Sunday, August 9

ದೇಶ

ಶಿಮ್ಲಾದಲ್ಲಿ ಮೇಘ ಸ್ಫೋಟ; ದಿಢೀರ್ ಪ್ರವಾಹದಿಂದ 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಶಿಮ್ಲಾದಲ್ಲಿ ಮೇಘ ಸ್ಫೋಟ; ದಿಢೀರ್ ಪ್ರವಾಹದಿಂದ 20ಕ್ಕೂ ಹೆಚ್ಚು ಮಂದಿ ನಾಪತ್ತೆ

ದೇಶ, ಪ್ರಮುಖ ಸುದ್ದಿ
ಶಿಮ್ಲಾ: ಭಾರೀ ಮಳೆಯಿಂದಾಗಿ ದೇಶದ ಹಲವೆಡೆ ಸರಣಿ ದುರ್ಘಟನೆಗಳು ಸಂಭವಿಸುತ್ತಿವೆ. ಬುಧವಾರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿಯಾಗಿವೆ. ಜೊತೆಗೆ ಪ್ರಾಣ ಹಾನಿ ಬಗ್ಗೆಯೂ ವರದಿಯಾಗಿವೆ.ಅತ್ತ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ತಲ್ಲಣ ಸೃಷ್ಟಿಸಿದೆ. ದಿಡೀರ್ ಉಂಟಾದ ಪ್ರವಾಹದಿಂದಾಗಿ ಸುಮಾರು 20 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.ಶಿಮ್ಲಾದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ದಿಢೀರ್ ಪ್ರವಾಹದಿಂದ ಅವಾಂತರ ಸೃಷ್ಟಿಯಾಗಿದ್ದು, ಪೊಲೀಸ್, ಅಗ್ನಿಶಾಮಕ ದಳ, ಎನ್‌ಡಿ‌ಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ....
ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಆಗಸ್ಟ್ 1 ರಿಂದ ಅನ್ವಯವಾಗುವಂತೆ ಹೆಚ್ಚಿಸಿವೆ.ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 8.50 ರೂಪಾಯಿ ದುಬಾರಿಯಾಗಿದೆ. ಈ ದರ ಪರಿಷ್ಕರಣೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಷ್ಟೇ ಅನ್ವಯವಾಗಲಿದ್ದು, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿತರಕರು ತಿಳಿಸಿದ್ದಾರೆ....