Monday, September 8

ಆಧ್ಯಾತ್ಮ

ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೈವಿಧ್ಯ
ಮಂಗಳೂರು: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಇದೀಗ ಮತ್ತೊಂದು ಕೈಂಕರ್ಯದಿಂದ ಆಸ್ತಿಕರ ಗಮನಸೆಳೆದಿದೆ. 'ಚೆಂಡು ಉತ್ಸವದ ನಾಡು' ಎಂದೇ ಗುರುತಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶತಮಾನದ ನಂತರ ಶತಚಂಡಿಕಾಯಾಗ ನಡೆಯುತ್ತಿದೆ. ಇದು ನಿಜಕ್ಕೂ ಅಪೂರ್ವ ಹಾಗೂ ಅನನ್ಯ ಕೈಂಕರ್ಯ. ಸುಮಾರು 105 ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ಇಂತಹಾ ಚಂಡಿಕಾ ಯಾಗ ನಡೆದಿತ್ತು. ಲೋಕ ಕಲ್ಯಾಣಾರ್ಥವಾಗಿ ನೆರವೇರುತ್ತಿರುವ ಈ ಶತಚಂಡಿಕಾಯಾಗದಲ್ಲಿ ದೇಶದ ವಿವಿಧೆಡೆಯ ಯತಿಗಳು ಭಾಗಿಯಾಗುತ್ತಿದ್ದಾರೆ. ಚೆಂಡು ಉತ್ಸವ ಸಂದರ್ಭದ ಜನೋತ್ಸಾಹಕ್ಕೆ ಈ ಶತಚಂಡಿಕಾಯಾಗದ ಸಡಗರ ಸಾಕ್ಷಿಯಾಗುತ್ತಿರುವುದು ವಿಶೇಷ. ಮಾರ್ಚ್ 5ರ ಬೆಳಿಗ್ಗೆ 6 ರಿಂದ ಶತಚಂಡಿಕಾಯಾಗ ಆರಂಭವಾಗಲಿದ್ದು, ಮಧ್ಯಾಹ್ನ ಗಂಟೆ 12ಕ್ಕೆ ಪೂರ್ಣಾಹುತಿ ನೆರವೇರಲಿದೆ. ಮರುದಿನ, ಮಾರ್ಚ್ 6, ಗುರುವಾರ 'ದೊಡ್ಡ ರಂಗಪೂಜೆ' ಉತ್ಸವ ನೆರವೇರಲಿದೆ. ಮಾರ್ಚ್ 1 ರಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವೈಧಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು ವಿವಿಧ ಕೈಂಕರ್ಯಗಳು ನೆರವೇರುತ್ತಿವೆ. ಮಾರ್ಚ್ 5 ರಂದು ಬುಧವಾರ ಶತಚಂಡಿಕಾಯಾಗ ...
45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಲಕ್ನೋ: ಇಡೀ ಜಗತ್ತಿನ ಗಮನಸೆಳೆದಿದ್ದ ಪ್ರಯಾಗರಾಜ್ ಮಹಾ ಕುಂಭ 2025 ಪರಿಪೂರ್ಣವಾಗಿದೆ. ಈ ಕೈಂಕರ್ಯದ ಯಶಸ್ವಿಗೆ ಕಾರಣರಾದವರನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ಮರಿಸಿದ್ದಾರೆ. ಮಹಾಕುಂಭ ಯಶಸ್ವಿ ಪೂರ್ಣಗೊಳಿಸುವಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವೇ ಕಾರಣ ಎಂದಿರುವ ಅವರು ಈ ಭವ್ಯ ಧಾರ್ಮಿಕ ಸಭೆಯನ್ನು "ಏಕತೆ, ಸಮಾನತೆ ಮತ್ತು ಸಾಮರಸ್ಯದ ಮಹಾಯಜ್ಞ" ಎಂದು ಕರೆದಿದ್ದಾರೆ. ಪ್ರಧಾನಿ ಮೋದಿಯವರ ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿರುವ ಸಿಎಂ ಯೋಗಿ, ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಯಶಸ್ವಿ ಮಾರ್ಗದರ್ಶನದ ಪರಿಣಾಮವಾಗಿ 'ಏಕತೆ, ಸಮಾನತೆ, ಸಾಮರಸ್ಯದ ಮಹಾಯಜ್ಞ' - ಮಹಾ ಕುಂಭ 2025, ಪ್ರಯಾಗರಾಜ್ ಮುಕ್ತಾಯಗೊಂಡಿದೆ, ಭವ್ಯತೆ ಮತ್ತು ದೈವತ್ವದ ಜೊತೆಗೆ ಭದ್ರತೆ, ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಕಳೆದ 45 ಪವಿತ್ರ ದಿನಗಳಲ್ಲಿ, ಪೂಜ್ಯ ಸಂತರು ಮತ್ತು ಋಷಿಗಳು ಸೇರಿದಂತೆ 66 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ತ್ರಿವೇಣಿಯಲ್ಲಿ ನಂಬಿಕೆಯ ಸ್ನಾನ ಮಾಡುವ ಮೂಲಕ ಆಶೀರ್...
ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕೊಯಮತ್ತೂರು: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು. https://www.youtube.com/watch?v=jwcuwMBBKIw&ab_channel=SoundsofIsha ಶಿವಸ್ಮರಣೆಯ ಮಹಾ ಹಬ್ಬದಲ್ಲಿ ದೇಶದ ವಿವಿಧೆಡೆಯ ಆಸ್ತಿಕರು ಆಗಮಿಸಿದ್ದರು. ಸಾವಿರಾರು ಶಿವಭಕ್ತರ ಸಮ್ಮುಖದಲ್ಲಿ ನಡೆದ ಭಕ್ತಿ ವೈಭವ ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾಯಿತು. https://www.youtube.com/watch?v=N8CcJj5y6kA&ab_channel=SoundsofIsha ಈ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು. https://www.youtube.com/watch?v=zA7Fozc0VCw&ab_channel=SoundsofIsha  ...
ಪ್ರಯಾಗರಾಜ್‌ ಮಹಾ ಕುಂಭದಲ್ಲಿ ಕತ್ರಿನಾ ಕೈಫ್, ರವೀನಾ ಟಂಡನ್

ಪ್ರಯಾಗರಾಜ್‌ ಮಹಾ ಕುಂಭದಲ್ಲಿ ಕತ್ರಿನಾ ಕೈಫ್, ರವೀನಾ ಟಂಡನ್

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ,: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಭಾಗವಹಿಸುತ್ತಿರುವ ಸೆಲೆಬ್ರಿಟಿಗಳ ಸಾಲಿಗೆ ಕತ್ರಿನಾ ಕೈಫ್ ಮತ್ತು ರವೀನಾ ಟಂಡನ್ ಸೇರಿಕೊಂಡರು. ಧಾರ್ಮಿಕ ಭೇಟಿಯ ಸಮಯದಲ್ಲಿ ಈ ಇಬ್ಬರು 'ಗಂಗಾ ಆರತಿ'ಯಲ್ಲಿ ಭಾಗವಹಿಸಿ ಗಮನಸೆಳೆದಿದ್ದಾರೆ. ಪರಮಾರ್ಥ ನಿಕೇತನ ಆಶ್ರಮದ ಅಧ್ಯಕ್ಷ ಸ್ವಾಮಿ ಚಿದಾನಂದ್ ಸರಸ್ವತಿ ಮತ್ತು ಸಾಧ್ವಿ ಭಗವತಿ ಸರಸ್ವತಿ, ನಟ ಅಭಿಷೇಕ್ ಬ್ಯಾನರ್ಜಿ ಮತ್ತು ರವೀನಾ ಟಂಡನ್ ಅವರ ಪುತ್ರಿ ರಾಶಾ ಥಡಾನಿ 'ಗಂಗಾ ಆರತಿ'ಯಲ್ಲಿ ಸೋಮವಾರ ಭಾಗಿಯಾದರು. ಕತ್ರಿನಾ ಕೈಫ್ ತನ್ನ ಅತ್ತೆ ವೀಣಾ ಕೌಶಲ್ ಅವರೊಂದಿಗೆ ಮಹಾ ಕುಂಭಕ್ಕೆ ಭೇಟಿ ನೀಡಿದರು. ದಿವಾ ಪೌಡರ್ ಪಿಂಕ್ ಜನಾಂಗೀಯ ಉಡುಪನ್ನು ಧರಿಸಿದ್ದರು. ಸ್ವಾಮಿ ಚಿದಾನಂದ್ ಸರಸ್ವತಿ ಮತ್ತು ಸಾಧ್ವಿ ಭಗವತಿ ಸರಸ್ವತಿ ಅವರ ಮಾರ್ಗದರ್ಶನ ಪಡೆದಿದ್ದಾರೆ....
ಮಹಾ ಕುಂಭಮೇಳ: ಈವರೆಗೂ 60 ಕೋಟಿ ಮಂದಿ ಪುಣ್ಯಸ್ನಾನ

ಮಹಾ ಕುಂಭಮೇಳ: ಈವರೆಗೂ 60 ಕೋಟಿ ಮಂದಿ ಪುಣ್ಯಸ್ನಾನ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಲಖನೌ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಈವರೆಗೆ ಸುಮಾರು 60 ಕೋಟಿ ಮಂದಿ ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತಂತೆ ಶನಿವಾರ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಸರ್ಕಾರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದುತಿಳಿಸಿದೆ. ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿ ವರೆಗೂ ನಡೆಯಲಿದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳೆ ಕಣ್ತುಂಬಿಕೊಳ್ಳಲು ಪ್ರಯಾಗರಾಜ್​ ಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಇದೇ ರೀತಿಯ ಸ್ಥಿತಿ ಇದ್ದರೆ ಅಂತಿಮ 'ಅಮೃತ ಸ್ನಾನ'ದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ....
ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ

ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭಕ್ತಿಯ ಆಸರೆಯಾಗಿರುವ ದೇವಾಲಯಗಳಲ್ಲಿ ಇದೀಗ ಎಂದಿಲ್ಲದ ಸಡಗರ. ದೇಗುಲಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆಯಿಂದಾಗಿ ಮುಜರಾಯಿ ಕ್ಷೇತ್ರದಲ್ಲಿ ದುಡಿಯುವ ಮಂದಿಯಲ್ಲಿ ಸಂತಸ ಆವರಿಸಿದೆ. ಮುಜರಾಯಿ ಇಲಾಖೆಯಿಂದ ಮತ್ತೊಂದು ಐತಿಹಾಸಿಕ ಆದೇಶ ವಾಗಿದ್ದು, ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ವೇತನ‌ ಪಾವತಿಗೆ ಕರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜರಾಯಿ ಇಲಾಖೆ ಇತಿಹಾಸದಲ್ಲೇ ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಪ್ರತಿ ತಿಂಗಳು ರೂ 2 ಕೋಟಿಯಿಂದ 3 ಕೋಟಿಯವರಿಗೂ ಉಳಿತಾಯವಾಗಲಿದೆ. ಅರ್ಚಕರ ಸಂಘವು 2020 ರಲ್ಲಿ ರಾಜ್ಯದ ಎ ಮತ್ತು ಬಿ ವರ್ಗಗಳ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ದೇವಾಲಯಗಳ ಹಣದಿಂದ ಕಾಯ್ದೆ ನಿಯಮಗಳ ಪ್ರಕಾರ ವೇತನ ಇತರೆ ಸೌಲಭ್ಯಗಳನ್ನು ಕೊಡುವಂತಿಲ್ಲ. ಸರ್ಕಾರದ ಸಂಚಿತ ನಿಧಿಯಿಂದ ನೀಡಬೇಕೆಂದು ಇರುತ್ತದೆ. ಆದರೆ ಹಿಂದಿನ ಅದಿಕಾರಿಗಳ ಲೋಪದಿಂದಾಗಿ ಕೋಟ್ಯಾಂತರ ರೂಪಾಯಿ ಹಣ...
ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ ವರ್ಲ್ಡ್‌ ಟ್ರೇಡ್‌ ಸೆಂಟರ್‌ ಕಟ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3  ಸದಸ್ಯರನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. 15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ‌ ಕೆಳಕಂಡ ತೀರ್ಮಾನಗಳನ್ನು‌ ತೆಗೆದುಕೊಳ್ಳಲಾಗಿದೆ. ಮುಜರಾಯಿ ಇಲಾಖೆ ಆಯುಕ್ತರು ಈ ಸಮಿತಿಗೆ...
ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ

ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನವರಿ 13ರಂದು ಪ್ರಾರಂಭವಾಗಿರುವ ಮಹಾಕುಂಭ ಮೇಳವು ಫೆಬ್ರವರಿ 26ರವರೆಗೆ ನಡೆಯಲಿದೆ. ಹಿಂದೂಗಳು ಪವಿತ್ರವೆಂದು ಪರಿಗಣಿಸುವ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದ ದಡದಲ್ಲಿ ಮಹಾಕುಂಭ ನಡೆಯುತ್ತಿದೆ.ಈ ಮಹಾಕುಂಭಮೇಳದ ಸಂದರ್ಭದಲ್ಲಿ ಈವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದ್ದಾರೆ....
ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ

ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಅಯೋಧ್ಯೆ: ಅಯೋಧ್ಯೆಯಲ್ಲಿರುವ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ. ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ..  Ayodhya Ram Temple’s chief priest Acharya Satyendra Das passes away ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅನಂತರ ಅವರ ಆರೋಗ್ಯ ಕ್ಷೀಣಿಸಿತ್ತೆನ್ನಲಾಗಿದೆ. 85 ವರ್ಷ ವಯಸ್ಸಿನ ಆಚಾರ್ಯ ಸತ್ಯೇಂದ್ರ ದಾಸ್ ಅವರು, 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು. ಭವ್ಯ ರಾಮ ಮಂದಿರ ನಿರ್ಮಾಣ ನಂತರವೂ ಶ್ರೀರಾಮನ ಕೈಂಕರ್ಯದಲ್ಲಿ ಮುಂಚೂಣಿಯಲ್ಲಿದ್ದರು.‌...