
ಏಕಗವಾಕ್ಷಿ ಪೋರ್ಟಲ್: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದ್ದಾರೆ.ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು.ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇ...









