Saturday, August 8

ರಾಜ್ಯ

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 5ರಿಂದ 7ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ 204.5 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ನದಿಗಳ ನೀರಿನ ಮಟ್ಟ ಏರಿಕೆ, ಪ್ರವಾಹ, ತಗ್ಗು ಪ್ರದೇಶಗಳಲ್ಲಿ ಜಲಾವೃತ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಅಪಾಯವಿದೆ. ಜುಲೈ 3 ಮತ್ತು 4ರಂದು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿರಲಿದೆ. ಈ ಅವಧಿಯಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಇನ್ನೊಂದೆಡೆ, ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ಇದ...
ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿವೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿ ಹಾಗೂ ಸುರಕ್ಷತಾ ನಿಯಮಗಳ ಅನುಷ್ಠಾನದಲ್ಲಿನ ವೈಫಲ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು. ಕಾರ್ಮಿಕರ ಜೀವ ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಎಲ್ಲಾ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಕ್ವಾರಿ ಮತ್ತು ಕ್ರಷರ್‌ಗಳಲ್ಲಿ ಸುರಕ್ಷತಾ ನಿಯಮಗಳನ್ನು ...
ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರದ ಔಟರ್ ರಿಂಗ್ ರೋಡ್ (ORR) ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ರಸ್ತೆ ಹಾಗೂ ಫುಟ್‌ಪಾತ್ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ರಸ್ತೆ ವ್ಯವಸ್ಥೆಯನ್ನು ಪರಿಶೀಲಿಸಿದ ಸಚಿವರು, ದೊಡ್ಡಾನೆಕ್ಕುಂದಿ ಜಂಕ್ಷನ್‌ನಲ್ಲಿ ಹೊಸದಾಗಿ ಡಾಂಬರು ಹಾಕಿದ್ದ ರಸ್ತೆಯನ್ನೇ ಮತ್ತೆ ಅಗೆದಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡ ಸಚಿವರು, ನಗರದಲ್ಲಿ ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣದಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು."ವ್ಯಾಪಾರ ಮಾಡಬೇಡಿ ಎಂದು ನಾವು ಹೇಳುತ್ತಿಲ್ಲ. ಆದರೆ ಮುಖ್ಯ ರಸ್ತೆಗಳ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಸಾರ್ವಜನಿಕರಿಗೆ ತೊಂದರೆ...
ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ಸಂಬಂಧಿತ ಇಲಾಖೆಗಳು ನಿರಂತರ ನಿಗಾ ವಹಿಸಿ ನಿಯಮಗಳ ಅನುಷ್ಠಾನವನ್ನು ಖಚಿತಪಡಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ."ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ನಡೆಯುತ್ತಿದ್ದರೂ ಯಾರ ಮೇಲೂ ಕ್ರಮ ಆಗಿಲ್ಲ. ಇದೇ ಕಾರಣಕ್ಕೆ ಇಂತಹ ಘಟನೆಗಳು ಮರುಕಳಿಸುತ್ತಿವೆ. ಕ್ವಾರಿ ಮಾಲೀಕರು ಕೂಡ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು" ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸೂಕ್...
ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣ ರಾಜ್ಯ ರಾಜಕೀಯದಲ್ಲಿ, ವಿಶೇಷವಾಗಿ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ತಮ್ಮದಲ್ಲ ಎಂದು ಡಿ.ವಿ. ಸದಾನಂದಗೌಡ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. "ವೈರಲ್ ಆಗಿರುವ ಆಡಿಯೋ ಅಸಲಿಯೇ ಅಥವಾ ನಕಲಿಯೇ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಬಗ್ಗೆ ಸದಾನಂದಗೌಡ ಅವರೇ ಅದು ತಮ್ಮ ಧ್ವನಿಯಲ್ಲ ಎಂದು ಹೇಳಿದ್ದಾರೆ" ಎಂದು ವಿಜಯೇಂದ್ರ ತಿಳಿಸಿದರು.ಪಕ್ಷದ ಹಿರಿಯ ನಾಯಕರ ಹೆಸರಿನೊಂದಿಗೆ ಸಂಬಂಧಿಸಿದ ಇಂತಹ ಸೂಕ್ಷ್ಮ ವಿಷಯದಲ್ಲಿ ಯಾವುದೇ ತನಿಖೆ ಅಥವಾ ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ಅವರು ಹೇಳಿದರು. ಇದೇ ವೇಳೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಕುರಿತು ಪಕ್ಷದಲ್ಲಿ ಉಂಟಾಗಿದ್ದ ವಿವಾದಕ್ಕೆ ಈಗ ತೆರೆಬಿದ್ದಿದೆ ...
ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

ಪ್ರಮುಖ ಸುದ್ದಿ, ರಾಜ್ಯ
ರಾಮನಗರ: ರಾಜಧಾನಿ ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದೆ. ಮಂಗಳವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದ್ದು, ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕುಸಿದು ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ.ಹಿಟಾಚಿ ಯಂತ್ರದ ಮೂಲಕ ಕಲ್ಲು ತೆಗೆಯುವ ಕಾಮಗಾರಿ ನಡೆಯುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕ್ವಾರಿಯಲ್ಲಿ ಬಿಹಾರ ಮೂಲದ 10ರಿಂದ 15 ಕಾರ್ಮಿಕರು ಹಾಗೂ 2ರಿಂದ 3 ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಐವರು ಕಾರ್ಮಿಕರನ್ನು ತಕ್ಷಣವೇ ರಾಮನಗರದ ಆರ್.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಪ...
ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಮನಗರ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಐವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಕೈ, ಕಾಲು, ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್, "10 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆಯೇ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ದುರಂತಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು" ಎಂದು ಆಗ್ರಹಿಸಿದರು.ಇದೇ ವೇಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ದ...
‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ

‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ಪರಿಶೀಲನೆ ವೇಳೆ ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆಗಳನ್ನು ಕೇಳುತ್ತಿರುವ ಕ್ರಮವನ್ನು ವಿರೋಧ ಪಕ್ಷವಾದ ಜೆಡಿಎಸ್ ತೀವ್ರವಾಗಿ ಟೀಕಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್, ಉಚಿತ ವಿದ್ಯುತ್ ಯೋಜನೆಗೆ ಜಾತಿ ಪ್ರಮಾಣ ಪತ್ರ ಹಾಗೂ ಪ್ಯಾನ್ ಕಾರ್ಡ್ ಕೇಳುವುದರ ಹಿಂದಿನ ಉದ್ದೇಶವೇನು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ."ಯಾವುದೇ ಷರತ್ತುಗಳಿಲ್ಲದೆ ಎಲ್ಲರಿಗೂ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಈಗ ಮನೆ-ಮನೆ ಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳನ್ನು ಯೋಜನೆಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ" ಎಂದು ಜೆಡಿಎಸ್ ಆರೋಪಿಸಿದೆ. ಇದಲ್ಲದೆ, "ಉಚಿತ ವಿದ್ಯುತ್ ಪಡೆಯಲು ಪ್ಯಾನ್ ಕಾರ್ಡ್ ಯಾಕೆ ಬೇಕು? ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ? ಕರ್ನಾಟಕದ ನಿವಾಸಿ ಎಂಬುದನ್ನು ದೃಢೀಕರಿಸಲು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಸಾಕಾಗುವುದಿಲ್ಲವೇ?...
ಗೃಹಲಕ್ಷ್ಮಿ ಹಣ ಅಕ್ರಮ ಆರೋಪ; ಸಿಎಜಿ ವರದಿ ಸಂಬಂಧ ವಿಶೇಷ ತನಿಖೆಗೆ ಸಿ.ಟಿ.ರವಿ ಆಗ್ರಹ

ಗೃಹಲಕ್ಷ್ಮಿ ಹಣ ಅಕ್ರಮ ಆರೋಪ; ಸಿಎಜಿ ವರದಿ ಸಂಬಂಧ ವಿಶೇಷ ತನಿಖೆಗೆ ಸಿ.ಟಿ.ರವಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಹಣದ ವಿಚಾರದಲ್ಲಿ ಸಿಎಜಿ, ನಕಲಿ ಖಾತೆಗಳಿಗೆ ಹಣ ಹೋಗಿದೆ. ಒಂದೇ ಖಾತೆಗೆ ಹಣ ಹಾಕಿದ್ದಾರೆ, ಸತ್ತವರ ಹೆಸರಿಗೆ ಹಣ ಹೋಗಿದೆ ಎಂದು ತಿಳಿಸಿದೆ. ಇದರ ಕುರಿತು ಯಾಕೆ ಇನ್ನೂ ಎಫ್‍ಐಆರ್ ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಡವರ ಹೆಸರಿನಲ್ಲಿ ಲೂಟಿಯನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸುವುದೇ ಎಂದು ಪ್ರಶ್ನೆ ಹಾಕಿದರು. ಯಾಕೆ ಇವತ್ತಿನವರೆಗೂ ಎಸ್‍ಐಟಿ ರಚಿಸಿಲ್ಲ? ಎಂದರು. ಗೃಹಲಕ್ಷ್ಮಿ ಯೋಜನೆಯ 2 ತಿಂಗಳಿನ 5 ಸಾವಿರ ಕೋಟಿ ಹಣ ಖಾತೆಗೇ ಜಮೆ ಆಗಿಲ್ಲವೆಂದು ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆ ಆಗಿದೆ. ಅವತ್ತಿನ ಸಚಿವೆ ಆರಂಭದಲ್ಲಿ ಉಡಾಫೆ ಮಾತನಾಡಿದ್ದರು. ಮಹೇಶ್ ಟೆಂಗಿನಕಾಯಿಯವರು ದಾಖಲೆ ತಂದಿಟ್ಟರು. ಹೈದರಾಲಿ ಸೈನಿಕರ ಸಂಬಳ ಮುಂದೂಡಿ ಸಂಬಳ ಎಗರಿಸುತ್ತಿದ್ದ ವಿಚಾರವನ್ನು ಸುರೇಶ್ ಕುಮಾರ್ ಸದನದ ಮುಂದಿಟ್ಟಿದ್ದರು ಎಂದು ಗಮನ ಸೆಳೆದರು.ಆ ಹಣ ಎಲ್ಲಿ ಹೋಗಿದೆ? ಅದರ ತನಿಖೆಗೆ ಹಾಗೂ ಈಗಿನ ಸಿಎಜಿ ವರದಿ...
ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಸಂಬಂಧ ಕಾಂಗ್ರೆಸ್ ನವರು ಬಿಜೆಪಿ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಹೇಳುವ ರೀತಿ ಅಯೋಧ್ಯೆಯ ಟ್ರಸ್ಟ್'ನಲ್ಲಿ ಬಿಜೆಪಿಯವರು ಯಾರೂ ಇಲ್ಲ. ಆದರೂ ಬಿಜೆಪಿಯವರು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಆಗಿರುವುದರಿಂದ ನಮಗೂ ನೋವಾಗಿದೆ. ಅಯೋಧ್ಯೆ ಐದು ಶತಮಾನಗಳ ಹೋರಾಟ. ಲಕ್ಷಾಂತರ ಜನ ರಾಮಮಂದಿರ ಪುನರ್ ನಿರ್ಮಾಣಕ್ಕಾಗಿ ಜೀವ ತೆತ್ತಿದ್ದಾರೆ. ಕೋಟ್ಯಂತರ ಜನರ ಭಾವನೆ ಬೆರೆಸಿ ಮಂದಿರ ನಿರ್ಮಾಣ ಆಗಿದೆ ಎಂದರು.ರಾಮಮಂದಿರದ ನಿರ್ಮಾಣ ವಿರೋಧಿಗಳನ್ನು ಸೋಲಿಸಿ ಪರವಾಗಿದ್ದವರಿಗೆ ಮತ ಹಾಕಿ ಜನ ಅವರನ್ನು ಅಧಿಕಾರಕ್ಕೆ ತಂದಿದ್ದಾರೆ. ಕೆಲವರು ಹಣ ದುರುಪಯೋಗ ಮಾಡಿದ್ದಾರೆ. ಆರೋಪ ಬಂದ ತಕ್ಷಣ ಸರ್ಕಾರ ಎಸ್‍ಐಟಿ ರಚಿಸಲಾಗಿದೆ. ಎಂಟಕ್ಕೂ ಹೆಚ್ಚು ಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆಯಲಾಗಿದೆ ...