KSRTC ಬಳಗದಲ್ಲಿ ವನಿತೆಯರ ಕಮಾಲ್.. ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಕೇಂದ್ರ ಕಚೇರಿಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಮಾರಂಭದಲ್ಲಿ ಸ್ಫೂರ್ತಿಯಾದರು.
ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಈ ಸಮಾರಂಭದಲ್ಲಿ ಕುತೂಹಲದ ಕೇಂದ್ರಬಿಂದುವಾದರೂ. ತಮ್ಮ ಗಾನಸುಧೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತುಂಬಿದ ಅವರಿಗೆ ಗೌರವ ಧನ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಈಗ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿ ಪುರುಷ ಸಿಬ್ಬಂದಿಯಷ್ಟೇ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು.
ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮ...









