Tuesday, January 27

ರಾಜ್ಯ

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ. ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭಾ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ....
ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ವಿಮಾನ ಟಿಕೆಟ್, ವಸತಿ ಆಹಾರ ಇತ್ಯಾದಿ ವ್ಯವಸ್ಥೆ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27,000 ರೂ. ವೇತನ.  ಬೆಂಗಳೂರು: ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿಗಾಗಿ ಕಾರ್ಯಕ್ರಮ ಏರ್ಪಡಿಸಿದೆ. ಈಗಾಗಲೇ ಸ್ಲೋವಾಕಿಯಾ, ಯೂ ಎ ಈ, ಹಂಗೇರಿ, ಸೇರಿದಂತೆ ಮತ್ತಿತರ ಕಡೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಯಶಸ್ಸೀಯಾಗಿರುವ ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮವು ಇದೀಗ ಐಐಟಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನಿಗಮದ ವತಿಯಿಂದಲೇ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ ಕಾರ್ಯಕ್ರಮದ ಮೂಲಕ ಮತ್ತೊಂದು ಹೊಸ ದೃಡ ಹೆಜ್ಜೆ ಇಟ್ಟಿದೆ. ಆಯ್ಕೆಯಾದ ಅಭ್ಯರ್ಥಿಗಳಿಗ...
ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಲೂಟಿ ನಿಮ್ಮ ಸರಕಾರಕ್ಕೆ ಕಪ್ಪು ಚುಕ್ಕಿ ಅಲ್ಲವೇ? ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾಯಿದೆ ಉಲ್ಲಂಘಿಸಿ, ನಿಯಮ ಉಲ್ಲಂಘನೆ ಮಾಡಿ ಒಂದೇ ಕಂಪೆನಿಗೆ 600 ಕೋಟಿಯ ಟೆಂಡರ್ ಕೊಟ್ಟಿರುವುದು ಕಪ್ಪುಚುಕ್ಕಿ ಅಲ್ಲವೇ? ಎಂಬ ಪ್ರಶ್ನೆಯನ್ನು ಮುಂದಿಟ್ಟರು. ಪೊಲೀಸ್, ಕಂದಾಯ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಪ್ರತಿ ಹುದ್ದೆಗೆ ರೇಟ್ ಕಾರ್ಡ್ ನಿಗದಿ ಮಾಡಿರುವುದು, ಸಬ್ ರಿಜಿಸ್ಟಾçರ್‌ಗಳ ಹುದ್ದೆಯ ನೇಮಕಾತಿಗೆ ಬಹಿರಂಗ ಹರಾಜು, ಅಬಕಾರಿ ಇಲಾಖೆಯಲ್ಲಿ ಉನ್ನತ ಹುದ್ದೆಗೆ ದರ ನಿಗದಿ ಮಾಡಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಆರ್‌ಟಿಒಗಳ ಬಹಿರಂಗ ಹರಾಜು ನಡೆಯುತ್ತಿದೆ. ಇದು ತಮ್ಮ ಆಡಳಿತದ ಕಳಂಕವಲ್ಲವೇ ಎಂದು ಕೇಳಿದರು. ಬೆಂಗಳೂರಿನಲ್ಲ...
ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಕಾಸ ಸೌಧದಲ್ಲಿ ಬುಧವಾರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‌ಗಳ ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ ವೈದ್ಯಕೀಯ ಕಾಲೇಜು ಸಂಸ್ಥೆಗಳ ಮುಖ್ಯಸ್ಥರು ನೇಮಕಾತಿ ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಸಚಿವರು, ಮುಂಬರುವ ಗ್ರೂಪ್‌-ಎ ಮತ್ತು ದಾದಿಯರ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂ...
27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ವಿವರಿಸಿದರು. ಸಿಎಂ ಸಿದ್ದರಾಮಯ್ಯ ಖರೀದಿಸಿದ ಜಾಗ ನಿಂಗ ಎಂಬುವರಿಗೆ ಸೇರಿದ ಜಮೀನಾಗಿದ್ದು, 1936 ರಲ್ಲಿ ನಿಂಗ ಜಮೀನು ಖರೀದಿಸಿದ್ದರು. ಅವರು 28 ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಪತ್ನಿ ನಿಂಗಮ್ಮ 1990 ರಲ್ಲಿ ಮೃತರಾಗಿದ್ದರು. ಇದು ನಿಂಗ ಮತ್ತು ನಿಂಗಮ್ಮ ಅವರ ಸ್ವಯಾರ್ಜಿತ ಆಸ್ತಿಯಾಗಿದ್ದು, ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಾಗಿದೆ. ನಿಂಗ ಅವರಿಗೆ ಮೂರು ಮಕ್ಕಳಿದ್ದು, ಅವರ ಕುಟುಂಬದವರು 27 ಜನರಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ದೇವರಾಜು ಎಂಬ ಒಬ್ಬ ವ್ಯಕ್ತಿಯಿಂದ ಮಾತ್ರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವಿವರಿಸಿದರು. 1968 ರಲ್...
ಕಾಳಿ ನದಿ ಸೇತುವೆ ದುರಂತ; ಗೋವಾ-ಕರ್ನಾಟಕವನ್ನು ಸಂಪರ್ಕಿಸುವ ಬ್ರಿಡ್ಜ್ ಕುಸಿದು ಅವಾಂತರ

ಕಾಳಿ ನದಿ ಸೇತುವೆ ದುರಂತ; ಗೋವಾ-ಕರ್ನಾಟಕವನ್ನು ಸಂಪರ್ಕಿಸುವ ಬ್ರಿಡ್ಜ್ ಕುಸಿದು ಅವಾಂತರ

ಪ್ರಮುಖ ಸುದ್ದಿ, ರಾಜ್ಯ
ಕಾರವಾರ: ಕರ್ನಾಟಕ ಮತ್ತು ಗೋವಾ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ಕುಸಿದು ಬಿದ್ದಿದ್ದು ವಾಹನ ಸಂಚಾರ ಏರುಪೇರಾಗಿದೆ.‌ ಉತ್ತರಕನ್ನಡ ಜಿಲ್ಲೆ ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಸುಮಾರು 40 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಹಳೆಯ ಸೇತುವೆ ಕಳೆದ ರಾತ್ರಿ ಕಿಸಿದುಬಿದ್ದಿದೆ.‌ ಕಾರವಾರ-ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು 50 ವರ್ಷಗಳ ಹಿಂದೆ ನಿರ್ಮಿತವಾದ ಕಾಳಿ ಸೇತುವೆ ಕುಸಿದು ಬಿದ್ದು , ಲಾರಿ ಮುಳುಗಡೆ ಯಾಗಿರುವ ಘಟನೆ ನಡೆದಿದೆ... ಕಾರವಾರ-ಗೋವಾ ಸಂಚಾರ ಬಂದ್ ಮಾಡಿ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.. pic.twitter.com/p9IZB5Q1mD — ಎ ಜೆ ಕ್ರಿಯೇಷನ್ಸ್ (@AjUniversal1) August 7, 2024   ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಪಕ್ಕದಲ್ಲೇ ಹಳೆ ಸೇತುವೆಯನ್ನೂ ವಾಹನಗಳ ಸಂಚಾರಕ್ಕೆ ಬಳಸಲಾಗುತ್ತಿತ್ತು. ಈ ಹಳೆಯ ಸೇತುವೆ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದಿದೆ. ಆ ವೇಳೆ ಸೇತುವೆ ಮೇಲೆ ಸಂಚರಿಸುತ್ತಿದ್ದ ಲಾರಿ ನದಿ ಪಾಲಾಗಿದೆ. ಲಾರಿಯ ಮುಂಭಾಗದ ಗ...
ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ. ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೋಮವಾರ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ವರಿದಿಗಾರರಿಗೆ ಹೇಳಿದರು. ಇದೆ ವೇಳೆ ಅಲ್ಲಿನ ಡೆಂಘೀ ವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಅಸ್ಪತ್ರೆಯಲ್ಲಿ ವೈದ್ಯರು ಸೂಕ್ತವಾದ ಚಿಕಿತ್ಸೆ ನೀಡುತ್ತಿದ್ದಾರೆಯೇ? ಬೆಳಗಿನ ಉಪಹಾರ, ಮಧ್ಯಾಹ್ನಾದ ಬೋಜನ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೇ ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಅಟಲ್...
ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
  ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿ, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಧಮ್ ಇಲ್ಲ. ಹೀಗಾಗಿ ಮಾಧ್ಯಮಗಳಲ್ಲಿ ಕೇವಲ ನನ್ನ ಮತ್ತು ಕುಮಾರಸ್ವಾಮಿ ಅವರ ವಿಚಾರವನ್ನೇ ಮಾಧ್ಯಮಗಳು ತೆಗೆದುಕೊಳ್ಳುತ್ತಿವೆ” ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರಾಜ್ಯದ ಜನ ಕಾಂಗ್ರೆಸ್ ಗೆ ಶೇ. 43 ರಷ್ಟು ಮತ ನೀಡಿ 136 ಸ್ಥಾನ ನೀಡಿದ್ದಾರೆ. ಮಂಡ್ಯದಲ್ಲಿ 7 ಸ್ಥಾನ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಇದನ್ನು ನಿಲ್ಲಿಸಲು ಸರ್ಕಾರ ಬೀಳಿಸುವ ಹುನ್ನಾರ ಮ...
ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವನವಾಸಿ ಕಲ್ಯಾಣ ಕರ್ನಾಟಕ ಮತ್ತು ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸ್ವರ್ಗೀಯ ಶ್ರೀ ಕೆ. ಎಸ್.ನಾಗಭೂಷಣ ಅವರ ಸ್ಮರಣಾರ್ಥ 'ಮನೆ ಮನಗಳ ಭೂಷಣ' ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆಗಸ್ಟ್ 6, 2024 ಸಂಜೆ ಶಂಕರಪುರದ ರಂಗರಾವ್ ರಸ್ತೆಯ ಉತ್ತುಂಗದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸು. ರಾಮಣ್ಣ, ಹಿರಿಯ ಕಾರ್ಯಕರ್ತ ವೈ.ಕೆ.ರಾಘವೇಂದ್ರ ರಾವ್, ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಸಹಸರಕಾರ್ಯವಾಹ ಮುಕುಂದ ಸಿ.ಆರ್. ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು....
ಹಿಂದಿನ ಹೇಳಿಕೆಗಳ ಬಗ್ಗೆ ಯು ಟರ್ನ್ ಯಾಕೆ? ಹೆಚ್ಡಿಕೆ ಉತ್ತರಿಸಬೇಕು ಎಂದ ಡಿಕೆಶಿ 

ಹಿಂದಿನ ಹೇಳಿಕೆಗಳ ಬಗ್ಗೆ ಯು ಟರ್ನ್ ಯಾಕೆ? ಹೆಚ್ಡಿಕೆ ಉತ್ತರಿಸಬೇಕು ಎಂದ ಡಿಕೆಶಿ 

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: “ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ನಡೆದ ʼಜನಾಂದೋಲನ ಸಭೆʼ ಯಲ್ಲಿ ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಅಶ್ವಥ್ ನಾರಾಯಣ್, ಯೋಗಿಶ್ವರ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ, ಯೂ ಟರ್ನ್ ಹೊಡೆದಿದ್ದ ಹೇಳಿಕೆಗಳನ್ನು ವಿಡಿಯೋ ಮೂಲಕ ತೆರೆಯ ಮೇಲೆ ಪ್ರದರ್ಶಿಸಿದ ನಂತರ ಡಿಸಿಎಂ ಶಿವಕುಮಾರ್ ಮಾತನಾಡಿದರು.“ಜನ ತೀರ್ಪು ನೀಡಿದ್ದಾರೆ. ಆದ ಕಾರಣಕ್ಕೆ ಗಂಡು ಭೂಮಿ ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು. ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ”ಎಂದು ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಛೇಡಿಸಿದರು. “ಮೋದಿ ಅವರ ಕೈ ಹಿಡಿದು ಕೇವಲ ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕ...