Sunday, September 7

ಆಧ್ಯಾತ್ಮ

4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕೊಪ್ಪಳ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಗಣೇಶೋತ್ಸವದ ಅಂಗವಾಗಿ “4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯನ್ನು ರಚಿಸಿ ದೀಪಗಳನ್ನು ಬೆಳಗಿಸಿ ಗಣೇಶನಿಗೆ ವೈಶಿಷ್ಟ್ಯಪೂರ್ಣವಾದ ಅಹ್ವಾನವನ್ನು ನೀಡಲಾಯಿತು. 5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ!! ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಮಕ್ಕಳು ವಿನಾಯಕನ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸುವ ಮೂಲಕ ಗಮನ ಸೆಳೆದಿದ್ದಾರೆ.#Ballari #Koppala pic.twitter.com/big3vBbG7l — Ballari Tweetz (@TweetzBallari) August 25, 2025 ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ ಸಂತೋಷದಿAದ ಪಾಲ್ಗೊಂಡು ವಿನಾಯಕನಿಗೆ ಜೈಕಾರವನ್ನು ಹಾಕಿ ದೀಪಗಳಿಂದ ಗಣೇಶನ ಆಕೃತಿಯನ್ನು ಮೂಡಿಸಿದರು. ಶಾಲೆಯ ಪೂರ್ವ ಪ್ರಾಥಮಿಕದಿಂದ ಎಂಟನೆಯ ತರಗತಿಯ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಯಿತು. ವಿದ್ಯಾರ್ಥಿಗಳಲ...
ಅಮರನಾಥ ಯಾತ್ರೆ ಆರಂಭ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

ಅಮರನಾಥ ಯಾತ್ರೆ ಆರಂಭ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಬಿಗಿ ಭದ್ರತಾ ವ್ಯವಸ್ಥೆಯ ನಡುವೆ ಈ ವರ್ಷದ ಅಮರನಾಥ ಯಾತ್ರೆ ಜುಲೈ 3ರಿಂದ ಆರಂಭವಾಗಿದ್ದು, ಮೊದಲ ದಿನವೇ 12,300ಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇವಾಲಯದಲ್ಲಿ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ, 6,411 ಯಾತ್ರಿಕರ ಮತ್ತೊಂದು ತಂಡ ಜಮ್ಮುವಿನ ಭಗವತಿ ನಗರ ಯಾತ್ರಾ ನಿವಾಸದಿಂದ ಕಣಿವೆಗೆ ಹೊರಟಿದೆ. ಈ ಪೈಕಿ 2,789 ಯಾತ್ರಿಕರು ಬಾಲ್ಟಾಲ್ ಮೂಲ ಶಿಬಿರಕ್ಕೆ, ಉಳಿದ 3,622 ಯಾತ್ರಿಕರು ನುನ್ವಾನ್ (ಪಹಲ್ಗಾಮ್ ಶಿಬಿರ) ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಏಪ್ರಿಲ್‌ನಲ್ಲಿ ಪಹಲ್ಗಾಮ್ ಸಮೀಪ ನಡೆದ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ, ಈ ಬಾರಿ ಯಾತ್ರೆಗೆ ಹಲವು ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಸೇನೆ, ಬಿಎಸ್‌ಎಫ್‌, ಸಿಆರ್‌ಪಿಎಫ್‌, ಎಸ್‌ಎಸ್‌ಬಿ ಮತ್ತು ಸ್ಥಳೀಯ ಪೊಲೀಸರ ಜೊತೆಗೆ 180 ಹೆಚ್ಚುವರಿ ಸಿಎಪಿಎಫ್‌ ಕಂಪನಿಗಳನ್ನು ನಿಯೋಜನೆ ಮಾಡಲಾಗಿದೆ. ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ಸಾರಿಗೆ ಶಿಬಿರಗಳು ಹಾಗೂ ಜಮ್ಮುವಿನಿಂದ ಪವಿತ್ರ ಗುಹಾ ದೇವಾಲಯದವರೆಗೆ ಎಲ್ಲ ಭದ್ರತಾ ವ್ಯವಸ್ಥೆಗಳನ್ನು ಶಕ್ತಿಗೊಳಿಸಲಾಗಿದೆ. ಪಹಲ್ಗಾ...
ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದ ಪಕ್ಕದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠ ನಿರ್ಮಾಣವಾಗಲಿದೆ.  ಅಯೋಧ್ಯೆಯ ಈ ಭವ್ಯ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಶ್ರೀ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಉಪಸ್ಥಿತಿಯಲ್ಲಿ ಈ ಕೈಂಕರ್ಯ ನೆರವೇರಿದೆ. ಶಿಲಾನ್ಯಾಸ ಕೈಂಕರ್ಯದಲ್ಲಿ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಪೂಜಾರಿ, ಮೀನುಗಾರಿಕಾ ಸಚಿವರಾದ ಮಾಂಕಾಳ ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ ಹಾಗೂ ಅನೇಕ ಧಾರ್ಮಿಕ ಪ್ರಮುಖರು ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪದ್ಮರಾಜ್ ಆರ್.ಪೂಜಾರಿ, ಧರ್ಮದ ನಡೆಯ ಮೂಲಕವಷ್ಟೇ ಧರ್ಮ ಉಳಿಯಬಹುದು. ಧರ್ಮ ಉಳಿದಲ್ಲಿ ಮಾತ್ರ ನಾವು ಉಳಿಯುವೆವು ಎಂದರು. ಜಾತಿಯ ವೈಷಮ್ಯ ಬಿಟ್ಟು ಎಲ್ಲರೂ ಒಂದೇ ಎಂಬುದೇ ನಿಜವಾದ ಧರ್ಮದ ಸಾರವಾಗಿದೆ ಎಂದು ಪ್ರತಿಪಾದಿಸಿದ ಅವರು, ಸಮಸ್ತ ಹಿಂದೂ ಧರ್ಮದ ...
ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಮಂಗಳೂರು: ಪುರಾಣ ಪ್ರಸಿದ್ಧ ಶ್ರೀ ಕಟೀಲು ಕ್ಷೇತ್ರದಲ್ಲಿ ಇದೀಗ ವೈಭವದ ಜಾತ್ರಾ ಮಹೋತ್ಸವದ ಸಡಗರ ಆವರಿಸಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ ಪ್ರಸಿದ್ಧ ದೇಗುಲವಾಗಿದ್ದು, ದೇಶ-ವಿದೇಶಗಳಿಂದಲೂ ಭಕ್ತರು ಈ ಜಾತ್ರೆಗೆ ಸಾಕ್ಷಿಯಾಗುತ್ತಾರೆ. ಕಟೀಲು ಕ್ಷೇತ್ರದ ಜಾತ್ರೆಯ ಸಂದರ್ಭದಲ್ಲೇ ಕರಾವಳಿಯ ಯುವಜನ ಸಮೂಹ ಶ್ರೀ ದುರ್ಗಾಪರಮೇಶ್ವರಿಯ ಮಹಿಮೆಯ ಬಗ್ಗೆ ಬೆಳಕು ಚೆಲ್ಲುವ ಹಾಡೊಂದನ್ನು ಲೋಕಾರ್ಪಣೆ ಮಾಡಿ ಗಮನಸೆಳೆದಿದ್ದಾರೆ. ಈ ಭಕ್ತಿ ಗಾನಕ್ಕೆ ಆಸ್ತಿಕರ ಪಾಳಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. https://www.youtube.com/watch?v=etv5WCNznXQ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೆ ಪ್ರಯುಕ್ತ ದೇವಲೋಕ ಕ್ರಿಯೇಷನ್ಸ್ ವತಿಯಿಂದ 'ಅಪ್ಪೆ ಭ್ರಾಮರಿಯೇ' ಎಂಬ ಹೊಸ ಭಕ್ತಿಗೀತೆಯನ್ನು ಶನಿವಾರ ಬೆಳಿಗ್ಗೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಗಿದೆ. ಜ್ಯೋತಿಗುಡ್ಡೆ ಕ್ಷೇತ್ರದ ಅರ್ಚಕಿ ಗುಲಾಬಿ ಅಮ್ಮನವರು ಭಕ್ತಿಗೀತೆಯನ್ನು ಲೋಕಾರ್ಪಣೆ ಮಾಡಿದರು. ಸಾಫಲ್ಯ ಸೇವಾ ಸಂಘ (ರಿ) ...
ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: 'ಕಟೀಲು' ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪುಟ್ಟ ಉರಾದರೂ ಇಲ್ಲಿನ ದೇಗುಲವು ಜಗದಗಲ ಖ್ಯಾತಿಯನ್ನು ಹೊಂದಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ ಪ್ರಸಿದ್ಧ ದೇಗುಲವಾಗಿದ್ದು, ದೇಶ-ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. https://www.youtube.com/watch?v=etv5WCNznXQ ಮಂಗಳೂರಿನಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಈ ಕ್ಷೇತ್ರವು ನಂದಿನಿ ನದಿಯ ಮಧ್ಯೆ ಇದ್ದು, ಹಚ್ಚ ಹಸಿರಿನ ವನಸಿರಿಯ ಸಿಂಗಾರದಿಂದಾಗಿ ಪ್ರವಾಸಿಗರನ್ನೂ ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ನಿತ್ಯವೂ ಭಕ್ತಸಾಗರದಿಂದ ತುಂಬಿ ತುಳುಕುತ್ತಿರುವ ಕಟೀಲು ದೇಗುಲವು ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲಗಳಲ್ಲೊಂದು. ಇದೀಗ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯವು ವಾರ್ಷಿಕ ಅದ್ಧೂರಿ ಜಾತ್ರೆಗೆ ಸಾಕ್ಷಿಯಾಗುತ್ತಿದೆ. ಪ್ರತೀ ವರ್ಷ ಏಪ್ರಿಲ್ ತಿಂಗಳಲ್ಲಿ 8 ದಿನಗಳ ಕಾಲ ಈ ವೈಭವ ನೆರವೇರುತ್ತದೆ. ವೈಶಿಷ್ಟ್ಯಗಳೊಂದಿಗೆ ಮೊದಲ ದಿನ ಕೋಡಿ (ಧ್ವಜ) ಏರಿಸುವ ಮೂಲಕ ಜಾತ್ರೆ ಆರಂಭವಾಗುತ್ತದೆ. 3ನೇ ದಿನ ದೇವರ ಮೂಡು ಸವಾರಿ (ಮೂಡಣದ ದಿಕ್ಕಿಗೆ) ನಡೆಯುತ್ತದೆ. 5...
ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆ ದೇಗುಲ ಇಂದು ಅನನ್ಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಶ್ರೀ ರಾಮನವಮಿ ದಿನವಾದ ಇಂದು ಭವ್ಯ ದೇಗುಲದಲ್ಲಿರುವ ಬಾಲರಾಮನ ವಿಗ್ರಹಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿದ ಸನ್ನಿವೇಶ ಆಸ್ತಿಕ ಸಮೂಹದ ಗಮನಸೆಳೆಯಿತು. श्री राम नवमी के पावन पर्व पर प्रभु का सूर्यतिलक Surya Tilak of Prabhu on the pious occasion of Shri Ram Navami pic.twitter.com/UCaweKHT7h — Shri Ram Janmbhoomi Teerth Kshetra (@ShriRamTeerth) April 6, 2025 ದೇಶಾದ್ಯಂತ ರಾಮನವಮಿ ಹಬ್ಬವನ್ನು ಆಚರಿಸುತ್ತಿದ್ದ ಹೊತ್ತಿಗೆ ಅಯೋಧ್ಯೆಯಲ್ಲಿರುವ ಬಾಲ ರಾಮನ ಹಣೆಯನ್ನು ಸೂರ್ಯ ರಶ್ಮಿ ಸ್ಪರ್ಶಿಸಿದೆ. ಕೋಟ್ಯಂತರ ಜನರು ಈ ಅದ್ಭುತ ದೃಶ್ಯವನ್ನು ಸಾಕ್ಷೀಕರಿಸಿದರು. ಸೂರ್ಯ ರಶ್ಮಿ ವಿಗ್ರಹಕ್ಕೆ ಸ್ಪರ್ಶಿಸುತ್ತಿದ್ದಂತೆಯೇ ಬಾಲರಾಮನ ಹಣೆಯಲ್ಲಿ ತಿಲಕದ ದೃಶ್ಯ ಕಂಡುಬಂತು. ಅದಾಗಲೇ ಬಾಲರಾಮನಿಗೆ ವಿಶೇಷ ಆರತಿಯನ್ನು ನೆರವೇರಿಸಲಾಯಿತು. సూర్యవంశ రామ 🙇🏻🚩 శ్రీరామ నవమి శుభాకాంశలు #AyodhaRamMandir#RamaNavami pic.twitter.com/nOWjKpZ2J...
ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು ಹಾಕುತ್ತಿದೆ ಎಂದು ಬೇಸರ ವ್ಯಕ್ತಪಡಿಸಿರುವ ಅರ್ಚಕರ ಸಮೂಹ, ಧಾರ್ಮಿಕ 'ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ'ಕ್ಕೆ ಅಂಕಿತ ಹಾಕದ ರಾಜ್ಯಪಾಲರ ಬಗ್ಗೆಯೂ ಬೇಸರ ವ್ಯಕ್ತಪಡಿಸಿದೆ. ಈ ಸಂಬಂಧ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ರಾಜಭವನ ಚಲೋಗೆ ನಿರ್ಧರಿಸಿದೆ. ಧರ್ಮದ ವಿಷಯದಲ್ಲಿ ರಾಜಕೀಯ ಮಾಡಬಾರದು. ಆದರೆ ಬಿ.ಜೆ.ಪಿ ನಾಯಕರು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಬಂದಿದ್ದರೂ ಸಹ, ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ದೇವಸ್ಥಾನಗಳ ಹಾಗೂ ಅರ್ಚಕರ ಕಲ್ಯಾಣ ಅಭಿವೃದ್ಧಿ ಮಾಡದೇ, ಕಾಂಗ್ರೆಸ್ ಸರ್ಕಾರ ಮಾಡಲು ಯೋಜಿಸಿರುವ ಕಾಯಿದೆಯನ್ನು ಸಹಿಸದೆ ರಾಜ್ಯಪಾಲರಿಗೆ ಒತ್ತಡ ಹೇರಿ ಸಹಿ‌ ಹಾಕಿಸದೆ ಬಿಜೆಪಿಯು ಅರ್ಚಕ ಸಮೂಹಕ್ಕೆ ದ್ರೋಹ ಬಗೆಯುತ್ತಿದೆ ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಮುಖರು ಆರೋಪಿಸಿದ್ದಾರೆ. ಈ ಕುರಿತಂತೆ ಮಾಧ್ಯಮ‌ ಪ್ರಕಟಣೆ ಹೊರಡಿಸಿರುವ ಅರ್ಚಕರ ಸಮೂಹ, ಕಾಂಗ್ರೆಸ್ ಸರ್ಕಾರವು ಅರ್ಚಕರ ಕಲ್ಯಾಣಕ್ಕ...
‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಗತ ವೈಭವ ಮರುಕಳಿಸಿದೆ. ಐತಿಹಾಸಿಕ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲದ ಸುದೀರ್ಘ ಜಾತ್ರೆ ಇದಾಗಿದ್ದು ದೇಶ-ವಿದೇಶಗಳಲ್ಲಿ 'ಪೊಳಲಿ ಚೆಂಡು' ಎಂದೇ ಇದು ಪ್ರತೀತಿ. ಈ ವರ್ಷ 28 ದಿನಗಳ ಜಾತ್ರೆ ನಡೆಯಲಿದ್ದು ಎಪಿಲ್ 9 ರಂದು 'ಕಡೆ ಚೆಂಡು' ನಿಗದಿಯಾಗಿದೆ. ಪೊಳಲಿ ಚೆಂಡು ಉತ್ಸವದ ಸಂಕ್ಷಿಪ್ತ ಕ್ಯಾಲೆಂಡರ್‌ ಹೀಗಿದೆ: ಈ ಬಾರಿ ಏಪ್ರಿಲ್ 4ರಂದು 20ನೇ ದಂಡಮಾಲೋತ್ಸವ, ಏಪ್ರಿಲ್ 5ರಂದು ಮೊದಲ ಚೆಂಡು, ಏಪ್ರಿಲ್ 9ರಂದು ಕಡೇ ಚೆಂಡು, ಏಪ್ರಿಲ್ 10ರಂದು ಬ್ರಹ್ಮ ರಥೋತ್ಸವ, ಏಪ್ರಿಲ್ 11ರಂದು ಆರಾಟ ಮಹೋತ್ಸವ ಜರುಗಲಿದೆ. ದಕ್ಷಿಣಕನ್ನಡದ ಪೊಳಲಿಯಲ್ಲಿರುವ ನಾಡಿನ ಅಧಿ ದೇವತೆ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಪ್ರತೀ ವರ್ಷ ಮಾರ್ಚ್ 14ರ ತಡರಾತ್ರಿ ಧ್ವಜಾರೋಹಣ ಮೂಲಕ ಜಾತ್ರಾ ಮಹೋತ್ಸವಕ್ಕೆ ಮುನ್ನುಡಿ ಬರೆಯಲಾಗುತ್ತದೆ. ಧ್ವಜಾರೋಹಣ ನಂತರವಷ್ಟೇ  ಎಷ್ಟು ದಿನಗಳ ಜಾತ್ರೆ ನಡೆಯುತ್ತದೆ ಎಂಬುದು ಘೋಷಣೆಯಾಗುವುದು. ಈ ಘೋಷಣೆಯನ್ನು ಕೇಳಲು ಇಡೀ ನಾಡು ಕಾತುರದಿಂದ ಕಾಯುತ್ತಿರುವುದೇ ವಿಶೇಷ. ಈ ಬ...
VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕರ್ನಾಟಕದ ಪುರಾಣ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರ ಒಂದಿಲ್ಲೊಂದು ಮಹಿಮೆಯಿಂದ ಗಮನಸೆಳೆಯುತ್ತಿರುತ್ತದೆ. ಶತಮಾನಗಳಷ್ಟು ಹಳೆಯ ಈ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 105 ವರ್ಷಗಳ ಬಳಿಕ ನಡೆದ 'ಶತ ಚಂಡಿಕಾಯಾಗ' ಆಸ್ತಿಕ ವಲಯದ ಕುತೂಹಲದ ಕೇಂದ್ರಬಿಂದುವಾಗಿತ್ತು. ಇದೀಗ ಪುರಾಣ ಪ್ರಸಿದ್ಧ 'ಚೆಂಡಿನ ಉತ್ಸವ'ಕ್ಕೆ ಪೊಳಲಿ ಕ್ಷೇತ್ರ ಸಜ್ಜಾಗಿರುವಂತೆಯೇ ಶ್ರೀ ಕ್ಷೇತ್ರದ ಗುಣಗಾನ ಮಾಡಿರುವ ಹಾಡೊಂದು ಬಿಡುಗಡೆಯಾಗಿದೆ. https://www.youtube.com/watch?v=LGZAxO0gJzk ಪೊಳಲಿ ಸನ್ನಿಧಾನದಲ್ಲಿ ನಿನ್ನೆ (ಬುಧವಾರ) ಬಿಡುಗಡೆಯಾಗಿರುವ 'ಪುರಲ್ದ ಸಿರಿಯೇ..' ಹೆಸರಿನ ಭಕ್ತಿ ಗಾಯನದ ವೀಡಿಯೊ ನಾಡಿನ ಆಸ್ತಿಕ ಸಮೂಹದ ಚಿತ್ತವನ್ನು ಸೂಜಿಗಲ್ಲಿನಂತೆ ಸೆಳೆದಿಟ್ಟುಕೊಳ್ಳುವಂತಿದೆ. ದೇವೀ ನೆಲೆಯಾಗಿರುವ ಪೊಳಲಿಯನ್ನು ತುಳು ಭಾಷೆಯಲ್ಲಿ 'ಪುರಾಲ್' ಎಂದು ಕರೆಯಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಭಕ್ತ ಸೀಮೆಗೆ ಪೊಳಲಿ ರಾಜರಾಜೇಶ್ವರಿಯೇ ನಾಡಿನ ಅಧಿದೇವತೆ. ಈ ಸೀಮೆಯುದ್ದಕ್ಕೂ ಪೊಳಲಿ ದೇವಿಯನ್ನು 'ಪುರಲ್ದ ಉಳ್ಳಾಲ್ತಿ' ಎಂದೇ ಆಸ್ತಿಕರು ಕರೆಯು...
ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ
(ಚಿತ್ರ : ಮಂಜು ನೀರೇಶ್ವಾಲ್ಯ) ಮಂಗಳೂರು: ಆಸ್ತಿಕರ ನಾಡು, ರಾಜ್ಯ ಕರಾವಳಿ ಇದೀಗ ಸಾಲು ಸಾಲು ವೈದ್ಧಿಕ ಕೈಂಕರ್ಯಗಳಿಗೆ ಸಾಕ್ಷಿಯಾಗುತ್ತಿವೆ. ಅದರ ನಡುವೆಯೇ ಮಂಗಳೂರಿನಲ್ಲಿ ನೆರವೇರಿದ 'ಮಹಾಮಾಯ ರಥೋತ್ಸವ'ವು ಮಹಾ ವೈಭವವಾಗಿ ಗಮನಸೆಳೆಯಿತು. ಮಂಗಳೂರು ರಥಬೀದಿಯ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದಲ್ಲಿ ಅಭೂತಪೂರ್ವ ಉತ್ಸವ: ಭಕ್ತ ಸಾಗರದ ನಡುವೆ 'ಬ್ರಹ್ಮರಥೋತ್ಸವ' ವೈಭವ.. ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಭಕ್ತಸಾಗರದ ನಡುವೆ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ , ಕನಕಾಭಿಷೇಕ ಗಳು ನಡೆದವು. ಯಜ್ಞ ಮಂಟಪದಲ್ಲಿ ನಡೆದ ಮಹಾ ಪೂರ್ಣಾಹುತಿ ಸಂದರ್ಭದಲ್ಲಿ ಧರ್ಮಿಕ ಪ್ರಮುಖರು ಯತಿಗಳು ಭಾಗಿಯಾದರು. ಸಂಜೆ ಬೆಳ್ಳಿ ಪಲ್ಲಕಿಯಲ್ಲಿ ಶ್ರೀ ದೇವರು ವಿರಾಜಮಾನರಾಗಿ ರಥಾರೋಹಣವು ಅನನ್ಯ ಮಹೋತ್ಸವವಾಗಿ ಆಸ್ತಿಕರ ಗಮನಕೇಂದ್ರೀಕರಿಸಿತು. ಭಕ್ತರು ರಥ ಎಳೆದು ಪುನೀತರಾದರು. ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಸಿ.ಎ.ಶ್ರೀನಿವಾಸ್ ಕಾಮತ್, ಮಾರೂ...