Wednesday, March 18

ರಾಜ್ಯ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ.18ರವರೆಗೂ ಮಳೆ ಸಾಧ್ಯತೆ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ.18ರವರೆಗೂ ಮಳೆ ಸಾಧ್ಯತೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರವರೆಗೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಗಳಿವೆ. ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಾಗೂ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಯಾದಗಿರಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ....
ನಾಗಮಂಗಲ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ನಾಗಮಂಗಲ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹುಬ್ಬಳ್ಳಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡುತ್ತಾ ನಾಗಮಂಗಲ ಹಿಂಸಾಚಾರ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ನಾಗಮಂಗಲದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ ಸಂಭವಿಸಿದೆ ಎಂದವರು ದೂರಿದರು.ಗಣೇಶ ಮೂರ್ತಿ ಇದ್ದರೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಲ್ಹಾದ್ ಜೋಶಿ,​ ಸರ್ಕಾರವು ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕಿದೆ ಎಂದು ಒತ್ತಾಯಿಸಿದರು....
ಬೆಂಗಳೂರಿನಲ್ಲಿ ಹಿಟ್​ & ರನ್​; ಮೂವರು GKVK ವಿದ್ಯಾರ್ಥಿಗಳು ಸಾವು

ಬೆಂಗಳೂರಿನಲ್ಲಿ ಹಿಟ್​ & ರನ್​; ಮೂವರು GKVK ವಿದ್ಯಾರ್ಥಿಗಳು ಸಾವು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಿಟ್​ & ರನ್​ಗೆ ಮೂವರು ಬಲಿಯಾಗಿದ್ದಾರೆ. ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ರೋಹಿತ್, ​​ಸುಚಿತ್ಹ ಮತ್ತು ಹರ್ಷ ಎಂಬವರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, GKVKಯಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಜಾಲ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ....
ಬೆಂಗಳೂರು-ಮೈಸೂರು ಪಾದಯಾತ್ರೆ ಮಾದರಿಯಲ್ಲಿ ವಾಲ್ಮೀಕಿ ಹಗರಣ ವಿರುದ್ಧ ಹೋರಾಟ; ಬಿಜೆಪಿಯಿಂದ ತಯಾರಿ

ಬೆಂಗಳೂರು-ಮೈಸೂರು ಪಾದಯಾತ್ರೆ ಮಾದರಿಯಲ್ಲಿ ವಾಲ್ಮೀಕಿ ಹಗರಣ ವಿರುದ್ಧ ಹೋರಾಟ; ಬಿಜೆಪಿಯಿಂದ ತಯಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ವಿರುದ್ಧ ಬೆಂಗಳೂರು-ಮೈಸೂರು ಪಾದಯಾತ್ರೆ ಕೈಗೊಂಡಿದ್ದ ಪ್ರತಿಪಕ್ಷ ಬಿಜೆಪಿ ಇದೀಗ ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಮತ್ತೊಂದು ರೀತಿ ಪಾದಯಾತ್ರೆಗೆ ತಯಾರಿ ನಡೆಸಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.ಹಗರಣದಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕರಿಗೆ ಕ್ಲೀನ್ ಚಿಟ್ ನೀಡಲು ಎಸ್‌ಐಟಿ ರಚಿಸಲಾಗಿದೆ. ಹಾಗಾಗಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಬಿಜೆಪಿಯು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ. ವಾಲ್ಮೀಕಿ ಹಗರಣದಲ್ಲಿ ಎರಡನೇ ಹಂತದ ಹೋರಾಟ ಶುರುವಾಗಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.ಎಸ್‌ಟಿ ಅಭಿವೃದ್ಧಿ ನಿಗಮದ ಹಗರಣವನ್ನು ಎತ್ತಿ ಹಿಡಿದು ಪಾದಯಾತ್ರೆ ಕೈಗೊಳ್ಳುವ ರಾಜ್ಯ ಬಿಜೆಪಿ ನಾಯಕರ ಮನವಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಹಾಗಾಗಲಿ ಪಾದಯಾತ್ರೆಗೆ ರಾಜ್ಯ ಬಿಜೆಪಿ ತಯಾರಿ ನಡೆಸಿದೆ. ಶೀಘ್ರವೇ ಪಾದಯಾತ್ರೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ....
ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಅಭಿಯಾನ; ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆ ರಣತಂತ್ರ

ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಅಭಿಯಾನ; ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆ ರಣತಂತ್ರ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರದ ತೆರಿಗೆ ಆದಾಯ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಲವು ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿದ್ದಾರೆ.ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ವೇದಿಕೆಯನ್ನು ಸಜ್ಜುಗೊಳಿಸಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿದ್ದಾರೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು 'ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ' ಸಿದ್ದರಾಮಯ್ಯ ಅವರು ಈ ಪತ್ರ ಬರೆದಿದ್ದಾರೆ. ಅತಿಹೆಚ್ಚು ತೆರಿಗೆ ಪಾವತಿಸಿಯೂ ಕಡಿಮೆ ಪಾಲು ಪಡೆಯುತ್ತಿರುವ ಬೆಳವಣಿಗೆ ಆಧರಿಸಿ ಈ ಹೆಜ್ಜೆ ಇಟ್ಟಿರುವ ಸಿಎಂ, ತಾವು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಕುರಿತು ಮಾಹಿತಿಯನ್ನು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಪತ್ರದ ಪ್ರತಿಯನ್ನು ...
ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗುಂಪು ಘರ್ಷಣೆ ; 40ಕ್ಕೂ ಹೆಚ್ಚು ಮಂದಿ ಬಂಧನ

ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗುಂಪು ಘರ್ಷಣೆ ; 40ಕ್ಕೂ ಹೆಚ್ಚು ಮಂದಿ ಬಂಧನ

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗುಂಪು ಘರ್ಷಣೆ ಉಂಟಾಗಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹತೋಟಿಗೆ ತರಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.ಗಣೇಶ ವಿಸರ್ಜನೆ ಸಂದರ್ಭದಲ್ಲಿ ಉಂಟಾದ ಕಲಹ ಗುಂಪುಘರ್ಷಣೆಗೆ ತಿರುಗಿದ್ದು, ಉದ್ರಿಕ್ತರು ಅಸ್ತಿ-ಪಾಸ್ತಿ ಹಾನಿಗೊಳಿಸಿದ್ದಾರೆನ್ನಗಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಕಾರ್ಯಾಚರಣೆ ಕೈಗೊಂಡಿಸಿರುವ ಪೊಲೀಸರು ಈ ವರೆಗೂ 46 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಚೆಲುವರಾಯಸ್ವಾಮಿ, ಘಟನೆ ತಿಳಿದ ತಕ್ಷಣವೇ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮಾತನಾಡಿ, ವರದಿ ಪಡೆದಿದ್ದೇನೆ. ಎಲ್ಲಾ ತಪ್ಪಿತಸ್ಥರ ಬಂಧನಕ್ಕೆ ಸೂಚಿಸಿದ್ದು ಶಾಂತಿ‌ ಮರುಸ್ಥಾಪನೆಗೆ ಅಗತ್ಯವಿರುವ ತುರ್ತು ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ....
‘ಬೃಂದಾವನ’ ಸೀರಿಯಲ್ ನಟನ ವಿರುದ್ಧ FIR

‘ಬೃಂದಾವನ’ ಸೀರಿಯಲ್ ನಟನ ವಿರುದ್ಧ FIR

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
‘ಬೃಂದಾವನ’ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ ಯುವತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಸವೇಶ್ವರ ಸೆನ್ ಪೊಲೀಸ್ ಠಾಣೆಯಲ್ಲಿ ವರುಣ್‌ ವಿರುದ್ಧ ಕೇಸ್‌ ದಾಖಲಾಗಿದೆ. ತಮ್ಮ ಖಾಸಗಿ ವಿಡಿಯೋ ಮತ್ತು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಈ ಬಗ್ಗೆ ದೂರು ಸ್ವೀಕರಿಸಿರುವ ಬಸವೇಶ್ವರ ಸೆನ್ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ....
ಹಿಂದೂ ದೇವರಿಗೆ ಅಪಮಾನ; ಮಂಗಳೂರಿನ ಪೊಲೀಸರಿಂದ ಎಫ್​ಐಆರ್

ಹಿಂದೂ ದೇವರಿಗೆ ಅಪಮಾನ; ಮಂಗಳೂರಿನ ಪೊಲೀಸರಿಂದ ಎಫ್​ಐಆರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಹಿಂದೂ ದೇವರ ಚಿತ್ರಗಳನ್ನು ಅಶ್ಲೀಲವಾಗಿ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿರುವ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಎಐ ಆಧಾರಿತ ಹಿಂದೂ ದೇವರ ಚಿತ್ರಗಳನ್ನು ಅಶ್ಲೀಲವಾಗಿ ರಚಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.ಹಿಂದೂ ದೇವರನ್ನು ಸ್ತ್ರೀಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವಂತೆ ರಚಿಸಿ ಅವುಗಳನ್ನು “Fact Vid” ಎಂಬ ಹೆಸರಿನ ಫೇಸ್‌ಬುಕ್​ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ....
ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳಲು ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಸರ್ಕಾರ ಆಹ್ವಾನ

ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳಲು ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಸರ್ಕಾರ ಆಹ್ವಾನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ ಯೋಜಿಸಲಾಗಿರುವ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳುವಂತೆ *ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆಹ್ವಾನ ನೀಡಿದ್ದಾರೆ.ಕಾಂಗ್ಸ್‌ಬರ್ಗ್ ಡಿಜಿಟಲ್‌ನ ಅಧ್ಯಕ್ಷ ಮತ್ತು ಸಿಇಒ ಶೇನ್ ಮೆಕ್‌ಆರ್ಡಲ್ ಮತ್ತು ಕಾಂಗ್ಸ್‌ಬರ್ಗ್ ಡಿಜಿಟಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ದೀಪಕ್ ಕುಮಾರ್ ನೇತೃತ್ವದ ನಿಯೋಗ ಇಂದು ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಆಹ್ವಾನ ಕೊಟ್ಟರು. ನಿಪುಣ ಕಾರ್ಯಕ್ರಮ ನಿರ್ದಿಷ್ಟವಾಗಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಕ್ಲೌಡ್ ಕಂಪ್ಯೂಟಿಂಗ್‌ನಂತಹ ಕ್ಷೇತ್ರಗಳಲ್ಲಿ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ನಿಖರವಾದ ಕೌಶಲ್ಯ ವಲಯದೊಂದಿಗೆ ಯುವ ಸಮೂಹವನ್ನು ಸಜ್ಜುಗೊಳಿಸುವ ಗುರಿ ಹೊಂದಿದೆ. “ಇದು ಸಾಮಾನ್ಯ ತರಬೇತಿ ಕಾರ್ಯಕ್ರಮವಲ್ಲ. ನಿಪುಣ ಕಾರ್ಯಕ್ರಮ ನಿರ್ದಿಷ್ಟ ಉದ್ಯಮದ ಅವಶ್ಯಕತೆಗಳನ್ನು ಪರಿಹರಿಸಲು ವಿನ್ಯಾಸಗೊಳಿಸಲಾಗಿದೆ. ಉದ್ಯೋಗಿಗಳ ಬೇಡಿಕೆಗಳನ್ನು ಪೂರೈಸಲು ನಾವು ಕಾಂಗ್ಸ್‌ಬರ್ಗ್ ಡಿಜಿಟಲ್‌ನಂತಹ ಕಂಪನಿಗಳೊಂದಿಗೆ ಸಹಕರ...