Wednesday, March 18

ರಾಜ್ಯ

ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಚಿತ್ರಾಪುರ ಸಾರಸ್ವತ ಸಮಾಜದ ಗುರುಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿ, ಮಠಾಧಿಪತಿ, ಶ್ರೀ ಚಿತ್ರಾಪುರ ಮಠ, ಶಿರಾಲಿ, ಉ.ಕ.ಜಿಲ್ಲೆ ಇವರ ಸೀಮೋಲ್ಲಂಘನ ಹಾಗೂ ದಿಗ್ವಿಜಯ18.09.2024ರಂದು ನಡೆಯಲಿದೆ.ಈ ಬಾರಿ ಸ್ವಾಮೀಜಿಯವರ ಚಾತುರ್ಮಾಸ ವೃತವು ಎರಡು ತಿಂಗಳ ಕಾಲ ಮಂಗಳೂರಿನ ಶರವು ದೇವಸ್ಥಾನ ರಸ್ತೆಯಲ್ಲಿರುವ ಶ್ರೀ ವಾಮನಾಶ್ರಮ ಮಠ (ಚಿತ್ರಾಪುರ ಮಠ) ದಲ್ಲಿ ಜರಗುತ್ತಿದ್ದು, ಈ ಚಾತುರ್ಮಾಸ ವೃತವು ಸೆಪ್ಟೆಂಬರ್ ತಿಂಗಳ 18ರಂದು ಮುಕ್ತಾಯಗೊಳ್ಳಲಿದೆ.ಆ ಪ್ರಯುಕ್ತ ಸೆಪ್ಟೆಂಬರ್ 18ರಂದು (ಬುಧವಾರ) ಸಂಜೆ 4.00 ಗಂಟೆಗೆ ಸೀಮೋಲ್ಲಂಘನ ಕಾರ್ಯಕ್ರಮವು ನಗರದ ಸುಲ್ತಾನ್ ಬತ್ತೇರಿ ಬಳಿಯಿರುವ ನದಿ ತಟದಲ್ಲಿ ನಡೆಯಲಿದೆ. ರಾತ್ರಿ ಗಂಟೆ 7.00ರಿಂದ ಮಂಗಳೂರು ನಗರದ ಗಣಪತಿ ಪ್ರೌಢ ಶಾಲೆಯ ಆವರಣದಿಂದ ದಿಗ್ವಿಜಯೋತ್ಸವವು (ಶೋಭಾಯಾತ್ರೆ) ಪ್ರಾರಂಭವಾಗಿ ಜಿ.ಎಚ್.ಎಸ್. ಅಡ್ಡ ರಸ್ತೆ, ಭವಂತಿಸ್ಟ್ರೀಟ್, ವೆಂಕಟರಮಣ ದೇವಸ್ಥಾನ ರಸ್ತೆ, ಮಹಮ್ಮಾಯ ದೇವಸ್ಥಾನ ರಸ್ತೆ, ಕೆನರಾ ಹೈಸ್ಕೂಲ್ ಹಿಂಬದಿಯ ರಸ್ತೆ, ನವಭಾರತ ವೃತ್ತ, ಡೊಂಗರಕೇರಿ, ನ್ಯೂಚಿತ್ರಾ ಜಂಕ್ಷನ್, ಬಿ.ಇ.ಎಂ ಹೈಸ್ಕೂಲ್ ರಸ್ತ...
ಪ್ರಚೋದನಕಾರಿ ಹೇಳಿಕೆ ಆರೋಪ: ಹಿಂದೂ ಮುಖಂಡರ ವಿರುದ್ದ ಪ್ರಕರಣ

ಪ್ರಚೋದನಕಾರಿ ಹೇಳಿಕೆ ಆರೋಪ: ಹಿಂದೂ ಮುಖಂಡರ ವಿರುದ್ದ ಪ್ರಕರಣ

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್​ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಆರೋಪದಲ್ಲಿ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ‌ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಎಚ್ಚರಿಕೆಯನ್ನು ನೀಡಿದ್ದಾರೆ....
ಎಂಎಸ್‌ಪಿ ಖಾತ್ರಿ ಕಾನೂನು ಜಾರಿಯಾಗುವ ತನಕ ಹೋರಾಟ ನಿಲ್ಲುವುದಿಲ್ಲ : ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ

ಎಂಎಸ್‌ಪಿ ಖಾತ್ರಿ ಕಾನೂನು ಜಾರಿಯಾಗುವ ತನಕ ಹೋರಾಟ ನಿಲ್ಲುವುದಿಲ್ಲ : ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಹರಿಯಾಣ: ಹರಿಯಾಣ ಚುನಾವಣಾ ಹಿನ್ನಲೆಯಲ್ಲಿ. ಕಿಸಾನ್ ಮಹಾಪಂಚಾಯತ್ ಸಮಾವೇಶ ನಡೆಸಲು ಸಾಧ್ಯವಿಲ್ಲ ಎಂದು ಪೊಲೀಸರು ರೈತರಿಗೆ ತಿಳಿಸಿದ್ದಾರೆ.. ಹಾಗೂ ಸಮಾವೇಶದ ಸ್ಥಳದಲ್ಲಿ ಹಾಕಲಾಗಿದ್ದ ಶಾಮಿಯಾನ ಮೈಕಳನ್ನ ಕಿತ್ತುಹೊಯ್ದಿದ್ದಾರೆ. ಇದನ್ನು ರೈತ ಮುಖಂಡರು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ಸಂದೇಶ ನೀಡಿದ್ದಾರೆ..ಸಮಾವೇಶ ನಡೆಸಲು ಹಾಕಿದ್ದ ಟೆಂಟುಗಳನ್ನ ಕಿತ್ತಾಕಿ ಮೈಕಳನ್ನ ಕಿತ್ತೆಸೆದ ಪೊಲೀಸರು ಬೆಳಿಗ್ಗೆ 9:00 ಒಳಗೆ ಸಮಾವೇಶ ನಡೆಸಲು ಆಸ್ಪದ ನೀಡದಿದ್ದರೆ. ರೈತರು ರಾಜ್ಯದ್ಯಂತ ಎಲ್ಲ ರಸ್ತೆಗಳನ್ನ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಸಮಾವೇಶ ನಡೆಸಲು ಅವಕಾಶ ಕಲ್ಪಿಸಿತು ಆದರೆ ಪಕ್ಕದ ರಾಜ್ಯದ ಪಂಜಾಬ್ ರೈತರಿಗೆ ಸಮಾವೇಶಕ್ಕೆ ಬರಲು ಅವಕಾಶ ನೀಡಲಿಲ್ಲ. ಆಗ ಮತ್ತಷ್ಟು ಸಂಖ್ಯೆಯ ರೈತರು ತಂಡೋಪ ತಂಡವಾಗಿ ಸಮಾವೇಶ ಸ್ಥಳಕ್ಕೆ ಬಂದರು. ಇದರಿಂದ ರೈತಶಕ್ತಿ ಇಮ್ಮಡಿ ಗೊಳಿಸಿತು.ಇದೇ ಸಮಾವೇಶದಲ್ಲಿ ಮಾತನಾಡಿದ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತರ...
ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗುತ್ತಿಗೆದಾರರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಕೋಲಾರದಲ್ಲಿ ಮುನಿರತ್ನ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಕಳೆದ ರಾತ್ರಿ ಬೆಂಗಳೂರಿಗೆ ಕರೆತಂದು 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ.ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ನಂಗಲಿ ಗ್ರಾಮದ ಬಳಿ ಬಂಧಿಸಿದ್ದರು. ರಾತ್ರಿ ಬೆಂಗಳೂರು ತಲುಪುತ್ತಿದ್ದಂತೆಯೇ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.ಪ್ರಕರಣದ ಬಗ್ಗೆ ವಿಚಾರಣೆ ಅಗತ್ಯವಿರುವುದರಿಂದ ಒಂದು ವಾರ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಧೀಶರನ್ನು ಕೋರಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದರು....
ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸ ಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು" ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ" ಎಂದರು."ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರೇ ಸಮುದಾಯದ ತಾಯಂದಿರನ್ನು ಅವಮಾನಿಸಿದ್ದಾರೆ. ಇದಕ್ಕೆ ನೀವೇ ಉತ್ತರಿಸಬೇಕು. ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಅವರು ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಇದರ ಬಗ್ಗೆ ಉತ್ತರಿಸಬೇಕು" ಎಂದರು."ಒಂದು ಕಡೆ ರಾಮನ, ಸ...
ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿ ಮುದ್ರಣ ಶಾಸಕರದ್ದೇ ಎಂದು ಸಾಬೀತಾದ ಬಳಿಕ ಬಂಧಿಸಬೇಕಿತ್ತು. ಕಾನೂನಿಗೆ ಯಾರೂ ಅತೀತರಲ್ಲ ಎಂದರು. ಟಿ.ಜೆ.ಅಬ್ರಹಾಂ ದೂರಿನ ಆಧಾರದ ಮೇಲೆ ರಾಜ್ಯಪಾಲರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದರು.‌ ಆದರೂ ಅದು ಈಗ ನ್ಯಾಯಾಲಯದಲ್ಲಿದ್ದು, ಅದಕ್ಕೆ ನಾವ್ಯಾರೂ ಆಕ್ಷೇಪ ಮಾಡಿಲ್ಲ. ಆದರೆ ಇಲ್ಲಿ ದೂರು ನೀಡಿದ ಕೂಡಲೇ ವಿಚಾರಣೆ ಮಾಡದೆ‌ ನೋಟಿಸ್‌ ನೀಡದೆ ಬಂಧಿಸಲಾಗಿದೆ. ಇಲ್ಲಿ ಆತುರದ‌ ಕ್ರಮವಾಗಿದ್ದು, ಏಕಾಏಕಿ ಬಂಧನವಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಲೀಡ್ ಬಂದಿರುವುದು ಕೂಡ ಇದಕ್ಕೆ ಕಾರಣ. ಧ್ವನಿ ಮುದ್ರಣವನ್ನು ಎಫ್ಎಸ್ಎಲ್ ಗೆ ಕಳುಹಿಸಿ,‌ ತನಿಖೆ ಮಾಡಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ. ಯಾವುದೇ ಪ್...
ಗುತ್ತಿಗೆದಾರನಿಗೆ ಬೆದರಿಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಗುತ್ತಿಗೆದಾರನಿಗೆ ಬೆದರಿಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಶನಿವಾರ ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮುನಿರತ್ನ ಅವರು ತಮಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ದೂರು ನೀಡಿದ್ದರು. ಅದರಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.ಪ್ರಕರಣ ದಾಖಲಾಗುತ್ತಿದ್ದಂತೆಯೇ ಮುನಿರತ್ನ ತಲೆಮರೆಸಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿತ್ತು. ಈ ನಡುವೆಯೇ ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ....
ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ವನಿತೆಯರ ಪರ ಧ್ವನಿಯಾದ ಮಾಜಿ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ, ಇದೀಗ ರಾಜ್ಯದ ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಮಹಿಳೆಯರ ಸೈನ್ಯ ಕಟ್ಟುವುದಾಗಿ ಘೋಷಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿ ಸೆಪ್ಟೆಂಬರ್ 15ಕ್ಕೆ 40 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಾವು ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿಗಳ ಮಟ್ಟದಲ್ಲಿ ಈ ಅಭಿಯಾನ ಮಾಡಲು ತೀರ್ಮಾನಿಸಿದ್ದೇವೆ. ರಾಜ್ಯಾದ್ಯಂತ ಮಹಿಳೆಯರು ಮಹಿಳಾ ಕಾಂಗ್ರೆಸ್ ಸೇರಿ ಕೈ ಜೋಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದ ಅವರು, ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮೀ ಯೋಜನೆ 1.21 ಕೋಟಿ ಮಹಿಳೆಯರಿಗೆ ತಲುಪಿದೆ. ಗೃಹಜ್ಯೋತಿ 1.60 ಕೋಟಿ ಮನೆಗಳನ್ನು ತಲುಪಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರು 283 ಕೋ...
ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್’ಕೌಂಟರ್; ಮೂವರು ಉಗ್ರರ ಹತ್ಯೆ

ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್’ಕೌಂಟರ್; ಮೂವರು ಉಗ್ರರ ಹತ್ಯೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ನಡೆದ ಭದ್ರತಾ ಪಡೆಗಳೊಂದಿಗಿನ ಎನ್'ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.ಶನಿವಾರ ನಸುಕಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಲಂಡನ್​​ನ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕಕ್ಕೆ ದಶಮಾನೋತ್ಸವ ಸಡಗರ; ಮೋದಿ ಆಹ್ವಾನಕ್ಕೆ ತೀರ್ಮಾನ

ಲಂಡನ್​​ನ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕಕ್ಕೆ ದಶಮಾನೋತ್ಸವ ಸಡಗರ; ಮೋದಿ ಆಹ್ವಾನಕ್ಕೆ ತೀರ್ಮಾನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಲಂಡನ್​​: ಲಂಡನ್​​ನಲ್ಲಿರುವ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕ ದಶಮಾನೋತ್ಸವ ಸಂಭ್ರಮದಲ್ಲಿದೆ. ಈ ದಶಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ.ಲಂಡಲ್‌ನ ಥೇಮ್ಸ್ ನದಿ ತೀರದಲ್ಲಿ2015ರಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು. ಇದೀಗ ಹತ್ತನೇ ವರ್ಷದ ಸಮಾರಂಭದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನಿಸಲು ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕ ಸಂಸ್ಥೆ ಚಿಂತನೆ ನಡೆಸಿದೆ.ಈ ನಡುವೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಲಂಡನ್ ಪ್ರವಾಸದ ಸಂದರ್ಭದಲ್ಲಿ ಲಂಡಲ್‌ನ ಥೇಮ್ಸ್ ನದಿ ತೀರದ ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ. ಆ ವೇಳೆ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿರುವ ಲಂಡನ್ ಮಾಜಿ ಮೇಯರ್ ನೀರಜ್ ಪಾಟೀಲ್ ಅವರು ದಶಮಾನೋತ್ಸವ ಸಮಾರಂಭಕ್ಕೆ ಮೋದಿಯವರನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.ಇದೇ ವೇಳೆ, ತಮ್ಮ ಲಂಡನ್ ಪ್ರವಾಸ ಬಗ್ಗೆ ಸಾಮಾಜಿಕ ಜಾಲತಾಣ 'X'ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂ...