Thursday, August 6

ದೇಶ

‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಮೇಕೆದಾಟು ಯೋಜನೆ ಜಾರಿಗೊಳಿಸಲು ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಈ ಮಾಹಿತಿ ನೀಡಿದ್ದಾರೆ. 2018ರ ಕಾವೇರಿ ನೀರು ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ಯೋಜನೆ ಕೈಗೊಳ್ಳಲು ಕರ್ನಾಟಕವು ಕೆಳಹರಿವಿನ ರಾಜ್ಯಗಳ ಅನುಮತಿ ಪಡೆಯಬೇಕು ಎಂಬ ಉಲ್ಲೇಖ ಇಲ್ಲ ಎಂದು ಸಚಿವಾಲಯ ತಿಳಿಸಿದೆ. 2007ರ ಕಾವೇರಿ ನೀರು ವಿವಾದ ನ್ಯಾಯಾಧಿಕರಣದ ಆದೇಶದ ಪ್ರಕಾರ, ನ್ಯಾಯಾಧಿಕರಣದ ತೀರ್ಪಿಗೆ ಧಕ್ಕೆಯಾಗದಂತೆ ತಮ್ಮ ಗಡಿಭಾಗದೊಳಗಿನ ನೀರಿನ ಬಳಕೆ ಹಾಗೂ ಸೌಲಭ್ಯಗಳನ್ನು ನಿಯಂತ್ರಿಸುವ ಹಕ್ಕು ಸಂಬಂಧಿತ ರಾಜ್ಯಗಳಿಗೆ ಇದೆ ಎಂದು ಸ್ಪಷ್ಟಪಡಿಸಲಾಗಿದೆ.ಇದೇ ವೇಳೆ, ಕರ್ನಾಟಕ ಸರ್ಕಾರವು 2019ರಲ್ಲಿ ಸಲ್ಲಿಸಿದ್ದ ಮೇಕೆದಾಟು ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಸಮಗ್ರ ಯೋಜನಾ ವರದಿ (...
ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

ದೇಶ, ಪ್ರಮುಖ ಸುದ್ದಿ
ಅಗರ್ತಲ: ತ್ರಿಪುರಾ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನುರಾಗ್ ಅವರ ನಿಗೂಢ ಸಾವಿನ ತನಿಖೆಯನ್ನು ರಾಜ್ಯ ಪೊಲೀಸರು ತೀವ್ರಗೊಳಿಸಿದ್ದು, ಪ್ರಕರಣದ ತನಿಖೆಗಾಗಿ ರಚಿಸಿದ್ದ ವಿಶೇಷ ತಂಡವನ್ನು ಮೂರು ಸದಸ್ಯರಿಂದ 10 ಸದಸ್ಯರಿಗೆ ವಿಸ್ತರಿಸಲಾಗಿದೆ. 1994ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಅನುರಾಗ್ ಅವರ ಮೃತದೇಹ ಜುಲೈ 20ರಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಅವರ ಅಧಿಕೃತ ಕೊಠಡಿಗೆ ಹೊಂದಿಕೊಂಡ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜುಲೈ 24ರಂದು ಪಶ್ಚಿಮ ತ್ರಿಪುರಾ ಎಸ್‌ಪಿ ನಮಿತ್ ಪಾಠಕ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು.ಈಗ ಎಸ್‌ಐಟಿಯನ್ನು ಪುನರ್‌ರಚಿಸಿ, ಸೈಬರ್ ಅಪರಾಧ ಘಟಕ, ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಹಿರಿಯ ತನಿಖಾಧಿಕಾರಿಗಳನ್ನು ಒಳಗೊಂಡ 10 ಸದಸ್ಯರ ತಂಡವನ್ನಾಗಿ ವಿಸ್ತರಿಸಲಾಗಿದೆ. ತನಿಖೆಯ ಪ್ರಗತಿ ಪರಿಶೀಲನೆಗಾಗಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಭೆ ನಡೆಸಿ, ದೈನಂದಿನ ಪ್ರಗತಿ ವರದಿಯನ್ನು ಎಸ್‌ಪಿಗೆ ಸಲ್ಲಿಸುವಂತೆ ಆದೇಶಿಸಲಾಗಿದೆ. ಇದೇ ವೇಳೆ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸುದೀಪ್ ರಾಯ...
ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

ದೇಶ, ಪ್ರಮುಖ ಸುದ್ದಿ
ಅಮೃತಸರ: ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆದು ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದರೂ, ಭದ್ರತಾ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸರು ಘಟನಾ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ವಶಪಡಿಸಿಕೊಂಡಿದ್ದಾರೆ.ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ದಾಳಿ ನಡೆಸಿದವರನ್ನು ಗುರುತಿಸಲು ಹಾಗೂ ದಾಳಿಯ ಹಿಂದಿನ ಉದ್ದೇಶ ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಬಿಜೆಪಿ ಕಚೇರಿ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿ...
ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

ದೇಶ, ಪ್ರಮುಖ ಸುದ್ದಿ
ಸಮಾಲ್ಖಾ (ಹರಿಯಾಣ): ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಹಾಗೂ ಪ್ರತಿನಿಧಿ ಮಂಡಲದ ಪ್ರಥಮ ಅರ್ಧವಾರ್ಷಿಕ ಬೈಠಕ್ ಭಾನುವಾರ ಹರಿಯಾಣದ ಸಮಾಲ್ಖಾದಲ್ಲಿ ಸಮಾರೋಪಗೊಂಡಿತು. ಜುಲೈ 24ರಿಂದ ನಡೆದ ಮೂರು ದಿನಗಳ ಸಭೆಯಲ್ಲಿ ಸಮಿತಿಯ ಪ್ರಮುಖ ಸಂಚಾಲಕಿ ಮಾ. ಶಾಂತಾಕುಮಾರಿ, ಅಖಿಲ ಭಾರತ ಪ್ರಮುಖ ಕಾರ್ಯವಾಹಿಕಾ ಮಾ. ಸೀತಾ ಗಾಯತ್ರಿ ಸೇರಿದಂತೆ 40 ಪ್ರಾಂತಗಳಿಂದ 488 ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಫೆಬ್ರವರಿ 2026ರಿಂದ ಇದುವರೆಗೆ ನಡೆದ ಸಂಘಟನಾ ಚಟುವಟಿಕೆಗಳ ಪರಿಶೀಲನೆ ನಡೆಸಲಾಯಿತು. ಕಳೆದ ಆರು ತಿಂಗಳಲ್ಲಿ ಸಂಘಟನೆಯ ಕಾರ್ಯವ್ಯಾಪ್ತಿ ವಿಸ್ತರಿಸಿದ್ದು, ಪ್ರಸ್ತುತ 852 ಜಿಲ್ಲೆಗಳಲ್ಲಿ 4,886 ಶಾಖೆಗಳು, 1,173 ಮಿಲನಗಳು ಹಾಗೂ 1,332 ಸೇವಾ ಕಾರ್ಯಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಲಾಯಿತು. ಸಮಿತಿಯ ಸ್ಥಾಪನೆಯ 90 ವರ್ಷಗಳ ಹಿನ್ನೆಲೆಯಲ್ಲಿ ಕಾರ್ಯವಿಸ್ತರಣೆ, ಸಾಮಾಜಿಕ ಪರಿಸ್ಥಿತಿ, ಮಹಿಳೆಯರು ಹಾಗೂ ಯುವಜನರು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳ ಪರಿಹಾರಗಳ ಕುರಿತು ಚರ್ಚೆ ನಡೆಯಿತು.ಕೊನೆಯ ದಿನ ಜನಸಂಖ್ಯಾ ಅಸಮತೋಲನದ ಕಾರಣಗಳು ಮತ್ತು ಪರಿಣಾಮಗಳ ಕುರ...
ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಅವರಿಂದ ತೆರವಾದ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ವಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಈ ಆದೇಶ ಹೊರಡಿಸಿದ್ದು, ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಪ್ರಲ್ಹಾದ್ ಜೋಶಿ ನಿರ್ವಹಿಸಲಿದ್ದಾರೆ.ಪ್ರಸ್ತುತ ಕೇಂದ್ರದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರು ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಆಗಿರುವ ಪ್ರಲ್ಹಾದ್ ಜೋಶಿ, ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇದರ ಜೊತೆಗೆ ಅವರು ಅಂತರರಾಷ್ಟ್ರೀಯ ಸೌರ ಒಕ್ಕೂಟ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಅವರು ತಮ್ಮ ಈಗಿನ ಸಚಿವಾಲಯಗಳ ಜೊತೆಗೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ. ರಾಷ್ಟ್ರಪತಿ ಭವನದಿಂದ ಹೊರಡಿಸಿರುವ ಅಧ...
ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

ದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು "ವಿದ್ಯಾರ್ಥಿಗಳ ಗೆಲುವು" ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್ ಬಳಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, "ಇದು ಭಾರತದ ವಿದ್ಯಾರ್ಥಿಗಳ ಜಯ. ಅವರು ದೇಶದ ಭವಿಷ್ಯ. ಶಿಕ್ಷಣ ವ್ಯವಸ್ಥೆ ಹಲವು ವರ್ಷಗಳಿಂದ ದಾಳಿಗೆ ಒಳಗಾಗಿದ್ದು, ಅದನ್ನು ವಶಪಡಿಸಿಕೊಳ್ಳುವ ಹಾಗೂ ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ" ಎಂದು ಆರೋಪಿಸಿದರು. "ಒಂದು ಕಾಲದಲ್ಲಿ ಭಾರತದ ಶಿಕ್ಷಣ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿತ್ತು. ಆದರೆ ಇಂದು ಅದು ಭ್ರಷ್ಟಾಚಾರ, ಅಸಮರ್ಥತೆ ಮತ್ತು ತಪ್ಪು ನೀತಿಗಳಿಂದ ಹದಗೆಟ್ಟಿದೆ. ಧರ್ಮೇಂದ್ರ ಪ್ರಧಾನ್ ಈ ಹದಗೆಟ್ಟ ವ್ಯವಸ್ಥೆಯ ಸಂಕೇತವಾಗಿದ್ದರು. ಅವರ ರಾಜೀನಾಮೆ ಶಿಕ್ಷಣ ವ್ಯವಸ್ಥೆಯನ್ನು ಪುನರ್‌ನಿರ್ಮಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ" ಎಂದು ಹೇಳಿದರು.ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್ ಬಳಸಿದ ಆರ...
ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

ದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ (CJP) ಪ್ರತಿಭಟನೆ ಕುರಿತು ಎಐ (AI) ತಂತ್ರಜ್ಞಾನ ಬಳಸಿ ಸುಳ್ಳು ಮಾಹಿತಿ ಹರಡಲು ಸಂಘಟಿತ ಅಪಪ್ರಚಾರ ನಡೆಸಲಾಗಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ 400ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಿ ಬ್ಲಾಕ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸರು, ಪ್ರತಿಭಟನೆಗೆ ಸಂಬಂಧಿಸಿದಂತೆ ಎಐ ನಿರ್ಮಿತ ವಿಡಿಯೋಗಳು, ಡೀಪ್‌ಫೇಕ್‌ಗಳು, ಸಂಪಾದಿತ ಚಿತ್ರಗಳು ಹಾಗೂ ನಕಲಿ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ. ಪ್ರತಿಭಟನೆ ಕುರಿತ ಪೋಸ್ಟ್‌ಗಳು, ವಿಡಿಯೋಗಳು ಅಥವಾ ಛಾಯಾಚಿತ್ರಗಳನ್ನು ನಂಬುವ ಅಥವಾ ಹಂಚಿಕೊಳ್ಳುವ ಮೊದಲು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಕಳೆದ ಕೆಲವು ವಾರಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ ಇನ್‌ಸ್ಟಾಗ್ರಾಮ್‌ನಲ್ಲಿ, ಪ್ರತಿಭಟನೆಗೆ ಸಂಬಂಧಿಸಿದ ಅನೇಕ ಪೋಸ್ಟ್‌ಗಳು ವೈರಲ್ ಆಗಿದ್ದು, ಅವುಗಳಲ್...
CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಿಯೋಗದ ನಡುವೆ ನಡೆದ ಮೂರನೇ ಸುತ್ತಿನ ಮಾತುಕತೆಯಲ್ಲಿ, ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಘಟಕರು ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಡ್ಡಾ, ಸಿಜೆಪಿ ನಿಯೋಗವು ಪರೀಕ್ಷೆ ಮತ್ತು ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಐದು ಅಂಶಗಳ ಲಿಖಿತ ಪ್ರಸ್ತಾವನೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರದ ಮುಂದಿಟ್ಟಿದೆ ಎಂದು ಹೇಳಿದ್ದಾರೆ. ಮಾತುಕತೆ ವೇಳೆ ಸರ್ಕಾರ, ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಹೊಸ ಪ್ರಕರಣಗಳನ್ನೂ ದಾಖಲಿಸಲಾಗುವುದಿಲ್ಲ ಎಂದು ಭರವಸೆ ನೀಡಿದೆ ಎಂದು ನಡ್ಡಾ ತಿಳಿಸಿದ್ದಾರೆ.ಪ್ರತಿಭಟನೆ ವೇಳೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸರ್ಕಾರ ಸಂತಾಪ ಸೂಚಿಸಿದ್ದು, ನಿಯಮಾನುಸಾರ ...
ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

ದೇಶ, ಪ್ರಮುಖ ಸುದ್ದಿ
ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗಳ ಬಳಿಕ ರಾಜೀನಾಮೆಗೆ ಒತ್ತಾಯ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, ದೇಶದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ದೇಶವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು ಹಾಗೂ ವಿದ್ಯಾರ್ಥಿಗಳು ಕಾನೂನು ಹೋರಾಟಗಳಲ್ಲಿ ಸಿಲುಕದೆ ತಮ್ಮ ಶಿಕ್ಷಣ ಮತ್ತು ವೃತ್ತಿಜೀವನದತ್ತ ಗಮನಹರಿಸಬೇಕೆಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.ಎರಡು ಪುಟಗಳ ಪತ್ರದಲ್ಲಿ ಅವರು, ನೀಟ್-ಯುಜಿ 2026 ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ಹೊತ್ತಿದ್ದಾಗಿ ಹೇಳಿದ್ದಾರೆ. ಮೇ 3ರಂದು ನಡೆದ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ತಕ್ಷಣ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಪರೀಕ್ಷೆಯನ್ನು ರದ್ದುಪಡ...
ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

ದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕವೂ ತಮ್ಮ ಹೋರಾಟ ಮುಗಿದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಧ್ಯಕ್ಷ ಅಭಿಜಿತ್ ದೀಪ್ಕೆ ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು "ವಿದ್ಯಾರ್ಥಿ ಶಕ್ತಿಯ ಗೆಲುವು" ಎಂದು ಬಣ್ಣಿಸಿದ ಅವರು, ಸರ್ಕಾರದ ಮುಂದೆ ಇನ್ನೆರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ದೀಪ್ಕೆ, ಶಾಂತಿಯುತ ಹೋರಾಟ ಮತ್ತು ಸಾರ್ವಜನಿಕ ಒತ್ತಡದ ಮೂಲಕ ಸರ್ಕಾರವನ್ನು ಹೊಣೆಗಾರಿಕೆಗೆ ಒಳಪಡಿಸಬಹುದು ಎಂಬುದನ್ನು ಈ ಚಳವಳಿ ಸಾಬೀತುಪಡಿಸಿದೆ ಎಂದು ಹೇಳಿದರು. "ನಾವು ಸಾಧಿಸಿದ್ದೇವೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಸರ್ಕಾರದ ಮುಂದೆ ತಲೆಬಾಗದಿದ್ದರೆ ಯಾರಿಂದ ಬೇಕಾದರೂ ರಾಜೀನಾಮೆ ಪಡೆಯಬಹುದು ಎಂಬುದನ್ನು ಈ ಹೋರಾಟ ತೋರಿಸಿದೆ" ಎಂದು ಅವರು ಹೇಳಿದರು.ಆದರೆ, ರಾಜೀನಾಮೆ ಮಾತ್ರ ಸಾಕಾಗುವುದಿಲ್ಲ ಎಂದು ಹೇಳಿದ ದೀಪ್ಕೆ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ಆಗ್...