
ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಆರ್ ಸುದರ್ಶನ್ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ .ಎಲ್ ಶಂಕರ್, ಎಲ್.ಹನುಮಂತಯ್ಯ, ಬಿ.ಆರ್.ಪಾಟೀಲ್ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿ.ಆರ್ ಸುದರ್ಶನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇದರ ಜತೆಗೆ ರಾಜ್ಯಪಾಲರು ನೋಟೀಸ್ ನೀಡುವ ಮೂಲಕ ಆತುರದ ನಿರ್ಧಾರಕ್ಕೆ ಬಂದಿದ್ದು, ಅವರು ಆತುರ ನಿರ್ಧಾರ ಮಾಡಬಾರದು ಎಂದು ಮನವಿ ಮಾಡುತ್ತೇವೆ ಎಂದರು.
ಸಿದ್ದರಾಮಯ್ಯ ವಿರುದ್ಧದ ತನಿಖೆ ಬಗ್ಗೆ ಯಾರು ಮಾನವಿ ಮಾಡುತ್ತಿದ್ದಾರೆ. ಅವರ ಹಿನ್ನೆಲೆಯನ್ನು ರಾಜ್ಯಪಾಲರು ಪರಿಶೀಲ...