Thursday, January 29

ರಾಜ್ಯ

‘ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳಕ್ಕೆ ಕಂಪನಿಗಳಿಗೆ ಆಹ್ವಾನ’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ದುಬೈ: ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಜನವರಿ-ಫೆಬ್ರವರಿ 2026 ರಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿವೆ. ಇದಕ್ಕೆ ಪೂರ್ವಭಾವಿಯಾಗಿ ಸಚಿವರಾದ ಶರಣಪ್ರಕಾಶ್‌ ಪಾಟೀಲ್‌ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಗುರುವಾರ ದುಬೈನಲ್ಲಿ ರೋಡ್ ಶೋ ನಡೆಯಿತು. ಸಾರಿಗೆ, ಮಾನವ ಸಂಪನ್ಮೂಲ ತಂತ್ರಜ್ಞಾನ, ಸಾಫ್ಟ್ ಸೇವೆಗಳು, ಮಾಧ್ಯಮ ತಂತ್ರಜ್ಞಾನ, ಗೇಮಿಂಗ್, ರಿಯಲ್ ಎಸ್ಟೇಟ್, ಇಂಧನ ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನಗಳಂತಹ ಕ್ಷೇತ್ರಗಳ ಕಂಪನಿಗಳು ಆಸಕ್ತಿಯನ್ನು ತೋರಿಸಿದವು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಶಿಕ್ಷಣ ಮತ್ತು ಕೌಶಲ್ಯತೆ ವಿಷಯದಲ್ಲಿ ಕರ್ನಾಟಕ ವಿಶೇಷ ಸಾಮರ್ಥ್ಯ ಹೊಂದಿದೆ. ರಾಜ್ಯದ ಯುವಕರನ್ನು ನೇಮಿಸಿಕೊಳ್ಳಲು ಕಂಪನಿಗಳು ಮುಂದಾಗಬೇ...
ಜಗಳೂರಿನ ಸರ್ಕಾರಿ ಕಚೇರಿ ಬಳಿ ಮರಗಳ ತೆರವು: ಪರಿಸರ ಕಾಳಜಿ ಮರೆತ ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಜಗಳೂರಿನ ಸರ್ಕಾರಿ ಕಚೇರಿ ಬಳಿ ಮರಗಳ ತೆರವು: ಪರಿಸರ ಕಾಳಜಿ ಮರೆತ ಅಧಿಕಾರಿಗಳ ವಿರುದ್ಧ ಜನಾಕ್ರೋಶ

Focus, ಪ್ರಮುಖ ಸುದ್ದಿ, ರಾಜ್ಯ
(ವರದಿ: ರವಿಕುಮಾರ್) ದಾವಣಗೆರೆ: ಜಗಳೂರು ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿರುವ ಸಮೃದ್ದವಾಗಿ ಬೆಳೆದು ನಿಂತಿದ್ದ ಮರಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಜನರಿಗೆ ವಾರವಾಗಿದ್ದ ಮರಗಳನ್ನು ಅನಾವಶ್ಯಕವಾಗಿ ತೆರವುಗೊಳಿಸಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಕ್ರಮ ಸರಿಯಲ್ಲ ಎಂದು ಪರಿಸರ ಹೋರಾಟಗಾರ ಬಸವರಾಜ್ ದೂರಿದ್ದಾರೆ. ಪಟ್ಟಣದ ಹೃದಯ ಭಾಗದಲ್ಲಿರುವ ಪಶು ಆಸ್ಪತ್ರೆಯ ಆವರಣದಲ್ಲಿ ಸುಮಾರು ಹತ್ತಕ್ಕೂ ಅಧಿಕ ಮರಗಳಿದ್ದು ಇವುಗಳಿಂದ ಉತ್ತಮ ಗಾಳಿ ಮತ್ತು ನೆರಳು ದೊರೆಯುತ್ತಿತ್ತು. ಆಸ್ಪತ್ರೆಗೆ ಚಿಕಿತ್ಸೆಗೆ ಬರುವಂತಹ ರೈತರು ಮತ್ತು ರಾಸುಗಳು ಬಿಸಿಲಿನ ಜಳವನ್ನು ತಾಳಲಾರದೆ ನೆರಳಿನಲ್ಲಿ ಕುಳಿತುಕೊಂಡು ವಿಶ್ರಾಂತಿ ಪಡೆಯುತ್ತಿದ್ದರು ಎಂದವರು ಗಮನಸೆಳೆದಿದ್ದಾರೆ. ಪಕ್ಕದಲ್ಲಿ ಪೊಲೀಸ್ ಠಾಣೆ ಇದ್ದು ಅಲ್ಲಿಗೆ ಭೇಟಿನೀಡುವ ಸಾರ್ವಜನಿಕರು ಬಿಸಿಲಿನ ತಾಪವನ್ನು ತಾಳಲಾರದೆ ಆಸ್ಪತ್ರೆಯ ಆವರಣದಲ್ಲಿರುವ ಮರಗಳತ್ತ ತೆರಳಿ ವಿಶ್ರಾಂತಿ ಪಡೆಯುತ್ತಿದ್ದರು. ಈಗ ಕಟ್ಟಡ ನಿರ್ಮಾಣದ ನೆಪವಡ್ಡಿ ಬೇವು ,ಬತ್ತಿ ಸೇರಿದಂತೆ ನಾಲ್ಕೈದು ಮ...
ಈ ಪೀಠಿಕೆಯೇ ದೇಶದ ‘ಸುರಕ್ಷಾ ಮಂತ್ರ’; ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ

ಈ ಪೀಠಿಕೆಯೇ ದೇಶದ ‘ಸುರಕ್ಷಾ ಮಂತ್ರ’; ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ದೇಶಾದ್ಯಂತ ಬುಧವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳು ದೇಶಭಕ್ತಿಯ ಪ್ರತೀಕ ಎಂಬಂತೆ ನೆರವೇರಿದವು. ಅದರಲ್ಲೂ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ದಿನವನ್ನು ವಿಭಿನ್ನವಾಗಿ ಆಚರಿಸಲಾಯಿತು. ದೇಶದ ಸಾಮಾಜಿಕ ವ್ಯವಸ್ಥೆಗೆ ಆಧಾರವಾಗಿರುವ, ಸುರಕ್ಷಾ ಮಂತ್ರವೆನಿಸಿರುವ 'ಸಂವಿಧಾನ' ಕುರಿತಂತೆ ಒಂದು ದಿಂದಾದ ಶ್ರದ್ದೆ-ಭಕ್ತಿಯಲ್ಲ, ಪ್ರತೀ ದಿನವೂ ಸಂವಿಧಾನದ ಆಶಯಗಳನ್ನು ನೆನೆಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿರುವ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ (ಇಂದಿರಾ ಜನ್ಮ ಶತಾಬ್ದಿ ಭವನ) ಭವನದಲ್ಲಿ 'ಸಂವಿಧಾನ ಫಲಕ'ವನ್ನು ಅನಾವರಣ ಮಾಡಲಾಗಿದೆ. ಖ್ಯಾತ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿರುವ ಮನೋರಾಜ್ ರಾಜೀವ್ ಅವರ ಪರಿಕಲ್ಪನೆಯಲ್ಲಿ ಈ ಸಂವಿಧಾನ ಫಲಕವನ್ನು ಸ್ಥಾಪಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಹಾಗೂ ಮಧ್ಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇರುವ ಈ ಫಲಕ ಎಲ್ಲರ ಗಮನಕೇಂದ್ರೀಕರಿಸುತ್ತಿದೆ. ಸಂವಿಧಾನ ದಿನಾಚರಣೆಯ ಭಾಗವಾಗಿ 'ಸಂವಿಧಾನ ಓದು...
“ನಾನು ಏನೇ ಮಾಡಿದರೂ, ಮಾತನಾಡಿದರೂ ಮಾಧ್ಯಮಗಳಲ್ಲಿ ಬೇರೆ ರೀತಿ ಚರ್ಚೆ”; ಡಿಕೆಶಿ ಬೇಸರ

“ನಾನು ಏನೇ ಮಾಡಿದರೂ, ಮಾತನಾಡಿದರೂ ಮಾಧ್ಯಮಗಳಲ್ಲಿ ಬೇರೆ ರೀತಿ ಚರ್ಚೆ”; ಡಿಕೆಶಿ ಬೇಸರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರನ್ನು ನೆನಪಿಸಿದಂತಿದೆ. "ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು” ಎಂಬ ಅವರ ಮಾತು ಪ್ರಸಕ್ತ ಸನ್ನಿವೇಶದಲ್ಲಿ ಅನೇಕಾನೇಕ ವಿಶ್ಲೇಷಣೆಗೆ ಎಡೆಮಾಡಿಕೊಟ್ಟಿದೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮಾತನಾಡಿದರು. ನಾನು ಏನೇ ಮಾಡಿದರೂ, ಮಾತನಾಡಿದರೂ ಮಾಧ್ಯಮಗಳು ಬೇರೆ ರೀತಿ ಚರ್ಚೆ ಮಾಡುತ್ತವೆ ಎಂದ ಡಿಕೆಶಿ, “ನಾನು ಬೇರೆ ವಿಚಾರವಾಗಿ ಮಾತನಾಡಲು ಹೋಗುವುದಿಲ್ಲ. ನಾನು ಏನೇ ಹೇಳಿದರೂ ಅದನ್ನು ಬೇರೆ ರೀತಿ ತಿರುಗಿಸಿ ಅರ್ಧ ಗಂಟೆ ಚರ್ಚೆ ಮಾಡುತ್ತಾರೆ. ನಾನು ಇಂದಿರಾ ಗಾಂಧಿ ಅವರ ಕಾರ್ಯಕ್ರಮದ ವೇಳೆ ಅವರ ಹೇಳಿಕೆಯೊಂದನ್ನು ಉಲ್ಲೇಖಿಸಿದೆ. ಅದರ ಮೇಲೆ ಅರ್ಧ ಗಂಟೆ ಚರ್ಚೆ ಮಾಡಿದರು. ನಂತರ ವಿಶ್ವ ಮೀನುಗಾರಿಕೆ ...
ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ: ಚಲುವರಾಯಸ್ವಾಮಿ

ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ: ಚಲುವರಾಯಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಮೂಲಕ ರೈತರ ಹಾಗೂ ಕೃಷಿ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದ್ದಾರೆ. ಜಲಾನಯನ ಅಭಿವೃದ್ಧಿ ಇಲಾಖೆ, ಕೇಂದ್ರದ ಭೂ ಸಂಪನ್ಮೂಲ ಇಲಾಖೆ, ವಿಶ್ವ ಬ್ಯಾಂಕ್ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಮೂರು ದಿನಗಳ ಜಲಾನಯನ ಸ್ಥಿತಿಸ್ಥಾಪಕತ್ವ, ವಿಜ್ಞಾನ ಸುಸ್ಥಿರತೆ ಮತ್ತುಸಮಾಜವನ್ನು ಸಂಯೋಜಿಸುವ ಕುರಿತ ಅಂತರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಚಲುವರಾಯಸ್ವಾಮಿ, ಕಳೆದ ನಾಲ್ಕು ದಶಕಗಳಿಂದ ಜಲಾನಯನ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ ಎಂದರು. ವಿಶ್ವಬ್ಯಾಂಕ್ REWARD ಕಾರ್ಯಕ್ರಮದಡಿ ನಡೆಯುತ್ತಿರುವ LRI ಆಧಾರಿತ ಜಲಾನಯನ ಅಭಿವೃದ್ಧಿಯಿಂದ ರಾಜ್ಯದ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಭೂಸಂಪನ್ಮೂಲ ಇಲಾಖೆ, ಭಾರತ...
ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ? ನಿಖಿಲ್ ಪ್ರಶ್ನೆ

ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ? ನಿಖಿಲ್ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಶಿವಮೊಗ್ಗ : ಕಾಂಗ್ರೆಸ್ ಪಕ್ಷದೊಳಗೆ ಕುರ್ಚಿಗಾಗಿ ಗುದ್ದಾಟ ತೀವ್ರಗೊಂಡಿದ್ದು, ಶಾಸಕರ ಖರೀದಿ ನಡೆಯುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಈ ಬೆಳವಣಿಗೆ ಬಗ್ಗೆ ಟೀಕಿಸಿರುವ ಪ್ರದೇಶ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರ ಖರೀದಿಗೆ ಹಣವಿದೆ ಆದರೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ ಜಲಸಂಪನ್ಮೂಲ ಸಚಿವರೇ ? ಎಂದು ನಿಖಿಲ್ ಅವರು ಪ್ರಶ್ನಿಸಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ ಜಲಸಂಪನ್ಮೂಲ ಸಚಿವರೇ ?- ಶ್ರೀ @Nikhil_Kumar_k , ಯುವ ಘಟಕದ ರಾಜ್ಯಾಧ್ಯಕ್ಷರು #ಸಿಂಧನೂರು#ರಾಯಚೂರು#ರೈತವಿರೋಧಿಕಾಂಗ್ರೆಸ್‌ pic.twitter.com/kODWF5e6h6— Janata Dal Secular (@JanataDal_S) November 26, 2025...
ಬೆಂಗಳೂರು ದರೋಡೆ ಪ್ರಕರಣ; ಪೊಲೀಸ್ ಭರ್ಜರಿ ಬೇಟೆ; ಒಟ್ಟು 9 ಸೆರೆ

ಬೆಂಗಳೂರು ದರೋಡೆ ಪ್ರಕರಣ; ಪೊಲೀಸ್ ಭರ್ಜರಿ ಬೇಟೆ; ಒಟ್ಟು 9 ಸೆರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಿಜೆಪಿ ನಾಯಕ್ರು ಮಾಡುತ್ತಿರುವ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್...
ಭೀಕರ ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಸಹಿತ ಮೂವರು ದುರ್ಮರಣ

ಭೀಕರ ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಸಹಿತ ಮೂವರು ದುರ್ಮರಣ

Focus, ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ವಿವಾಹ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದವರಿದ್ದ ಕಾರು ಅಪಘಾತಕ್ಕೀಡಾಗಿ ಕಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ , ಅವರ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ. ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ, ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು....
ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು.ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ. pic.twitter.com/FuAsWbd8xP— Siddaramaiah (@siddaramaiah) November 25, 2025 ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡ...