Friday, January 30

ರಾಜ್ಯ

ದೊಡ್ಡಬಳ್ಳಾಪುರ:1.67 ಲಕ್ಷ ರೂ ಮೌಲ್ಯದ  ಗಾಂಜಾ ವಶ : ಒಬ್ಬನ ಬಂಧನ

ದೊಡ್ಡಬಳ್ಳಾಪುರ:1.67 ಲಕ್ಷ ರೂ ಮೌಲ್ಯದ  ಗಾಂಜಾ ವಶ : ಒಬ್ಬನ ಬಂಧನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ :ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯ ಪೊಲೀಸರು ₹1,67,500 ಮೌಲ್ಯದ ಅಕ್ರಮ ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ದೊಡ್ಡಬೆಳವಂಗಲ ಹೋಬಳಿಯ ಅಪ್ಪೇಗೌಡನ ಪಾಳ್ಯದ ಬಳಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ, ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದು, ಹೊಲದ ಮಾಲಿಕ ಅರಸಪ್ಪ (65) ಎಂಬವರನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಸುಮಾರು 1,67,500 ರೂ ಮೌಲ್ಯದ 16 ಕೆಜಿ 800 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ದೊಡ್ಡ ಹೆಜ್ಜಾಜಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಅಮಿತ್ ಕಾರ್ತಿಕ್, ಎಎಸ್‌ಐ ಕೃಷ್ಣಪ್ಪ, ಹೆಡ್ ಕಾನ್ ಸ್ಟೇಬಲ್ ಗಳಾದ ಮಂಜುನಾಥ್, ಸುರೇಶ್, ರಾಮಕೃಷ್ಣ, ಕಾನ್ಸ್ಟೇಬಲ್ ಗಳಾದ ಕುಮಾರ್, ಗೃಹರಕ್ಷಕ ದಳದ ಚಂದ್ರು ಮೊದಲಾದವರು ಭಾಗವಹಿಸಿದ್ದರು....
ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪೈಕಿ ಯಾವ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದೇ ವೇಳೆ ಕಾಂಗ್ರೆಸ್ ರಣತಂತ್ರಕ್ಕೆ ಪ್ರತಿಯಾಗಿ ಜೆಡಿಎಸ್-ಬಿಜೆಪಿ ಕ್ಷೇತ್ರಗಳ ಅದಲು ಬದಲು ಸೂತ್ರಕ್ಕೆ ಮುಂದಾದಂತಿದೆ. ಚನ್ನಪಟ್ಟಣದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ಮತ್ತೊಮ್ಮೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ದತೆ ನಡೆಸುತ್ತಿದೆ. ಈ ವಿಚಾರದಲ್ಲಿ ಬಂದ ಜೆಪಿ-ಜೆಡಿಎಸ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದೇ ವೇಳೆ, ಬೆಂಗಳೂರಿನಲ್ಲಿ ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಈಗಾಗಲೇ ಕೇಂದ್ರ ನಾಯಕರನ್ನೂ ಭೇಟಿ ಮಾಡಿದ್ದ ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಹಲವು ನಾಯಕರು ತಮ್ಮ ಅಭಿಪ್ರಾಯಗಳನ್ನು ಸಭೆಯ ಮುಂದಿಟ್ಟರು. ಸಂಡೂರನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಚನ್ನಪಟ್ಟಣವನ್ನು ಬಿಜೆಪಿಗೆ ಕೇಳಲು ಸಲಹೆ ವ್ಯಕ್ತವಾಯಿತೆನ್ನಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಮನವರಿಕೆ ಮಾಡಿ, ಜೆಡಿಎಸ್‌ ಮನವೊ...
ಎಚ್ಚರ..! ಮೋಬೈಲ್ ಬಳಸಿದರೆ, ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ಡಿಎಲ್ ರದ್ದು

ಎಚ್ಚರ..! ಮೋಬೈಲ್ ಬಳಸಿದರೆ, ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ಡಿಎಲ್ ರದ್ದು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಸಿಎಂ ಆಪತ್ಕಾಲಯಾನ’ ಯೋಜನೆಯ 65 ಆಂಬುಲೆನ್ಸ್‌ಗಳನ್ನು ಸಿಎಂ ಸೇವೆಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಠಿಣ ನಿಯಮಗಳಿದ್ದರೂ, ಅನೇಕರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಕೆಲವರ ನಿರ್ಲಕ್ಷ್ಯದಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಅಪಘಾತಗಳನ್ನು ತಡೆಯಬಹುದು ಎಂದ ಸಿದ್ದರಾಮಯ್ಯ, ಕುಡಿದು ವಾಹನ ಚಲಾಯಿಸುವ ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆಗೆ ಕಠಿಣ ಶಿಕ್ಷೆಯಾಗಬೇಕು ಎಂದರು. ಈ ರೀತಿಯ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಚಾಲನಾ ಪರವಾನಗಿ ರದ್ದು ಮಾಡಬೇಕೆಂದು ಸಿಎಂ ಅವರು ಸಾರಿಗೆ ಇಲಾಖೆಗೆ ಸೂಚನೆ ನೀಡಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು....
ಕರಾವಳಿ ಮಲೆನಾಡು ಸಹಿತ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಕರಾವಳಿ ಮಲೆನಾಡು ಸಹಿತ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಸಹಿತ ಮಲೆನಾಡು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌...
ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆ.29ರವರೆಗೂ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆ.29ರವರೆಗೂ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29ರವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಈ ಕುರಿತಂತೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ,, ಚಿಕ್ಕಮಗಳೂರು ಸೇರಿದಂತೆ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಲಾಗಿದೆ. ಬಿ.ವಿ. ಶ್ರೀನಿವಾಸ್ ಇದುವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದರು. ನೂತನವಾಗಿ ನೇಮಕಗೊಂಡಿರುವ ಉದಯ್ ಭಾನು ಚಿಬ್ ಅವರು ಈವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ರಾಯಣ್ಣ ಜೊತೆಗೆ ‘ಚೆನ್ನಮ್ಮ ಬ್ರಿಗೇಡ್’; ಈಶ್ವರಪ್ಪ ಕಾರ್ಯತಂತ್ರ

ರಾಯಣ್ಣ ಜೊತೆಗೆ ‘ಚೆನ್ನಮ್ಮ ಬ್ರಿಗೇಡ್’; ಈಶ್ವರಪ್ಪ ಕಾರ್ಯತಂತ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ವಿಜಯಪುರ: ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ವಿರುದ್ಧ ಸಮರ ಸಾರಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೊಂದು ರಾಯಣ್ಣ ಬ್ರಿಗೇಡ್ ಜೊತೆಗೆ ಮತ್ತೊಂದು ಸಂಘಟನೆಗೆ ತಯಾರಿ ನಡೆಸಿದ್ದಾರೆ. ವಿಜಯಪುರದಲ್ಲಿ ಬೆಂಬಲಿಗರ ಸಭೆ ನಡೆಸಿರುವ ಈಶ್ವರಪ್ಪ, ಸದ್ಯದಲ್ಲೇ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ. ವಿಜಯಪುರ ಸಮೀಪದ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಈಶ್ವರಪ್ಪ ಅವರು ವಿವಿಧ ಮಠಾಧೀಶರು ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಿದರು. ಸದ್ಯವೇ ಮತ್ತೊಂದು ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡುವ ಸುಳಿವನ್ನು ಈಶ್ವರಪ್ಪ ನೀಡಿದರು....
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ. ಇದೇ ಸಂದರ್ಭದಲ್ಲಿ 'ದೇವರ' ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. 'ಆರ್​ಆರ್​ಆರ್​’ ಸಿನಿಮಾ ಬಳಿಕ ಜೂನಿಯರ್​ ಎನ್‌ಟಿಆರ್​ ಅವರು ಈ ಚಿತ್ರದಲ್ಲಿ ಕಮಾಲ್ ಪ್ರದರ್ಶಿಸಲಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. https://youtu.be/HNYA6bqL6bU?si=nIRtqhPMISPhVIbJ...
ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಿ; ಸಿಎಂಗೆ ಮೇಲ್ಮನೆ ವಿಪಕ್ಷ ನಾಯಕರ ಆಗ್ರಹ

ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಿ; ಸಿಎಂಗೆ ಮೇಲ್ಮನೆ ವಿಪಕ್ಷ ನಾಯಕರ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಪಾದಿಸಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ಪ್ರಕರಣದ ಸಂಬಂಧ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಅವರ ಮಗ ಪಂಪನಗೌಡ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಛಲವಾದಿ ನಾರಾಯಣಸ್ವಾಮಿ, ಸರ್ಕಾರ ಈ ಹಿಂದೆ ಕೊಟ್ಟಿದ್ದ ಆಶ್ವಾಸನೆಯಂತೆ 50 ಲಕ್ಷ ರೂ. ಪರಿಹಾರ ಒದಗಿಸಬೇಕೆಂದು ಆಹ್ರಹಿಸಿದ್ದಾರೆ. ಪರಶುರಾಮ್ ಅವರ ಸ್ವಗ್ರಾಮಕ್ಕೆ ಆ.8ರಂದು ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳುವ ಸಂದರ್ಭದಲ್ಲಿ ಪಿಎಸ್‌ಐ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹಾಗೂ ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿದ್ದರು. ಈ ಆಶ್ವಾಸನೆ ಈಡೇರಬೇಕಿದೆ ಎಂದು ಸರ್ಕಾರಕ್ಕೆ ನೆನಪಿಸಿದ್ದಾರೆ....
ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಪ್ರಮುಖ ಸುದ್ದಿ, ರಾಜ್ಯ
ಹೊಸಪೇಟೆ (ವಿಜಯನಗರ): ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದರು. ಜೊತೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಭಾಗಿಯಾಗಿದ್ದರು. ನಂತರ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ವೇದಿಕೆ ಸಮಾರಂಭದಲ್ಲಿ ತುಂಗಭದ್ರಾ ಕ್ಲಸ್ಟರ್-19 ಗೇಟ್ ದುರಸ್ತಿ ಕಾರ್ಯದಲ್ಲಿ ಭಾಗಿಯಾದ ಅಧಿಕಾರಿಗಳಿಗೆ, ತಂತ್ರಜ್ಞರಿಗೆ ಹಾಗು ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಮಾರಂಭದಲ್ಲಿ ಜಲ ಸಂಪನ್ಮೂಲ ಸಚಿವರಾದ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು....