Tuesday, June 24

Others

ರೈಲ್ವೆ ಇಲಾಖೆ ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯಕ್ಕೆ ನಿರ್ಬಂಧ: BJP ನಾಯಕರರು ಪ್ರತಿಭಟಿಸಿಲ್ಲವೇಕೆ? ಎಂದು ರಾಮಲಿಂಗ ರೆಡ್ಡಿ ಪ್ರಶ್ನೆ

ರೈಲ್ವೆ ಇಲಾಖೆ ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯಕ್ಕೆ ನಿರ್ಬಂಧ: BJP ನಾಯಕರರು ಪ್ರತಿಭಟಿಸಿಲ್ಲವೇಕೆ? ಎಂದು ರಾಮಲಿಂಗ ರೆಡ್ಡಿ ಪ್ರಶ್ನೆ

Others
ಬೆಂಗಳೂರು: ರೈಲ್ವೆ ಇಲಾಖೆ ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು  BJP ನಾಯಕರು ಖಂಡಿಸಿಲ್ಲವೇಕೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ರವರೇ ಖಂಡಿಸಿರುವುದನ್ನು ಪತ್ರಿಕೆಯಲ್ಲಿ ಓದಿದೆ. ಈ ಬಗ್ಗೆ ಬಿ.ಜೆ.ಪಿ ಅವರು ಮೋದಿ ಜೀ ಅವರನ್ನು ದೂಷಿಸಿಸುತ್ತಾರೆಯೇ? ಅಥವಾ ಮೋದಿಜೀ ಅವರಿಗೆ ಪತ್ರ ಬರೆದು ಮಾರ್ಪಾಡಿಗೆ ಕೇಳುತ್ತಾರೆಯೇ? ಇಲ್ಲ ರಾಜ್ಯದ್ಯಾಂತ ಮೋದಿ ಜೀ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಚಳುವಳಿ/ ಜಾಥಾ/ ಮೆರವಣಿಗೆ ನಡೆಸುತ್ತಾರೆಯೇ ಎಂಬುದನ್ನು ಕೂತೂಹಲದಿಂದ ಎದುರು‌ ನೋಡುತ್ತಿದ್ದೇವೆ ಎಂದು ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಸಚಿವರು, 'ನಾನು ಈ ಹಿಂದೆ ನಮ್ಮ ರಾಜ್ಯದ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು CET ಪರೀಕ್ಷೆಯ ತಪಾಸಕರು ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣ...
ಅಪಘಾತದಲ್ಲಿ ಗಾಯಗೊಂಡ KSRTC ಸಿಬ್ಬಂದಿಗೆ 25 ಲಕ್ಷ, ಮೃತರ ಬಂಧುಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಿದ ಸಾರಿಗೆ ಸಚಿವ

ಅಪಘಾತದಲ್ಲಿ ಗಾಯಗೊಂಡ KSRTC ಸಿಬ್ಬಂದಿಗೆ 25 ಲಕ್ಷ, ಮೃತರ ಬಂಧುಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಿದ ಸಾರಿಗೆ ಸಚಿವ

Others
ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ KSRTC ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ರೂ.25 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ಮೃತಪಟ್ಟ ಸಿಬ್ಬಂದಿ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಲಾಗಿದೆ. ಇದೇ ವೇಳೆ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಯ ಅವಲಂಬಿತರಿಗೆ ತಲಾ ರೂ.10 ಲಕ್ಷ ರೂ) ರೂ.3.10 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕರಾರಸಾ ನಿಗಮ ದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ವರು ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಅವಲಂಭಿತರಿಗೆ ಪರಿಹಾರ ಮೊತ್ತದ ಚೆಕ್'ಗಳನ್ನು ವಿತರಿಸಿದರು. ಅಪಘಾತದಿಂದ ಮೃತಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವಾನ ಹೇಳಿದ ಸಚಿವ ರಾಮಲಿಂಗ ರೆಡ್ಡಿ, ಸಿಬ್ಬಂದಿಯ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ, ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿರುವುದಾಗಿ ತ...
‘ಸ್ಮಾರ್ಟ್ ಮೀಟರ್’ ಕರ್ಮಕಾಂಡ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ದೂರು

‘ಸ್ಮಾರ್ಟ್ ಮೀಟರ್’ ಕರ್ಮಕಾಂಡ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ದೂರು

Others
ಬೆಂಗಳೂರು: ಸ್ಮಾರ್ಟ್ ಮೀಟರ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥ ನಾರಾಯಣ್ ನೇತೃತ್ವದ ಬೆಂಗಳೂರಿನ ಬಿಜೆಪಿ ಶಾಸಕರು ಸೋಮವಾರ ಕರ್ನಾಟಕ ಲೋಕಾಯುಕ್ತದಲ್ಲಿ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದಾರೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಕೂಡ ಪ್ರಕರಣದಲ್ಲಿ ದೂರುದಾರರು.ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್, ಇಂಧನ ಸಚಿವ ಜಾರ್ಜ್, ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಸ್ಕಾಂ ಎಂಡಿ ಮಹಾಂತೇಶ್, ತಾಂತ್ರಿಕ ನಿರ್ದೇಶಕರಾದ ರಮೇಶ್ ಮತ್ತು ಬಾಲಾಜಿ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಹೇಳಿದರು. ಈ ಸುದ್ದಿಯನ್ನು ಇಂಗ್ಲಿಷ್'ನಲ್ಲೂ ಓದಿ.. Smart meter scam: BJP MLAs file complaint with Lokayukta against K'taka Energy Minister ಪ್ಲಂಬಿಂಗ್ ಉಪಕರಣಗಳ ತಯಾರಕ ಕಂಪನಿಯಾದ ಮೆಸರ್ಸ್ ರಾಜಶ್ರೀ ಎಲೆಕ್ಟ್ರಿಕಲ್ಸ್ ಪ್ರೈವೇ...
‘ವಿಶ್ವಶಾಂತಿ’ಯೇ ಫ್ರಾನ್ಸಿಸ್ ಮಂತ್ರ..! ‘ನಾರಾಯಣಗುರುಗಳ ಸಂದೇಶ ಪ್ರಸ್ತುತ’ ಎಂದು ಪೋಪ್ ಪ್ರತಿಪಾದಿಸಿದ್ದರು

‘ವಿಶ್ವಶಾಂತಿ’ಯೇ ಫ್ರಾನ್ಸಿಸ್ ಮಂತ್ರ..! ‘ನಾರಾಯಣಗುರುಗಳ ಸಂದೇಶ ಪ್ರಸ್ತುತ’ ಎಂದು ಪೋಪ್ ಪ್ರತಿಪಾದಿಸಿದ್ದರು

Others
ಮಂಗಳೂರು: 'ವಿಶ್ವಶಾಂತಿ'ಯೇ ಪೋಪ್ ಫ್ರಾನ್ಸಿಸ್ ಅವರ ಮಂತ್ರವಾಗಿತ್ತು. ಅವರು 'ನಾರಾಯಣಗುರುಗಳ ಸಂದೇಶ ಪ್ರಸ್ತುತ' ಎಂದು ಪ್ರತಿಪಾದಿಸಿದ್ದರು ಎಂದು ಬಿಲ್ಲವ ಸಮುದಾಯದ ಮುಖಂಡರೂ ಆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸ್ಮರಿಸಿದ್ದಾರೆ. ಪೋಪ್ ಫ್ರಾನ್ಸಿಸ್ ನಿಧನಕ್ಕೆ ಶೋಕ ವ್ಯಕ್ತ ಪಡಿಸಿರುವ ಪದ್ಮರಾಜ್, ಕ್ರೈಸ್ತ ಸಮುದಾಯದ ಪ್ರಭಾವಿ ಧರ್ಮಗುರು ಹಾಗೂ ರೋಮನ್ ಕೆಥೊಲಿಕ್ ಚರ್ಚ್ ಮುಖ್ಯಸ್ಥರೂ ಆಗಿರುವ ಪೋಪ್ ಫ್ರಾನ್ಸಿಸ್ ಅವರು ವಿಶ್ವ ಶಾಂತಿಗಾಗಿ ನೀಡಿರುವ ಕೊಡುಗೆ ಅಪಾರ ಎಂದು ಬಣ್ಣಿಸಿದ್ದಾರೆ. ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದ್ದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತ. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ಅಗ್ರಸ್ಥಾನದಲ್ಲಿ ಬರುತ್ತಾರೆ ಎಂದು ಪ್ರತಿಪಾದಿಸಿದ್ದರು. ಈ ಪ್ರಪಂಚದ...
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ..

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ..

Others
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ಮೃತದೇಹವು ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತದೇಹವನ್ನು ಪರಿಶೀಲಿಸಿರುವ ಪೊಲೀಸರು ಇದು ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ರಾಜ್ಯದ 38ನೇ ಡಿಜಿ-ಐಜಿ ಆಗಿದ್ದ ಓಂಪ್ರಕಾಶ್ ಅವರಿಗೆ 68 ವರ್ಷ ವಯಸ್ಸಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ....
ಕೃಷಿಕರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ.. ಎನ್ ಚಲುವರಾಯಸ್ವಾಮಿ

ಕೃಷಿಕರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ.. ಎನ್ ಚಲುವರಾಯಸ್ವಾಮಿ

Others
ಬೆಳಗಾವಿ: ರೈತರು ಯಂತ್ರೋಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ತಪ್ಪಿಸಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಪಾದಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದ ಸಚಿವರು, ಹಾರ್ವೆಸ್ಟರ್ ಹಬ್ ಕಟಾವ್ ಯಂತ್ರ ಬಳಕೆ ಮಾಡುವುದರಿಂದ 20 ರಿಂದ 30 ಟನ್ ಇಳುವರಿ ಹೆಚ್ಚಿಸಬಹುದು ಎಂದು ತಿಳಿಸಿದರು. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಕೃಷಿ ಸಚಿವರು ಹೇಳಿದರು. ಬೆಳಗಾವಿ ವಿಭಾಗ ಮಟ್ಟದಲ್ಲಿ ಸುಮಾರು 2150 ಫಲಾನುಭವಿಗಳಿಗೆ ವಿವಿಧ ಯಂತ್ರೋಪರಣಗಳ ಸವಲತ್ತುಗಳನ್ನು ಕೃಷಿ ಇಲಾಖೆ ಒದಗಿಸಿದ್ದು, ಈ ಸೌಲಭ್ಯಗಳನ್...
ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Others
ಬೆಂಗಳೂರು: ರಾಜ್ಯದ ಹಲವೆಡೆ ಬೇಸಿಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ. ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಡೆತ್ ನೋಟ್’ನಲ್ಲಿ ಪೊನ್ನಣ್ಣ ಹೆಸರು, ಆದರೂ FIRನಲ್ಲಿ ಹೆಸರಿಲ್ಲ ಎಂದ ಬಿಜೆಪಿ ನಾಯಕರು

