Wednesday, March 18

ರಾಜ್ಯ

ಗುತ್ತಿಗೆದಾರನಿಗೆ ಜೀವ ಬೆದರಿಕೆ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​

ಗುತ್ತಿಗೆದಾರನಿಗೆ ಜೀವ ಬೆದರಿಕೆ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧದ ಸಂಬಂಧಿಸಿದಂತೆ ಆರ್​.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈ ಪ್ರಕರಣ ಬಗ್ಗೆ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಎನ್ನಲಾಗಿದೆ.ಶಾಸಕ ಮುನಿರತ್ನ, ಆಪ್ತ ಸಹಾಯಕ ವಿಜಯ್ ಕುಮರ್, ಸೆಕ್ಯೂರಿಟಿ ಅಭಿಷೇಕ್ ಮತ್ತು ಆಪ್ತ ವಸಂತ್ ಕುಮಾರ್ ಅವರನ್ನು ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ....
ಇದೀಗ ‘ದೇವರ’ ಹವಾ; ಬಿಡುಗಡೆಗೆ ಮುನ್ನವೇ ದಾಖಲೆಯ ಗಳಿಕೆ

ಇದೀಗ ‘ದೇವರ’ ಹವಾ; ಬಿಡುಗಡೆಗೆ ಮುನ್ನವೇ ದಾಖಲೆಯ ಗಳಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಜೂನಿಯರ್​ ಎನ್​ಟಿಆರ್ ಅಭಿನಯದ ‘ದೇವರ’ ಚಿತ್ರ ಸಿನಿಲೋಕದಲ್ಲಿ ಬಿಡುಗಡೆಗೆ ಮುನ್ನವೇ ಹವಾ ಸೃಷ್ಟಿಸಿದೆ. ಸೆಪ್ಟೆಂಬರ್ 27ರಂದು ‘ದೇವರ’ ಸಿನಿಮಾ ಬಿಡುಗಡೆ ಅಗಲಿದ್ದು ಈಗಲೇ ಗಳಿಕೆಯಲ್ಲಿ ದಾಖಲೆ ಸೃಷ್ಟಿಸುವ ಪ್ರಯತ್ನದಲ್ಲಿದೆ.ಕೊರಟಾಲ ಶಿವ ಅವರು ಈ ಚಿತ್ರವನ್ನು ನಿರ್ದೇಶನದ ಈ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಗಳಿಕೆ ಮೂಲಕ ಸುದ್ದಿಯಲ್ಲಿದೆ. ಅಮೆರಿಕದಲ್ಲೇ ಬರೋಬ್ಬರಿ 8 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.ರಿಲೀಸ್​ಗೂ ಮೊದಲೇ ಅಡ್ವಾನ್ಸ್ ಬುಕಿಂಗ್ ಪ್ರಾರಂಭಿಸಲಾಗಿದ್ದು ಅಮೆರಿಕದಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್​ಗಳು ಮಾರಾಟ ಆಗಿವೆ. ಈ ಮೂಲಕ 8 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎನ್ನಲಾಗುತ್ತಿದೆ....
ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ.ಮಹಿಳಾ ಆರೋಗ್ಯ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ಡಾ.ಪಾಟೀಲ್ ಸೂಚನೆ ನೀಡಿದರು. "ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಬರವಣಿಗೆಯಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷತಾ ಶಿಷ್ಟಾಚಾರ ಕ್ರಮಗಳನ್ನು ಪರಿ...
ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತದಳದ ಮುಖ್ಯಸ್ಥರ ಬದಲಾವಣೆ

ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತದಳದ ಮುಖ್ಯಸ್ಥರ ಬದಲಾವಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ನೋಟ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಹೊಣೆಯನ್ನೂ ನಿಂಬಾಳ್ಕರ್ ಅವರಿಗೆ ವಹಿಸಲಾಗಿದೆ.ಈವರೆಗೂ ಗುಪ್ತದಳದ ಮುಖ್ಯಸ್ಥರಾಗಿದ್ದ ಕೆ.ವಿ.ಶರತ್ ಚಂದ್ರ ಅವರನ್ನು ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಲಾಗಿದ್ದು, ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ....
ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಗಮಂಗಲ ಗಲಭೆಯನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕರ್ನಾಟಕಕ್ಕೂ ಬುಲ್ಡೋಜರ್ ಕಾರ್ಯಾಚರಣೆ ಬೇಕಿದೆ ಎಂದು ಪ್ರತಿಪಾದಿಸಿದ್ದಾರೆ.ನಾಗಮಂಗಲ ಗಲಭೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯ ಸರ್ಕಾರದ ನಡೆ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟು, ಸರಕು-ಸರಂಜಾಮು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನು ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಪೂರ್ವ ನಿಯೋಜ...
ನಟ ದರ್ಶನ್ ಗ್ಯಾಂಗ್ ಸೆರೆವಾಸ ಸೆಪ್ಟೆಂಬರ್ 17ರವರೆಗೆ ವಿಸ್ತರಣೆ

ನಟ ದರ್ಶನ್ ಗ್ಯಾಂಗ್ ಸೆರೆವಾಸ ಸೆಪ್ಟೆಂಬರ್ 17ರವರೆಗೆ ವಿಸ್ತರಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಸೆಪ್ಟೆಂಬರ್ 17ರ ವರೆಗೆ ವಿಸ್ತರಣೆಯಾಗಿದೆ.ನಟ ದರ್ಶನ್, ಪವಿತ್ರಾಗೌಡ ಸಹಿತ ಎಲ್ಲಾ 17 ಆರೋಪಿಗಳನ್ನುಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಬಳ್ಳಾರಿ ಜೈಲಿನಿಂದ ದರ್ಶನ್, ತುಮಕೂರು ಜೈಲಿನಿಂದ ಅನುಕುಮಾರ್, ಜಗದೀಶ್, ರವಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದರೆ, ಪವಿತ್ರಾಗೌಡ, ದೀಪಕ್ ನನ್ನ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರುಪಡಿಸಲಾಯಿತು.ಈ ಸಂದರ್ಭದಲ್ಲಿ ಆರೋಪಿಗಳ ಪರ ಹಾಗೂ ಪ್ರಾಸಿಕ್ಯೂಷನ್ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್​​ 17ರವರೆಗೆ ವಿಸ್ತರಿಸಿ ಆದೇಶಿಸಿದರು....
ನಾಗಮಂಗಲ ಗಲಭೆ; ಬಿಜೆಪಿಯಿಂದ ಸತ್ಯ ಶೋಧನಾ ಸಮಿತಿ ರಚನೆ

ನಾಗಮಂಗಲ ಗಲಭೆ; ಬಿಜೆಪಿಯಿಂದ ಸತ್ಯ ಶೋಧನಾ ಸಮಿತಿ ರಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ನಡೆದ ಕಲ್ಲುತೂರಾಟ ಮತ್ತು ಗಲಭೆ ಬಗ್ಗೆ ರಾಜ್ಯ ಬಿಜೆಪಿ ಸತ್ಯ ಶೋಧನಾ ಸಮಿತಿಯನ್ನು ರಚಿಸಿದೆ.ಶಾಸಕರಾದ ಡಾ. ಸಿ. ಎನ್.ಅಶ್ವತ್ಥ ನಾರಾಯಣ, ಭೈರತಿ ಬಸವರಾಜ, ಮಾಜಿ ಸಚಿವ ಕೆ. ಸಿ. ನಾರಾಯಣಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಶ್ವಿನ್ ಗೌಡ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರರಾವ್ ಅವರನ್ನೊಳಗೊಂಡ ಸಮಿತಿಯನ್ನು ಪಕ್ಷ ರಚಿಸಿದೆ.ಈ ಸಮಿತಿಯು ಗಲಭೆ ನಡೆದಿರುವ ನಾಗಮಂಗಲಕ್ಕೆ ತೆರಳಿ ಅಧ್ಯಯನ ನಡೆಸಲಿದೆ. ಒಂದು ವಾರದಲ್ಲಿ ಈ ಸಮಿತಿ ವರದಿ ನೀಡಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ....
ನಾಗಮಂಗಲ ಗಲಭೆ; ಹಿಂದೂಗಳ ವಿರುದ್ಧ ಎಫ್‌ಐಆರ್‌ ರದ್ದುಪಡಿಸದಿದ್ದರೆ ಉಗ್ರ ಹೋರಾಟ, ಬಿಜೆಪಿ ಎಚ್ಚರಿಕೆ

ನಾಗಮಂಗಲ ಗಲಭೆ; ಹಿಂದೂಗಳ ವಿರುದ್ಧ ಎಫ್‌ಐಆರ್‌ ರದ್ದುಪಡಿಸದಿದ್ದರೆ ಉಗ್ರ ಹೋರಾಟ, ಬಿಜೆಪಿ ಎಚ್ಚರಿಕೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ಅವರು ಕಟು ಮಾತುಗಳಿಂದ ಟೀಕಿಸಿ ಸರಣಿ ಟ್ವೀಟ್‌ ಮಾಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು...
ರಾಜ್ಯದಲ್ಲಿ ಡಿಜಿಟಲ್ ಡೆಂಟಿಸ್ಟ್ರಿ ಪ್ರಾರಂಭ

ರಾಜ್ಯದಲ್ಲಿ ಡಿಜಿಟಲ್ ಡೆಂಟಿಸ್ಟ್ರಿ ಪ್ರಾರಂಭ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (GDC&RI) ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು, ಅತ್ಯಾಧುನಿಕ ಉಪಕರಣಗಳು ಮತ್ತು ವಿಶೇಷ ಸೌಲಭ್ಯ ಒದಗಿಸುವ ಮೂಲಕ ಪರಿವರ್ತನೆಗೆ ಒತ್ತು ನೀಡಲಾಗುತ್ತದೆ.ಗುರುವಾರ ನಡೆದ ಪದವಿ ಪ್ರದಾನ ಸಮಾರಂಭ ಮತ್ತು ಹೊಸ ಡಿಜಿಟಲ್ ಡೆಂಟಿಸ್ಟ್ರಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ಘೋಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಪರಂಪರೆಯ ಬಗ್ಗೆಯೂ ಬೆಳಕು ಚೆಲ್ಲಿದರು.ದೇಶದ ಅತ್ಯಂತ ಹಳೆಯ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಇದು ಒಂದಾಗಿದೆ ಹಾಗು ಒಟ್ಟಾರೆಯಾಗಿ ನಾಲ್ಕನೇ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. "1958ರಲ್ಲಿ ಸ್ಥಾಪನೆಯಾದ ಈ ಕಾಲೇಜು, ದಂತ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿ ಆರು ದಶಕಗಳ ಕಾಲ ಸೇವೆ ಒದಗಿಸಿದೆ. ಈ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆ ನಮ್ಮ ರಾಜ್ಯದ ಹೆಮ್ಮೆಯಾಗಿದೆ. ಈಗ ಎಲ್ಲಾ ರಂಗಗಳಲ್ಲಿ ಆಧುನೀಕರಣದ ಅಗತ್ಯವಿದೆ. ಶೀಘ್ರದಲ್ಲ...
ನಾಗಮಂಗಲ ಗಲಭೆ; ಶಾಂತಿ ಸುವ್ಯವಸ್ಥೆ ವೈಫಲ್ಯಕ್ಕೆ ಸಾಕ್ಷಿ ಎಂದ ಹೆಚ್ಡಿಕೆ

ನಾಗಮಂಗಲ ಗಲಭೆ; ಶಾಂತಿ ಸುವ್ಯವಸ್ಥೆ ವೈಫಲ್ಯಕ್ಕೆ ಸಾಕ್ಷಿ ಎಂದ ಹೆಚ್ಡಿಕೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದವರು ಪ್ರತಿಕ್ರಿಯಿಸಿದ್ದಾರೆ.ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ...