ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್ ವಿರೋಧ,
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಸಾಧಕ-ಬಾಧಕ ಚರ್ಚಿಸಲು ಆಯೋಜಿಸಿದ್ದ ಪ್ರಾತ್ಯಕ್ಷಿಕೆಯಲ್ಲಿ ಅವರು ಪಾಲ್ಗೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗದೆ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು. ಇಲ್ಲಿ ಕನ್ನಡದವರೇ ಮೇಯರ್ ಆಗಬೇಕು. ಇದಕ್ಕಾಗಿ ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತವೆ ಎಂದು ತಿಳಿಸಿದರು.
ಬಿಬಿಎಂಪಿ ಅಡಿಯಲ್ಲಿ ಸ್ಲಂ ಬೋರ್ಡ್, ಜಲಮಂಡಳಿ, ಬಿಎಂಟಿಸಿ ಬರುವುದಿಲ್ಲ. ಇವೆಲ್ಲವೂ ಒಂದೇ ಕಡೆ ಬಂದು, ಬಿಬಿಎಂಪಿಯೇ ನಿರ್ವಹಣೆ ಮಾಡಿದರೆ ಪ್ರತ್ಯೇಕವಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡುವುದು ತಪ್ಪುತ್ತದ...



