಾಡಾಗಿದ್ದು ಸಿದ್ದತೆಗಳು ಸಾಗಿವೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ....
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ವಾಸ; ಮತ್ತೆ ಮೂವರು ಪಾಕಿಸ್ತಾನಿಯರ ಬಂಧನ

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ವಾಸ; ಮತ್ತೆ ಮೂವರು ಪಾಕಿಸ್ತಾನಿಯರ ಬಂಧನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.ಕೆಲವು ದಿನಗಳ ಹಿಂದೆ ಜಿಗಣಿ ಬಳಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಗುರುವಾರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪೀಣ್ಯದಲ್ಲಿ ನಕಲಿ ಗುರುತಿನ ಚೀಟಿ ಹೊಂದಿ, ಬೆಂಗಳೂರಿನಲ್ಲಿ ನೆಲೆಸಿದ್ದ ಪತಿ, ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು.ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಖಂಡಿಸಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, ವೀರ್ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು" ಎಂಬುದು ಸುಳ್ಳು ಹೇಳಿಕೆ ಎಂದರು. ಗುಂಡೂರಾವ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುವುದಾಗಿ ಅವರು ತಿಳಿಸಿದ್ದಾರೆ....
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ

ದೇಶ, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ.ಗುರುವಾರ ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಿದರು.ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ವೈಭವಕ್ಕೆ ಚಾಲನೆ ನೀಡಿದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಮಾರಂಭ ನೆರವೇರಿತು....
ಮಧ್ಯಪ್ರಾಚ್ಯ ಸಂಘರ್ಷ; ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರತೀಕಾರ, ಲೆಬನಾನ್ ಮೇಲೆ ಬಾಂಬ್

ಮಧ್ಯಪ್ರಾಚ್ಯ ಸಂಘರ್ಷ; ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರತೀಕಾರ, ಲೆಬನಾನ್ ಮೇಲೆ ಬಾಂಬ್

ದೇಶ, ಪ್ರಮುಖ ಸುದ್ದಿ
ಗಾಜಾ: ಮಧ್ಯಪ್ರಾಚ್ಯವೂ ರಾಷ್ಟ್ರಗಳ ನಡುವಿನ ಸಮರ ಉಗ್ರ ಸ್ವರೂಪ ತಾಳಿದ್ದು, ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಇಸ್ರೇಲ್ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ತನ್ನ ಮಿಲಿಟರಿ ಪದೇ ಲೆಬನಾನ್ ಮೇಲೆ ನಡೆಸಿದ ದಾಳಿ ವೇಳೆ 8 ಯೋಧರು ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿದೆ.ಕಳೆದ ವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಇಸ್ರೇಲ್ ಪದೇ ದಾಳಿ ಮಾಡಿ ಹತ್ಯೆ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್ ವಾಯುಪಡೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಮಂಗಳವಾರ ನಡೆದ ಇರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಎರಡು ಪ್ರತ್ಯೇಕ ದಾಳಿಗಳಲ್ಲಿ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ....
ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.https://www.youtube.com/watch?v=4noS-o_9q0o&t=2s...
ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

ದೇಶ, ಪ್ರಮುಖ ಸುದ್ದಿ, ಸಿನಿಮಾ
ʼಜೈಲರ್‌ʼ ಬಳಿಕ ರಜಿನಿಕಾಂತ್‌ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್‌ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್‌ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.https://youtu.be/zPqMbwmGC1U?si=Kn7rPkKdUMYJUUlu
ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ

ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ

ದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಜಧಾನಿ ದೆಹಲಿ ಪೊಲೀಸರು ಡ್ರಗ್ಸ್ ಮಾಫಿಯಾ ಭರ್ಜರಿ ಬೇಟೆಯಾಡಿದ್ದಾರೆ. ಅತಿ ದೊಡ್ಡ ಮಾದಕ ದ್ರವ್ಯ ದಂಧೆ ಭೇದಿಸಿರುವ ಪೊಲೀಸರು, ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 560 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ.ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಈ ಕಾರ್ಯಾಚರಣೆ ನಡೆಸಿದ್ದು ನಾಲ್ವರನ್ನು ಬಂಧಿಸಿದ್ದು, 565 ಕಿಲೋಗ್ರಾಂ ಕೊಕೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಮಾಫಿಯಾ ಜಾಲವು ದೆಹಲಿ ಸಹಿತ ವಿವಿಧ ರಾಜ್ಯಗಳಲ್ಲಿ ಕೊಕೇನ್ ಮಾರಾಟ ಮಾಡಲು ಯೋಜಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ....