Monday, August 10

ದೇಶ

UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಭಾರತೀಯ ಅರಣ್ಯ ಸೇವೆ (IFS) ಪೂರ್ವಭಾವಿ ಪರೀಕ್ಷೆ-2026ರ ಫಲಿತಾಂಶವನ್ನು ಪ್ರಕಟಿಸಿದ್ದು, 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಮೇ 24, 2026ರಂದು ನಡೆದಿದ್ದ ಪ್ರಾಥಮಿಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಾರಿ ಭಾರತೀಯ ಅರಣ್ಯ ಸೇವೆಯ 80 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಶಾರ್ಟ್‌ಲಿಸ್ಟ್ ಆಗಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆ ತಾತ್ಕಾಲಿಕವಾಗಿದ್ದು, ಮುಂದಿನ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ ಎಂದು UPSC ತಿಳಿಸಿದೆ.ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿ, ಅಗತ್ಯ ದಾಖಲೆಗಳ ಸಲ್ಲಿಕೆ ಹಾಗೂ ಇತರ ಮಾಹಿತಿಗಳನ್ನು ಆನ್‌ಲೈನ್ ಮೂಲಕ ಅಪ್‌ಡೇಟ್ ಮಾಡಬೇಕಿದೆ. ಮಹಿಳೆಯರು, ಅಂಗವಿಕಲರು, ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು ₹200 ಶುಲ್ಕ ಪಾವತಿಸಬೇಕು. ಮುಖ್ಯ ಪರೀಕ್ಷೆಯ ಇ-ಅಡ್ಮಿಟ್ ಕಾರ್ಡ್ ಪಡೆಯಲು ಅಭ್ಯರ್ಥಿಗಳು UPSC ಪೋರ್ಟಲ್‌ನಲ...
ತೆಲಂಗಾಣ ಸಚಿವ ಸಂಪುಟ ಇನ್ನು ಕಾಗದರಹಿತ: ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆಗೆ ಚಾಲನೆ

ತೆಲಂಗಾಣ ಸಚಿವ ಸಂಪುಟ ಇನ್ನು ಕಾಗದರಹಿತ: ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆಗೆ ಚಾಲನೆ

ದೇಶ, ಪ್ರಮುಖ ಸುದ್ದಿ
ಹೈದರಾಬಾದ್: ತೆಲಂಗಾಣ ಸರ್ಕಾರ ಸಚಿವ ಸಂಪುಟ ಸಭೆಗಳನ್ನು ಸಂಪೂರ್ಣವಾಗಿ ಕಾಗದರಹಿತವಾಗಿ ನಡೆಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ತೆಲಂಗಾಣ ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆ ಜಾರಿಗೆ ಸರ್ಕಾರ ಅನುಮೋದನೆ ನೀಡಿದ್ದು, ಸಚಿವರಿಗೆ ವಿಶೇಷ ಟ್ಯಾಬ್ಲೆಟ್‌ಗಳನ್ನು ವಿತರಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವ ಡಿ. ಶ್ರೀಧರ್ ಬಾಬು ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಸೇರಿದಂತೆ ಎಲ್ಲಾ ಸಚಿವರಿಗೆ ಟ್ಯಾಬ್ಲೆಟ್‌ಗಳನ್ನು ನೀಡುವ ಘೋಷಣೆ ಮಾಡಿದ್ದಾರೆ.ಹೊಸ ವ್ಯವಸ್ಥೆಯಲ್ಲಿ ಸಚಿವ ಸಂಪುಟದ ಕಾರ್ಯಸೂಚಿ, ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಡಿಜಿಟಲ್ ರೂಪದಲ್ಲಿ ಸಚಿವರಿಗೆ ತಲುಪಿಸಲಾಗುತ್ತದೆ. ಇದರಿಂದ ಆಡಳಿತದಲ್ಲಿ ವೇಗ, ಪಾರದರ್ಶಕತೆ ಹಾಗೂ ಪರಿಸರ ಸ್ನೇಹಿ ಕ್ರಮಗಳಿಗೆ ಉತ್ತೇಜನ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ವಿವಿಧ ಕಲ್ಯಾಣ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಿದ್ದಾರೆ...
ಪರಿಷತ್ ಗೆಲುವು 2028ರ ಚುನಾವಣೆಗೆ ದಿಕ್ಸೂಚಿ: ಸುರ್ಜೇವಾಲ

ಪರಿಷತ್ ಗೆಲುವು 2028ರ ಚುನಾವಣೆಗೆ ದಿಕ್ಸೂಚಿ: ಸುರ್ಜೇವಾಲ

ದೇಶ, ಪ್ರಮುಖ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧಿಸಿದ ಗೆಲುವು ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾದ ಅಲೆ ಮುಂದುವರಿಯಲಿದೆ ಎಂದು ವಿಶ್ಲೇಷಿಸಿದ್ದಾರೆ. “ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಐತಿಹಾಸಿಕವಾಗಿದ್ದು, ಜನ ಕಲ್ಯಾಣ ಮತ್ತು ನ್ಯಾಯದ ರಾಜಕೀಯಕ್ಕೆ ಬೆಂಬಲ ಸಿಕ್ಕಿದೆ. ಇದು ಗ್ಯಾರಂಟಿ ಯೋಜನೆಗಳ ಪರವಾದ ಮತ, ಜನರ ಪರವಾದ ಮತ” ಎಂದು ಸುರ್ಜೇವಾಲ ತಿಳಿಸಿದ್ದಾರೆ.ಕಾಂಗ್ರೆಸ್‌ಗೆ 135 ಶಾಸಕರ ಬಲವಿದ್ದರೂ, ಪಕ್ಷದ ಅಭ್ಯರ್ಥಿಗಳಿಗೆ 151 ಪ್ರಥಮ ಪ್ರಾಶಸ್ತ್ಯದ ಮತಗಳು ಲಭಿಸಿವೆ. ಇದು ರಾಜ್ಯದ ಶಾಸಕರು ಪಕ್ಷದ ಗಡಿ ಮೀರಿ ಸರ್ಕಾರದ ನೀತಿಗಳಿಗೆ ಬೆಂಬಲ ನೀಡಿರುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ರಾಜಕೀಯ ಎರಡು ಧ್ರುವಗಳ ನಡುವೆ ಸಾಗುತ್ತಿದೆ. ಒಂದು ಕಡೆ ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಯೋಜನೆಗಳು, ಮತ್ತೊಂದು ಕ...
ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

ದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಇರಾನ್ ಬಂದರುಗಳು ಮತ್ತು ಕರಾವಳಿ ಪ್ರದೇಶಗಳಿಗೆ ಸಂಬಂಧಿಸಿದ ಸಮುದ್ರ ಸಂಚಾರದ ಮೇಲಿನ ದಿಗ್ಬಂಧನವನ್ನು ಅಮೆರಿಕ ಪಡೆಗಳು ತೆರವುಗೊಳಿಸಿರುವುದಾಗಿ ಅಮೆರಿಕ ಕೇಂದ್ರ ಕಮಾಂಡ್ ಘೋಷಿಸಿದೆ. ಇದರೊಂದಿಗೆ ಇರಾನಿನ ಬಂದರುಗಳಿಗೆ ಆಗಮಿಸುವ ಹಾಗೂ ನಿರ್ಗಮಿಸುವ ಹಡಗುಗಳ ಸಂಚಾರಕ್ಕೆ ಇದ್ದ ನಿರ್ಬಂಧಗಳು ಅಂತ್ಯಗೊಂಡಿವೆ."ಇರಾನಿನ ಬಂದರುಗಳಿಗೆ ಅಥವಾ ಅಲ್ಲಿಂದ ಸಾಗುವ ಹಡಗುಗಳಿಗೆ ಅಮೆರಿಕ ಪಡೆಗಳು ಯಾವುದೇ ಅಡ್ಡಿ ಉಂಟುಮಾಡುತ್ತಿಲ್ಲ. ದಿಗ್ಬಂಧನ ಜಾರಿಯ ಎಲ್ಲ ಕ್ರಮಗಳನ್ನು ಸ್ಥಗಿತಗೊಳಿಸಲಾಗಿದೆ" ಎಂದು ಕೇಂದ್ರ ಕಮಾಂಡ್ ತಿಳಿಸಿದೆ. ಆದರೆ, ಒಪ್ಪಂದದ ಷರತ್ತುಗಳು ಪಾಲನೆಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಅಮೆರಿಕ ಯುದ್ಧನೌಕೆಗಳು ಪ್ರದೇಶದಲ್ಲೇ ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದೆ.ಅಮೆರಿಕ ಮತ್ತು ಇರಾನ್ ನಡುವೆ ಹೊಸ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಒಪ್ಪಂದದ ಬಗ್ಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಇರಾನ್ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಗೆ ತಡೆ ನೀಡುವ ಜೊತೆಗೆ ಹಾರ್ಮುಜ್ ಜಲಸಂಧಿಯನ್ನು ಪ...
ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಅವರ ನಿರ್ದೇಶನದಲ್ಲಿ ತಮಿಳು ನಟ ಧನುಷ್ ಹಾಗೂ ಮಲಯಾಳಂ ಸೂಪರ್‌ಸ್ಟಾರ್ ಮಮ್ಮೂಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರದ ಶೀರ್ಷಿಕೆಯನ್ನು ‘ಓಂ’ ಎಂದು ಘೋಷಿಸಲಾಗಿದೆ.ಚಿತ್ರವು ಇದೇ ವರ್ಷದ ಅಕ್ಟೋಬರ್ 16ರಂದು ಬಿಡುಗಡೆಯಾಗಲಿದ್ದು, ಶೀರ್ಷಿಕೆಯೊಂದಿಗೆ ‘Chapter 1’ ಎಂಬ ಟ್ಯಾಗ್‌ಲೈನ್ ನೀಡಿರುವುದು ಮುಂದಿನ ಭಾಗದ ಸುಳಿವನ್ನೂ ನೀಡಿದೆ.ಬಿಡುಗಡೆಯಾದ ಟೀಸರ್‌ನಲ್ಲಿ ಕೆಂಪು ಚಂದನ ಕಡಿಯುವ ಕಾರ್ಮಿಕರ ಬದುಕನ್ನು ಚಿತ್ರಿಸಲಾಗಿದೆ. ಧನುಷ್ ಮರ ಕಡಿಯುವ ಕಾರ್ಮಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಕ್ರಮವಾಗಿ ಚಂದನ ಕಡಿಯುವವರನ್ನು ಪೊಲೀಸರು ಸುತ್ತುವರಿಯುವ ಸಂದರ್ಭ ಅವರನ್ನು ರಕ್ಷಿಸುವ ದೃಶ್ಯಗಳು ಟೀಸರ್‌ನಲ್ಲಿವೆ.ಚಿತ್ರ ನಿರ್ಮಾಣ ಸಂಸ್ಥೆಯ ಮುಖ್ಯಸ್ಥ ಶ್ರೇಯಸ್ ಮಾತನಾಡಿ, ಇದು ಧನುಷ್ ವೃತ್ತಿಜೀವನದ ಅತ್ಯಂತ ದೊಡ್ಡ ಬಜೆಟ್ ಚಿತ್ರಗಳಲ್ಲಿ ಒಂದಾಗಿದ್ದು, ಅಭಿಮಾನಿಗಳು ಬಯಸಿದ ‘ವಿಂಟೇಜ್ ಮಾಸ್ ಧನುಷ್’ ಅನ್ನು ಮತ್ತೆ ಕಾಣಬಹುದಾಗಿದೆ ಎಂದು ತಿಳಿಸಿದ್ದಾರೆ.ಈ ಚಿತ್ರದಲ್ಲಿ ಸಾಯಿ ಪಲ್ಲವಿ ಮತ್ತು ಶ್ರೀಲೀಲಾ ನಾಯಕಿಯರಾಗಿ ನಟಿಸ...
ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

ದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಇರಾನ್ ಜೊತೆಗಿನ ಪ್ರಸ್ತಾವಿತ ಒಪ್ಪಂದ ಅಂತಿಮಗೊಂಡರೆ ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಕುಸಿತವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಶ್ವೇತಭವನದಲ್ಲಿ ಮಾತನಾಡಿದ ಅವರು, ಒಪ್ಪಂದದ ನಿರೀಕ್ಷೆಯಿಂದಲೇ ಮಾರುಕಟ್ಟೆಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿವೆ ಎಂದರು. "ಷೇರು ಮಾರುಕಟ್ಟೆ ಏರಿಕೆ ಕಂಡಿದ್ದು, ಹೂಡಿಕೆದಾರರು ಈ ಬೆಳವಣಿಗೆಯನ್ನು ಸ್ವಾಗತಿಸಿದ್ದಾರೆ" ಎಂದು ಹೇಳಿದರು.ಮಧ್ಯಪ್ರಾಚ್ಯದಲ್ಲಿ ಸ್ಥಿರತೆ ಹೆಚ್ಚುವುದರಿಂದ ಹಾಗೂ ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ಸಾಗಣೆ ಮಾರ್ಗಗಳು ಪುನರಾರಂಭಗೊಂಡರೆ ಇಂಧನ ಪೂರೈಕೆ ಸುಗಮವಾಗಲಿದೆ. ಇದರಿಂದ ತೈಲ ಬೆಲೆಗಳು ಮತ್ತಷ್ಟು ಇಳಿಯಬಹುದು ಎಂದು ಟ್ರಂಪ್ ಅಭಿಪ್ರಾಯಪಟ್ಟರು.ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರ ಹೊಂದದಂತೆ ಮಾಡುವ ವ್ಯವಸ್ಥೆಯೂ ಒಪ್ಪಂದದ ಭಾಗವಾಗಿದೆ ಎಂದು ಅವರು ಹೇಳಿದರು. ಈ ಒಪ್ಪಂದ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಸಹಿ ಆಗುವ ಸಾಧ್ಯತೆಯಿದೆ ಎಂದರು.ಹಾರ್ಮುಜ್ ಜಲಸಂಧಿ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾಗಿದ್ದು, ಅಲ್ಲಿನ ಬೆಳವಣಿಗೆಗಳು ಜಾಗತಿಕ ಇಂಧನ ಮಾರುಕಟ್ಟೆ...
ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

ದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಇರಾನ್ ವಿರುದ್ಧ ಯೋಜಿಸಲಾಗಿದ್ದ ಅಮೆರಿಕದ ಮಿಲಿಟರಿ ದಾಳಿಗಳನ್ನು ರದ್ದುಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್‌ನೊಂದಿಗೆ ನಡೆದ ಮಾತುಕತೆಗಳು ಮಹತ್ವದ ಹಂತ ತಲುಪಿದ್ದು, ಒಪ್ಪಂದದ ಪ್ರಮುಖ ಅಂಶಗಳಿಗೆ ಒಪ್ಪಿಗೆ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.ಟ್ರುತ್ ಸೋಷಿಯಲ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ರಾಜತಾಂತ್ರಿಕ ಪ್ರಕ್ರಿಯೆಗೆ ಅವಕಾಶ ನೀಡುವ ಉದ್ದೇಶದಿಂದ ದಾಳಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಪ್ರಸ್ತಾವಿತ ಒಪ್ಪಂದವು ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯದಂತೆ ಖಚಿತಪಡಿಸಲಿದೆ ಎಂದು ಅವರು ತಿಳಿಸಿದ್ದಾರೆ.ಒಪ್ಪಂದದ ಅಂತಿಮ ದಾಖಲೆಗಳು ಸಿದ್ಧವಾಗುತ್ತಿದ್ದು, ಕೆಲವೇ ದಿನಗಳಲ್ಲಿ ಅಧಿಕೃತ ಸಹಿ ನಡೆಯುವ ಸಾಧ್ಯತೆಯಿದೆ ಎಂದು ಟ್ರಂಪ್ ಹೇಳಿದ್ದಾರೆ. ಇಸ್ರೇಲ್, ಸೌದಿ ಅರೇಬಿಯಾ, ಯುಎಇ, ಕತಾರ್, ಬಹ್ರೇನ್, ಕುವೈತ್, ಜೋರ್ಡಾನ್, ಈಜಿಪ್ಟ್ ಹಾಗೂ ಟರ್ಕಿ ಸೇರಿದಂತೆ ಹಲವು ಪ್ರಾದೇಶಿಕ ರಾಷ್ಟ್ರಗಳು ಸಮಾಲೋಚನೆಗಳಲ್ಲಿ ಭಾಗಿಯಾಗಿವೆ ಎಂದು ಅವರು ತಿಳಿಸಿದ್ದಾರೆ.ಆದಾಗ್ಯೂ, ಒಪ್ಪ...
ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

ದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಹಲವು ಪ್ರಮುಖ ನೀರಾವರಿ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ತ್ವರಿತ ಅನುಮೋದನೆ ಹಾಗೂ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.ನೀತಿ ಆಯೋಗದ ಸಭೆಯ ಬಳಿಕ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಬಸವಣ್ಣ ಅವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿ, ರಾಜ್ಯದ ಅಭಿವೃದ್ಧಿ ಆದ್ಯತೆಗಳ ಕುರಿತು ಚರ್ಚಿಸಿದರು.ಭೇಟಿಯ ವೇಳೆ ಮೇಕೆದಾಟು ಯೋಜನೆ ಕುರಿತು ವಿಶೇಷವಾಗಿ ಪ್ರಸ್ತಾಪಿಸಿದ ಅವರು, ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕೇಂದ್ರೀಯ ಜಲ ಆಯೋಗಕ್ಕೆ (CWC) ಸೂಚಿಸಿದೆ ಎಂದು ಗಮನ ಸೆಳೆದರು. ಯೋಜನೆಯ ಮೌಲ್ಯಮಾಪನ ಪ್ರಕ್ರಿಯೆಗೆ ವೇಗ ನೀಡಿ ಶೀಘ್ರ ಅನುಮತಿ ನೀಡುವಂತೆ ಪ್ರಧಾನಿಗೆ ಮನವಿ ಮಾಡಿದರು.ಇದರ ಜೊತೆಗೆ ಕಳಸಾ-ಬಂಡೂರಿ ಯೋಜನೆ, ಭದ...
ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಒಂದು ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ.ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯಗೊಂಡ ಬಳಿಕ ಯಾವುದೇ ಅಭ್ಯರ್ಥಿ ಎದುರಾಳಿಯಾಗಿ ಉಳಿಯದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಘೋಷಿಸಿದರು.ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅವರು ಈ ಕುರಿತು ಅಧಿಕೃತ ಘೋಷಣೆ ಮಾಡಿದರು.ರಾಜ್ಯಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸಿರುವುದು ಹಾಗೂ ಬಿಜೆಪಿ ಒಂದು ಸ್ಥಾನ ಪಡೆದಿರುವುದು ವಿಧಾನಸಭೆಯಲ್ಲಿನ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ನಡೆದಿದೆ....
ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

ದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ/ಬೆಂಗಳೂರು: ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಭವಿಷ್ಯದ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರದ ಮುಂದೆ ಹಲವು ಮಹತ್ವದ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಡಿ.ಕೆ. ಶಿವಕುಮಾರ್, ಬೆಂಗಳೂರು ಮೆಟ್ರೋ ವಿಸ್ತರಣೆ, ಡಬಲ್ ಡೆಕ್ಕರ್ ಕಾರಿಡಾರ್, ಮೆಟ್ರೋ ಹಂತ-2ರ ಪರಿಷ್ಕೃತ ವೆಚ್ಚಗಳಿಗೆ ಅನುಮೋದನೆ, ಹಂತ-3ಎ ಯೋಜನೆ ಹಾಗೂ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ (RRTS) ಸೇರಿದಂತೆ ಹಲವು ಬಾಕಿ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಸಿದರು.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅರ್ಬನ್ ಚಾಲೆಂಜ್ ಫಂಡ್ ಅಡಿಯಲ್ಲಿ ಬಾಕಿ ಇರುವ ಯೋಜನೆಗಳಿಗೂ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರವನ್ನು ಕೋರಿರುವುದಾಗಿ ತಿಳಿಸಿದ್ದಾರೆ.ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಬೆಳವಣಿಗೆ ಕೇಂದ್ರಗಳನ್ನು ...