
ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯ; ಸಿದ್ದರಾಮಯ್ಯ
ಬೆಂಗಳೂರು: ಮಾನಸಿಕ ಆರೋಗ್ಯದ ಆರೈಕೆ ಜೊತೆಗೆ ರೋಗದ ಕುರಿತಾಗಿ ಸಾಮಾನ್ಯವಾಗಿ ಅಂಟಿಕೊಳ್ಳುವ ಸಮಾಜದ ನಕರಾತ್ಮಕ ದೃಷ್ಟಿಕೋನವನ್ನು ಬಹುತೇಕ ನಿವಾರಿಸುವಲ್ಲಿ ನಿಮ್ಹಾನ್ಸ್ ಯಶಸ್ವಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ರಾಜಧಾನಿ ಬೆಂಗಳೂರಿನ ನಿಮ್ಹಾನ್ಸ್’ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪಾರ್ಶ್ವವಾಯು, ತೀವ್ರತರ ಮೆದುಳು ಕಾಯಿಲೆಗಳು ಮತ್ತು ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ ಎಂದರು.ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವ ರಾಷ್ಟ್ರೀಯ ಮಹತ್ವದ ಈ ಸಂಸ್ಥೆ ಕರ್ನಾಟಕದಲ್ಲಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ. ರಾಜ್ಯದಾದ್ಯಂತ ಮಾನಸಿಕ ಆರೋಗ್ಯ ಸೇವೆಯನ್ನು ಕಲ್ಪಿಸಲು ಸರ್ಕಾರ ನಿಮ್ಹಾನ್ಸ್ ನೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ. ನಿಮ್ಹಾನ್ಸ್‌ನೊಂದಿಗಿನ ಜಂಟಿ ಸಹಭಾಗಿತ್ವದ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ಸೇವೆಯನ್ನು ಖಾತ್ರಿಪಡಿಸಲು ನಮಗೆ ಸಾಧ್ಯವಾಗಿದೆ ನೆಂದು ಸಿದ್ದರಾಮ...








