ಬೆಂಗಳೂರು: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ.
ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರು ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
57ನೇ ಸಿಟಿ ಸಿವಿಲ್ ನ್ಯಾಯಾಲಯವು ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ ಬಂಧನವಾಗಿ 100 ದಿನಗಳ ಬಳಿಕ ನಟ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ....
ನವದೆಹಲಿ: ರಾಜ್ಯ ಸರ್ಕಾರಿ ಸ್ವಮ್ಯದ ಸಾರಿಗೆ ನಿಗಮ KSRTCಗೆ ಮತ್ತೊಂದು ಪುರಸ್ಕಾರ ಸಿಕ್ಕಿದೆ. ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024' ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಗೆ ಲಭಿಸಿಸೆ.
ನಿಗಮದ ನೌಕರರಿಗೆ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಮುಂಜಾಗ್ರತೆ ವಹಿಸುವ ಉಪಕ್ರಮಗಳಿಗಾಗಿ “ಸಾರಿಗೆ ಸಂಜೀವಿನಿ” ಎಂಬ ಯೋಜನೆ ಜಾರಿಗೆ ತರಲಾಗಿದ್ದು, ಸದರಿ ಉಪಕ್ರಮಕ್ಕಾಗಿ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ.
ಸ್ಕಾಚ್ ಸಂಸ್ಥೆಯು ದೆಹಲಿಯ ಸಿಲ್ವರ್ ...
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದದ ಡಿನೋಟಿಫಿಕೇಷನ್ ಆರೋಪ ಮಾಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬಗ್ಗೆ ಜಾತ್ಯತೀತ ಜನತಾ ದಳ ಗರಂ ಆಗಿದೆ. ಯಾರನ್ನೋ ಮೆಚ್ಚಿಸಲು ಪ್ರೆಸ್ ಮೀಟ್ ಮಾಡಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಜೆಡಿಎಸ್ ಪಕ್ಷ ಟೀಕಾಸ್ತ್ರ ಪ್ರಯೋಗಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಜೆಡಿಎಸ್, ಸಚಿವ ಕೃಷ್ಣ ಬೈರೇಗೌಡ ಅವರ ಅಸಹಾಯಕತೆಗೆ ಮರುಕವಿದೆ ಎಂದು ಟೀಕಿಸಿದೆ. ಸಚಿವ ಕೃಷ್ಣ ಬೈರೇಗೌಡ ಅವರ ಅಸಮರ್ಥತೆಯಿಂದ ರಾಜ್ಯದಲ್ಲಿ ಕಂದಾಯ ಇಲಾಖೆ ಹಳ್ಳ ಹಿಡಿದಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳು ಭ್ರಷ್ಟಾಚಾರದ ಕೊಂಪೆಯಾಗಿದ್ದು, ಲಂಚವಿಲ್ಲದೇ ಅಲ್ಲಿ ಯಾವುದೇ ಕಡತಗಳು ಮೇಲೇಳುವುದಿಲ್ಲ ಎಂದು ಆರೋಪಿಸಿರುವ ಜೆಡಿಎಸ್, ಯಾರನ್ನೋ ಮೆಚ್ಚಿಸಲು ಪ್ರೆಸ್ ಮೀಟ್ ಮಾಡುವುದನ್ನು ಬಿಟ್ಟು, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಮೊದಲು ಕಡಿವಾಣ ಹಾಕಿ ಎಂದು ಎದಿರೇಟು ನೀಡಿದೆ.
ಗುಂಡಿ ಮುಚ್ಚಿ ಎಂದು ಅಸಹಾಯಕರಾಗಿ ಟ್ವೀಟ್ ಮಾಡಿದ್ರಲ್ಲ, ಆ ರಸ್ತೆ ಗುಂಡಿ ಮುಚ್ಚಿದ್ರಾ..? ಮೊದಲು ಮತಹಾಕಿದ ನಿಮ್ಮ ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಿ ಎಂದು ಸಚ...
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಒಕ್ಕಲಿಗ ನಾಯಕರು ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಕ್ಕಲಿಗ ಸಮುದಾಯದ ನಾಯಕರು ಮನವಿ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಒಕ್ಕಲಿಗ ಮುಖಂಡರ ನಿಯೋಗ ಸಿಎಂ ಅವರನ್ನು ಭೇಟಿಯಾಗಿ ಮುನಿರತ್ನ ವಿರುದ್ಧ ಕಮಿಷನ್ ದಂಧೆ, ಅತ್ಯಾಚಾರ, ಹನಿಟ್ರ್ಯಾಪ್, ಎಚ್‌ಐವಿ ಹರಡುವಿಕೆ ಸೇರಿದಂತೆ ವಿವಿಧ ಆರೋಪಗಳು ಇವೆ. ಹಾಗಾಗಿ, ಎಲ್ಲಾ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಮನವಿ ಮಾಡಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಕಚೇರಿ, ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಜಿ ಸಚಿವರಾದ ಮುನಿರತ್ನ ಅವರ ಮೇಲಿನ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸುವಂತೆ ಮನವಿ ಸಲ್ಲಿಸಿದರು ಎಂದು ತಿಳಿಸಿದೆ....
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೊತ್ತನೂರಿನಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ನಿರ್ದೇಶನ ನೀಡಿದ್ದಾರೆ.
22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಸೂಚಿಸಿರುವ ಅವರು, ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ. ಆದರೆ, ಅಧಿಕಾರಿಗಳು ಇಲಾಖೆಗೆ ಮಂಜೂರಾದ ಭೂಮಿಯನ್ನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಈಶ್ವರ್ ಬಿ. ಖಂಡ್ರೆ, ಬೆಂಗಳೂರಿನಲ್ಲಿ ಹಸಿರು ಹೊದಿಕೆ ಹೆಚ್ಚಿಸುವ ಉದ್ದೇಶದಿಂದ 1999-2000 ಸಾಲಿನಲ್ಲಿ ಕೆಆರ್ ಪುರಂ ಬಳಿಯ ಕೊತ್ತನೂರು ಸರ್ವೇ ನಂ. 48ರಲ್ಲಿನ 22.08 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು. ಆದರೆ, ಈ ಜಮೀನನ್ನು ವಶಕ್ಕೆ ಪಡೆದು ಅರಣ್ಯ ಬೆಳೆಯುವಲ್ಲಿ ಈ ಹಿಂದಿನ ಅರಣ್ಯ ಅ...
ಮೈಸೂರು: ಜಗದ್ವಿಖ್ಯಾತ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಯಾರಿ ಸಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆ ಕೂಡಾ ಅರಮನೆ ಆವರಣದಲ್ಲಿ ಗಮನಸೆಳೆಯುತ್ತಿದೆ.
ಈ ನಡುವೆ, ಶುಕ್ರವಾರ ಎರಡು ಆನೆಗಳು ಅರಮನೆಯ ಆವರಣದಿಂದ ಏಕಾಏಕಿ ಹೊರನಡೆದು ಆತಂಕ ಸೃಷ್ಟಿಸಿತು.
ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟದ ಸಮಯದಲ್ಲಿ ಗಲಾಟೆ ನಡೆದಿದೆ. ಧನಂಜಯ ಆನೆಯಿ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಬೆದರಿದ ಕಂಜನ್ ಆನೆ ಓಡಲಾರಂಭಿಸಿದೆ. ಅದನ್ನು ಕಂಡ ಧನಂಜಯ ಆನೆ ಕಂಜನ್ ಆನೆಯನ್ನು ಬನ್ನಟ್ಟಿದೆ.
ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿ ಜನರಿದ್ದ ಸ್ಥಳಕ್ಕೆ ಧಾವಿಸಿದೆ. ಅದಾಗಲೇ ಮಾವುತ ಧನಂಜಯನನ್ನು ನಿಯಂತ್ರಣ ಮಾಡಿದ್ದಾನೆ. ಬಳಿಕ ಕಂಜನ್ ಆನೆಯನ್ನು ಅರಮನೆ ಆವರಣಕ್ಕೆ ಕರೆ ತರಲಾಗಿದೆ....
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 14 ರಂದು ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಇತಿಹಾಸ ಸೃಷ್ಟಿಸಿದೆ. ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 35.85 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ.
ಈ ಕುರಿತಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಹಕ ಅಧ್ಯಕ್ಷರಾದ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ಹೈಕೋರ್ಟ್‌ನ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ಒದಗಿಸಿದ್ದಾರೆ.
ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2 ಲಕ್ಷ ಪ್ರಕರಣಗಳು ಮತ್ತು 33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಕೂಡಾ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡಿವೆ....
ಬೆಂಗಳೂರು : ರಾಯಚೂರ ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ-ಲಿಂಗಸುಗೂರು ರಸ್ತೆ ವೃತ್ತದವರೆಗಿನ 78 ಕಿಲೋಮೀಟರ್ ರಸ್ತೆಯ ಅಭಿವೃದ್ದಿ ಕಾಮಗಾರಿಯಲ್ಲಿ ಸುರಕ್ಷತೆಗೆ ಒತ್ತು ನೀಡಬೇಕು, ಗುಣಮಟ್ಟದ ಹಾಗೂ ಕ್ಷಿಪ್ರಗತಿಯಲ್ಲಿ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.
ಇಂದು ವಿಕಾಸಸೌಧಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಎನ್ ಎಸ್ ಭೋಸರಾಜು ಶಾಸಕರಾದ ಬಿ.ಆರ್ ಪಾಟೀಲ್, ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಬಸವನಗೌಡ ದದ್ದಲ್, ಸರಕಾರಾದ ಪ್ರಧಾನ ಕಾರ್ಯದರ್ಶಿ ಲೋಕೋಪಯೋಗಿ ಇಲಾಖೆ ಸೆಲ್ವಕುಮಾರ್ ಸೇರಿದಂತೆ, ಕೆಆರ್‌ಡಿಸಿಎಲ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಯಚೂರ ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ-ಲಿಂಗಸುಗೂರು ರಸ್ತೆ ವೃತ್ತದವರೆಗಿನ 78 ಕಿಲೋಮೀಟರ್ ಉದ್ದ ರಸ್ತೆಯ ಅಭಿವೃದ್ದಿ ಕಾಮಗಾರಿಯಲ್ಲಿ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಬೇಕು. ಹಗಲು ರಾತ್ರಿ ಕಾಮಗಾರಿ ನಡೆ...
ದಾವಣಗೆರೆ: ದಾವಣಗೆರೆಯ ಚಾಮರಾಜಪೇಟೆ ವೃತ್ತದ ಬಳಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 30ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದರು. ಗಲಭೆ ಸಂಬಂಧ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವತ್ತಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದಾರೆ....