
‘ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’; ಬಿ.ಕೆ.ಹರಿಪ್ರಸಾದ್
ಬೆಂಗಳೂರು: "ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಆದರೆ ನಾನು ಪಾಲಿಸುವ ಹಿಂದು ಧರ್ಮ ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ, ನಾರಾಯಣಗುರು, ಕನಕದಾಸ ಹಾಗೂ ಬಸವಣ್ಣ ಅವರು ಬೋಧಿಸಿದ ಧರ್ಮವೇ ಹೊರತು, ಗೋಲ್ವಾಲ್ಕರ್, ಗೋಡ್ಸೆ ಮತ್ತು ಹೆಡಗೆವಾರ್ ಪ್ರತಿಪಾದಿಸಿದ ಹಿಂದೂ ಧರ್ಮವಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಬಿಜೆಪಿಯವರು ದೇಶವನ್ನು ಹಿಮ್ಮುಖ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ. ಜನರು ಅನಕ್ಷರಸ್ಥರಾಗಿದ್ದಷ್ಟು ಅಂಧಭಕ್ತರನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ. ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ. ಜಾತಿ-ಧರ್ಮದ ಗಲಭೆಗಳಲ್ಲಿ ಜೈಲು ಸೇರುವವರು ದಲಿತರು ಮತ್ತು ಶೂದ್ರರೇ ಹೊರತು, ಲೂಟಿ ನಡೆಸುವವರು ಅಲ್ಲ" ಎಂದು ಆರೋಪಿಸಿದರು.ದೇವಾಲಯಗಳ ಲೂಟಿ ಕುರಿತು ಮಾತನಾಡಿದ ಅವರು, "ದೇವರ ಬಗ್ಗೆ ನಮಗೆ ಪಾಠ ಮಾಡುವವರು ಮೊದಲು ತಮ್ಮ ಇತಿಹಾಸವನ್ನ...









