ರಾಜ್ಯದಲ್ಲಿ ನರ್ಸಿಂಗ್ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ
ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸೋಮವಾರ ತಮ್ಮ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ
ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ "ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು" ರಚಿಸಲಾಗುವುದು. ನರ್ಸಿಂಗ್ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್ ಸರ್ಟಿಫಿಕೇಟ್ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್ ನ್ನ ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಡಾ. ಶರಣ...









