ನಾಗಮಂಗಲ ಗಲಭೆ; ಹಿಂದೂಗಳ ವಿರುದ್ಧ ಎಫ್‌ಐಆರ್ ರದ್ದುಪಡಿಸದಿದ್ದರೆ ಉಗ್ರ ಹೋರಾಟ, ಬಿಜೆಪಿ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ಅವರು ಕಟು ಮಾತುಗಳಿಂದ ಟೀಕಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು...






