ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ
ಬೆಂಗಳೂರು; ವನಿತೆಯರ ಪರ ಧ್ವನಿಯಾದ ಮಾಜಿ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ, ಇದೀಗ ರಾಜ್ಯದ ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಮಹಿಳೆಯರ ಸೈನ್ಯ ಕಟ್ಟುವುದಾಗಿ ಘೋಷಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿ ಸೆಪ್ಟೆಂಬರ್ 15ಕ್ಕೆ 40 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಾವು ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿಗಳ ಮಟ್ಟದಲ್ಲಿ ಈ ಅಭಿಯಾನ ಮಾಡಲು ತೀರ್ಮಾನಿಸಿದ್ದೇವೆ. ರಾಜ್ಯಾದ್ಯಂತ ಮಹಿಳೆಯರು ಮಹಿಳಾ ಕಾಂಗ್ರೆಸ್ ಸೇರಿ ಕೈ ಜೋಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದ ಅವರು, ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮೀ ಯೋಜನೆ 1.21 ಕೋಟಿ ಮಹಿಳೆಯರಿಗೆ ತಲುಪಿದೆ. ಗೃಹಜ್ಯೋತಿ 1.60 ಕೋಟಿ ಮನೆಗಳನ್ನು ತಲುಪಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರು 283 ಕೋ...





