
‘ನಾನು ತಪ್ಪಿತಸ್ಥನಲ್ಲ’: ನ್ಯಾಯಾಲಯಕ್ಕಿಂತ ಕಾಂಗ್ರೆಸ್ ಪಕ್ಷ ದೊಡ್ಡದೇ? ಎಂದು ಅಶೋಕ್ ಪ್ರಶ್ನೆ
ಬೆಂಗಳೂರು: 'ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ' ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.ತಮ್ಮ ಮೇಲಿನ ಆರೋಪ ಕುರಿತು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅಶೋಕ್, ಕಾಂಗ್ರೆಸ್ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ. ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಇದ್ದರು. ಅವರು ಕೂಡ ಈ ಪ್ರಕರಣವನ್ನು ತನಿಖೆಗೆ ವಹ...




