Thursday, January 29

ರಾಜ್ಯ

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾಯಕರ ಸಂಕಲ್ಪ

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾಯಕರ ಸಂಕಲ್ಪ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ ಪ್ರಾರಂಭಿಸಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಪ್ರತಿ ಬೂತ್‌ನಲ್ಲಿ ಕನಿಷ್ಠ 400 ಹೊಸ ಸದಸ್ಯರನ್ನು ನೇಮಕ ಮಾಡುವ ಗುರಿಯನ್ನು ಪಕ್ಷ ಹೊಂದಿದೆ ಎಂದರು. ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಣೆ ಸಹಿತ ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುತ್ತೇವೆ, ಜೊತೆಗೆ ರಾಜ್ಯವನ್ನು ಮತ್ತೆ ಬಿಜೆಪಿ ತೆಕ್ಕೆಗೆ ತರುತ್ತೇವೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಸದಸ್ಯತ್ವ ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು....
ರಾಯಚೂರು ಶಾಲಾ ಬಸ್‌ ಅಪಘಾತ: ಇಬ್ಬರು ಮಕ್ಕಳ ಸಾವು, 18 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು ಶಾಲಾ ಬಸ್‌ ಅಪಘಾತ: ಇಬ್ಬರು ಮಕ್ಕಳ ಸಾವು, 18 ವಿದ್ಯಾರ್ಥಿಗಳಿಗೆ ಗಾಯ

ಪ್ರಮುಖ ಸುದ್ದಿ, ರಾಜ್ಯ
ರಾಯಚೂರು: ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್‌ ತಾಲೂಕಿನ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟು, ಒಟ್ಟು 18 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಯಚೂರಿನಲ್ಲಿ ಸಂಭವಿಸಿದ ದುರಂತದ ಕುರಿತು ಕೂಡಲೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಚಿವರು ಸೂಕ್ತ ಚಿಕಿತ್ಸೆ ಕೊಡಿಸಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಲು ಅಧಿಕಾರಿಗಳನ್ನು ನಿಯೋಜಿಸಲು ಸೂಚನೆ ನೀಡಿದ್ದಾರೆ. ಈ ಘಟನೆಯಲ್ಲಿ ಕುರ್ಡಿ ಗ್ರಾಮದ ಸಮರ್ಥ (7 ವರ್ಷ) ಹಾಗೂ 7 ನೇ ತರಗತಿಯ ವಿದ್ಯಾರ್ಥಿ ಶ್ರೀಕಾಂತ (12 ವರ್ಷ) ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆಯ ಸುದ್ದಿ ತಿಳಿದು ನಿಜಕ್ಕೂ ತೀವ್ರ ಬೇಸರವಾಯಿತು. ಮೃತ ವಿದ್ಯಾರ್ಥಿಗಳಿಗೆ ಸಂತಾಪವನ್ನು ಸೂಚಿಸುತ್ತೇನೆ. ಸ್ಕೂಲ್ ಬಸ್‌ನಲ್ಲಿ ಇದ್...
ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ:  ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ: ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೌರಿ ಗಣೇಶ ಹಬ್ಬ ಹಾಗೂ ಮುಂದಿನ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಇಲಾಖೆ ರಾಜ್ಯಾದ್ಯಂತ 22 ವಿಶೇಷ ರೈಲುಗಳನ್ನು ಪ್ರಕಟಿಸಿದೆ. ಗಣೇಶ ಚತುರ್ಥಿ ಸಂದರ್ಭದ ವಿಶೇಷ ರೈಲುಗಳು: ಸೆಪ್ಟೆಂಬರ್ 5 ರಿಂದ 7 ರವರೆಗೆ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ನಡೆಸಲಿದೆ. ಬೆಂಗಳೂರು ಕಲಬುರಗಿ ನಡುವೆ ವಿಶೇಷ ರೈಲು ಬೆಂಗಳೂರು SMVTಯಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿತಲುಪಲಿದೆ.  ಕಲಬುರಗಿಯಿಂದ ಬೆಂಗಳೂರು: ಸೆಪ್ಟೆಂಬರ್ 6 ರಿಂದ 8 ರವರೆಗೆ ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಬೆಂಗಳೂರು SMVT ತಲುಪಲಿದೆ. ದೀಪಾವಳಿ ಸಂದರ್ಭದ ವಿಶೇಷ ರೈಲುಗಳು: ಅಕ್ಟೋಬರ್ 30 ಮತ್ತು ನವೆಂಬರ್ 2 ರವರೆಗೆ ಮೈಸೂರು- ವಿಜಯಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ವಿಜಯಪುರದಿಂದ ಮೈಸೂರಿಗೆ ಹಿಂದಿರುಗುವ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಸಂಚರಿಸಲಿದೆ. ಯಶವಂತಪುರ-ಬೆಳಗಾವಿ ನಡುವೆ ಅಕ್ಟೋಬರ್ 30 ರ...
ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ; ನಿಯಮ ಮೀರಿದವರಿಗೆ ದಂಡ

ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ; ನಿಯಮ ಮೀರಿದವರಿಗೆ ದಂಡ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ ಭಾರಿಸುತ್ತಿದ್ದು ಸೂಕ್ತ ಮುನ್ನೆಚ್ಚರಿಕೆ ಕ್ರಮಕ್ಕೆ ರಾಜ್ಯಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ನೈರ್ಮಲ್ಯ ಕಾಪಾಡದವರಿಗೆ ದಂಡವಿಧಿಸಲು ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿರುವ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಇತರ ಜಿಲ್ಲೆಗಳಲ್ಲಿ ಡಿಸಿಗಳಿಗೆ ಆದೇಶ ನೀಡಿದೆ. ಖಾಲಿ ನಿವೇಶನಗಳನ್ನು ಪರಿಶೀಲಿಸಿ ನೋಟಿಸ್‌ಗಳನ್ನು ನೀಡಬೇಕು ಹಾಗೂ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಅಧಿಕಾರ ನೀಡಿದೆ. ಯಾರಿಗೆ ಎಷ್ಟು ದಂಡ? ನಗರ ಪ್ರದೇಶದ ಮನೆಗಳಿಗೆ 400 ರೂ. ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ನಗರ ಪ್ರದೇಶದ ವಾಣಿಜ್ಯ ಸ್ಥಳಗಳಿಗೆ 1,000 ರೂ. ಗ್ರಾಮೀಣ ಭಾಗಗಳ ವಾಣಿಜ್ಯ ಸ್ಥಳಗಳಿಗೆ 500 ರೂ. ನಗರ ಪ್ರದೇಶದ ನಿರ್ಮಾಣ ಸ್ಥಳ, ಖಾಲಿ ನಿವೇಶನಗಳಿಗೆ 2,000 ರೂ. ಗ್ರಾಮೀಣ ಪ್ರದೇಶದ ನಿರ್ಮಾಣ ಸ್ಥಳ, ಖಾಲಿ ನಿವೇಶನಗಳಿಗೆ 1,000 ರೂ. ಪುನರಾವರ್ತಿತ ಅಪರಾಧಗಳಿಗಾಗಿ, ಉಲ್ಲಂಘನೆಯ ಪ್ರತಿ ವಾರಕ್ಕೆ ಒಟ್ಟು ಮೊತ್ತದ 50% ಹೆಚ್ಚುವರಿ ದಂಡ.  ಸೊಳ್ಳೆಗಳ ಉತ್ಪತ್ತ...
ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಎತ್ತಿನಹೊಳೆ ಯೋಜನೆ'ಯು ಬೆಟ್ಟ ಅಗೆದು ಇಲಿ ಹಿಡಿದ ಯೋಜನೆಯಂತಾಗಿದೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಬಹಿರಂಗ ಪತ್ರ ತೀವ್ರ ಕುತೂಹಲ ಕೆರಳಿಸಿದೆ. ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಉಪಮುಖ್ಯಮಂತ್ರಿಗಳು ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕರ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿರುವ ಅವರು, ಕೆಲವು ಪ್ರಶ್ನೆಗಳನ್ನು ಸಿಎಂ ಅವರ ಮುಂದಿಟ್ಟಿದ್ದಾರೆ. ಆರಂಭದಲ್ಲಿ ಈ ಯೋಜನೆಯ ಉದ್ದೇಶವೇ ನಿರಂತರ ಬರದ ದವಡೆಗೆ ಸಿಲುಕಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಮತ್ತು ರಾಮನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸುವುದು. 38 ಪಟ್ಟಣಗಳಿಗೆ, 6657 ಗ್ರಾಮಗಳಿಗೆ, 527 ಕೆರೆ ತುಂಬಿಸುವುದು, 75 ಲಕ್ಷ ಜನರಿಗೆ, ಶುದ್ಧ ಕುಡಿಯುವ ನೀರು, ಆಗಿತ್ತು. ಇದಕ್ಕಾಗಿ ಆರಂಭಿಕ ಯೋಜನೆ ಮೊತ್ತ 8,323 ಕೋಟಿ. ನಂತರ ಪರಿಷ್ಕೃತ ಮೊತ್ತ 12912 ...
ಸಿಎ ನಿವೇಶನ ಅಕ್ರಮ ಆರೋಪ; ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಹೆಚ್ಚಿದ ಒತ್ತಡ

ಸಿಎ ನಿವೇಶನ ಅಕ್ರಮ ಆರೋಪ; ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಹೆಚ್ಚಿದ ಒತ್ತಡ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎ ನಿವೇಶನ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಪ್ರತಿಕ್ಷಗಳು ಪಟ್ಟುಹಿಡಿದಿವೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ವಿಧಾನಸಭೆಗಿಂತಲೂ ಹೆಚ್ಚು ವಿಧಾನ ಪರಿಷತ್ತಿಗೆ ದೊಡ್ಡ ಇತಿಹಾಸವಿದೆ. ಸ್ವಾತಂತ್ರ್ಯ ಪೂರ್ವದಲ್ಲೇ ಪ್ರಜಾಪ್ರತಿನಿಧಿ ಸಭೆ ಸ್ಥಾಪನೆಯಾಗಿತ್ತು. ಇದರ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸ್ವಜನ ಪಕ್ಷಪಾತ ಎಸಗಿದ್ದಾರೆ ಎಂದು ಆರೋಪಿಸಿದರು. ಸಿಎ ನಿವೇಶನ ಪಡೆಯಲು ಅಕ್ರಮ ಎಸಗಿರುವ ವಿಧಾನಪರಿಷತ್ ಬಿಜೆಪಿ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರನ್ನು ಎರಡೂ ಸ್ಥಾನದಿಂದ ಅನರ್ಹ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸದಸ್ಯರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ ಎಂದವರು ತಿಳಿಸಿದರು. 24.11.2002 ರಿಂದ 05.05.2005 ರ ವರೆಗೆ ಕರ್ನಾಟಕ ಗೃಹ ಮಂಡಳಿ ಸದಸ್ಯರಾಗಿದ್ದ ನಾರಾಯಣಸ್ವಾಮಿ ಅವರು ಈ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಹೊಸಕೋಟೆಯ ವೀರೇಂದ್ರ ಸಿಂಗ್ ಅವರ ಕುಟುಂಬದ ಭೂಮ...
ಹಗರಣಗಳಿಂದಾಗಿ ಕೋಮಾಕ್ಕೆ ಜಾರಿತೇ ಸರ್ಕಾರ? ಪ್ರವಾಹ ಹಾನಿಗೆ ಪರಿಹಾರವಿಲ್ಲ, ರಸ್ತೆಗುಂಡಿಗಳಿಂದ ಜನರಿಗೆ ಸಂಕಷ್ಟ

ಹಗರಣಗಳಿಂದಾಗಿ ಕೋಮಾಕ್ಕೆ ಜಾರಿತೇ ಸರ್ಕಾರ? ಪ್ರವಾಹ ಹಾನಿಗೆ ಪರಿಹಾರವಿಲ್ಲ, ರಸ್ತೆಗುಂಡಿಗಳಿಂದ ಜನರಿಗೆ ಸಂಕಷ್ಟ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದರು. ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂಪಾಯಿ ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರ...
ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅಸ್ತು.

ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅಸ್ತು.

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣರವರು ತಿಳಿಸಿದ್ದಾರೆ. ತುಮಕೂರುನಿಂದ ಬೆಂಗಳೂರು ಹಾಗೂ ಬೆಂಗಳೂರಿಂದ ತುಮಕೂರಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ಟ್ರೈನ್ ಓಡಾಡಿಸಲು ತುಮಕೂರು ಜನತೆಯ ಬಹಳ ದಿನಗಳ ಬೇಡಿಕೆ ಇತ್ತು, ತುಮಕೂರಿನ ಸಂಸದರೂ ಆದ ಸಚಿವ ವಿ.ಸೋಮಣ್ಣ ಅವರ ಬಳಿ ತುಮಕೂರಿನ ಜನತೆ ತಮ್ಮ ಬೇಡಿಕೆಯನ್ನು ಇಟ್ಟಿದ್ದರು , ಇದಕ್ಕೆ ಸ್ಪಂದಿಸಿದ ಸಚಿವರು ಈ ಬಗ್ಗೆ ಕ್ರಮ ಜರುಗಿಸುವುದಾಗಿ ತುಮಕೂರಿನ ಜನತೆಗೆ ಅವರ ಮೊದಲ ಭೇಟಿಯಲ್ಲೇ ಭರವಸೆ ನೀಡಿದ್ದರು. ಇದರ ಫಲವಾಗಿ 02.09.2024 ರಂದು ರೈಲ್ವೆ ಇಲಾಖೆ ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು (MEMU) ಟೈನ್ ಓಡಾಟಕ್ಕೆ ಅನುಮೋದನೆ ಹೊರಡಿಸಿದೆ ಈ 'ಮೆಮು' ರೈಲು ಸೇವೆ ಇಂತಿದೆ:  ತುಮಕೂರು-ಯಶವಂತಪುರ ಮೆಮು ಟ್ರೈನ್ 06201(66561): ಬೆಳಗ್ಗೆ 8.55ಕ್ಕೆ ತುಮಕೂರಿಂದ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ. ಟ್ರೇನ್ ಸಂಖ್ಯೆ 06202(66562) ಯಶವಂತಪುರದಿಂದ 5.40ಕ...
‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ" ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮುಡಾ ಹಗರಣದಲ್ಲಿ ಹಿಂದಿನ ಅಧ್ಯಕ್ಷರ ಅಮಾನತು ಕುರಿತ ಸರ್ಕಾರದ ಆದೇಶ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ,  'ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತ...
ಮುಡಾ ಹಗರಣ ಆರೋಪದ ಪ್ರತಿಧ್ವನಿ; ಆಯುಕ್ತರ ವಿರುದ್ದ ಕ್ರಮ ಕುರಿತು ಸರ್ಕಾರ ಆದೇಶ

ಮುಡಾ ಹಗರಣ ಆರೋಪದ ಪ್ರತಿಧ್ವನಿ; ಆಯುಕ್ತರ ವಿರುದ್ದ ಕ್ರಮ ಕುರಿತು ಸರ್ಕಾರ ಆದೇಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ಮೂಡಾ ನಿವೇಶನ ಅಕ್ರಮ ಹಂಚಿಕೆ ಆರೋಪದ ಸುಳಿಯಲ್ಲಿ ಸಿಲುಕಿರುವ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೂಡಾ ಹಗರಣದಲ್ಲಿ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರ ಅಮಾನತ್ತು ಮಾಡಿ ಆದೇಶಿಸಿದೆ. ಸರ್ಕಾರದ ನಿರ್ದೇಶನಗಳ ಉಲ್ಲಂಘನೆ, ನಿಯಮಗಳ ಜಾರಿಯಲ್ಲಿನ ಲೋಪ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಆರೋಪಗಳ ಬೆನ್ನಲ್ಲೇ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿದೆ....