Wednesday, April 1

ರಾಜ್ಯ

DL, RCಗೂ ಶೀಘ್ರದಲ್ಲೇ ಕ್ಯೂಆರ್ ಕೋಡ್; ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಎಲ್ಲ RTOಗಳಲ್ಲೂ ಇ ಆಡಳಿತಕ್ಕೆ ಕ್ರಮ; ರಾಮಲಿಂಗಾ ರೆಡ್ಡಿ

DL, RCಗೂ ಶೀಘ್ರದಲ್ಲೇ ಕ್ಯೂಆರ್ ಕೋಡ್; ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಎಲ್ಲ RTOಗಳಲ್ಲೂ ಇ ಆಡಳಿತಕ್ಕೆ ಕ್ರಮ; ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಅಮೂಲಾಗ್ರ ಪರಿವರ್ತನೆ ಮಾಡಲಾಗುತ್ತಿದ್ದು, ವ್ಯವಸ್ಥೆ, ಸೌಲಭ್ಯಗಳಲ್ಲೂ ಸುಧಾರಣೆ ತರಲಾಗಿದೆ. ಅದರಂತೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಹಾಗೂ ವಾಹನ ನೋಂದಣಿ (ಆರ್‌ಸಿ) ಕಾರ್ಡ್‌ಗಳಿಗೆ ಹೈಟೆಕ್ ಸ್ಪರ್ಶ ಸಿಗಲಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ DL, RC ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.ಪ್ರಸ್ತುತ ಕೊಡುತ್ತಿರುವ ಆರ್‌ಸಿ ಹಾಗೂ ಡಿಎಲ್‌ಗಳು ಪಾಲಿ ವಿನೈಲ್ ಕ್ಲೋರೈಡ್ (ಪಿವಿಸಿ) ಕಾರ್ಡ್‌ಗಳಾಗಿವೆ. ಹೊಸ ಯೋಜನೆಯಲ್ಲಿ ಪಾಲಿ ಕಾರ್ಬನೇಟ್ ಕಾರ್ಡ್ (ಪಿಸಿಸಿ)ಗಳನ್ನು ವಿತರಣೆ ಮಾಡಲಾಗುತ್ತದೆ. ಇವು ಬ್ಯಾಂಕ್‌ಗಳು ವಿತರಿಸುವ ಕಾರ್ಡ್‌ಗಳ ಮಾದರಿಯಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಕಾರ್ಡ್‌ಗಳಾಗಿರುತ್ತವೆ ಎಂದವರು ಮಾಹಿತಿ ಒದಗಿಸಿದ್ದಾರೆ.ಈವರೆಗಿನ ಕಾರ್ಡ್‌ಗಳಲ್ಲಿ ಹಳೆಯದಾಗುತ್ತಿದ್ದಂತೆ ಕಾರ್ಡ್ ಮೇಲಿರುವ ಅಕ್ಷರಗಳು ಅಳಿಸಿ ಹೋಗುತ್ತಿತ್ತು. ಆದರೆ, ಪಿಸಿಸಿ ಕಾರ್ಡ್‌ಗಳಲ್ಲಿ ಲೇಸರ್ ಇನ್‌ಗ್ರೀ...
ವಕ್ಫ್​ ಆಸ್ತಿ ವಿವಾದ; ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌

ವಕ್ಫ್​ ಆಸ್ತಿ ವಿವಾದ; ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಕ್ಫ್​ ಆಸ್ತಿ ವಿವಾದ ಹಿನ್ನೆಲೆಯಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಾ ಆದೇಶಿಸಿದೆ.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು, ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸಿಎಂ ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಸಿಎಂ ಸೂಚಿಸಿದ್ದಾರೆ. ಇದೀಗ ಈ ಸಂಬಂಧ ಅಧಿಕೃವಾಗಿ ಆದೇಶ ಹೊರಬಿದ್ದಿರುವುದರಿಂದ ನಾವು ನಿರಾಳರಾಗಿದ್ದೇವೆ ಎಂದು ರೈತರು ಹೇಳಿದ್ದಾರೆ....
ಕೋವಿಡ್ ಹಗರಣ ಆರೋಪ; ಆಯೋಗದ ವರದಿಯಿಂದ ಏನೂ ಆಗಲ್ಲ ಎಂದ ಮಾಜಿ ಸಿಎಂ

ಕೋವಿಡ್ ಹಗರಣ ಆರೋಪ; ಆಯೋಗದ ವರದಿಯಿಂದ ಏನೂ ಆಗಲ್ಲ ಎಂದ ಮಾಜಿ ಸಿಎಂ

ಪ್ರಮುಖ ಸುದ್ದಿ, ರಾಜ್ಯ
ಬಳ್ಳಾರಿ: ಕಾನೂನು ಚೌಕಟ್ಟಿನಲ್ಲೇ ಕೋವಿಡ್ ಸೋಂಕು ನಿರ್ವಹಣಾ ಕೆಲಸ ನಡೆದಿದ್ದು, ಯಾವುದೇ ಹಗರಣ ನಡೆದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಕೋವಿಡ್‌ ಅಕ್ರಮ ಕುರಿತ ಆಯೋಗದ ವರದಿ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ವರದಿಯಿಂದ ಏನೂ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಉಪಚುನಾವಣೆ ಹಿನ್ನೆಲೆಯಲ್ಲಿ ಕೋವಿಡ್‌ ಅಕ್ರಮ ಕುರಿತು ಕಾಂಗ್ರೆಸ್ ನಾಯಕರು ಆರೋಪ ಮೈನಾಡುತ್ತಿದ್ದಾರೆ. ದುರುದ್ದೇಶದಿಂದ ನನ್ನ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿದ್ದಾರೆ ಎಂದ ಬಿ.ಎಸ್.ವೈ, ಇದರಿಂದ ಯಾವುದೇ ಪ್ರಯೋಜನವಾಗದು ಎಂದರು....
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯ

ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬೀಳಲಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯವಾಗಲಿದೆ.ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.ಈ ಮೂರೂ ಕ್ಷೇತ್ರಗಳ ಚುನಾವಣಾ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಅಖಾಡವಾಗಿದ್ದು, ನಾಯಕರು ಅಂತಿಮ ಕ್ಷಣದ ಪ್ರಚಾರದಲ್ಲಿ ತೊಡಗಿದ್ದಾರೆ....
‘ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಭಂಡಾರಿ ವಿಶ್ವಾಸ

‘ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಭಂಡಾರಿ ವಿಶ್ವಾಸ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
'ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ, ಸಂಸತ್ತಿನಲ್ಲಿ ಶೋಷಿತರ ಧ್ವನಿಯಾಗಲಿದ್ದಾರೆ'; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಶಾಸಕ ಮಂಜುನಾಥ್ ಭಂಡಾರಿ ವಿಶ್ವಾಸ..ವಯನಾಡ್: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಇಡೀ ದೇಶದ ಗಮನಸೆಳೆದಿದೆ. ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು ಅವರನ್ನು ಗೆಲ್ಲಿಸಲು ಪಕ್ಷದ ನಾಯಕರು ಅವಿರತ ಶ್ರಮ ವಹಿಸಿದ್ದಾರೆ.ಪ್ರಿಯಾಂಕಾ ಗಾಂಧಿ ಗೆಲ್ಲಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರೂ ಶ್ರಮವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಕರಾವಳಿಯ ಶಾಸಕ ಮಂಜುನಾಥ್ ಭಂಡಾರಿ ತಮ್ಮ ಕಾರ್ಯಕರ್ತ ಸೈನ್ಯದೊಂದಿಗೆ ವಯನಾಡಿನ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿ ರಾಹುಲ್ ಸಹೋದರಿಯನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಬಹಳಷ್ಟು ಮಂದಿ ವಯನಾಡಿನಲ್ಲಿದ್ದು ಅವರ ಮತಗಳನ್ನು ಪೇರಿಸಲು ಮಂಜುನಾಥ್ ಭಂಡಾರಿ ಪ್ರಯತ್ನ ನಡೆಸಿದ್ದಾರೆ.ವಯನಾಡ್ ಲೋಕಸಭಾ ...
ಈ ಅವಧಿ ಪೂರ್ಣಗೊಳ್ಳುವ ವರೆಗೂ ನಾನೇ ಮುಖ್ಯಮಂತ್ರಿ’; ಸಿದ್ದರಾಮಯ್ಯ

ಈ ಅವಧಿ ಪೂರ್ಣಗೊಳ್ಳುವ ವರೆಗೂ ನಾನೇ ಮುಖ್ಯಮಂತ್ರಿ’; ಸಿದ್ದರಾಮಯ್ಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆದಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರು 'ಈ ಅವಧಿ ಪೂರ್ಣಗೊಳ್ಳುವ ವರೆಗೂ ನಾನೇ ಮುಖ್ಯಮಂತ್ರಿ' ಎಂದು ಪ್ರತಿಕ್ರಿಯಿಸಿದ್ದಾರೆ.ಸಂಡೂರಿನಲ್ಲಿ ಉಪಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಸುತ್ತೇನೆ ಎಂದರು. ಸಿದ್ದರಾಮಯ್ಯ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ತಿಳಿದಿದೆ. ಹೀಗಾಗಿ ಸಿಬಿಐ, ಇಡಿ, ಐಡಿಯನ್ನು ಬಳಸಿಕೊಂಡು ನನ್ನನ್ನು ಮುಗಿಸಲು ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು.ಇದೇ ವೇಳೆ, ನಾಯಕತ್ವ ಬದಲಾವಣೆ ವಿಚಾರವನ್ನು ಅವರು ತಳ್ಳಿಹಾಕಿದರು. ಉಪ ಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು....
ಕೃಷಿ ಸಾಲ ಸಿಬಿಲ್ ಸ್ಕೋರ್ ಮಾನದಂಡ ನೀತಿ ರದ್ದು ಮಾಡಲು ಚಿಂತನೆ; ಕೇಂದ್ರ ಹಣಕಾಸು ಸಚಿವೆ ಭರವಸೆ

ಕೃಷಿ ಸಾಲ ಸಿಬಿಲ್ ಸ್ಕೋರ್ ಮಾನದಂಡ ನೀತಿ ರದ್ದು ಮಾಡಲು ಚಿಂತನೆ; ಕೇಂದ್ರ ಹಣಕಾಸು ಸಚಿವೆ ಭರವಸೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೃಷಿ ಉತ್ಪನ್ನಗಳ ಮೇಲಿನ ಜಿಎಸ್​ಟಿ ತೆರಿಗೆ ರದ್ದು ಮಾಡಿ. ರೈತ ಉತ್ಪಾದಕ ಸಂಸ್ಥೆಗಳ ವರಮಾನ ತೆರಿಗೆ ಹಾಗೂ ಎಂಐಟಿ ತೆರಿಗೆ ಕಾನೂನು ರದ್ದು ಮಾಡಿ ಎಂದು ರೈತ ಸಂಘಟನೆಗಳು ಮಾಡಿರುವ ಮನವಿಗೆ ಸ್ಪಂಧಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.ರೈತರು ಖರೀದಿಸುವ ಕೃಷಿ ಬಳಕೆಗೆ ಹನಿ ನೀರಾವರಿ ಕೊಳವೆಗಳು. ಕೀಟನಾಶಕಗಳು. ರಸಗೊಬ್ಬರಗಳ ಮೇಲೆ ಜಿಎಸ್​ಟಿ ವಿಧಿಸಿರುವುರಿಂದ ರೈತರು ಖರೀದಿಸುವ ಬೆಲೆ ಹೆಚ್ಚಾಗುತ್ತಿದೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ ಇದನ್ನು ರದ್ದು ಮಾಡಬೇಕೆಂದು ಹಲವಾರು ವರ್ಷಗಳಿಂದ ರಾಜ್ಯ ಸರ್ಕಾರಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಹಲವಾರು ಮನವಿಗಳನ್ನು ಸಲ್ಲಿಸಿದ್ದೇವೆ ತಾವು ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿ ಕೃಷಿ ಉಪಕರಣಗಳ ಖರೀದಿಯ ಮೇಲೆ ಜಿಎಸ್‌ಟಿಯನ್ನು ರದ್ದು ಮಾಡಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.ಕೃಷಿ ಸಾಲಕ್ಕೆ ರೈತರ ಸಿಬಿಲ್ ಸ್ಕೋರ್ ಪರಿಗಣಿಸುವ ನಿಯಮ ರದ್ದು ಮಾಡಿ. ಹಾಗೂ ಕೃಷಿ ಸಾಲ ವಸೂಲಿಗೆ ಬ್ಯಾಂಕುಗಳು ರೈತರ ಜಮೀನು ಮುಟ್ಟುಗೂಲು ಹಾಕಿ ಹರಾಜು ಮಾಡುವ ಸರ್ಫೈಸಿ ಕಾಯ್ದೆ ರದ್ದು ಮಾಡ...
‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

‘ತೇಜಸ್ವಿ ಸೂರ್ಯ ಅವರು ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಾವೇರಿಯಲ್ಲಿ ರೈತ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಉಪಸ್ಥಿತಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಹಾವೇರಿಯ ರೈತನ ಆಸ್ತಿಯಲ್ಲಿ ವಕ್ಫ್ ಉಲ್ಲೇಖವಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಂಸದರು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾರೆ. ನಂತರ ಸರ್ಕಾರ ಸ್ಪಷ್ಟನೆ ನೀಡಿದ ನಂತರ ಅದನ್ನು ಡಿಲೀಟ್ ಮಾಡುತ್ತಾರೆ. ನಂತರ ಅವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಇದರಿಂದ ಸಮಾಜದಲ್ಲಿ ಘರ್ಷಣೆಗೆ ಪ್ರೇರಣೆಯಾಗಲಿದೆ ಎಂದು ದೂರು ನೀಡುತ್ತಾರೆ. ಈ ದೂರಿನನ್ವಯ ಪೊಲೀಸರು ತೇಜಸ್ವಿ ಸೂರ್ಯನ ಮೇಲೆ ಎಫ್ಐಆರ್ ದಾಖಲಿಸುತ್ತಾರೆ ಎಂದು ಪ್ರಕರಣದ ಹಿನ್ನೆಲೆಯನ್ನು ವಿವರಿಸಿದರು.ಇದಕ್ಕೆ ಹೆದರಿಕೊಂಡ ಆ ಪುಟ್ಟ, 'ಪ್ರಿಯಾಂಕ್ ಖರ್ಗೆಗೆ ಕೆಲಸ ಇಲ್ಲ, ಎಫ್ಐಆರ್ ಹಾಕಿಸುವುದೇ ಕೆಲಸ” ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಾನೆ. ನಾನು ಇದು...
ಕನಕಪುರದಲ್ಲಿ ಶಾಲೆಗಳಿಗೆ 25 ಎಕರೆ ಜಾಗ ದಾನ ಮಾಡಿದ್ದೇನೆ, ದೇವೇಗೌಡರ ಕುಟುಂಬದವರು ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ?: ಡಿಕೆಶಿ

ಕನಕಪುರದಲ್ಲಿ ಶಾಲೆಗಳಿಗೆ 25 ಎಕರೆ ಜಾಗ ದಾನ ಮಾಡಿದ್ದೇನೆ, ದೇವೇಗೌಡರ ಕುಟುಂಬದವರು ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ?: ಡಿಕೆಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನಗರ: “ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ನಾವು ಕನಕಪುರದ ಮೂರು ಕಡೆಗಳಲ್ಲಿ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಶುಕ್ರವಾರ ಚಕ್ಕೆರೆ, ಹೊನ್ನನಾಯಕನಹಳ್ಳಿ ಮತ್ತಿತರ ಚುನಾವಣೆ ಪ್ರಚಾರ ಸಭೆ ನಡೆಸಿದ ಡಿಕೆಶಿ, ದೇವೇಗೌಡರ ಹೇಳಿಕೆ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ದೇವೇಗೌಡರು ಗುರುವಾರ ಭಾಷಣ ಮಾಡುತ್ತಾ, “ಒಂದು ಶಾಲೆ ಮಾಡಲು ಜಾಗ ಕೇಳಿದರೆ ಡಿ.ಕೆ. ಶಿವಕುಮಾರ್ ದುಡ್ಡು, ದುಡ್ಡು ಅಂತಾರೆ” ಎಂದು ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ದೇವೇಗೌಡರು ನಿನ್ನೆ ಚುನಾವಣೆ ಪ್ರಚಾರ ಮಾಡುತ್ತಾ ಡಿ.ಕೆ. ಸಹೋದರರು ಜಮೀನು ಕಬ್ಜ ಮಾಡಿಕೊಂಡಿದ್ದು, ಶಾಲೆ ಕಟ್ಟಲು ಜಾಗ ನೀಡುತ್ತಿಲ್ಲ. ಜಾಗ ಕೇಳಿದರೆ ದುಡ್ಡು, ದುಡ್ಡು ಅಂತಾರೆ ಎಂದು ಆರೋಪ ಮಾಡಿರುವ ಬಗ್ಗೆ ಮಾಧ್ಯ...
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ? ಡಿಕೆಶಿ ಕೊಟ್ಟ ಉತ್ತರ ಇದು

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ? ಡಿಕೆಶಿ ಕೊಟ್ಟ ಉತ್ತರ ಇದು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ತಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ ಎಂಬ ಬಗ್ಗೆ ಈಗಿನ್ನೂ ಚರ್ಚೆ ಸಾಗಿದೆ. ಕಾಂಗ್ರೆಸ್ ನಾಯಕರ ಪಿತೂರಿಯಿಂದಲೇ ನಿಖಿಲ್ ಸೋತಿದ್ದಾರೆ ಎಂದು ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ನಿಖಿಲ್ ತಂದೆ ಕುಮಾರಸ್ವಾಮಿಯವರೂ ಅದೇ ರೀತಿಯ ವ್ಯಾಖ್ಯಾನವನ್ನು ನೀಡಿ ಕಾಂಗ್ರೆಸ್ ನಾಯಕರ ಉಬ್ಬೇರಿಸುವಂತೆ ಮಾಡಿದ್ದಾರೆ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡಿದ್ದಾರೆ.ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಮನಗರದಲ್ಲಿ ಕುಮಾರಸ್ವಾಮಿ ಅವರೂ ಶಾಸಕರಾಗಿದ್ದರು, ಮುಖ್ಯಮಂತ್ರಿಯೂ ಆದರು. ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೂಡ ಶಾಸಕರಾಗಿದ್ದರು. ಆದರೂ ನಿಖಿಲ್ ರಾಮನಗರದಲ್ಲಿ ಯಾಕೆ ಸೋತರು? ಅವರು ಕೆಲಸ ಮಾಡಿದ್ದರೆ ಜನ ಸೋಲಿಸುತ್ತಿದ್ದರಾ? ಕೆಲಸ ಮಾಡಿ, ಜನರ ಸೇವೆ ಮಾಡಿದ್ದರೆ ಸೋಲುತ್ತಿರಲಿಲ್ಲ. 5 ವರ್ಷಕ್ಕೊಮ್ಮೆ ಬಂದು ಮತ ನೀಡಿ ಎಂದರೆ ಹೇಗೆ? ಮತದಾರರು ಏನು ಕೂ...