Thursday, January 29

ರಾಜ್ಯ

ಜಿಬಿಎ ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ

ಜಿಬಿಎ ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು....
ಹೈಕಮಾಂಡ್ ನಿಂದ ಅಭಯ? ಡಿಕೆಶಿ ಉತ್ತರ ಇದು

ಹೈಕಮಾಂಡ್ ನಿಂದ ಅಭಯ? ಡಿಕೆಶಿ ಉತ್ತರ ಇದು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಹೈಕಮಾಂಡ್ ಮುಖಂಡರನ್ನು ಸೌಹಾರ್ದ ಭೇಟಿ ಮಾಡಿದ್ದೇವೆಯೇ ಹೊರತು ನಾಯಕತ್ವ ವಿಚಾರಕ್ಕಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ನೋಡಿದರೆ ನಮ್ಮ ನಾಯಕರು ಕುಶಲೋಪರಿ ವಿಚಾರಿಸುತ್ತಾರೆ ಎಂದರು. "ನಮ್ಮ ನಾಯಕರಿಗೆ ನನ್ನನ್ನು ನೋಡಿದ ತಕ್ಷಣ ಅರ್ಥವಾಗುತ್ತದೆ. ನನ್ನ ಕುಶಲೋಪರಿ ವಿಚಾರಿಸುತ್ತಾರೆ. ಇದು ಸೌಹಾರ್ದಯುತ ಭೇಟಿ, ವೈಯಕ್ತಿಕ ಭೇಟಿ ಅಲ್ಲ. ಇದರ ಹೊರತಾಗಿ ಬೇರೆ ವಿಚಾರಗಳನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ. ಅದರ ಅವಶ್ಯಕತೆ ಇಲ್ಲ" ಎಂದರು. ಬಹಳ ವರ್ಷಗಳ ನಂತರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, "ಇದು ಸುಳ್ಳು, ನಾವು ಭೇಟಿಯಾಗಿದ್ದಾಗ ಹೇಳಿಕೊಳ್ಳುವುದಿಲ್ಲ" ಎಂದರು. ಈ ಬಾರಿಯ ಭೇಟಿಯಲ್ಲಿ ನಿಮಗೆ ಅಭಯ ಸಿಕ್ಕಿದೆಯಂತೆ, ಸಮಸ್ಯೆ ಬಗೆಹರಿಯಲಿದೆ ಎಂದು ಕೇಳಿದಾಗ, "ನಿಮ್ಮ ಅರ್ಥ ಏನಿದೆಯೋ, ನನಗೆ ಯಾವ ಸಮಸ್ಯೆ ಇಲ್ಲ. ನೀವು (ಮಾಧ್ಯಮಗಳು) ಸಮಸ್ಯೆ ಸೃಷ್ಟಿಸುತ್ತಿದ್ದೀರಿ" ಎಂದು ಹೇಳಿದರು....
ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ವಿಧಿವಶ

ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ವಿಧಿವಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. 92 ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ....

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನಿಸಲಾಗಿದೆ. ಈ ಕುರಿತಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ಭರವಸೆಯ ಹೆಜ್ಜೆಯನ್ನು ಇರಿಸಿದೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳ ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ದಪಡಿಸಲು ಟೆಂಡರ್ ಕರೆಯುವ ಮೂಲಕ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ಕ್ರಮವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ನಡೆಸಿದ ಪ್ರಾಥಮಿಕ ಪರಿಶೀಲನೆಯ ನಂತರ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಅವರು, ಪ್ರಸ್ತಾವಿತ ಗ್ರೀನ್‌ಫೀಲ್ಡ್ (ಹೊಸ) ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ....
ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷ...
ಜನವರಿ 6 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್..!?

ಜನವರಿ 6 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್..!?

Focus, ಬೆಂಗಳೂರು, ರಾಜ್ಯ
ರಾಮನಗರ: ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಡಿಕೆಶಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಅವರು ಜನವರಿ 6 ರಂದು ಮುಖ್ಯಮಂತ್ರಿಯಾಗಲಿದ್ದಾರೆ ಎಂದರು. ಡಿಕೆಶಿಗೆ ಅವಕಾಶ ಸಿಗಬೇಕೆಂಬ ಆಗ್ರಹಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜನವರಿ 6ರಂದು ಸಿಎಂ ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದರು. ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ....
ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌, ಅಪಾರ್ಟ್‌ಮೆಂಟ್‌ ಮಾಲೀಕರ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ, ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಅವರು ಸಲಹೆಗಳನ್ನು ಪಡೆದರು. ಅಪಾರ್ಟ್ಮೆಂಟ್ ನಿವಾಸಿಗಳ ಆಗ್ರಹಗಳನ್ನು ಶೀಘ್ರವೇ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ಸತೀಶ್‌ ಮಲ್ಯ ಗಮನಸೆಳೆದರು. ಸಂವಾದ ಕಾರ್ಯಕ್ರಮ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನ...
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ....
ಧಾರವಾಡ: ಉದ್ಯೋಗಾಕಾಂಕ್ಷಿಗಳನ್ನು ಬಂಧಿಸಿದ ಕ್ರಮಕ್ಕೆ ಎಸ್‌ಯುಸಿಐ(ಸಿ) ಖಂಡನೆ

ಧಾರವಾಡ: ಉದ್ಯೋಗಾಕಾಂಕ್ಷಿಗಳನ್ನು ಬಂಧಿಸಿದ ಕ್ರಮಕ್ಕೆ ಎಸ್‌ಯುಸಿಐ(ಸಿ) ಖಂಡನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಧಾರವಾಡದಲ್ಲಿ ಉದ್ಯೋಗ ಹಕ್ಕೊತ್ತಾಯಗಳಿಗಾಗಿ ನಡೆದಿದ್ದ ಶಾಂತಿಯುತ ಧರಣಿಯನ್ನು ಪೊಲೀಸ್ ಬಂಧನದ ಮೂಲಕ ಹತ್ತಿಕ್ಕಿದ ರಾಜ್ಯ ಸರ್ಕಾರದ ಕ್ರಮವನ್ನು ಎಸ್‌ಯುಸಿಐ (ಕಮ್ಯುನಿಸ್ಟ್) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಪಕ್ಷದ ರಾಜ್ಯ ಸಮಿತಿಯಿಂದ ಬಿಡುಗಡೆಗೊಂಡ ಪತ್ರಿಕಾ ಹೇಳಿಕೆಯಲ್ಲಿ, ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ವಯೋಮಿತಿಯನ್ನು ಐದು ವರ್ಷ ಹೆಚ್ಚಿಸುವುದು, ನೇಮಕಾತಿ ಪರೀಕ್ಷೆಗಳ ಶುಲ್ಕವನ್ನು ಕಡಿತಗೊಳಿಸುವುದು, ಭ್ರಷ್ಟಾಚಾರ ತಡೆಗಟ್ಟುವುದು, ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ ಒದಗಿಸುವಂತೆ ಉದ್ಯೋಗಾಕಾಂಕ್ಷಿಗಳು ಮುನ್ನಡೆಸಿದ್ದ ಹೋರಾಟಕ್ಕೆ ಸರ್ಕಾರ ನೀಡಿದ ಪ್ರತಿಕ್ರಿಯೆ “ಅಮಾನವೀಯ” ಎಂದು ಆರೋಪಿಸಲಾಗಿದೆ. ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನದಂದು (ಡಿಸೆಂಬರ್ 10) ಯುವಕರ ಧ್ವನಿಯನ್ನು ನಿಗ್ರಹಿಸಲು ಸರ್ಕಾರ ಮುಂದಾಗಿರುವುದು ವಿರೋಧಾಭಾಸದ ಉದಾಹರಣೆಯಾಗಿದೆ ಎಂದು ಹೇಳಿಕೆಯು ಟೀಕಿಸಿದೆ. ಉದ್ಯೋಗ ಹಕ್ಕಿಗಾಗಿ ಯುವಕರು ಹಲವಾರು ಬಾರಿ ಮನವಿ ಮತ್ತು ಪ್ರತಿಭಟನೆಗಳ ಮೂಲಕ ಸರ್ಕಾರದ ಗಮನಸೆಳೆಯಲು ಪ್ರಯತ್...
ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್‌ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್‌ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2023 ರ ಪ್ರವಾಹದಲ್ಲಿ ಒಂದೇ ತಿಂಗಳಲ್ಲಿ ಪ್ರವಾಹ ನೀಡಲಾಗಿತ್ತು. ಇಷ್ಟು ವಿಳಂಬ ಮಾಡಿ ಪರಿಹಾರ ನೀಡಬಾರದು ಎಂದರು. ...