Sunday, December 7

ರಾಜ್ಯ

ಜೈಲಿನಲ್ಲಿ ಎಲ್ಲರಿಗೂ ಒಂದೇ ರೀತಿಯ ವ್ಯವಸ್ಥೆ; ದರ್ಶನ್ ವಿಚಾರವನ್ನು ಗಂಭೀರವಾಗಿ ಪರಿಣಿಸಿದ ಸರ್ಕಾರ

ಜೈಲಿನಲ್ಲಿ ಎಲ್ಲರಿಗೂ ಒಂದೇ ರೀತಿಯ ವ್ಯವಸ್ಥೆ; ದರ್ಶನ್ ವಿಚಾರವನ್ನು ಗಂಭೀರವಾಗಿ ಪರಿಣಿಸಿದ ಸರ್ಕಾರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್‌ಗೆ ಯಾವುದೇ ವಿನಾಯಿತಿ, ವಿಶೇಷ ಸೌಲಭ್ಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಂಗಳವಾರ ಹೇಳಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ದೊರೆತಿರುವ ಬಗ್ಗೆ ಸರ್ಕಾರದ ನಿಲುವನ್ನು ಪ್ರಕಟಿಸಿದ ಸಚಿವ ಪಾಟೀಲ್, "ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ವ್ಯವಸ್ಥೆ ಎಲ್ಲರಿಗೂ ಒಂದೇ,"ಎಂದು ಪ್ರತಿಪಾದಿಸಿದರು. "ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ. ವ್ಯವಸ್ಥೆ ಎಲ್ಲರಿಗೂ ಒಂದೇ ಆಗಿರುಬೇಕು. ಜೈಲು ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು. ಇಂತಹ ಲೋಪಗಳಿಗೆ ಅವಕಾಶ ನೀಡಬಾರದು, ವಿಐಪಿಗಳು ಜೈಲು ಪಾಲಾದಾಗ ಇಂತಹ ವಿಷಯಗಳು ಸುದ್ದಿಯಾಗುತ್ತವೆ. ಇಂತಹ ಲೋಪಗಳಿಂದ ಜನರು ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ. ಇಂತಹ ಲೋಪಗಳು ಮರುಕಳಿಸದಂತೆ ಗೃಹ ಸಚಿವರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ,’’ ಎಂದು ತಿಳಿಸಿದರು....
ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯಾಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದರು. ಕೋಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಭೆ ನಡೆಸಿದ ಸಚಿವರು, ವೈದ್ಯಕೀಯ ಸಂಸ್ಥೆಗಳಲ್ಲಿ ಭದ್ರತೆ ಹೆಚ್ಚಿಸುವ ಬಗ್ಗೆ ಸಮಾಲೋಚಿಸಿದರು. ಭದ್ರತಾ ಕ್ರಮಗಳನ್ನು ಹೆಚ್ಚಿಸುವ ಮೂಲಕ ವೈದ್ಯಕೀಯ ವೃತ್ತಿಪರರನ್ನು, ವಿಶೇಷವಾಗಿ ಮಹಿಳೆಯರನ್ನು ರಕ್ಷಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದ ಸಚಿವ ಪಾಟೀಲ್, "ಮಹಿಳಾ ವೈದ್ಯರ ಸುರಕ್ಷತೆಗೆ ನಾವು ಬದ್ಧ. ಈ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಆಧಾರದ ಮೇಲೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ವಹಿಸಲಾಗುವುದು," ಎಂದರು. ಸಭೆಯ ನಂತರ ಮಾತನಾಡಿದ ಡಾ. ಶರಣ ಪ್ರಕಾಶ ಪಾಟೀಲ್ , "ಎಲ್ಲಾ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲ...
ಜಾತ್ರೆಯಲ್ಲಿ ಅವಾಂತರ; ಆಹಾರ ಸೇವಿಸಿದ ಮೂವರ ಸಾವು

ಜಾತ್ರೆಯಲ್ಲಿ ಅವಾಂತರ; ಆಹಾರ ಸೇವಿಸಿದ ಮೂವರ ಸಾವು

ಪ್ರಮುಖ ಸುದ್ದಿ, ರಾಜ್ಯ
ತುಮಕೂರು: ಜಾತ್ರೆಯಲ್ಲಿ ಊಟ ಸೇವಿಸಿದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದೆ. ಮಧುಗಿರಿ ಸಮೀಪದ ಬುಳ್ಳಸಂದ್ರ ಗ್ರಾಮದಲ್ಲಿ ಭಾನುವಾರ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಹಲವರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.‌ ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ 80 ವರ್ಷದ ತಿಮ್ಮಕ್ಕ, 86 ವರ್ಷದ ಗಿರಿಯಮ್ಮ ಮತ್ತು ಆಂಧ್ರಪ್ರದೇಶದ ಮಡಕಶಿರಾ ಮೂಲದವರೆನ್ನಲಾದ 45 ವರ್ಷದ ಕಾಟಮ್ಮ ಎಂದು ಗುರುತಿಸಲಾಗಿದೆ....
ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದಿಂದ ಆಹ್ವಾನಿಸಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಹ್ವಾನಿಸಿರುವ ನೋಟಿಫಿಕೇಷನ್ ತಕ್ಷಣ ರದ್ದುಗೊಳಿಸಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನಾಯಕರ ಒಕ್ಕೂಟ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಮನವಿ ಸಲ್ಲಿಸಿದೆ. ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರನ್ನು ಭೇಟಿ ಮಾಡಿದ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷ ರಮೇಶ್ ಹಿರೇಜಂಬೂರು ನೇತೃತ್ವದ ನಿಯೋಗ, ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ (371-J) ಒಟ್ಟು 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವಾಗ ಪ್ರತಿ ಅಭ್ಯರ್ಥಿಯಿಂದ 1000/-, 2000/- ರೂ. ಶುಲ್ಕ ಪಾವತಿಸಿಕೊಳ್ಳುತ್ತಿದ್ದಾರೆ. ಆದರೆ ಇಲ್ಲಿನ 18 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾ...
ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿನ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳು ಹೆಚ್ಚಳವಾಗಿದ್ದು ಸರ್ಕಾರದ ಕುಮ್ಮಕ್ಕಿನಿಂದಲೇ ಕೃತ್ಯಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಿದ್ದು, ಸರ್ಕಾರದ ಕುಮ್ಮಕ್ಕಿನಿಂದಲೇ ಇದು ನಡೆಯುತ್ತಿದೆ ಎಂದು ದೂರಿದರು. ಕಾಂಗ್ರೆಸ್‌ ತಮ್ಮನ್ನು ಏನೂ ಮಾಡುವುದಿಲ್ಲ ಎಂಬ ನಂಬಿಕೆ ಇಂತಹವರಿಗೆ ಬಂದಿದೆ. ಕೇರಳದಲ್ಲಿ ಲವ್‌ ಜಿಹಾದ್‌ ಕೇಂದ್ರವೂ ಇದ್ದು, ಅಲ್ಲಿ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 2047 ರೊಳಗೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂಬ ಕರಪತ್ರಗಳು ಕೂಡ ಹರಿದಾಡಿವೆ ಎಂದು ಅಶೋಕ್ ಆರೋಪಿಸಿದರು. ಕೊಲೆ ಆರೋಪಿ ನಟ ದರ್ಶನ್‌ ಪ್ರಕರಣ ಕು...
ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌‌ಗೆ ಕೆಐಡಿಬಿ ಮೂಲಕ ಜಮೀನು ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಟೀಕಿಸಿರುವ ಬಿಜೆಪಿ ಸಂಸದ ಲೆಹರ್ ಸಿಂಗ್ ವಿರುದ್ದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಮೇಶ್ ಬಾಬು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು, ರಾಜ್ಯಸಭಾ ಸದಸ್ಯರಾದ ಲೇಹರ್ ಸಿಂಗ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಟ್ರಸ್ಟ್ ಸಿಎ ನಿವೇಶನವನ್ನು ಅಕ್ರಮವಾಗಿ ಪಡೆದುಕೊಂಡಿದೆ ಎಂದು ಹೇಳಿಕೆ ನೀಡಿದ್ದಾರೆ. ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಕೆಐಡಿಬಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ನೀಡಿರುವ ಸಿಎ ಸೈಟ್ ಕುರಿತು ಅವರು ಎತ್ತಿರುವ ತಕರಾರಿಗೆ ಯಾವುದೇ ಆಕ್ಷೇಪಣೆಯಿಲ್ಲ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವನ್ನು ಗುರಿ ಮಾಡಿರುವ ರೀತಿ ಸಂಪೂರ್ಣ ಭಟ್ಟಂಗಿ ತನದಿಂದ ಕೂಡಿದೆ ಎಂದು ತರಾಟೆಗೆ ತೆಗೆದುಕೊಂಡರು. ರಾಜಸ್ಥಾನದಿಂದ ರಾಜಕೀಯಕ್ಕಾಗಿ ವಲಸೆ ಬಂದ ರಾಜಕಾರಣಿ. ಇಲ್ಲಿಗೆ ಬಂದು ರಾಜಕೀಯವಾಗಿ ಲಾಟರಿ ಹೊಡೆದವರಲ್ಲಿ ಇವರು ಒಬ್ಬರು. ಇವರಿಂದ ಕರ್ನಾಟಕದ ಅಭಿವೃದ್ಧಿಗೆ, ಬೆ...
ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು. ಕಾಂಗ್ರೆಸ್‌ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್‌ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ...
ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ತಮಿಳುನಾಡಿನ ತಿರುಚಿಯಲ್ಲಿ ಮಂಗಳವಾರ ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ರೈಲು ಮೂಲಕ ತೆರಳಿದ್ದಾರೆ. ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರಾಷ್ಟ್ರೀಯ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ರೈತ ನಾಯಕ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭಾಗಿಯಾಗುತ್ತಿಧದು, ಈ ಅನ್ನದಾತರು ಮೈಸೂರಿನಿಂದ ರೈಲು ಮೂಲಕ ತೆರಳಿದ್ದಾರೆ. ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ ಸ್ವಾಮಿನಾಥನ್ ವರದಿ ಜಾರಿ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಪ್ರಬಲಗೊಳಿಸಲು. ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕರೂ ಆದ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘ...
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟಲ್ಕೆ ನಿರ್ಬಂಧ

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟಲ್ಕೆ ನಿರ್ಬಂಧ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್ ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ದಿನವಾದ ಸೋಮವಾರ ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿರ್ಬಂಧಿಸಲಾಗಿದೆ. ಆಗಸ್ಟ್​​ 25 ಸೋಮವಾರದಂದು ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮಾಡದಂತೆ ಹಾಗೂ ಅಂಗಡಿ- ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ....