Sunday, March 22

ರಾಜ್ಯ

ಮುಡಾ ಹಗರಣ: ರಾಜೀನಾಮೆ ಬಿಟ್ಟರೆ ಸಿದ್ದರಾಮಯ್ಯ ಅವರಿಗೆ ಬೇರೆ ದಾರಿ ಇಲ್ಲ?

ಮುಡಾ ಹಗರಣ: ರಾಜೀನಾಮೆ ಬಿಟ್ಟರೆ ಸಿದ್ದರಾಮಯ್ಯ ಅವರಿಗೆ ಬೇರೆ ದಾರಿ ಇಲ್ಲ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್‌ ಆದೇಶ ಬಂದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಅಥವಾ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ ಕೂಡಲೇ ರಾಜೀನಾಮೆ ಕೊಡಬೇಕಿತ್ತು. ಎಫ್‌ಐಆರ್‌ ಆದ ಬಳಿಕ ಪೊಲೀಸರ ಮುಂದೆ ನಿಲ್ಲಲು ಸಿದ್ದರಾಮಯ್ಯಗೆ ಸಾಧ್ಯವೇ ಇಲ್ಲ. ಕಪ್ಪು ಚುಕ್ಕೆ ಇಲ್ಲ, ನಾನು ಸಜ್ಜನ, ಮಾದರಿ ಎಂದು ಅವರು ಹೇಳಿಕೊಳ್ಳುತ್ತಾರೆ. ಈ ಅವಕಾಶ ಅವರಿಗೆ ಬಂದಿದೆ. ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ ರಾಜ್ಯಕ್ಕೆ ಮಾದರಿಯಾಗಲಿ ಎಂದು ಆಗ್ರಹಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ಆದೇಶಿಸಲಾಗಿದೆ. ಬಿ...
ಮುಡಾ ಕೇಸ್; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಪ್ರತಿಭಟನೆ

ಮುಡಾ ಕೇಸ್; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಪ್ರತಿಭಟನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣದ ಸಂಬಂಧ ತನಿಖೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈಕೋರ್ಟ್‌ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡಾ, ಸಿದ್ದರಾಮಯ್ಯ ಪ್ರಕರಣ ಬಗ್ಗೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ.ಈ ಬೆಳವಣಿಗೆಯ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಧರಣಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ....
ಶಿರೂರು ಗುಡ್ಡ ಕುಸಿತ; ನಾಪತ್ತೆಯಾಗಿದ್ದ ಲಾರಿ ಚಾಲಕನ ಮೃತದೇಹ ಪತ್ತೆ

ಶಿರೂರು ಗುಡ್ಡ ಕುಸಿತ; ನಾಪತ್ತೆಯಾಗಿದ್ದ ಲಾರಿ ಚಾಲಕನ ಮೃತದೇಹ ಪತ್ತೆ

ಪ್ರಮುಖ ಸುದ್ದಿ, ರಾಜ್ಯ
ಕಾರವಾರ: ಜುಲೈ ತಿಂಗಳಲ್ಲಿ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಎಂಬಾತನ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದು 72 ದಿನಗಳ ಬಳಿಕ ಮೃತದೇಹ ಪತ್ತೆಯಾಗಿದೆಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದು ಈ ಪೈಕಿ 8 ಮಂದಿಯ ಶವ ಪತ್ತೆಯಾಗಿತ್ತು. ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಎಂಬಾತನೂ ನಾಪತ್ತೆಯಾಗಿದ್ದ. ಇದೀಗ ಈತನ ಶವ ಪತ್ತೆಯಾಗಿದೆ....
ಡ್ರೋನ್ ಮುಖಾಂತರ ಜಾಗದ ಅಳತೆ ನಡೆಸಿ ಪಿ.ಆರ್.ಕಾರ್ಡ್ ವಿತರಣೆ; ಶಾಸಕ ಎಂಆರ್ ಮಂಜುನಾಥ್

ಡ್ರೋನ್ ಮುಖಾಂತರ ಜಾಗದ ಅಳತೆ ನಡೆಸಿ ಪಿ.ಆರ್.ಕಾರ್ಡ್ ವಿತರಣೆ; ಶಾಸಕ ಎಂಆರ್ ಮಂಜುನಾಥ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹನೂರು: ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿಯಲ್ಲಿ ಸ್ವಾಮಿತ್ವ ಯೋಜನೆಯ ಗ್ರಾಮ ಸಭೆಯನ್ನು ಶಾಸಕ ಎಂಆರ್ ಮಂಜುನಾಥ್ ರವರು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು.ಈ ವೇಳೆ ಶಾಸಕ ಎಂ ಆರ್ ಮಂಜುನಾಥ್ ರವರು ಮಾತನಾಡಿ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಇ ಸ್ವತ್ತುಗಳ ಸಮಸ್ಯೆಗಳನ್ನು ಬಗೆಹರಿಸಲು ವಸತಿ ಪ್ರದೇಶಗಳಿಗೆ ಡ್ರೋನ್ ಅಥವಾ ಯುಎ ವಿ ತಂತ್ರಜ್ಞಾನದ ಮೂಲಕ ಸರ್ವೇ ನಡೆಸಿ ಡ್ರೋನ್ ಮುಖಾಂತರ ನಿಮ್ಮ ಜಾಗದ ಅಳತೆಯನ್ನು ನಡೆಸಿ ನಿಮಗೆ ಪಿ ಆರ್ ಕಾರ್ಡುಗಳನ್ನು ವಿತರಣೆ ಮಾಡಲಾಗುತ್ತದೆ. ಇದನ್ನು ಜನರು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಡಿ ಡಿ ಎಲ್ ಆರ್ ವಿದ್ಯಾರಾಣಿ ಮಾತನಾಡಿ ಕಳೆದ 50 ವರ್ಷಗಳ ಹಿಂದೆ ಕಂದಾಯ ಕಟ್ಟಿರುವ ಜಮೀನುಗಳಿಗೆ ಮಾತ್ರ ಸರ್ವೆ ಮಾಡಲಾಗಿತ್ತು, ಗ್ರಾಮ ಗ್ರಾಮ ಠಾಣ ವಿಭಾಗಗಳಲ್ಲಿ ನಿಖರವಾದ ಯಾವುದೇ ದಾಖಲಾತಿಗಳು ಸಹ ಲಭ್ಯವಿರುವುದಿಲ್ಲ ಆದ್ದರಿಂದ ಡ್ರೋನ್ ಮುಖಾಂತರ ನಿಮ್ಮ ಜಾಗ ಹಾಗೂ ಜಮೀನುಗಳನ್ನು ಸರ್ವೆ ಮಾಡಿ ಸರ್ವೆ ಇಲಾಖೆ ಗ್ರಾಮ ಪಂಚಾಯಿತಿ ಹಾಗೂ ಜಾಗದ ಮಾಲೀಕರೊಂದಿಗೆ ಚರ್ಚೆ ಮಾಡಿ ಪಿಆರ್...
ದೊಡ್ಡಬಳ್ಳಾಪುರ:1.67 ಲಕ್ಷ ರೂ ಮೌಲ್ಯದ  ಗಾಂಜಾ ವಶ : ಒಬ್ಬನ ಬಂಧನ

ದೊಡ್ಡಬಳ್ಳಾಪುರ:1.67 ಲಕ್ಷ ರೂ ಮೌಲ್ಯದ  ಗಾಂಜಾ ವಶ : ಒಬ್ಬನ ಬಂಧನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ :ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯ ಪೊಲೀಸರು ₹1,67,500 ಮೌಲ್ಯದ ಅಕ್ರಮ ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.ದೊಡ್ಡಬೆಳವಂಗಲ ಹೋಬಳಿಯ ಅಪ್ಪೇಗೌಡನ ಪಾಳ್ಯದ ಬಳಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ, ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದು, ಹೊಲದ ಮಾಲಿಕ ಅರಸಪ್ಪ (65) ಎಂಬವರನ್ನು ಬಂಧಿಸಿದ್ದಾರೆ.ದಾಳಿಯಲ್ಲಿ ಸುಮಾರು 1,67,500 ರೂ ಮೌಲ್ಯದ 16 ಕೆಜಿ 800 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.ಕಾರ್ಯಾಚರಣೆಯಲ್ಲಿ ದೊಡ್ಡ ಹೆಜ್ಜಾಜಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಅಮಿತ್ ಕಾರ್ತಿಕ್, ಎಎಸ್‌ಐ ಕೃಷ್ಣಪ್ಪ, ಹೆಡ್ ಕಾನ್ ಸ್ಟೇಬಲ್ ಗಳಾದ ಮಂಜುನಾಥ್, ಸುರೇಶ್, ರಾಮಕೃಷ್ಣ, ಕಾನ್ಸ್ಟೇಬಲ್ ಗಳಾದ ಕುಮಾರ್, ಗೃಹರಕ್ಷಕ ದಳದ ಚಂದ್ರು ಮೊದಲಾದವರು ಭಾಗವಹಿಸಿದ್ದರು....
ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪೈಕಿ ಯಾವ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದೇ ವೇಳೆ ಕಾಂಗ್ರೆಸ್ ರಣತಂತ್ರಕ್ಕೆ ಪ್ರತಿಯಾಗಿ ಜೆಡಿಎಸ್-ಬಿಜೆಪಿ ಕ್ಷೇತ್ರಗಳ ಅದಲು ಬದಲು ಸೂತ್ರಕ್ಕೆ ಮುಂದಾದಂತಿದೆ.ಚನ್ನಪಟ್ಟಣದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ಮತ್ತೊಮ್ಮೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ದತೆ ನಡೆಸುತ್ತಿದೆ. ಈ ವಿಚಾರದಲ್ಲಿ ಬಂದ ಜೆಪಿ-ಜೆಡಿಎಸ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ.ಇದೇ ವೇಳೆ, ಬೆಂಗಳೂರಿನಲ್ಲಿ ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಈಗಾಗಲೇ ಕೇಂದ್ರ ನಾಯಕರನ್ನೂ ಭೇಟಿ ಮಾಡಿದ್ದ ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಹಲವು ನಾಯಕರು ತಮ್ಮ ಅಭಿಪ್ರಾಯಗಳನ್ನು ಸಭೆಯ ಮುಂದಿಟ್ಟರು.ಸಂಡೂರನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಚನ್ನಪಟ್ಟಣವನ್ನು ಬಿಜೆಪಿಗೆ ಕೇಳಲು ಸಲಹೆ ವ್ಯಕ್ತವಾಯಿತೆನ್ನಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಮನವರಿಕೆ ಮಾಡಿ, ಜೆಡಿಎಸ್‌ ಮನವೊ...
ಎಚ್ಚರ..! ಮೋಬೈಲ್ ಬಳಸಿದರೆ, ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ಡಿಎಲ್ ರದ್ದು

ಎಚ್ಚರ..! ಮೋಬೈಲ್ ಬಳಸಿದರೆ, ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ಡಿಎಲ್ ರದ್ದು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಸಿಎಂ ಆಪತ್ಕಾಲಯಾನ’ ಯೋಜನೆಯ 65 ಆಂಬುಲೆನ್ಸ್‌ಗಳನ್ನು ಸಿಎಂ ಸೇವೆಗೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಠಿಣ ನಿಯಮಗಳಿದ್ದರೂ, ಅನೇಕರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಕೆಲವರ ನಿರ್ಲಕ್ಷ್ಯದಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಅಪಘಾತಗಳನ್ನು ತಡೆಯಬಹುದು ಎಂದ ಸಿದ್ದರಾಮಯ್ಯ, ಕುಡಿದು ವಾಹನ ಚಲಾಯಿಸುವ ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆಗೆ ಕಠಿಣ ಶಿಕ್ಷೆಯಾಗಬೇಕು ಎಂದರು.ಈ ರೀತಿಯ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಚಾಲನಾ ಪರವಾನಗಿ ರದ್ದು ಮಾಡಬೇಕೆಂದು ಸಿಎಂ ಅವರು ಸಾರಿಗೆ ಇಲಾಖೆಗೆ ಸೂಚನೆ ನೀಡಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು....
ಕರಾವಳಿ ಮಲೆನಾಡು ಸಹಿತ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಕರಾವಳಿ ಮಲೆನಾಡು ಸಹಿತ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ರೆಡ್ ಅಲರ್ಟ್​ ಘೋಷಿಸಲಾಗಿದೆ.ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಸಹಿತ ಮಲೆನಾಡು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ.ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌...
ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆ.29ರವರೆಗೂ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆ.29ರವರೆಗೂ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29ರವರೆಗೂ ಮಳೆಯಾಗುವ ಸಾಧ್ಯತೆಗಳಿವೆ.ಈ ಕುರಿತಂತೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ,, ಚಿಕ್ಕಮಗಳೂರು ಸೇರಿದಂತೆ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಬೆಂಗಳೂರು ಗ್ರಾಮಾಂತರ, ಕೋಲಾರ ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಲಾಗಿದೆ.ಬಿ.ವಿ. ಶ್ರೀನಿವಾಸ್ ಇದುವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದರು. ನೂತನವಾಗಿ ನೇಮಕಗೊಂಡಿರುವ ಉದಯ್ ಭಾನು ಚಿಬ್ ಅವರು ಈವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.