Wednesday, April 1

ರಾಜ್ಯ

ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಇಳಿಕೆ

ಚಿನ್ನದ ದರ ದಾಖಲೆ ಪ್ರಮಾಣದಲ್ಲಿ ಇಳಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ದೀಪಾವಳಿ ಹೊತ್ತಲ್ಲಿ ಗಗನಮುಖಿಯಾಗಿದ್ದ ಆಭರಣ ಲೋಹದ ಧಾರಣೆ ಗುರುವಾರ ಚಿನಿವಾರ ಪೇಟೆಯಲ್ಲಿ ಬಹಳಷ್ಟು ಇಳಿಕೆಉಅಗಿತ್ತು.ಬೆಂಗಳೂರಿನಲ್ಲಿ ಸುಮಾರು 20 ದಿನಗಳ ಬಳಿಕ 10 ಗ್ರಾಂ ಚಿನ್ನದ ಬೆಲೆ 80 ಸಾವಿರದ ಗಡಿಯಿಂದ ಕೆಳಗಿಳಿದಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1790 ರೂ. ಇಳಿಕೆಯಾಗಿ 78560 ರೂಪಾಯಿ ಗಳಿಗೆ ತಲುಪಿದೆ.
ವಕ್ಫ್ ವಿವಾದ; ನೋಟಿಸ್‌ ರದ್ದಾಗುವುದರಿಂದ ಪ್ರಯೋಜನವಿಲ್ಲ, ಆದೇಶ ರದ್ದಾಗಬೇಕು

ವಕ್ಫ್ ವಿವಾದ; ನೋಟಿಸ್‌ ರದ್ದಾಗುವುದರಿಂದ ಪ್ರಯೋಜನವಿಲ್ಲ, ಆದೇಶ ರದ್ದಾಗಬೇಕು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್‌ಗೆ ಯಾವುದೇ ಬೆಲೆ ನೀಡುವುದಿಲ್ಲ. ವಕ್ಫ್‌ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಮಂಡ್ಯ ಜಿಲ್ಲೆಯ, ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅವರು ಮಾತನಾಡಿದರು. ವಿರೋಧ ಪಕ್ಷದ ನಾಯಕನಾಗಿ ನಾನು ಎಲ್ಲಿ ಬೇಕಾದರೂ ಓಡಾಡಬಹುದು. ಆ ಅಧಿಕಾರ, ಸ್ವಾತಂತ್ರ್ಯ ನನಗಿದೆ. ಅದಕ್ಕಾಗಿ ವಕ್ಫ್‌ ಭೂಮಿ ಕಬಳಿಸಿದ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ. ಚಂದ್ಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ಕಣ್ಣ ಮುಂದೆ ಇರುವ ಶಾಲೆ ಪಹಣಿಯಲ್ಲಿ ಖಬರಸ್ಥಾನ ಆಗಿದೆ. ಇದು ಹೆಣ ಹೂಳುವ ಜಾಗವೇ ಎಂದು ಗ್ರಾಮಸ್ಥರೇ ಹೇಳಬೇಕು. ನಮ್ಮ ಶಾಲೆ ನಮ್ಮ ಹಕ್ಕು ಎಂಬ ಘೋಷಣೆಯಡಿ ಹೋರಾಟ ಮಾಡಬೇಕು ಎಂದರು.ಯಾವುದೇ ಜಮೀನು ತಕಾರರು ಬಂದರೆ ಜಿಲ್ಲಾಧಿಕಾರಿಗೆ ಅರ್ಜಿ ನೀಡಬೇಕು. ಆದರೆ ವಕ್ಫ್‌ಗೆ ಸಂಬಂಧಿಸಿದ ಜಮೀನು ವಿವಾದ ಬಂದರೆ ಅದನ್ನು ವಕ್ಫ್‌ನಲ್ಲೇ ಬಗೆಹರಿಸಬೇಕೆಂದು ಕೇಂದ್ರದಲ್ಲಿದ್ದ ಕಾಂಗ್ರೆಸ...
ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ 'ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ' ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. 'ಸಿಟಿಜನ್ ರೈಟ್ಸ್ ಫೌಂಡೇಶನ್' ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ.ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾ...
ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

ನ.8, 9ರಂದು ಮಂಗಳೂರಿನಲ್ಲಿ ಜಾಗತಿಕ ಸಂವಹನ ಸಮಾವೇಶ; ವಿವಿಧ ದೇಶಗಳ ಗಣ್ಯರ ಸಮಾಗಮ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಷ್ಠಿತ ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) 18ನೇ ಜಾಗತಿಕ ಸಂವಹನ ಸಮಾವೇಶ 2024ರ ನವೆಂಬರ್ 8 ಮತ್ತು 9ರಂದು ಮಂಗಳೂರಿನಲ್ಲಿ ನಡೆಯಲಿದೆ. PRCI ಸಂಸ್ಥೆಯು ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ವೃತ್ತಿಪರತೆಯ ಪ್ರಮಾಣಿತ ಮಾನದಂಡಗಳನ್ನು ಉತ್ತೇಜಿಸುವ ಪ್ರಮುಖ ಸಂಸ್ಥೆಯಾಗಿದ್ದು ಈ ಬಾರಿ ಕಡಲತಡಿಯ ನಗರಿಯಲ್ಲಿ ಆಯೋಜಿಸಲಾಗಿದ್ದು ದೇಶ ವಿದೇಶಗಳ ಪ್ರತಿನಿಧಿಗಳ ಸಮಾಗಮಕ್ಕೆ ಈ ಸಮಾವೇಶ ಸಾಕ್ಷಿಯಾಗಲಿದೆ. .2004ರ ಮಾರ್ಚ್ 3 ರಂದು PRCIಯು ಸ್ಥಾಪನೆಯಾಗಿದ್ದು, ಅದಕ್ಕೂ ಮೊದಲು 17 ಜಾಗತಿಕ ಸಂವಹನ ಸಮಾವೇಶಗಳನ್ನು ಜಯಪುರ, ಪುಣೆ, ಕೊಲ್ಕತ್ತಾ, ನವದೆಹಲಿ, ಮುಂಬೈ, ಹೈದರಾಬಾದ್, ಚಂಡೀಗಢ್, ಬೆಂಗಳೂರು ಮತ್ತು ಗೋವಾ ನಗರಗಳಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ದೇಶದಾದ್ಯಂತ ಮತ್ತು ವಿಶ್ವದ ಪ್ರಮುಖ ಉದ್ಯಮಗಳಿಂದ 500ಕ್ಕೂ ಹೆಚ್ಚು ಸಂವಹನ ವೃತ್ತಿಪರರು ಮತ್ತು ನಿರ್ಧಾರಮೇಕರ್‌ಗಳು ಪಬ್ಲಿಕ್ ರಿಲೇಶನ್ಸ್ ಮತ್ತು ಸಂವಹನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ಹೊಸ ವಿಚಾರಗಳು, ಮತ್ತು ಉತ್ತಮ ಅಭ್ಯಾಸಗಳ ಬಗ್ಗೆ ಚರ್ಚಿಸಲು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಈ ವರ್ಷದ...
ನಟ ದರ್ಶನ, ಅಭಿಮಾನಿಗಳ ವಿರುದ್ಧ ಬಿಗ್ ಬಾಸ್ ಸ್ಪರ್ಧಿಯಿಂದ ದೂರು

ನಟ ದರ್ಶನ, ಅಭಿಮಾನಿಗಳ ವಿರುದ್ಧ ಬಿಗ್ ಬಾಸ್ ಸ್ಪರ್ಧಿಯಿಂದ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಜಗದೀಶ್ ಅವರು ಈ ದೂರು ಸಲ್ಲಿಸಿದ್ದಾರೆ.ತಮ್ಮ ಬಗ್ಗೆ ಸಾಮಾಜಿಕ ಜಾನತಾಣಗಳಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿರುವ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ.ಜಗದೀಶ್ ಅವರು ಬಿಗ್​ಬಾಸ್​ ಸ್ಪರ್ಧಿಯಾಗಿದ್ದಾಗ ವಿವಾದಾತ್ಮಕ ಮಾತುಗಳಿಂದಾಗಿ ಸ್ಪರ್ಧೆಯಿಂದ ಹೊರಬಂದಿದ್ದಾರೆ. ನಟ ದರ್ಶನ್ ಪ್ರಕರಣ ಬಗ್ಗೆಯೂ ಮಾತನಾಡಿರುವ ಜಗದೀಶ್ ಅವರು ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದಿದ್ದು, ಜಗದೀಶ್ ಬಗ್ಗೆ ದರ್ಶನ್ ಅಭಿಮಾನಿಗಳು ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ....
ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ; ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಅಶೋಕ್ ಆಗ್ರಹ

ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ; ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಅಶೋಕ್ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂದೆ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದ ಸಿದ್ದರಾಮಯ್ಯ, ಇದೀಗ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸದ್ದಾರೆ. ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ ಹಿರಿಯ ಅಧಿಕಾರಿಗಳು ಇದನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.ಇದು ಕರುಣೆಯೇ ಇಲ್ಲದ ಸರ್ಕಾರ. ಸುಮಾರು 2 ಲಕ್ಷ ರೂ. ಲಂಚವನ್ನು ರುದ್ರಣ್ಣ ಅವರಿಂದ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪತ್ರ ಬರೆದ ಮಾದರಿಯಲ್ಲೇ ರುದ್ರಣ್ಣ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಎಂದು ಸಂದೇಶ ಕಳುಹಿಸಿದ್ದಾರೆ. ಪಿಎಸ್‌ಐ ಪರಶುರಾಮ್‌ ಸತ್ತ ಬಳಿಕ ಯಾರನ್ನೂ ಬಂಧನ ಮಾಡಿಲ್ಲ. ರುದ್ರಣ...
ನವೆಂಬರ್ ಅಂತ್ಯಕ್ಕೆ ‘ಮೇಘ’ ಆಗಮನ

ನವೆಂಬರ್ ಅಂತ್ಯಕ್ಕೆ ‘ಮೇಘ’ ಆಗಮನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಕಿರಣ್ ರಾಜ್ -ಕಾಜಲ್ ಕುಂದರ್ ನಟಿಸಿರುವ 'ಮೇಘ' ಚಿತ್ರ ನವೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರವನ್ನು ಚರಣ್ ನಿರ್ದೇಶಿಸಿದ್ದಾರೆ.ಶೋಭರಾಜ್, ಸುಂದರ್ ವೀಣಾ, ಸಂಗೀತಾ ಮುಂತಾದ ಕಲಾವಿದರು 'ಮೇಘ' ಚಿತ್ರದಲ್ಲಿ ನಟಿಸಿದ್ದಾರೆ. ಹನುಮಂತೇಗೌಡ, ಗಿರೀಶ್ ಶಿವಣ್ಣ, ತರಂಗ ವಿಶ್ವ ಅವರ ನಟನೆಯೂ ಗಮನಸೆಳೆಯಲಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಫ್ರಾಂಕ್ಲಿನ್ ರಾಕಿ ಅವರ ಹಿನ್ನೆಲೆ ಸಂಗೀತ ಹಾಗೂ ಜೋಯಲ್ ಸಕ್ಕರಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.https://www.youtube.com/watch?v=mKyslVuOb1Q...
‘45’ ಸಿನಿಮಾ, ಅರ್ಜುನ್ ಜನ್ಯ ಕನಸು, ಶಿವಣ್ಣ-ಉಪ್ಪಿ ಅಭಿನಯಕ್ಕೆ ಶೆಟ್ಟಿ ಸಾಥ್

‘45’ ಸಿನಿಮಾ, ಅರ್ಜುನ್ ಜನ್ಯ ಕನಸು, ಶಿವಣ್ಣ-ಉಪ್ಪಿ ಅಭಿನಯಕ್ಕೆ ಶೆಟ್ಟಿ ಸಾಥ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ ‘45’ ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯವಾಗಿದ್ದು ಬಿಡುಗಡೆಗೆ ತಯಾರಿ ನಡೆದಿದೆ. ದೀಪಾವಳಿ ಹಬ್ಬದ ನಡುವೆಯೇ ಟೀಸರ್ ಬಿಡುಗಡೆಯಾಗಿದ್ದು ‘45’ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ.ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಒಟ್ಟಿಗೆ ನಟಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರೂ ಕಾಣಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಉಪೇಂದ್ರ ಅವರ ಫರ್ಸ್ಟ್ ಲುಕ್ ಅನಾವರಣಗೊಳಿಸುವ ‘45’ ಸಿನಿಮಾ ಬಗ್ಗೆ ಕುತೂಹಲವನ್ನು ಚಿತ್ರ ತಂಡ ಹೆಚ್ಚಿಸಿದೆ.https://www.youtube.com/watch?v=m3wB3puCmDE...
ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ; ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭ; ರಾಮಲಿಂಗಾ ರೆಡ್ಡಿ

ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ; ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭ; ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ ನಿರ್ಮಾಣವಾಗಲಿದೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ನಿರ್ಮಿಸಲುದ್ದೇಶಿಸಿರುವ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಯು ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.ಮೈಸೂರು ನಗರದಲ್ಲಿ ಸುಮಾರು 14 ಎಕರೆ ಜಾಗದಲ್ಲಿ ಅಂದಾಜು 120 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಸಾರಿಗೆ ಸೌಲಭ್ಯ ಕಲ್ಪಿಸಲು ಪಾರಂಪರಿಕ ಹಾಗೂ ಆಧುನಿಕ ವಿನ್ಯಾಸ ಒಳಗೊಂಡಂತೆ ಬಸ್ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.ಮೈಸೂರು ನಗರದ ಹೃದಯ ಭಾಗದ ಇಕ್ಕಟ್ಟಾದ ಜಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ (ಸಬ್ ಅರ್ಬನ್)ದ ಮೇಲಿನ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬನ್ನಿಮಂಟಪದಲ್ಲಿರುವ ಡಿಪೋ ಪಕ್ಕದ ಜಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹೊರತುಪಡಿಸಿದರೆ ಅತೀ ಹೆಚ್ಚಾಗಿ ಜನಸಂದಣಿ ಕಾಣಸಿಗುವ ಬಸ್ ನಿಲ್ದಾಣ ಮೈಸೂರು ಬಸ್ ನಿಲ್ದಾಣ. ಅದರಲ್ಲೂ...
ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್‌ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ 40 ಪರ್ಸೆಂಟ್‌ ಎಂದು ಆರೋಪ ಮಾಡಿದ್ದರೂ ಅದಕ್ಕೆ ಸೂಕ್ತ ದಾಖಲೆ ನೀಡಿಲ್ಲ. ...