Wednesday, March 18

ರಾಜ್ಯ

ರಾಹುಲ್‌ ಗಾಂಧಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ; ಅಶೋಕ್ 

ರಾಹುಲ್‌ ಗಾಂಧಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ; ಅಶೋಕ್ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗ...
ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದಿರುವ ಅವರು, ಅದ್ಧೂರಿ ದಸರಾವು ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿದ್ದಾರೆ.ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದವರು ಪ್ರತಿಪಾದಿಸಿದ್ದಾರೆ.ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚ...
ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ನಟ ಡಾಲಿ ಧನಂಜಯ್ ಮತ್ತು ತೆಲುಗು ನಟ ಸತ್ಯದೇವ್ ಕಾಂಬಿನೇಶನ್‌ನ 'ಜೀಬ್ರಾ' ಚಿತ್ರ ಸಿನಿಲೋಕದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.ಇದೊಂದು ಮಲ್ಟಿಸ್ಟಾರರ್ ಸಿನಿಮಾ ಜೊತೆಗೆ ಪ್ಯಾನ್ ಇಂಡಿಯಾ ಸಿನಿಮಾ ಎಂದು ಧನಂಜಯ್ ತಿಳಿಸಿದ್ದಾರೆ.ದೀಪಾವಳಿ ಹಬ್ಬದ ಸಂದರ್ಭದಲ್ಲಿ 'ಜೀಬ್ರಾ' ಬಿಡುಗಡೆಯಾಗಲಿದೆ. ಅಕ್ಟೋಬರ್ 31ರಂದು ಕನ್ನಡ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ 'ಜೀಬ್ರಾ' ತೆರೆ ಕಾಣಲಿದೆಯಂತೆ. ಈ ನಡುವೆ, 'ಜೀಬ್ರಾ' ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಮೋಷನ್ ಪೋಸ್ಟರ್ ಗಮನಸಳೆದಿದೆ....
ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್‌ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿಧಾನಸೌಧದಲ್ಲಿ ಪಾಕ್‌ ಜಿಂದಾಬಾದ್‌ ಕೂಗಿದಾಗ ಹಾಗೆ ಆಗಿಯೇ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು. ಬಾಂಬ್‌ ಸ್ಫೋಟವಾದಾಗಲೂ ಅದು ವ್ಯಾಪಾರದ ಜಗಳ ಎಂದು ಹೇಳಿದ್ದರು. ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆಯೂ ಹೀಗೆಯೇ ಹೇಳಿದ್ದರು. ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದು ಬಗ್ಗೆ ಮೊದಲು ಪರಿಶೀಲಿಸಲಿ. ಆದರೆ ಸಚಿವ ಪ್ರಿಯಾಂಕ್‌ ಖರ್ಗೆಯಂಥವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಭಾರತವನ್ನು ಎರಡು ಭಾಗ ಮಾಡಿದ ಕಾಂಗ್ರೆಸ್‌ ಮತ್ತೆ ತಲೆಯತ್ತಿ ಮಂಡ್ಯದಲ್ಲಿ ಕೋಮುಗಲಭೆಗೆ ಕಾರಣವಾಗಿದೆ. ವಿದೇಶಕ್ಕೆ ಹೋದ ರಾಹುಲ್‌ ಗಾಂಧಿ, ಭಾರತದ ವಿರುದ್ಧ ಮಾತಾಡುವುದರ ಜೊತೆಗೆ ಮೀಸಲಾತಿ ತೆಗೆದುಹಾ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ

ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನೂತನ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದರು.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಮಂಗಳವಾರ 50 ಬಸ್‌ಗಳನ್ನು ಉದ್ಘಾಟನೆ ಮಾಡಲಾಗಿದೆ‌.ಈ ಬಸ್ಸುಗಳು ಅಶೋಕ ಲೈಲಾಂಡ್ ಕಂಪನಿಯಿಂದ ತಯಾರಿಸಲಾಗಿದ್ದು, 109 ಬಸ್ಸುಗಳ ಖರೀದಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ರೂ 45.00 ಕೋಟಿಗಳ ಅನುದಾನವನ್ನು ನೀಡಿದೆ. ಈ ಬಸ್‌ಗಳಲ್ಲಿ 200 HP ಸಾಮರ್ಥ್ಯದ BS-6 ಎಂಜಿನ್‌ಗಳನ್ನು ಅಳವಡಿಸಿದ್ದು, 50 ಪ್ರಯಾಣಿಕ ಆಸನಗಳನ್ನು ಹೊಂದಿವೆ. ಈ ಬಸ್‌ಗಳನ್ನು ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಬಸ್ ಕೋಡ್‌ನಂತೆ ನಿರ್ಮಿಸಲಾಗಿದೆ.ಪ್ರಯಾಣಿಕರ ಸುರಕ್ಷತ...
ರಾಯಚೂರಲ್ಲಿ ಸಂಭ್ರಮ, ಸಡಗರದ ಕಲ್ಯಾಣ ಕರ್ನಾಟಕ ಉತ್ಸವ

ರಾಯಚೂರಲ್ಲಿ ಸಂಭ್ರಮ, ಸಡಗರದ ಕಲ್ಯಾಣ ಕರ್ನಾಟಕ ಉತ್ಸವ

ಪ್ರಮುಖ ಸುದ್ದಿ, ರಾಜ್ಯ
ರಾಯಚೂರು: 77ನೇ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಅಂಗವಾಗಿ ರಾಯಚೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶವನ್ನು ನೀಡಿದರು.ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ರಾಯಚೂರು ನಗರಸಭೆಯ ಅಧ್ಯಕ್ಷರಾದ ನರಸಮ್ಮ ಮಾಡಗಿರಿ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ರಾಯಚೂ...
ಪಾಂಡವಪುರದಲ್ಲಿ ಖಾಕಿ ಕ್ರೌರ್ಯ; ಆರೆಸ್ಸೆಸ್ ಪ್ರತಿಭಟನೆಗೆ ಬೆಚ್ಚಿದ ಎಸ್ಪಿ; ತಪ್ಪಿತಸ್ತ ಪೊಲೀಸರ ವಿರುದ್ದ ಕ್ರಮದ ಭರವಸೆ

ಪಾಂಡವಪುರದಲ್ಲಿ ಖಾಕಿ ಕ್ರೌರ್ಯ; ಆರೆಸ್ಸೆಸ್ ಪ್ರತಿಭಟನೆಗೆ ಬೆಚ್ಚಿದ ಎಸ್ಪಿ; ತಪ್ಪಿತಸ್ತ ಪೊಲೀಸರ ವಿರುದ್ದ ಕ್ರಮದ ಭರವಸೆ

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ಪಾಂಡವಪುರ RSS ಕಚೇರಿಯಿಂದ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಘಟಕರನ್ನು ತಡರಾತ್ರಿಯಲ್ಲಿ ಏಕಾಏಕಿ ಬಂಧಿಸಿದ ಪೋಲೀಸರ ದುರ್ನಡತೆಯನ್ನು ಖಂಡಿಸಿ ಮತ್ತು RSS ಕಛೇರಿಯೊಳಗೆ ಶೂ ಹಾಕಿಕೊಂಡು ಕ್ರೌರ್ಯ ಮೆರೆದ ಪೋಲಿಸರ ಬೂಟಾಟಿಕೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಪಾಂಡವಪುರ ಪೋಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.ಪ್ರತಿಭಟನೆಗೆ ಮಣಿದ ಪೋಲೀಸ್ ಇಲಾಖೆ ದುಂಡಾವರ್ತನೆ ತೋರಿದ DYSP ಹಾಗೂ ಇನ್ಸ್ ಪೆಕ್ಟರ್ ರವರುಗಳನ್ನು ತಕ್ಷಣವೇ ಬೇರೆಡೆಗೆ ಕರ್ತವ್ಯಕ್ಕೆ ವರ್ಗಾಯಿಸಿ ಅವರುಗಳ ಮೇಲೆ ಸುಮೋಟೋ ಕೇಸ್ ದಾಖಲಿಸಿ ಬೇರೆ ಜಿಲ್ಲೆಯ ಅಡೀಷನಲ್ ಎಸ್.ಪಿ. ಯವರ ಮೂಲಕ ಇಲಾಖಾ ತನಿಖೆ ನಡೆಸುವುದಾಗಿಯೂ ಹಾಗೂ ತನಿಖೆ ವೇಳೆ ಆರೋಪಿತರು ಹಸ್ತಕ್ಷೇಪ ನಡೆಸದಂತೆ ಕ್ರಮ ಕೈಗೊಳ್ಳುವುದಾಗಿಯೂ ಮತ್ತು ತನಿಖಾ ವರದಿ ಬಂದ ಕೂಡಲೇ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಮಂಡ್ಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಬಹಿರಂಗವಾಗಿ ಮಾಧ್ಯಮದ ಮುಂದೆ ಸ್ಪಷ್ಟನೆ ನೀಡಿದ ಮೇರೆಗೆ ಪಾಂಡವಪುರ ಪೋಲೀಸ್ ಠಾಣೆಯೆದುರು ನಡೆಯುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು....
ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಫ್ರಾನ್ಸ್‌ನ ಲಿಯೋನ್‌ನಲ್ಲಿ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಶ್ರೇಷ್ಠತಾ ಪದಕಗಳನ್ನು ಪಡೆದ್ದಿದ್ದರೆ. ಫ್ರಾನ್ಸ್‌ನ ಲಿಯೋನ್‌ನಲ್ಲಿ ಇದೇ ಸೆಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ 9 ಸ್ಪರ್ಧಿಗಳು ಭಾಗವಹಿಸಿದ್ದು, ಈ ಪೈಕಿ ಪ್ರೇಮ್, ಹರ್ಷವರ್ಧನ್, ಭಾನುಪ್ರಸಾದ್, ದರ್ಶನ್ ಗೌಡ 3 ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿದ್ದಾರೆ.ಇದಕ್ಕೂ ಮುನ್ನ ಕಳೆದ ಮೇ ತಿಂಗಳಿನಲ್ಲಿ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕರ್ನಾಟಕದಿಂದ 62 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಯುವ ಕೌಶಲ್ಯ ಸ್ಪರ್ಧೆಯಲ್ಲಿ 13 ಚಿನ್ನದ ಪದಕ, 12 ಬೆಳ್ಳಿ ಪದಕ, 4 ಕಂಚಿನ ಪದಕ ಹಾಗೂ 19 ಶ್ರೇಷ್ಠತಾ ಪದಕ ಗೆಲ್ಲುವುದರೊಂದಿಗೆ ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದಿದೆ. ಅಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕರ್ನಾಟಕದ ಪ್ರೇಮ್ (ಆಡಿಟಿವ್ ಮ್ಯಾನುಫ್ಯಾಕ್ಚರಿಂಗ್), ಹರ್ಷವರ್ಧನ್ (ಕುಕ್ಕಿಂಗ್), ಭಾನುಪ್ರಸಾದ್, ದರ್ಶನ್ ಗೌಡ (ಮೆಕಾಟ್ರಾನಿಕ್ಸ್) ಫ್ರ...
‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಕುಮಾರಸ್ವಾಮಿ, ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ ಎಂದವರು ಟೀಕಿಸಿದ್ದಾರೆ...
ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ

ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ಚಾಳದಲ್ಲಿ  ಪ್ರಚೋದನಕಾರಿ ಹೇಳಿಕೆ ವಿರುದ್ದ ಹಿಂದೂ ಕಾರ್ಯಕರ್ಯರು ಬೀದಿಗಿಳಿದಿದ್ದಾರೆ. 'ತಾಕತ್ತಿದ್ದರೆ ಈದ್ ಮಿಲಾದ್ ಮೆರವಣಿಗೆಯ ಮೇಲೆ ದಾಳಿ ಮಾಡಿ' ಎಂದು ಬಂಟ್ವಾಳ ಪುಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ನೀಡಿದ್ದಾರೆ ಎನ್ನಲಾದ ಪ್ರಚೋದನಕಾರಿ ಹೇಳಿಕೆ ಖಂಡಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಬಂಟ್ವಾಳ ಸಮೀಪ ಬಿ.ಸಿ.ರೋಡ್‌ನಲ್ಲಿ ರ್ಯಾಲಿ ಕೈಗೊಂಡಿದ್ದಾರೆ.ಮುಸ್ಲಿಂ ಮುಖಂಡರು ಹಿಂದೂ ಸಂಘಟನೆಯ ನಾಯಕ ಶರಣ್ ಪಂಪ್‌ವೆಲ್ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಇದರಿಂದ ಕೆರಳಿರುವ ಹಿಂದೂ ಸಂಘಟನೆಗಳು 'ಬಿ.ಸಿ.ರೋಡ್ ಚಲೋ'ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಬಿ.ಸಿ.ರೋಡ್‌ ಪಟ್ಟಣದಲ್ಲಿ ಜಮಾಯಿಸಿದ್ದಾರೆ.ಪರಿಸ್ಥಿತಿ ನಿಯಂತ್ರಿಸಲು ನೂರಾರು ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದರೂ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ, ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನೂ ಬೇಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತ...