Tuesday, January 27

ರಾಜ್ಯ

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪಾಲಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ಕೆಎಸ್ಸಾರ್ಟಿಸಿಗೆ ಟಿವಿ-9 ನೆಟ್ವರ್ಕ್‌ ನ 'ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024' ಲಭಿಸಿದೆ. ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-9 ನೆಟ್ವರ್ಕ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯು 'ವರ್ಷದ ದೇಶದ ಅತ್ಯುತ್ತಮ ಸಂಸ್ಥೆ' ವರ್ಗದಲ್ಲಿ ಲಭಿಸಿದೆ. ನವದೆಹಲಿಯ 'ದ ಇಂಪೀರಿಯಲ್ ಜನಪತ್ ಲೇನ್, ಜನಪತ್'ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವರಾದ ಹರ್ಷ್ ಮಲೋತ್ರ ಅವರು, KSRTC ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿ, ಅಧಿಕಾರಿಗಳನ್ನು ಅಭಿನಂದಿಸಿದರು. ಕೆಎಸ್ಸಾರ್ಟಿಸಿ ನಿರ್ದೇಶಕರಾದ (ಸಿಬ್ಬಂದಿ ಮತ್ತು ಜಾಗೃತ) ಡಾ. ಕೆ.ನಂದಿನಿದೇವಿ ಅವರು ಪ್ರಶಸ್ತಿ ಸ್ವೀಕರಿಸಿದರು....
ಮುಂದುವರಿದ ಭೂಕುಸಿತ; ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ

ಮುಂದುವರಿದ ಭೂಕುಸಿತ; ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆ ಅವಾಂತರ ಸೃಷ್ಟಿಸಿದ್ದು ಭೂಕುಸಿತದ ಘಟನೆಗಳು ಮರುಕಳಿಸುತ್ತಲೇ ಇವೆ. ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಶುಕ್ರವಾರ ಬೆಂಗಳೂರಿನಿಂದ ಹೊರಟಿದ್ದ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ರೈಲು ಮತ್ತು ಬೆಂಗಳೂರು-ಮರ್ಡೇಶ್ವರ ಎಕ್ಸ್‌ಪ್ರೆಸ್ ರೈಲು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಭೂಕುಸಿತದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಕೇಂದ್ರದ ಅನುದಾನಕ್ಕಾಗಿ BJP-JDS ಪಾದಯಾತ್ರೆ ನಡೆಸಿದ್ದರೆ ರಾಜ್ಯಕ್ಕೆ ಒಳಿತಾಗುತ್ತಿತ್ತು..!

ಕೇಂದ್ರದ ಅನುದಾನಕ್ಕಾಗಿ BJP-JDS ಪಾದಯಾತ್ರೆ ನಡೆಸಿದ್ದರೆ ರಾಜ್ಯಕ್ಕೆ ಒಳಿತಾಗುತ್ತಿತ್ತು..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂದೆ ಹಾವು ಮುಂಗುಸಿಯಂತೆ ಕಚ್ಚಾಡುತ್ತಿದ್ದ ಬಿಜೆಪಿ-ಜೆಡಿಎಸ್ ನಾಯಕರು ಇದೀಗ ಪಾದಯಾತ್ರೆ ರಾಜಕಾರಣ ಮಾಡುತ್ತಿರುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಇವರ ಜಂಟಿ ಹೋರಾಟ ಕೇಂದ್ರದಿಂದ ಅನುದಾನ ತರುವ ವಿಚಾರಕ್ಕೆ ನಡೆದಿದ್ದರೆ ರಾಜ್ಯಕ್ಕೆ ಒಳಿತಾಗುತ್ತಿತ್ತು ಎಂದು ಪ್ರತಿಪಾದಿಸಿದ್ದಾರೆ.‌ ಬಿಜೆಪಿ-ಜೆಡಿಎಸ್ ಈ ಹಿಂದೆ ಹಾವು ಮುಂಗುಸಿಯ ಹಾಗೆ ಕಿತ್ತಾಡುತ್ತಿದ್ದರು, ಈಗ ಅಧಿಕಾರಕ್ಕಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅವರು ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಸಂಸತ್ತಿನಲ್ಲೂ ಮಾತನಾಡುವುದಿಲ್ಲ, ಹೊರಗಡೆಯೂ ಮಾತನಾಡುವುದಿಲ್ಲ ಎಂದು ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ-ಜೆಡಿಎಸ್ ಈ ಹಿಂದೆ ಹಾವು ಮುಂಗುಸಿಯ ಹಾಗೆ ಕಿತ್ತಾಡುತ್ತಿದ್ದರು, ಈಗ ಅಧಿಕಾರಕ್ಕಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಸಂಸತ್ತಿನಲ್ಲೂ ಮಾತನಾಡುವುದಿಲ್ಲ, ಹೊರಗಡೆಯೂ ಮಾತನಾಡುವುದಿಲ್ಲ. ಈ...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂದೂ ಶ್ರದ್ದಾಕೇಂದ್ರಗಳ ಮೇಲೆ ನಡೆದಿರುವ ದಾಳಿ ಘಟನೆಗಳು ಕಳವಳಕಾರಿ ಬೆಳವಣಿಗೆಯಾಗಿದ್ದು, ಅಲ್ಲಿನ ಮಧ್ಯಂತರ ಸರ್ಕಾರವು ಇಂತಹಾ ಕ್ರೌರ್ಯಗಳಿಗೆ ಅಂತ್ಯ ಹಾಡಬೇಕಿದೆ ಎಂದು ಸಂಘ ಪ್ರತಿಪಾದಿಸಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಬಾಂಗ್ಲಾದೇಶದ ಘಟನೆಗಳ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುವುದನ್ನು ಸಹಿಸಲಾಗದು ಎಂದಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಆಡಳಿತ ಬದಲಾವಣೆಯ ಚಳವಳಿಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳು, ಬೌದ್ಧರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧದ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಗಂಭೀರ ಕಳವಳ ವ್ಯಕ್ತಪಡಿಸುತ್ತದೆ ಎಂದಿರುವ ಅವರು, ಹತ್ಯೆ, ಲೂಟಿ, ಬೆಂಕಿ ಹಚ್ಚುವುದು ಮತ್ತು ಹಿಂದೂ ಹಾಗೂ ಇತರ ಧಾರ್ಮಿಕ ಅಲ್ಪಸಂಖ್ಯಾತ ಮಹಿಳೆಯರ ಮೇಲಿನ ದೌರ್ಜನ್ಯಗಳು ಖಂಡನೀಯ‌. ಬಾಂಗ್ಲಾದೇ...
ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ.  ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಮುಡಾ ಹಗರಣ ಕುರಿತಂತೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸುರೇಶ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನಲ್ಲಿ "ಜನಾಂದೋಲನ" ನಡೆಯುತ್ತಿರುವ ಈ ಸಂದರ್ಭದಲ್ಲಿ ಅತ್ಯಂತ ಮಹತ್ವದ ಕೋರಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಕೆಐಎಡಿಬಿ ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮಾನಿಕೆರೆ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಪ್ರತಿ ಎಕರೆ ಭೂಮಿಗೆ 12.10 ಕೋಟಿ ರೂ. ದರ ನಿಗದಿಪಡಿಸಿದೆ.ಇದು ಮಾರುಕಟ್ಟೆ ದರಕ್ಕಿಂತ ತುಂಬಾ ಕಡಿಮೆ ಎಂದು ಭಾವಿಸುತ್ತೇನೆ. ಆದರೆ ತಮ್ಮ ಮೈಸೂರಿನ ಹೊರವಲಯದ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನಿನ ಬೆಲೆ 62 ಕೋಟಿ ರೂಪಾಯಿ ಎಂಬುದು ನಿಮ್ಮ ಹೇಳಿಕೆಯಿಂದಲೇ ತಿಳಿದುಬಂದಿದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ ಮುಖ್ಯಮಂತ್ರ...
ಇಂದಿನಿಂದ ‘ಹರ್‌ ಘರ್‌ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ

ಇಂದಿನಿಂದ ‘ಹರ್‌ ಘರ್‌ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಈ ಬಾರಿಯೂ 'ಹರ್‌ ಘರ್‌ ತಿರಂಗಾ’ ಅಭಿಯಾನ ನಡೆಯಲಿದೆ. ಇಂದಿನಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ 'ಹರ್‌ ಘರ್‌ ತಿರಂಗಾ’ ಅಭಿಯಾನ ನಡೆಯಲಿದೆ. ಹರ್‌ ಘರ್‌ ತಿರಂಗಾ’ ಅಭಿಯಾನದ 3ನೇ ಆವೃತ್ತಿ ಇದಾಗಿದ್ದು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 'ಹರ್‌ ಘರ್‌ ತಿರಂಗಾ’ ಅಭಿಯಾನದ ಭಾಗವಾಗಿ ಈ ತಿಂಗಳ 13ರಂದು ದಿಲ್ಲಿಯಲ್ಲಿ ಬೈಕ್‌ ರ್‍ಯಾಲಿ ನಡೆಯಲಿದ್ದು ಎಲ್ಲ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ....
BBMP ಹಾಗೂ ತಾ.ಪಂ., ಜಿ.ಪಂ ಚುನಾವಣೆ ವಿಳಂಬ; ಸರ್ಕಾರಕ್ಕೆ ಚಾಟಿ ಬೀಸಿದ ಚುನಾವಣ ಆಯುಕ್ತ ಜಿ.ಎಸ್‌. ಸಂಗ್ರೇಶಿ

BBMP ಹಾಗೂ ತಾ.ಪಂ., ಜಿ.ಪಂ ಚುನಾವಣೆ ವಿಳಂಬ; ಸರ್ಕಾರಕ್ಕೆ ಚಾಟಿ ಬೀಸಿದ ಚುನಾವಣ ಆಯುಕ್ತ ಜಿ.ಎಸ್‌. ಸಂಗ್ರೇಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಿತ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಹಕರಿಸದ ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್‌. ಸಂಗ್ರೇಶಿ ಛಾಟಿ ಬೀಸಿದ್ದಾರೆ. 2025ರ ಮಾರ್ಚ್‌ ಅಂತ್ಯದ ವೇಳೆಗೆ ಚುನಾವಣೆ ನಡೆಯದಿದ್ದರೆ 15ನೇ ಹಣಕಾಸು ಆಯೋಗದಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ 2,100 ಕೋಟಿ ರೂಪಾಯಿ ಅನುದಾನ ಕೈತಪ್ಪಲಿದೆ ಎಂದು ಅವರು ಎಚ್ಚರಿಕೆಯ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್‌. ಸಂಗ್ರೇಶಿ, ಈ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುವಂತೆ ಮಾಡಿರುವ ಸಲಹೆ ಗಮನಸೆಳೆದಿದೆ. 15ನೇ ಹಣಕಾಸು ಆಯೋಗ ದಲ್ಲಿ 2020-21ನೇ ಸಾಲಿನಿಂದೀಚೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2,100 ಕೋಟಿ ರೂಪಾಯಿ ಅನುದಾನ ಬರಬೇಕಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇದ್ದರೆ ಮಾತ್ರ ಅನುದಾನ ಬಿಡುಗಡೆ ಎಂಬ ಹಣಕಾಸು ಆಯೋಗದ ಷರತ್ತು ಇದೆ. ಆದರೆ ಬಿಬಿಎಂಪಿ ಹಾಗೂ ಜಿ.ಪಂ.-ತಾ.ಪಂ.ಗಳಿಗೆ 4 ವರ್ಷಗಳಿಂದ ಚುನಾವಣ...
ಮತ್ತೆ ಒಂದು ವಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮತ್ತೆ ಒಂದು ವಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಮಳೆ ಮತ್ತೆ ಬಿರುಸಾಗಲಿದೆ. ಒಂದು ವಾರ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಿತು ಸಲಾಗಿದ್ದು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸುತ್ತಮುತ್ತ ಜಿಕ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.....
ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು ಅವರು ತಮ್ಮ ಪತ್ರದಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಕಸ ಸಾಗಾಣೆ ಮಾಡುವ ಲಾರ...