ಡೆತ್ ನೋಟ್’ನಲ್ಲಿ ಪೊನ್ನಣ್ಣ ಹೆಸರು, ಆದರೂ FIRನಲ್ಲಿ ಹೆಸರಿಲ್ಲ ಎಂದ ಬಿಜೆಪಿ ನಾಯಕರು

Others
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಸಾವಿನ ಪ್ರಕರಣದಲ್ಲಿ ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ವಿರುದ್ಧ ಕೇಸ್ ದಾಖಲಿಸದ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ವಿನಯ್ ಸೋಮಯ್ಯ ಕುಟುಂಬದವರು ಪ್ರಾರಂಭದಲ್ಲಿ ಕೊಟ್ಟ ದೂರಿನ “Subject” ನಲ್ಲೇ ಇಬ್ಬರೂ MLA ಗಳ ಹೆಸರು ಉಲ್ಲೇಖ ಮಾಡಿದ್ದರೂ FIR ನಲ್ಲಿ ಹೆಸರು ಕೈಬಿಟ್ಟು ದೂರಿನಲ್ಲಿ ಇರಲೇ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿನಯ್ ಸೋಮಯ್ಯ ಡೇಟ್ ನೋಟ್ ಪೋಸ್ಟ್ ಹಾಕಿರುವ ಪ್ರತಾಪ್ ಸಿಂಹ, ಈ ಪ್ರಕರಣದಲ್ಲಿ ದಾರಿ ತಪ್ಪಿಸಬೇಡಿ ಎಂದವರು ಬೆಂಗಳೂರು ಪೋಲೀಸರಿಗೆ ಸೂಚಿಸಿದ್ದಾರೆ. ವಿನಯ್ ಸೋಮಯ್ಯ ಕುಟುಂಬದವರು ಪ್ರಾರಂಭದಲ್ಲಿ ಕೊಟ್ಟ ದೂರಿನ “Subject” ನಲ್ಲೇ ಇಬ್ಬರೂ MLA ಗಳ ಹೆಸರು ಉಲ್ಲೇಖ ಮಾಡಿದ್ದರೂ FIR ನಲ್ಲಿ ಹೆಸರು ಕೈಬಿಟ್ಟು ದೂರಿನಲ್ಲಿ ಇರಲೇ ಇಲ್ಲ ಎಂದು ದಾರಿ ತಪ್ಪಿಸಬೇಡಿ ಬೆಂಗಳೂರು ಪೋಲೀಸರೇ. pic.twitter.com/OJKup6hsoA — Prathap Simha (@mepratap) April 5, 2025...
‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’

‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’

Others
ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಫಿಸಿಯೋಥೆರಪಿ ಕಾಲೇಜಿನಲ್ಲಿ ಶುಕ್ರವಾರ ಹೊಸ ಫಿಸಿಯೋಥೆರಪಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ, ಡಾ. ಪಾಟೀಲ್, ಕೌಶಲ್ಯಪೂರ್ಣ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ಅಂತಾರಾಷ್ಟ್ರೀಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದೇಶಿ ಭಾಷಾ ಒತ್ತಿ ಹೇಳಿದರು. “ತರಬೇತಿ ಪಡೆದ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಜರ್ಮನಿ, ಇಟಲಿ, ಜಪಾನ್ ಮತ್ತು ಯುಎಇ ಆಸ್ಪತ್ರೆಗಳಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಈ ದೇಶದವರು ನಮ್ಮನ್ನು ಸಂಪರ್ಕಿಸಿದ್ದಾರೆ. ಈ ಆಸ್ಪತ್ರೆಗಳಿಗೆ ಅವರ ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ ಮತ...
“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

Others
ಬೆಂಗಳೂರು: ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಹೈಕಮಾಂಡ್ ನಿರ್ಧಾರದ ಬಗ್ಗೆ ಶಾಸಕ ಯತ್ನಾಳ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 'ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ' ಎಂದವರು ಹೇಳಿದ್ದಾರೆ. 'ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ' ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'Calling a Spade, a Spade' ಎಂಬುದಕ್ಕೆ ಪಕ್ಷವು ನನಗೆ ಬಹುಮಾನ ನೀಡಿದೆ ಎಂದವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. 'ಸತ್ಯವಂತರಿಗಿದು ಕಾಲವಲ್ಲ ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡಲು ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ ಸತ್ಯವಂತರಿಗಿದು ಕಾಲವಲ್ಲ'   ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ. 'ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾ...