Thursday, August 6

ರಾಜ್ಯ

ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಭಾರತದ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಆರಂಭವಾದ ಎರಡು ದಿನಗಳ ಬ್ರಿಕ್ಸ್ ರಾಷ್ಟ್ರೀಯ ಮಾನದಂಡ ಸಂಸ್ಥೆಗಳ (NSB) ಸಭೆಯಲ್ಲಿ, ಪ್ರಮಾಣೀಕರಣ ಕ್ಷೇತ್ರದಲ್ಲಿ ಸಹಕಾರ ವೃದ್ಧಿಗೆ ಸಂಬಂಧಿಸಿದ ತಿಳುವಳಿಕೆ ಒಪ್ಪಂದ (MoU) ಕುರಿತು ಸದಸ್ಯ ರಾಷ್ಟ್ರಗಳು ಒಮ್ಮತಕ್ಕೆ ಬಂದಿವೆ. ಭಾರತೀಯ ಮಾನದಂಡಗಳ ಬ್ಯೂರೋ (BIS) ಆಯೋಜಿಸಿರುವ ಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರೀಯ ಮಾನದಂಡ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದು, ವ್ಯಾಪಾರಕ್ಕೆ ತಾಂತ್ರಿಕ ಅಡೆತಡೆಗಳನ್ನು ಕಡಿಮೆ ಮಾಡುವುದು, ಗುಣಮಟ್ಟದ ಮೂಲಸೌಕರ್ಯ ಬಲಪಡಿಸುವುದು ಹಾಗೂ ಸಮನ್ವಯಿತ ಮಾನದಂಡಗಳನ್ನು ರೂಪಿಸುವ ಕುರಿತು ಚರ್ಚೆ ನಡೆಸಿದರು. ಸಭೆಯನ್ನು ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಭಿವೃದ್ಧಿಶೀಲ ರಾಷ್ಟ್ರಗಳ ಅಗತ್ಯಗಳನ್ನು ಪ್ರತಿಬಿಂಬಿಸುವ ಪಾರದರ್ಶಕ ಹಾಗೂ ಒಮ್ಮತದ ಆಧಾರಿತ ಜಾಗತಿಕ ಮಾನದಂಡಗಳಿಗೆ ಭಾರತ ಬದ್ಧವಾಗಿದೆ ಎಂದು ಹೇಳಿದರು.ಬ್ರಿಕ್ಸ್ ಅಧ್ಯಕ್ಷತೆಯ "ಸ್ಥಿತಿಸ್ಥಾಪಕತೆ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆ" ಧ್ಯೇಯದಡಿ ನಡೆಯುತ್ತಿರುವ ಈ ಸಭೆಯಲ್ಲಿ, ಗುಣಮಟ್ಟದ ಮೂಲಸೌಕರ್ಯ ಬಲಪಡಿಸುವುದು, ಗ...
ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್‌ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ

ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್‌ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ

ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಸಿದ ಸ್ವತಂತ್ರ ಮೊಬೈಲ್ ನೆಟ್‌ವರ್ಕ್ ಗುಣಮಟ್ಟ ಪರೀಕ್ಷೆಯ ವರದಿಯನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಪ್ರಕಟಿಸಿದ್ದು, ವಿವಿಧ ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ. ಮೇ 18ರಿಂದ 21ರವರೆಗೆ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಭಟ್ಕಳ, ದಾಂಡೇಲಿ, ಹಳಿಯಾಳ, ಯಲ್ಲಾಪುರ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಏರ್‌ಟೆಲ್, ಬಿಎಸ್‌ಎನ್‌ಎಲ್, ರಿಲಯನ್ಸ್ ಜಿಯೋ ಹಾಗೂ ವೊಡಾಫೋನ್ ಐಡಿಯಾ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಡೌನ್‌ಲೋಡ್ ವೇಗದಲ್ಲಿ ರಿಲಯನ್ಸ್ ಜಿಯೋ ಸರಾಸರಿ 229.12 Mbps ದಾಖಲಿಸಿ ಮೊದಲ ಸ್ಥಾನ ಪಡೆದಿದೆ. ಬಳಿಕ ಏರ್‌ಟೆಲ್ 109.02 Mbps, ವೊಡಾಫೋನ್ ಐಡಿಯಾ 25.04 Mbps ಹಾಗೂ ಬಿಎಸ್‌ಎನ್‌ಎಲ್ 5.73 Mbps ವೇಗ ದಾಖಲಿಸಿವೆ.ಅಪ್‌ಲೋಡ್ ವೇಗದಲ್ಲಿ ಏರ್‌ಟೆಲ್ 26.02 Mbps ದಾಖಲಿಸಿ ಅಗ್ರಸ್ಥಾನ ಪಡೆದಿದ್ದು, ಜಿಯೋ 18.19 Mbps, ವೊಡಾಫೋನ್ ಐಡಿಯಾ 10.78 Mbps ಹಾಗೂ ಬಿಎಸ್‌ಎನ್‌ಎಲ್ 2.07 Mbps ವೇಗ ದಾಖಲಿಸಿವೆ. ಕಾಲ್ ಡ್ರಾಪ್ ಪರೀಕ್ಷೆಯಲ್ಲಿ ಏರ್‌ಟೆಲ್‌ಗೆ 14, ...
ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 5.20 ಕೋಟಿ ರೂ. ಮೌಲ್ಯದ 5 ಕೆಜಿಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಡ್ರಗ್ಸ್ ಪೆಡಲರುಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಎಂಡಿಎಂಎ ಜೊತೆ ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 25 ರಂದು ಅಣ್ಣಪ್ಪ ಸ್ವಾಮಿ ಎಂಬ ವ್ಯಕ್ತಿಯನ್ನು ಬಂಧಿಸಿ, ಆತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಆತನ ವಿಚಾರಣೆಯ ಸಮಯದಲ್ಲಿ, ಆತನಿಗೆ ಮಾದಕವಸ್ತು ಪೂರೈಕೆದಾರರ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಮತ್ತೆ ಇಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಖಚಿತ ಮಾಹಿತಿ ಆಧರಿಸಿ ಬೆಳ್ತಂಗಡಿ ತಾಲೂಕಿನ ಇಂಡಬೆಟ್ಟು ಗ್ರಾಮದ ಮುಹಮ್ಮದ್ ಅಲ್ಫಾಝ್ (28 ವರ್ಷ) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕನಂದ ನಗರದ ಮುಹಮ್ಮದ್ ಮುಸ್ತಫ (28 ವರ್ಷ) ಎಂಬಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ....
‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದ ಬಿಜೆಪಿ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚಿನ ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಖರ್ಗೆ, "ಕೈದಿಗಳ ಪರಾರಿ ಪ್ರಕರಣವನ್ನು 'ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ' ಸಂಭ್ರಮಿಸುತ್ತಾ ನನ್ನನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರು ಮೊದಲು ತಮ್ಮ ಆಡಳಿತದ ವೈಫಲ್ಯವನ್ನು ಆತ್ಮಾವಲೋಕನ ಮಾಡಿಕೊಳ್ಳಲಿ" ಎಂದು ಹೇಳಿದ್ದಾರೆ. 2010ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ ಒಂದೇ ಬಾರಿ ಎಂಟು ಕೈದಿಗಳು ಪರಾರಿಯಾಗಿದ್ದರು. ಪರಾರಿಯಾದವರಲ್ಲಿ ಇಬ್ಬರನ್ನು 14 ವರ್ಷಗಳ ಬಳಿಕವೇ ಬಂಧಿಸಲು ಸಾಧ್ಯವಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ.ಬಿಜೆಪಿ ಆಡಳಿತದಲ್ಲಿ 2010ರಲ್ಲಿ 26, 2011ರಲ್ಲಿ 18, 2012ರಲ್ಲಿ 17, 2020ರಲ್ಲಿ 11, 2021ರಲ್ಲಿ 4 ಹಾಗೂ 2022ರಲ್ಲಿ 10 ಕೈದಿಗಳು ಪರಾರಿಯಾಗಿದ್ದರು ಎಂದು ಅಂಕಿ-ಅಂಶಗಳನ್ನು ಪ್ರಸ್ತಾಪಿ...
‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡದ ಕಾಂಗ್ರೆಸ್‌ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್‌ ಕೂಡ ಯೋಜನೆಯನ್ನು ವಿರೋಧ ಮಾಡಿತ್ತು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್‌ ವಿರುದ್ಧ ರೈತರು ಉಗ್ರ ಹೋರಾಟ ಮಾಡುತ್ತಿದ್ದರೂ ಸರ್ಕಾರ ಪೊಲೀಸರನ್ನು ಕಳಿಸಿ ಹಲ್ಲೆ ಮಾಡಿದೆ. ಕೊಲೆ, ಬೆದರಿಕೆ ಎಂಬುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗ ಇದಕ್ಕಾಗಿ ಸದನ ಸಮಿತಿ ನೇಮಿಸಿರುವುದು ಹಾಸ್ಯಾಸ್ಪದವಾಗಿದೆ. ರೈತರು ಜಮೀನು ಕೊಡುವುದಿಲ್ಲ ಎಂದಮೇಲೂ ಸದನ ಸಮಿತಿ ಅಗತ್ಯವಿರಲಿಲ್ಲ. ಆದರೆ ಅಧಿವೇಶನ ನಡೆಯಲಿರುವುದರಿಂದ, ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಈ ಹಿಂದೆ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರೇ ಹೊರತು, ಆದೇಶ ಮಾಡಿರಲಿಲ್ಲ. ಅವರು ಪ್ರೊಸೀಡಿಂಗ್ಸ್‌ ಮಾತ್ರ ಮಾ...
ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, "2010ರಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿ ಈಗಿನ ವೈಫಲ್ಯವನ್ನು ಸಮರ್ಥಿಸಿಕೊಳ್ಳಬೇಡಿ. ನಿಮ್ಮ ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಹೇಳಬೇಡಿ" ಎಂದು ಟೀಕಿಸಿದ್ದಾರೆ. "ನಿಮಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಲು ಸಮಯ ಇದೆ. ಆದರೆ ಜೈಲು ಭದ್ರತೆ ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡಲು ಸಮಯ ಇಲ್ಲವೇ?" ಎಂದು ವ್ಯಂಗ್ಯವಾಡಿದ್ದಾರೆ.ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೈದಿಗಳು ಜೈಲಿನಿಂದ ಪರಾರಿಯಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿರುವ ಅವರು, "ಮಹತ್ವದ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಅವರ ಯೋಗ್ಯತೆಯನ್ನು ತೋರಿಸುತ್ತದೆ" ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಆಡಳಿತದಲ್ಲಿ ಜ...
ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

ಪ್ರಮುಖ ಸುದ್ದಿ, ರಾಜ್ಯ
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಯೋಜನೆಗಾಗಿ ಬಿಡದಿ ಹೋಬಳಿಯ ಮೂರು ಗ್ರಾಮಗಳ ಒಟ್ಟು 2,550 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಆದೇಶಿಸಿದೆ. ಅಧಿಸೂಚನೆಯ ಪ್ರಕಾರ ಕೆಜಿ ಗೊಲ್ಲರಪಾಳ್ಯದಲ್ಲಿ 315 ಎಕರೆ, ಬನ್ನಿಗಿರಿ ಗ್ರಾಮದಲ್ಲಿ 775 ಎಕರೆ 6 ಗುಂಟೆ ಹಾಗೂ ಅರಳಾಳುಸಂದ್ರದಲ್ಲಿ 1,460 ಎಕರೆ 21 ಗುಂಟೆ ಭೂಮಿ ಸ್ವಾಧೀನಕ್ಕೆ ಒಳಪಡಲಿದೆ. ಈ ನಡುವೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ಬಿಡದಿ ಟೌನ್‌ಶಿಪ್ ನನ್ನ ಕನಸಿನ ಯೋಜನೆಯಲ್ಲ. ಈ ಯೋಜನೆಗೆ ನಾನು ಪಿತಾಮಹನಾಗಲು ಬಯಸುವುದಿಲ್ಲ. ಯಾರ ಆಸ್ತಿಯನ್ನೂ ಬಲವಂತವಾಗಿ ತೆಗೆದುಕೊಳ್ಳುವುದಿಲ್ಲ. ರೈತರು ಸ್ವಇಚ್ಛೆಯಿಂದ ಭೂಮಿ ನೀಡಿದರೆ ಮಾತ್ರ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ಜಮೀನು ನೀಡುವಂತೆ ಯಾರ ಮೇಲೂ ಒತ್ತಡ ಹೇರಲ್ಲ" ಎಂದು ಸ್ಪಷ್ಟಪಡಿಸಿದರು.ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಈ ಹಿಂದೆ ಕೂಡ ಭೂಸ್ವಾಧೀನ ನಡೆದಿದ್ದು, ಬಿಡದಿ ಟೌನ್‌ಶಿಪ್ ಯೋಜನೆಯ ಮೂಲ ರೂಪುರೇಷೆಗಳು ಹಿಂ...
ಬಡವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಕ್ರಮ ವ್ಯವಹಾರ; ಸಿಬಿಐ, ಇ.ಡಿ ತನಿಖೆಗೆ ಸಿ.ಟಿ.ರವಿ ಆಗ್ರಹ

ಬಡವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಕ್ರಮ ವ್ಯವಹಾರ; ಸಿಬಿಐ, ಇ.ಡಿ ತನಿಖೆಗೆ ಸಿ.ಟಿ.ರವಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಚಿಕ್ಕಮಗಳೂರು, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಬಡಜನರ ಹೆಸರಲ್ಲಿ ನಕಲಿ ಖಾತೆಗಳನ್ನು ತೆರೆದು ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಪ್ರಕರಣವನ್ನು ಸಿಬಿಐ ಹಾಗೂ ಇ.ಡಿ ತನಿಖೆಗೆ ವಹಿಸಲು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದ್ದಾರೆ. ಮಾನ್ಯ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಡಜನರ ಆಧಾರ್ ಕಾರ್ಡ್ ಪಡೆದು ಅವರ ಹೆಸರಲ್ಲಿ ಹೊಸ ಸಿಮ್ ಖರೀದಿಸಿ, ಜನರಿಗೆ ಯಾವುದೇ ದಾಖಲೆ ನೀಡದೆ ಬ್ಯಾಂಕ್ ಅಧಿಕಾರಿಗಳ ಜೊತೆ ಶಾಮೀಲಾಗಿ ಅವರ ಹೆಸರಲ್ಲಿ ಕೋಟ್ಯಂತರ ರೂ. ವ್ಯವಹಾರ ಮಾಡಿದ್ದರ ಬಗ್ಗೆ ದೂರುಗಳು ಹುಬ್ಬಳ್ಳಿ, ಶಿವಮೊಗ್ಗದಲ್ಲಿ ದಾಖಲಾಗಿವೆ. ̇ರೂ. 87 ಕೋಟಿ ವಹಿವಾಟು ನಡೆದಿರುವುದು ದೃಢಪಡಿಸಲಾಗಿದೆ ಎಂದರು.ಈ ಪ್ರಕರಣದಲ್ಲಿ ಮೂವರ ಬಂಧನವಾಗಿದೆ. ಚಿಕ್ಕಮಗಳೂರಿನಲ್ಲಿ ಪೌರ ಕಾರ್ಮಿಕರು, ಹಮಾಲರು, ಪೇಂಟರ್‍ಗಳು ಹಾಗೂ ಕೂಲಿಯಾಳುಗಳ ಹೆಸರಲ್ಲಿ ಖಾತೆ ತೆರೆದು ಅವರಿಗೆ ತಿಳಿಯದಂತೆ ಲಕ್ಷಾಂತರ ರೂ. ವ್ಯವಹಾರ ಮಾಡಿದ್ದಾರೆ. ಆ ...
ಶಾಶ್ವತ ನಿವಾಸ ಪ್ರಮಾಣಪತ್ರ; ಸರ್ಕಾರದ ನಿರ್ಧಾರ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಶಾಶ್ವತ ನಿವಾಸ ಪ್ರಮಾಣಪತ್ರ; ಸರ್ಕಾರದ ನಿರ್ಧಾರ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ (PRC) ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತಕ್ಷಣ ಹಿಂಪಡೆಯುವಂತೆ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಿ.ಟಿ. ರವಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ನಿಯೋಗದಲ್ಲಿ ಭಾಗವಹಿಸಿದ್ದರು. ರಾಜ್ಯ ಸರ್ಕಾರದ ಈ ನಿರ್ಧಾರವು ಅಕ್ರಮ ಬಾಂಗ್ಲಾದೇಶೀಯರನ್ನು ಶಾಶ್ವತ ನಿವಾಸಿಗಳನ್ನಾಗಿ ಮಾಡಿ ಮತದಾರರನ್ನಾಗಿಸುವ ಹುನ್ನಾರವಾಗಿದೆ ಎಂದು ಬಿಜೆಪಿ ಆರೋಪಿಸಿದೆ.ರಾಜ್ಯದಲ್ಲಿ 20ರಿಂದ 30 ಲಕ್ಷ ಅಕ್ರಮ ಬಾಂಗ್ಲಾದೇಶೀಯರಿರುವ ಮಾಹಿತಿ ಇದ್ದು, ಅವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರೇಷನ್ ಕಾರ್ಡ್, ಆರೋಗ್ಯ ಕಾರ್ಡ್, ಮನೆ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಸಿಗಲಿದೆ ಎಂದು ನಿಯೋಗ ರಾಜ್ಯಪಾಲರ ಗಮನಕ್ಕೆ ತಂದಿದೆ. ಇದರಿಂದ ಕಾಂಗ್ರೆಸ್‌ಗೆ ಮತ ಹಾಕುವವರನ್ನು ಶಾಶ್ವತ ನಾಗರಿಕರನ್ನಾಗಿ ಮಾಡುವ ಪ್ರಯತ್ನ ನಡೆಯುತ...
‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ

‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರವು 'ಶಾಶ್ವತ ನಿವಾಸ ಪ್ರಮಾಣಪತ್ರ' (PRC) ನೀಡುವ ಅಧಿಕಾರವನ್ನು ಸ್ವತಃ ಪಡೆದುಕೊಳ್ಳಲು ಮುಂದಾಗಿರುವುದು ಕಾನೂನುಬಾಹಿರ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೂ ಧಕ್ಕೆ ತರುವ ಅಪಾಯಕಾರಿ ನಡೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬಿಜೆಪಿ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಈ ಸಂಬಂಧ ಅಧಿಸೂಚನೆ ಸಿದ್ಧಪಡಿಸಿದರೆ ಅದಕ್ಕೆ ಅಂಕಿತ ಹಾಕದಂತೆ ರಾಜ್ಯಪಾಲರನ್ನು ಕೋರಿದ್ದೇವೆ ಎಂದು ಹೇಳಿದರು. ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪ್ರತಿಕ್ರಿಯಿಸಿರುವ ಅಶೋಕ್, ಪೌರತ್ವ, ವಿದೇಶಿಯರ ಗುರುತಿಸುವಿಕೆ ಹಾಗೂ ವಲಸೆ ಸಂಬಂಧಿತ ವಿಷಯಗಳು ಸಂವಿಧಾನದ ಪ್ರಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಮುಂದಾಗಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ದೇಶಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ನಡೆಯುತ್ತಿರುವ ಸಂದರ್ಭದಲ್ಲಿ ಇಂತಹ ನಿಯಮ ಜಾರಿ...