Friday, January 30

ರಾಜ್ಯ

ಬೊಮ್ಮಾಯಿ ಸರ್ಕಾರದ ವಿರುದ್ದದ ‘ಪೇಸಿಎಂ’ ಅಭಿಯಾನಕ್ಕೆ ಕಾರಣರಾಗಿದ್ದ ಕೆಂಪಣ್ಣ ವಿಧಿವಶ

ಬೊಮ್ಮಾಯಿ ಸರ್ಕಾರದ ವಿರುದ್ದದ ‘ಪೇಸಿಎಂ’ ಅಭಿಯಾನಕ್ಕೆ ಕಾರಣರಾಗಿದ್ದ ಕೆಂಪಣ್ಣ ವಿಧಿವಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶರಾಗಿದ್ದಾರೆ. ಬೆಂಗಳೂರಿನ ಹೊಸಕೋಟೆಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಹೃದಯಾಘಾತಕ್ಕೊಳಗಾಗಿ ಕೊನೆಯಿಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವಿಧಾನಸಭೆಯ ಅವಧಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು. ಈ ಆರೋಪವನ್ನೇ ಮುಂದಿಟ್ಟು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ ‘ಪೇ ಸಿಎಂ’ ಅಭಿಯಾನ ನಡೆಸಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಇತ್ತೀಚೆಗಷ್ಟೇ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತಕ್ಕೊಳಗಾದ ಅವರು ಕೊನೆಯುಸಿರೆಳೆದರು ಎಂದು ಸಂಬಂಧಿಕರು ಹೇಳಿದ್ದಾರೆ....
ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಕುರಿತಂತೆ ಕಾಂಗ್ರೆಸ್ ನಾಯಕ ಮನೋಹರ್ ನೇತೃತ್ವದ ನಿಯೋಗವು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ. ಈ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗವು ಬುಧವಾರ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಯತ್ನಾಳ್​ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಿತ್ತು....
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಎಫ್ಐಆರ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಎಫ್ಐಆರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದ ಗಲಭೆ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲ‌ ಕೋಮುಗಲಭೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ, ಫೋಟೋ ಹಂಚಿರುವ ಆರೋಪದಲ್ಲಿ ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀಡಿಯೋ, ಫೊಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ನೀಡಿತುವ ಆರೋಪಡಿ ಎಫ್​​ಐಆರ್ ದಾಖಲಾಗಿದೆ....
‘ಒನ್ ನೇಷನ್ ಒನ್ ಎಲೆಕ್ಷನ್’; ಕೇಂದ್ರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

‘ಒನ್ ನೇಷನ್ ಒನ್ ಎಲೆಕ್ಷನ್’; ಕೇಂದ್ರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ‘ಒಂದು ದೇಶ, ಒಂದು ಚುನಾವಣೆ’ ಸಂಬಂಧ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಐತಿಹಾಸಿಕ ತೀರ್ಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಮೆಚ್ಚುಗೆ ಸೂಚಿಸಿದ್ದಾರೆ. ಮಾಧ್ಯಮಗಳಿಗೆ ಇಂದು ಹೇಳಿಕೆ ಬಿಡುಗಡೆ ಮಾಡಿದ ಅವರು, ದೇಶದ ಹಿತಾಸಕ್ತಿಯ ಪ್ರಮುಖ ಉದ್ದೇಶ ಇದರ ಹಿಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 1951, 1967 ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಕಾನೂನು ಆಯೋಗವು 1999ರ ತನ್ನ 170ನೇ ವರದಿಯಲ್ಲಿ ಐದು ವರ್ಷಗಳಿಗೆ ಒಮ್ಮೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕುರಿತು ತಿಳಿಸಿತ್ತು ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿಯಲ್ಲಿರುವ ಅಂಶಗಳ ಕುರಿತು ಅವರು ಗಮನ ಸೆಳೆದಿದ್ದಾರೆ. ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಎರಡನೇ ಹಂತದಲ್ಲಿ ಜಿಲ್ಲಾ ಪಂ...
ರಾಹುಲ್‌ ಗಾಂಧಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ; ಅಶೋಕ್ 

ರಾಹುಲ್‌ ಗಾಂಧಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ; ಅಶೋಕ್ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು. ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗ...
ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದಿರುವ ಅವರು, ಅದ್ಧೂರಿ ದಸರಾವು ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿದ್ದಾರೆ. ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದವರು ಪ್ರತಿಪಾದಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚ...
ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ನಟ ಡಾಲಿ ಧನಂಜಯ್ ಮತ್ತು ತೆಲುಗು ನಟ ಸತ್ಯದೇವ್ ಕಾಂಬಿನೇಶನ್‌ನ 'ಜೀಬ್ರಾ' ಚಿತ್ರ ಸಿನಿಲೋಕದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ. ಇದೊಂದು ಮಲ್ಟಿಸ್ಟಾರರ್ ಸಿನಿಮಾ ಜೊತೆಗೆ ಪ್ಯಾನ್ ಇಂಡಿಯಾ ಸಿನಿಮಾ ಎಂದು ಧನಂಜಯ್ ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ 'ಜೀಬ್ರಾ' ಬಿಡುಗಡೆಯಾಗಲಿದೆ. ಅಕ್ಟೋಬರ್ 31ರಂದು ಕನ್ನಡ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ 'ಜೀಬ್ರಾ' ತೆರೆ ಕಾಣಲಿದೆಯಂತೆ. ಈ ನಡುವೆ, 'ಜೀಬ್ರಾ' ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಮೋಷನ್ ಪೋಸ್ಟರ್ ಗಮನಸಳೆದಿದೆ....
ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್‌ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿಧಾನಸೌಧದಲ್ಲಿ ಪಾಕ್‌ ಜಿಂದಾಬಾದ್‌ ಕೂಗಿದಾಗ ಹಾಗೆ ಆಗಿಯೇ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು. ಬಾಂಬ್‌ ಸ್ಫೋಟವಾದಾಗಲೂ ಅದು ವ್ಯಾಪಾರದ ಜಗಳ ಎಂದು ಹೇಳಿದ್ದರು. ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆಯೂ ಹೀಗೆಯೇ ಹೇಳಿದ್ದರು. ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದು ಬಗ್ಗೆ ಮೊದಲು ಪರಿಶೀಲಿಸಲಿ. ಆದರೆ ಸಚಿವ ಪ್ರಿಯಾಂಕ್‌ ಖರ್ಗೆಯಂಥವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಾರತವನ್ನು ಎರಡು ಭಾಗ ಮಾಡಿದ ಕಾಂಗ್ರೆಸ್‌ ಮತ್ತೆ ತಲೆಯತ್ತಿ ಮಂಡ್ಯದಲ್ಲಿ ಕೋಮುಗಲಭೆಗೆ ಕಾರಣವಾಗಿದೆ. ವಿದೇಶಕ್ಕೆ ಹೋದ ರಾಹುಲ್‌ ಗಾಂಧಿ, ಭಾರತದ ವಿರುದ್ಧ ಮಾತಾಡುವುದರ ಜೊತೆಗೆ ಮೀಸಲಾತಿ ತೆಗೆದುಹಾ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ

ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನೂತನ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದರು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಮಂಗಳವಾರ 50 ಬಸ್‌ಗಳನ್ನು ಉದ್ಘಾಟನೆ ಮಾಡಲಾಗಿದೆ‌. ಈ ಬಸ್ಸುಗಳು ಅಶೋಕ ಲೈಲಾಂಡ್ ಕಂಪನಿಯಿಂದ ತಯಾರಿಸಲಾಗಿದ್ದು, 109 ಬಸ್ಸುಗಳ ಖರೀದಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ರೂ 45.00 ಕೋಟಿಗಳ ಅನುದಾನವನ್ನು ನೀಡಿದೆ. ಈ ಬಸ್‌ಗಳಲ್ಲಿ 200 HP ಸಾಮರ್ಥ್ಯದ BS-6 ಎಂಜಿನ್‌ಗಳನ್ನು ಅಳವಡಿಸಿದ್ದು, 50 ಪ್ರಯಾಣಿಕ ಆಸನಗಳನ್ನು ಹೊಂದಿವೆ. ಈ ಬಸ್‌ಗಳನ್ನು ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಬಸ್ ಕೋಡ್‌ನಂತೆ ನಿರ್ಮಿಸಲಾಗಿದೆ. ಪ್ರಯಾಣಿಕರ ಸುರಕ್ಷತ...
ರಾಯಚೂರಲ್ಲಿ ಸಂಭ್ರಮ, ಸಡಗರದ ಕಲ್ಯಾಣ ಕರ್ನಾಟಕ ಉತ್ಸವ

ರಾಯಚೂರಲ್ಲಿ ಸಂಭ್ರಮ, ಸಡಗರದ ಕಲ್ಯಾಣ ಕರ್ನಾಟಕ ಉತ್ಸವ

ಪ್ರಮುಖ ಸುದ್ದಿ, ರಾಜ್ಯ
ರಾಯಚೂರು: 77ನೇ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಅಂಗವಾಗಿ ರಾಯಚೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶವನ್ನು ನೀಡಿದರು. ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ರಾಯಚೂರು ನಗರಸಭೆಯ ಅಧ್ಯಕ್ಷರಾದ ನರಸಮ್ಮ ಮಾಡಗಿರಿ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ರಾಯಚೂ...